ಯೆಹೋಶುವ 1:4 - ಪರಿಶುದ್ದ ಬೈಬಲ್4 ಅರಣ್ಯ ಮತ್ತು ಲೆಬನೋನ್ ಪರ್ವತ ಇವುಗಳನ್ನು ಮೊದಲುಗೊಂಡು ಯೂಫ್ರೇಟೀಸ್ ಮಹಾನದಿಯವರೆಗಿರುವ ಹಿತ್ತಿಯರ ಪ್ರದೇಶವೆಲ್ಲಾ ನಿಮ್ಮದಾಗುವುದು. ನಿಮ್ಮ ಪ್ರದೇಶವು ಪಶ್ಚಿಮದಲ್ಲಿನ ಮೆಡಿಟರೇನಿಯನ್ ಸಮುದ್ರದವರೆಗೆ ವಿಸ್ತರಿಸಿಕೊಳ್ಳುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅರಣ್ಯಗಳು ಹಾಗೂ ಈ ಲೆಬನೋನ್ ಪರ್ವತದಿಂದ ಮೊದಲುಗೊಂಡು ಯೂಫ್ರೆಟಿಸ್ ಮಹಾನದಿಯ ವರೆಗಿರುವ ಹಿತ್ತಿಯರ ದೇಶವೆಲ್ಲಾ ನಿಮ್ಮದಾಗುವುದು; ನಿಮ್ಮ ಸೀಮೆಯು ಪಶ್ಚಿಮದಿಕ್ಕಿನ ಮಹಾಸಾಗರದ ವರೆಗೆ ವಿಸ್ತರಿಸಿಕೊಳ್ಳುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಬೆಂಗಾಡು ಹಾಗೂ ಲೆಬನೋನ್ ಪರ್ವತದಿಂದ ಯೂಫ್ರೆಟಿಸ್ ಮಹಾನದಿಯ ವರೆಗಿರುವ ಹಿತ್ತಿಯರ ನಾಡೆಲ್ಲ ನಿಮ್ಮದಾಗುವುದು. ನಿಮ್ಮ ಸೀಮೆ ಪಶ್ಚಿಮ ದಿಕ್ಕಿನ ಮಹಾಸಾಗರದ ವರೆಗೆ ವಿಸ್ತರಿಸಿಕೊಳ್ಳುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅರಣ್ಯವೂ ಈ ಲೆಬನೋನ್ ಪರ್ವತವೂ ಮೊದಲುಗೊಂಡು ಯೂಫ್ರೇಟೀಸ್ ಮಹಾನದಿಯವರೆಗಿರುವ ಹಿತ್ತಿಯರ ದೇಶವೆಲ್ಲಾ ನಿಮ್ಮದಾಗುವದು; ನಿಮ್ಮ ಸೀಮೆಯು ಪಶ್ಚಿಮ ದಿಕ್ಕಿನ ಮಹಾಸಾಗರದವರೆಗೆ ವಿಸ್ತರಿಸಿಕೊಳ್ಳುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಮರುಭೂಮಿಯೂ ಈ ಲೆಬನೋನ್ ಮೊದಲುಗೊಂಡು ಯೂಫ್ರೇಟೀಸ್ ಮಹಾ ನದಿಯವರೆಗೆ ಇರುವ ಹಿತ್ತಿಯರ ದೇಶವೆಲ್ಲಾ ನಿಮ್ಮದಾಗುವುದು. ನಿಮ್ಮ ಸೀಮೆ ಸೂರ್ಯನು ಅಸ್ತಮಿಸುವ ಮಹಾಸಾಗರದವರೆಗೂ ವಿಸ್ತರಿಸಿಕೊಳ್ಳುವುದು. ಅಧ್ಯಾಯವನ್ನು ನೋಡಿ |