Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 9:9 - ಪರಿಶುದ್ದ ಬೈಬಲ್‌

9 ಅದಕ್ಕೆ ದೇವರು, “ಇಸ್ರೇಲ್ ಮತ್ತು ಯೆಹೂದ ಜನರ ದೋಷವು ಬಹಳ ಹೆಚ್ಚಾಗಿದೆ. ಈ ದೇಶದಲ್ಲಿ ಎಲ್ಲೆಲ್ಲಿಯೂ ಕೊಲೆಗಳು ನಡೆಯುತ್ತಿವೆ. ಈ ನಗರವು ಅಪರಾಧಗಳಿಂದ ತುಂಬಿಹೋಗಿದೆ. ಯಾಕೆಂದರೆ ಜನರು ಹೀಗೆಂದುಕೊಳ್ಳುತ್ತಿದ್ದಾರೆ, ‘ಯೆಹೋವನು ಈ ದೇಶವನ್ನು ಬಿಟ್ಟುಹೋಗಿದ್ದಾನೆ. ನಾವು ಮಾಡುತ್ತಿರುವಂಥದ್ದನ್ನು ಅವನು ನೋಡುವುದಿಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆತನು ನನಗೆ, “ಇಸ್ರಾಯೇಲ್ ಮತ್ತು ಯೆಹೂದ ವಂಶದವರ ಅಧರ್ಮವು ಅತ್ಯಂತವಾಗಿದೆ; ದೇಶವು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು, ‘ನಮ್ಮ ದೇಶವನ್ನು ಯೆಹೋವನು ಬಿಟ್ಟುಬಿಟ್ಟಿದ್ದಾನೆ, ಯೆಹೋವನು ನೋಡುವುದಿಲ್ಲ’ ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಗ ಅವರು ನನಗೆ, “ಇಸ್ರಯೇಲ್ ಮತ್ತು ಯೆಹೂದ ವಂಶದವರ ಅಧರ್ಮ ತುಂಬಿಹೋಗಿದೆ; ನಾಡು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು, ‘ನಮ್ಮ ನಾಡನ್ನು ಸರ್ವೇಶ್ವರ ತೊರೆದುಬಿಟ್ಟಿದ್ದಾರೆ, ಸರ್ವೇಶ್ವರ ನಮ್ಮನ್ನು ನೋಡುವುದಿಲ್ಲ’ ಎಂದು ಮಾತಾಡಿಕೊಳ್ಳುತ್ತಿದ್ದಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆತನು ನನಗೆ - ಇಸ್ರಾಯೇಲ್ ಮತ್ತು ಯೆಹೂದ ವಂಶದವರ ಅಧರ್ಮವು ಅತ್ಯಂತವಾಗಿದೆ; ದೇಶವು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು - ನಮ್ಮ ದೇಶವನ್ನು ಯೆಹೋವನು ಬಿಟ್ಟುಬಿಟ್ಟಿದ್ದಾನೆ, ಯೆಹೋವನು ನೋಡನು ಎಂಬದಾಗಿ ಮಾತಾಡಿಕೊಳ್ಳುತ್ತಿದ್ದಾರಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಅವರು ನನಗೆ, “ಇಸ್ರಾಯೇಲಿನ ಮತ್ತು ಯೆಹೂದ ಮನೆತನದವರ ಅಕ್ರಮವು ಅತಿ ದೊಡ್ಡದಾಗಿದೆ. ದೇಶವು ರಕ್ತದಿಂದ ತುಂಬಿದೆ, ಪಟ್ಟಣವು ಅಧರ್ಮದಿಂದ ತುಂಬಿದೆ. ‘ಯೆಹೋವ ದೇವರು ದೇಶವನ್ನು ತೊರೆದುಬಿಟ್ಟಿದ್ದಾರೆ, ಯೆಹೋವ ದೇವರು ನೋಡುವುದಿಲ್ಲ,’ ಎಂದು ಅವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 9:9
34 ತಿಳಿವುಗಳ ಹೋಲಿಕೆ  

ಆಗ ದೇವರು ನನಗೆ, “ನರಪುತ್ರನೇ, ಇಸ್ರೇಲಿನ ಹಿರಿಯರು ಕತ್ತಲೆಯಲ್ಲಿ ಮಾಡುತ್ತಿರುವುದು ನಿನಗೆ ಕಾಣುತ್ತಿದೆಯೋ? ಅವರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ವಿಶೇಷ ಕೋಣಿಯಿದೆ. ಅದರೊಳಗೆ ಅವರ ದೇವರ ವಿಗ್ರಹಗಳನ್ನಿಟ್ಟುಕೊಂಡಿದ್ದಾರೆ. ಅವರು, ‘ಯೆಹೋವನು ನಮ್ಮನ್ನು ನೋಡುವದಿಲ್ಲ. ಆತನು ಈ ದೇಶವನ್ನು ತೊರೆದುಬಿಟ್ಟಿದ್ದಾನೆ’ ಎಂದು ತಮ್ಮೊಳಗೆ ಹೇಳಿಕೊಳ್ಳುತ್ತಿದ್ದಾರೆ” ಎಂದನು.


ನೀನಾದರೋ, ‘ದೇವರಿಗೆ ಗೊತ್ತಿರುವುದೇನು? ಕಾರ್ಮೋಡಗಳ ಆಚೆಯಿಂದ ನಮಗೆ ನ್ಯಾಯತೀರಿಸಬಲ್ಲನೇ?


“ಸೆರೆಯವರಿಗಾಗಿ ಸರಪಣಿಗಳನ್ನು ಮಾಡು. ದೇಶವು ಕೊಲೆಯ ಅಪರಾಧಗಳಿಂದ ತುಂಬಿದೆ. ಪಟ್ಟಣದಲ್ಲಿ ಹಿಂಸೆಯು ತುಂಬಿದೆ.


ನಿನ್ನ ಕೈಗಳ ಮೇಲೆ ರಕ್ತದ ಕಲೆ ಇದೆ. ಅದು ನಿರ್ದೋಷಿಗಳಾದ ಬಡವರ ರಕ್ತ. ಅವರು ನಿನ್ನ ಕೈಗೆ ಸಿಕ್ಕಿಹಾಕಿಕೊಂಡ ಕಳ್ಳರಾಗಿರಲಿಲ್ಲ. ಆದರೂ ನೀನು ಅವರನ್ನು ಕೊಲೆ ಮಾಡಿರುವೆ. ನೀನು ಅಂಥ ಕೆಟ್ಟ ಕೆಲಸವನ್ನು ಮಾಡಿರುವೆ.


ಯೆಹೋವನಿಗೆ ತಮ್ಮ ಆಲೋಚನೆಗಳು ತಿಳಿಯಬಾರದೆಂದು ಕುತಂತ್ರೋಪಾಯಗಳನ್ನು ಮಾಡಿ, ಕತ್ತಲೆಯಲ್ಲಿ ದುಷ್ಕೃತ್ಯಗಳನ್ನು ಮಾಡುತ್ತಾ, “ನಮ್ಮನ್ನು ಯಾರು ನೋಡಬಲ್ಲರು, ನಮ್ಮನ್ನು ಯಾರು ಗುರುತಿಸಬಲ್ಲರು?” ಎಂದುಕೊಳ್ಳುವವರ ಗತಿಯನ್ನು ಏನು ಹೇಳಲಿ.


ಆ ದುಷ್ಕೃತ್ಯಗಳು ಯೆಹೋವನಿಗೆ ಕಾಣದೆಂದು ಅವರು ಹೇಳಿಕೊಳ್ಳುತ್ತಾರೆ. ಅವುಗಳು ಇಸ್ರೇಲಿನ ದೇವರಿಗೆ ತಿಳಿಯದೆಂದು ಅವರು ಹೇಳುತ್ತಾರೆ.


ಆದ್ದರಿಂದ ಆ ನಿಸ್ಸಹಾಯಕರು, “ದೇವರು ನಮ್ಮನ್ನು ಮರೆತುಬಿಟ್ಟಿದ್ದ್ದಾನೆ! ನಮಗೆ ಶಾಶ್ವತವಾಗಿ ವಿಮುಖನಾಗಿದ್ದಾನೆ! ನಮಗೆ ಸಂಭವಿಸುತ್ತಿರುವುದನ್ನು ಆತನು ನೋಡುವುದಿಲ್ಲ!” ಎಂದು ಯೋಚಿಸತೊಡಗುವರು.


ಮನಸ್ಸೆಯು ಅನೇಕ ನಿರಪರಾಧಿಗಳನ್ನು ಕೊಂದುಹಾಕಿದನು; ಜೆರುಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೆ ರಕ್ತದಿಂದ ತುಂಬಿಸಿದನು. ಯೆಹೂದವನ್ನು ಪಾಪಕ್ಕೆ ಪ್ರೇರೇಪಿಸಿದ್ದರ ಜೊತೆಗೆ ಅವನ ಈ ಪಾಪಗಳು ಕೂಡಿಕೊಂಡವು. ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಯೆಹೂದವು ಮಾಡುವಂತೆ ಮನಸ್ಸೆಯು ಪ್ರೇರೇಪಿಸಿದನು.’”


“ಆದ್ದರಿಂದ ಲೋಕಾದಿಯಿಂದ ಹತರಾದ ಎಲ್ಲಾ ಪ್ರವಾದಿಗಳ ಸಾವಿಗೆ ಈ ಕಾಲದ ಜನರಾದ ನೀವು ದಂಡನೆ ಹೊಂದುವಿರಿ.


ಆಗ ದೇವರು ನನಗೆ, “ನರಪುತ್ರನೇ, ಅವರು ಮಾಡುತ್ತಿರುವುದು ನಿನಗೆ ಕಾಣುತ್ತಿದೆಯೋ? ಯೆಹೂದದ ಜನರಿಗೆ ತಾವು ಮಾಡುತ್ತಿರುವ ಈ ಭಯಂಕರ ಕೃತ್ಯಗಳು ಸಾಕಾಗಿಲ್ಲ. ಇಡೀ ದೇಶವು ದುಷ್ಟತನದಿಂದ ತುಂಬಿಹೋಗಿದೆ. ಅವರು ನನ್ನನ್ನು ಇನ್ನೂ ಹೆಚ್ಚಿಗೆ ಕೋಪಗೊಳಿಸುತ್ತಿದ್ದಾರೆ. ವಿಗ್ರಹಾರಾಧನೆಯ ಪ್ರತೀಕವಾಗಿ ತಮ್ಮ ಮೂಗುಗಳಿಗೆ ಎಳೆಯ ಕೊಂಬೆಗಳನ್ನು ಸೋಕಿಸುತ್ತಾರೆ.


“ಯೆಹೋಯಾಕೀಮನೇ, ನಿನಗೆ ಲಾಭದಾಯಕವಾದದ್ದು ಮಾತ್ರ ನಿನ್ನ ಕಣ್ಣಿಗೆ ಕಾಣುತ್ತದೆ. ನೀನು ಯಾವಾಗಲೂ ನಿನಗೆ ಹೆಚ್ಚು ಲಾಭ ಬರುವದನ್ನು ನೋಡುವೆ. ನೀನು ನಿರಪರಾಧಿಗಳನ್ನು ಕೊಲ್ಲಲು ಸಿದ್ಧನಾಗಿರುವೆ. ನೀನು ಬೇರೆಯವರ ವಸ್ತುಗಳನ್ನು ಅಪಹರಿಸಲು ಸಿದ್ಧನಾಗಿರುವೆ.”


ಇಸ್ರೇಲ್ ದೇಶವು ಪಾಪದಿಂದ ತುಂಬಿಹೋಗಿದೆ; ಅವರ ಪಾಪವೇ ಅವರಿಗೆ ಭಾರವಾದ ಹೊರೆಯಾಗಿದೆ; ಅವರು ದುಷ್ಟಕುಟುಂಬಗಳ ಕೆಟ್ಟಮಕ್ಕಳಂತಿದ್ದಾರೆ. ಅವರು ಯೆಹೋವನನ್ನು ತ್ಯಜಿಸಿದ್ದಾರೆ; ಇಸ್ರೇಲಿನ ಪರಿಶುದ್ಧ ದೇವರನ್ನು ಅವಮಾನಪಡಿಸಿದ್ದಾರೆ; ಅವರು ಆತನನ್ನು ತೊರೆದು ಅಪರಿಚಿತನೋ ಎಂಬಂತೆ ಪರಿಗಣಿಸಿದ್ದಾರೆ.


ಜೆರುಸಲೇಮನ್ನು ನಿರಪರಾಧದ ರಕ್ತದಿಂದ ತುಂಬಿಸಿದ ಮನಸ್ಸೆಯ ದುಷ್ಕೃತ್ಯಗಳನ್ನು ಯೆಹೋವನು ಕ್ಷಮಿಸಲಿಲ್ಲ.


ನೀವು ದ್ರೋಹಿಗಳೇ, ನೀವು ಆತನ ಮಕ್ಕಳಲ್ಲ. ನಿಮ್ಮ ಪಾಪಗಳು ಆತನನ್ನು ಮಲಿನ ಮಾಡುವವು. ನೀವು ಡೊಂಕಾದ ಸುಳ್ಳುಗಾರರು.


ನನ್ನ ಮರಣದ ಬಳಿಕ ನೀವು ಕೆಟ್ಟಕಾರ್ಯಗಳನ್ನು ಮಾಡುವಿರೆಂದು ನನಗೆ ಗೊತ್ತಿದೆ; ನನ್ನ ಅಪ್ಪಣೆಗಳನ್ನು ಮೀರುವಿರಿ. ನಿಮಗೆ ಭಯಂಕರ ಸಂಗತಿಗಳು ಸಂಭವಿಸುವವು. ಯಾಕೆಂದರೆ ಯೆಹೋವನನ್ನು ನೀವು ಸಿಟ್ಟಿಗೆಬ್ಬಿಸುವಿರಿ” ಎಂದು ಹೇಳಿದನು.


ನೀನು ದುಷ್ಕೃತ್ಯಗಳನ್ನು ಮಾಡುತ್ತಿರುವೆ, ಆದರೂ ನೀನು ಸುರಕ್ಷಿತಳಾಗಿದ್ದೇನೆ ಎಂದುಕೊಂಡಿರುವೆ. ‘ನಾನು ಮಾಡಿದ ದುಷ್ಕೃತ್ಯಗಳನ್ನು ಯಾರೂ ನೋಡುವದಿಲ್ಲ’ ಎಂದು ನೀನು ಭಾವಿಸಿಕೊಂಡಿರುವೆ. ನಿನ್ನ ಜ್ಞಾನ, ನಿನ್ನ ತಿಳುವಳಿಕೆ ನಿನ್ನನ್ನು ಕಾಪಾಡುತ್ತವೆ ಎಂದು ತಿಳಿದುಕೊಂಡಿರುವೆ. ‘ನಾನೇ ಮಹಾವ್ಯಕ್ತಿ, ನನ್ನಂಥ ಮಹಾವ್ಯಕ್ತಿ ಬೇರೆ ಯಾರೂ ಇಲ್ಲ’ ಎಂದು ನೀನು ಅಂದುಕೊಳ್ಳುವೆ.


ಜೆರುಸಲೇಮಿನ ಶತ್ರುಗಳು ಗೆದ್ದಿದ್ದಾರೆ. ಅವಳ ಶತ್ರುಗಳು ಜಯಶೀಲರಾಗಿದ್ದಾರೆ. ಯೆಹೋವನು ಅವಳನ್ನು ದಂಡಿಸಿದ ಕಾರಣ ಹೀಗಾಯಿತು. ಅವಳ ಅನೇಕ ಪಾಪಗಳಿಗಾಗಿ ಆತನು ಜೆರುಸಲೇಮನ್ನು ದಂಡಿಸಿದನು. ಅವಳ ಮಕ್ಕಳು ದೂರಹೋಗಿದ್ದಾರೆ. ಅವರು ವೈರಿಗಳ ಸೆರೆಯಾಳುಗಳಾಗಿ ದೂರ ಹೋಗಿದ್ದಾರೆ.


ಕಾನೂನು ಬಲಹೀನವಾಗಿದೆ. ಅದು ಸರಿಯಾದ ನ್ಯಾಯಕೊಡುವದಿಲ್ಲ. ದುಷ್ಚರು ಶಿಷ್ಟರ ಮೇಲೆ ವ್ಯಾಜ್ಯವಾಡಿ ಗೆಲ್ಲುತ್ತಿದ್ದಾರೆ. ಆದ್ದರಿಂದ ಕಾನೂನು ನ್ಯಾಯವಾಗಿಯೇ ಇಲ್ಲ. ನ್ಯಾಯಕ್ಕೆ ಜಯವಿಲ್ಲ.


“ಆ ಸಮಯಗಳಲ್ಲಿ ನಾನು ದೀಪವನ್ನು ಹಚ್ಚಿ ಜೆರುಸಲೇಮಿನಲ್ಲಿ ಹುಡುಕಾಡುವೆನು. ತಮ್ಮ ಸ್ವಂತ ರೀತಿಯಲ್ಲಿ ನಡೆದು ತೃಪ್ತಿಯಾಗಿರುವ ಜನರನ್ನು ಕಂಡುಕೊಳ್ಳುವೆನು. ಅವರು ಹೇಳುವುದೇನೆಂದರೆ, ‘ಯೆಹೋವನು ಏನೂ ಮಾಡುವುದಿಲ್ಲ. ಅವನು ಸಹಾಯವನ್ನೂ ಮಾಡುವುದಿಲ್ಲ. ಜನರಿಗೆ ಕೆಡುಕನ್ನೂ ಮಾಡುವುದಿಲ್ಲ.’ ಅಂಥವರನ್ನು ನಾನು ಹಿಡಿದು ಶಿಕ್ಷಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು