Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 1:11 - ಪರಿಶುದ್ದ ಬೈಬಲ್‌

11 “ನೀವು ಪಾಳೆಯದ ಎಲ್ಲಾ ಕಡೆಗೆ ಹೋಗಿ ಜನರಿಗೆ ಸಿದ್ಧವಾಗಿರಲು ತಿಳಿಸಿರಿ; ಸ್ವಲ್ಪ ಆಹಾರವನ್ನು ಸಿದ್ಧಪಡಿಸಿಕೊಳ್ಳಲು ಹೇಳಿರಿ. ಇನ್ನು ಮೂರು ದಿವಸಗಳಲ್ಲಿ ನಾವು ಈ ಜೋರ್ಡನ್ ನದಿಯನ್ನು ದಾಟಿ ಹೋಗುವೆವು. ನಾನು ಹೋಗಿ ಯೆಹೋವನಾದ ನಮ್ಮ ದೇವರು ನಮಗೆ ಕೊಡುವ ದೇಶವನ್ನು ವಶಪಡಿಸಿಕೊಳ್ಳುವೆವು ಎಂದು ಹೇಳಿರಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ನೀವು ಪಾಳೆಯದ ಎಲ್ಲೆಡೆಗೆ ಹೋಗಿ ನಿಮ್ಮ ಜನರಿಗೆ ‘ನೀವು ಇನ್ನು ಮೂರು ದಿನಗಳಲ್ಲಿ ಈ ಯೊರ್ದನ್ ನದಿಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವತ್ತಾಗಿ ಕೊಡುವ ದೇಶವನ್ನು ವಶಪಡಿಸಿಕೊಳ್ಳಲು ಹೋಗಬೇಕು. ಆದುದರಿಂದ ನಿಮಗೆ ಬೇಕಾದ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ’ ಎಂದು ತಿಳಿಸಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ನೀವು ಪಾಳೆಯದ ಎಲ್ಲೆಡೆಗೆ ಹೋಗಿ ಜನರಿಗೆ, ‘ನೀವು ಇನ್ನು ಮೂರು ದಿನಗಳಲ್ಲಿ ಈ ಜೋರ್ಡನ್ ನದಿಯನ್ನು ದಾಟಿ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವಂತ ಸೊತ್ತಾಗಿ ಕೊಡುವ ನಾಡನ್ನು ವಶಪಡಿಸಿಕೊಳ್ಳಲು ಹೋಗಬೇಕು. ಆದುದರಿಂದ ನಿಮಗೆ ಬೇಕಾದ ಆಹಾರ ಪದಾರ್ಥಗಳನ್ನು ಸಿದ್ಧಮಾಡಿಕೊಳ್ಳಿ’ ಎಂದು ತಿಳಿಸಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀವು ಪಾಳೆಯದ ಎಲ್ಲಾ ಕಡೆಗೂ ಹೋಗಿ ಜನರಿಗೆ - ನೀವು ಇನ್ನು ಮೂರು ದಿವಸಗಳಲ್ಲಿ ಈ ಯೊರ್ದನ್ ಹೊಳೆಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶವನ್ನು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗಬೇಕು. ಆದದರಿಂದ ನಿಮಗೋಸ್ಕರ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ ಎಂದು ಹೇಳಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ನೀವು ಪಾಳೆಯದ ಮಧ್ಯದಲ್ಲಿ ನಡೆದುಹೋಗಿ ಜನರಿಗೆ, ‘ನಿಮಗೋಸ್ಕರ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಟ್ಟಿರುವ ದೇಶವನ್ನು ನೀವು ಸ್ವಾಧೀನಮಾಡಿಕೊಳ್ಳಲು ಇನ್ನು ಮೂರು ದಿವಸಗಳಲ್ಲಿ ಯೊರ್ದನ್ ನದಿಯನ್ನು ದಾಟಿ ಹೋಗಬೇಕು,’ ಎಂದು ತಿಳಿಸಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 1:11
9 ತಿಳಿವುಗಳ ಹೋಲಿಕೆ  

“ಇಸ್ರೇಲ್ ಜನರೇ, ಕೇಳಿರಿ. ಈ ದಿನ ನೀವು ಜೋರ್ಡನ್ ನದಿಯನ್ನು ದಾಟಿ ಆ ದೇಶವನ್ನು ಪ್ರವೇಶಿಸಿ ನಿಮಗಿಂತ ಬಲಿಷ್ಠವಾದ ಜನಾಂಗಗಳನ್ನು ಹೊಡೆದೋಡಿಸುವಿರಿ. ಅವರ ಪಟ್ಟಣಗಳು ದೊಡ್ಡದಾಗಿವೆ; ಅದರ ಗೋಡೆಗಳು ಆಕಾಶದಷ್ಟು ಎತ್ತರವಾಗಿವೆ;


“ಹಿಂದಿರುಗಿ ಹೋಗಿ, ನನ್ನ ಜನರ ನಾಯಕನಾದ ಹಿಜ್ಕೀಯನಿಗೆ ಇದನ್ನು ಹೇಳು: ‘ನಿನ್ನ ಪೂರ್ವಿಕನಾದ ದಾವೀದನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದೆನು; ನಿನ್ನ ಕಣ್ಣೀರನ್ನು ನೋಡಿದೆನು. ಆದ್ದರಿಂದ ನಾನು ನಿನ್ನನ್ನು ಗುಣಪಡಿಸುತ್ತೇನೆ. ಮೂರನೆಯ ದಿನ, ನೀನು ದೇವಾಲಯಕ್ಕೆ ಹೋಗುವೆ.


ಎರಡು ದಿವಸಗಳ ತರುವಾಯ ನಮ್ಮನ್ನು ತಿರುಗಿ ಜೀವಂತ ಮಾಡುವನು. ಮೂರನೇ ದಿವಸದಲ್ಲಿ ನಮ್ಮನ್ನು ಎಬ್ಬಿಸುವನು. ಆಗ ನಾವು ಆತನ ಸಮೀಪದಲ್ಲಿ ವಾಸಿಸಬಹುದು.


ಮೂರು ದಿನಗಳ ತರುವಾಯ ಜನನಾಯಕರು ಪಾಳೆಯದ ಎಲ್ಲಾ ಕಡೆಗೂ ಹೋಗಿ ಜನರಿಗೆ,


ನೀವು ಜೋರ್ಡನ್ ನದಿಯನ್ನು ದಾಟಿ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳಿರಿ. ಈ ದೇಶವು ನಿಮ್ಮದೇ.


ಮೂರನೆಯ ದಿನದಲ್ಲಿ ನನಗಾಗಿ ಸಿದ್ಧರಾಗಬೇಕು. ಮೂರನೆಯ ದಿನದಲ್ಲಿ ನಾನು ಸೀನಾಯ್ ಬೆಟ್ಟದ ಮೇಲೆ ಇಳಿದುಬರುವೆನು; ಜನರೆಲ್ಲರೂ ನನ್ನನ್ನು ನೋಡುವರು.


“ನನ್ನ ಸೇವಕನಾದ ಮೋಶೆಯು ಸತ್ತನು. ಈಗ ನೀನು ಮತ್ತು ಈ ಜನರು ಜೋರ್ಡನ್ ನದಿಯನ್ನು ದಾಟಿಹೋಗಬೇಕು. ಇಸ್ರೇಲಿನ ಜನರಾದ ನಿಮಗೆ ನಾನು ಕೊಡಲಿರುವ ದೇಶಕ್ಕೆ ನೀವು ಹೋಗಬೇಕು.


ಆಗ ಯೆಹೋಶುವನು ಜನಾಧಿಪತಿಗಳಿಗೆ,


“ಆ ಕಾಲದಲ್ಲಿ ನಾನು ನಿಮಗೆ ಆಜ್ಞಾಪಿಸಿದ್ದೇನೆಂದರೆ: ‘ನಿಮ್ಮ ದೇವರಾದ ಯೆಹೋವನು ನಿಮಗೆ ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿ ಸ್ವಾಸ್ತ್ಯವನ್ನು ಕೊಟ್ಟಿದ್ದಾನೆ. ಆದರೆ ನಿಮ್ಮಲ್ಲಿರುವ ಸೈನಿಕರು ತಮ್ಮ ಆಯುಧಗಳನ್ನು ತೆಗೆದುಕೊಂಡು ಇತರ ಇಸ್ರೇಲರೊಂದಿಗೆ ನದಿಯಾಚೆಗೆ ಬರಬೇಕು. ಅಲ್ಲಿಯ ದೇಶಗಳನ್ನು ಸ್ವಾಧೀನಪಡಿಸಿಕೊಂಡು ಶಾಂತಿ ನೆಲೆಸುವ ತನಕ ಅವರೊಂದಿಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು