Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 1:8 - ಪರಿಶುದ್ದ ಬೈಬಲ್‌

8 ಆ ಧರ್ಮಶಾಸ್ತ್ರದಲ್ಲಿ ಬರೆದ ವಿಷಯಗಳನ್ನು ಸದಾ ನೆನಪಿಡು. ಹಗಲೂ ರಾತ್ರಿ ಆ ಧರ್ಮಶಾಸ್ತ್ರವನ್ನು ಧ್ಯಾನಿಸು. ಆಗ ಅದರಲ್ಲಿ ಬರೆದ ವಿಷಯಗಳಿಗೆ ನೀನು ನಿಶ್ಚಿತವಾಗಿ ವಿಧೇಯನಾಗಿರುವೆ. ನೀನು ಹೀಗೆ ಮಾಡಿದರೆ ನೀನು ಮಾಡುವ ಪ್ರತಿಯೊಂದು ಕಾರ್ಯದಲ್ಲಿ ನೀನು ವಿವೇಕಶಾಲಿಯಾಗುವೆ ಮತ್ತು ಜಯಶಾಲಿಯಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಈ ಧರ್ಮಶಾಸ್ತ್ರವು ಯಾವಾಗಲೂ ನಿನ್ನ ಬಾಯಲ್ಲಿರಲಿ; ಹಗಲಿರುಳು ಅದನ್ನು ಧ್ಯಾನಿಸುತ್ತಾ ಅದರಲ್ಲಿ ಬರೆದಿರುವುದನ್ನೆಲ್ಲಾ ಕೈಕೊಂಡು ನಡೆ. ಆಗ ನಿನ್ನ ಕಾರ್ಯವೆಲ್ಲವೂ, ನೀನು ಹೋಗುವ ಮಾರ್ಗಗಳು ಸಫಲವಾಗುವುದು. ನೀನು ಚುರುಕು ಬುದ್ಧಿಯ ವ್ಯಕ್ತಿಯಾಗಿ ರೂಪಾಂತರ ಹೊಂದುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಈ ಧರ್ಮಶಾಸ್ತ್ರ ಸದಾ ನಿನ್ನ ಬಾಯಲ್ಲಿರಲಿ. ಹಗಲಿರುಳು ಅದನ್ನು ಧ್ಯಾನಿಸು. ಅದರಲ್ಲಿ ಬರೆದಿರುವುದನ್ನೆಲ್ಲಾ ಕೈಗೊಂಡು ನಡೆ. ಆಗ ನಿನ್ನ ಕಾರ್ಯವೆಲ್ಲಾ ಕೈಗೂಡುವುದು. ನೀನು ಕೃತಾರ್ಥನಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಈ ಧರ್ಮಶಾಸ್ತ್ರವು ಯಾವಾಗಲೂ ನಿನ್ನ ಬಾಯಲ್ಲಿರಲಿ; ಹಗಲಿರುಳು ಅದನ್ನು ಧ್ಯಾನಿಸುತ್ತಾ ಅದರಲ್ಲಿ ಬರೆದಿರುವದನ್ನೆಲ್ಲಾ ಕೈಕೊಂಡು ನಡಿ. ಆಗ ನಿನ್ನ ಮಾರ್ಗದಲ್ಲೆಲ್ಲಾ ಸಫಲನಾಗುವಿ, ಕೃತಾರ್ಥನಾಗುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಈ ದೇವರ ನಿಯಮವು ನಿನ್ನ ಬಾಯಿಂದ ತೊಲಗಬಾರದು, ಅದರಲ್ಲಿ ಬರೆದಿರುವ ಪ್ರಕಾರವೇ ಕೈಗೊಂಡು ನಡೆಯುವ ಹಾಗೆ ಹಗಲುರಾತ್ರಿ ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವು ಸಮೃದ್ಧಿಯಾಗಿ ನೀನು ಜಯಶಾಲಿಯಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 1:8
40 ತಿಳಿವುಗಳ ಹೋಲಿಕೆ  

ನಾನು ನಿನ್ನ ನಿಯಮಗಳನ್ನು ಚರ್ಚಿಸುವೆನು ನಿನ್ನ ಜೀವಮಾರ್ಗವನ್ನು ಅನುಸರಿಸುವೆನು.


ನನ್ನ ಮಾತುಗಳೂ ನನ್ನ ಆಲೋಚನೆಗಳೂ ನಿನಗೆ ಮೆಚ್ಚಿಕೆಯಾಗಿರಲಿ. ಯೆಹೋವನೇ, ನೀನೇ ನನ್ನ ಬಂಡೆಯಾಗಿರುವೆ. ನನ್ನನ್ನು ರಕ್ಷಿಸುವಾತನು ನೀನೇ.


ಕ್ರಿಸ್ತನ ಉಪದೇಶವು ನಿಮ್ಮ ಅಂತರಂಗದಲ್ಲಿ ಸಮೃದ್ಧವಾಗಿ ನೆಲಸಿರಲಿ. ನೀವು ದೇವರಿಂದ ಕಲಿತುಕೊಂಡದ್ದನ್ನು ಉಪದೇಶಿಸುವುದಕ್ಕೂ ಒಬ್ಬರನ್ನೊಬ್ಬರು ಬಲಪಡಿಸುವುದಕ್ಕೂ ಉಪಯೋಗಿಸಿರಿ. ನಿಮ್ಮ ಹೃದಯದಲ್ಲಿ ದೇವರಿಗೆ ಕೃತಜ್ಞರಾಗಿದ್ದು ಹಾಡುಗಳನ್ನು, ಕೀರ್ತನೆಗಳನ್ನು, ಸಂಗೀತಗಳನ್ನು ಹಾಡಿರಿ.


ನನ್ನ ಮಗನೇ, ನನ್ನ ಉಪದೇಶವನ್ನು ಮರೆಯಬೇಡ. ನನ್ನ ಆಜ್ಞೆಗಳನ್ನು ಜ್ಞಾಪಕದಲ್ಲಿಟ್ಟುಕೊ.


ನೀವು ದೇವರೊಡನೆ ಮಾಡಿದ ಒಪ್ಪಂದವನ್ನು ಪಾಲಿಸುತ್ತಾ ಬಂದರೆ ನೀವು ನಿಮ್ಮ ಕಾರ್ಯಗಳಲ್ಲಿ ಜಯವನ್ನು ಹೊಂದುವಿರಿ.


ಒಬ್ಬನು ನನ್ನ ಆಜ್ಞೆಗಳನ್ನು ಸ್ವೀಕರಿಸಿಕೊಂಡು ಅವುಗಳಿಗೆ ವಿಧೇಯನಾದರೆ ಅವನು ನನ್ನನ್ನು ನಿಜವಾಗಿಯೂ ಪ್ರೀತಿಸುವವನಾಗಿದ್ದಾನೆ. ಅಲ್ಲದೆ ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು ಮತ್ತು ನಾನೂ ಅವನನ್ನು ಪ್ರೀತಿಸುವೆನು. ನಾನು ಅವನಿಗೆ ನನ್ನನ್ನೇ ತೋರ್ಪಡಿಸಿಕೊಳ್ಳುವೆನು” ಎಂದು ಉತ್ತರಕೊಟ್ಟನು.


ಆದರೆ ಯೇಸು, “ದೇವರ ವಾಕ್ಯವನ್ನು ಕೇಳಿ ಅದಕ್ಕೆ ವಿಧೇಯರಾಗುವ ಜನರೇ ಭಾಗ್ಯವಂತರು!” ಎಂದನು.


“ನನ್ನ ಈ ಮಾತುಗಳನ್ನು ಕೇಳಿ ಅವುಗಳಿಗೆ ವಿಧೇಯನಾಗಿರುವ ಪ್ರತಿಯೊಬ್ಬನೂ ತನ್ನ ಮನೆಯನ್ನು ಬಂಡೆಯ ಮೇಲೆ ಕಟ್ಟಿದ ಬುದ್ಧಿವಂತನಿಗೆ ಹೋಲಿಕೆಯಾಗಿದ್ದಾನೆ.


ನಾನು ನಿನಗೆ ವಿರೋಧವಾಗಿ ಪಾಪಮಾಡದಂತೆ ನಿನ್ನ ಉಪದೇಶಗಳನ್ನು ಹೃದಯದಲ್ಲಿ ಇಟ್ಟುಕೊಂಡಿದ್ದೇನೆ.


ನಿನ್ನ ಉಪದೇಶಗಳು ನನಗೆ ಪ್ರಿಯವಾಗಿವೆ; ದಿನವೆಲ್ಲಾ ಅವುಗಳನ್ನೇ ಧ್ಯಾನಿಸುವೆನು.


“‘ನಾನು ಪ್ರಭುವಿನವನು’ ಎಂದು ಹೇಳಿದ ಮಾತ್ರಕ್ಕೆ ಮನುಷ್ಯನು ಪರಲೋಕರಾಜ್ಯಕ್ಕೆ ಪ್ರವೇಶಿಸಲು ಸಾಧ್ಯವಿಲ್ಲ. ಪರಲೋಕದಲ್ಲಿರುವ ನನ್ನ ತಂದೆಯ ಇಷ್ಟದಂತೆ ಮಾಡುವವರೇ ಪರಲೋಕರಾಜ್ಯಕ್ಕೆ ಪ್ರವೇಶಿಸುವರು.


ನೀವು ಈ ಸಂಗತಿಗಳನ್ನು ತಿಳಿದುಕೊಂಡು ಇವುಗಳನ್ನು ಕೈಕೊಂಡು ನಡೆದರೆ ಸಂತೋಷದಿಂದಿರುವಿರಿ.


ಆದರೆ ನೀನು ಇನ್ನೊಂದು ವಿಷಯದಲ್ಲಿಯೂ ಸ್ಥಿರಚಿತ್ತನಾಗಿರಬೇಕು; ಧೈರ್ಯವಂತನಾಗಿರಬೇಕು. ನನ್ನ ಸೇವಕನಾಗಿದ್ದ ಮೋಶೆಯು ನಿನಗೆ ಕೊಟ್ಟ ಆಜ್ಞೆಗಳನ್ನು ನೀನು ನಿಶ್ಚಿತವಾಗಿ ಪಾಲಿಸಬೇಕು. ಅವನ ಧರ್ಮೋಪದೇಶವನ್ನೆಲ್ಲಾ ಚಾಚೂತಪ್ಪದೆ ಅನುಸರಿಸಿದ್ದೇ ಆದರೆ ನೀನು ಮಾಡುವ ಎಲ್ಲ ಕಾರ್ಯಗಳಲ್ಲಿ ನಿನಗೆ ಜಯಸಿಗುವುದು ಖಂಡಿತ.


ದೇವರ ನುಡಿಯು ನಿಮ್ಮ ಬಳಿಯಲ್ಲಿಯೇ ಇದೆ. ಅದು ನಿಮ್ಮ ಬಾಯಿಯಲ್ಲಿಯೂ ಹೃದಯದಲ್ಲಿಯೂ ಇದೆ. ಆದ್ದರಿಂದ ಅವುಗಳಿಗೆ ಕಷ್ಟವಿಲ್ಲದೆ ವಿಧೇಯರಾಗಬಹುದು.


ಆದರೆ ಅವರು ಆಲೋಚಿಸುವ ರೀತಿಯನ್ನು ನಾನು ಬದಲಾಯಿಸಬೇಕಾಗಿದೆ. ಅವರು ನನಗೆ ವಿಧೇಯರಾಗಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ತಮ್ಮ ಹೃದಯಗಳಿಂದ ನನ್ನನ್ನು ಗೌರವಿಸಬೇಕು. ಆಗ ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿ ಶುಭವಿರುವುದು.


ನಿನ್ನ ಒಡಂಬಡಿಕೆಯನ್ನು ನಾನು ಧ್ಯಾನಿಸುತ್ತಿರುವುದರಿಂದ ನನ್ನ ಉಪಾಧ್ಯಾಯರಿಗಿಂತ ಜ್ಞಾನಿಯಾಗಿದ್ದೇನೆ.


ಯೆಹೋವನು ಹೇಳುವುದೇನೆಂದರೆ: “ನಾನಂತೂ ಆ ಜನರೊಂದಿಗೆ ಒಂದು ಒಡಂಬಡಿಕೆಯನ್ನು ಮಾಡುವೆನು. ನನ್ನ ವಾಗ್ದಾನದ ಮಾತುಗಳೂ ನಾನು ಇರಿಸಿದ ನನ್ನ ಆತ್ಮವೂ ನಿಮ್ಮಿಂದ ಎಂದಿಗೂ ತೊಲಗದು. ಅವು ನಿಮ್ಮ ಮೊಮ್ಮಕ್ಕಳ ತನಕವೂ ಇರುವವು. ಅವು ನಿನ್ನೊಂದಿಗೆ ಈಗಲೂ ಸದಾಕಾಲವೂ ಇರುವವು.


“ಆದ್ದರಿಂದ, ಇಸ್ರೇಲ್ ಜನರೇ, ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಅನುಸರಿಸಲು ನೀವು ಎಚ್ಚರದಿಂದಿರಬೇಕು. ಆತನನ್ನು ಹಿಂಬಾಲಿಸುವುದನ್ನು ನಿಲ್ಲಿಸಬೇಡಿ.


ಆ ಹಬ್ಬದ ಸಮಯದಲ್ಲಿ ಇಸ್ರೇಲರೆಲ್ಲರು ತಮ್ಮ ದೇವರಾದ ಯೆಹೋವನು ಆರಿಸುವ ವಿಶೇಷ ಸ್ಥಳದಲ್ಲಿ ಕೂಡಿಬರುವಾಗ ಈ ಬೋಧನೆಯ ಪುಸ್ತಕವನ್ನು ಎಲ್ಲರಿಗೂ ಕೇಳಿಸುವಂತೆ ಓದಬೇಕು.


ನಿಮ್ಮ ಬಾಯಿಂದ ಕೆಟ್ಟ ಮಾತುಗಳು ಬಾರದಿರಲಿ. ಭಕ್ತಿಯನ್ನು ವೃದ್ಧಿಮಾಡುವಂಥ ಕಾಲೋಚಿತವಾದ ಮಾತು ಇದ್ದರೆ ಕೇಳುವವರ ಹಿತಕ್ಕಾಗಿ ಅದನ್ನು ಆಡಿರಿ.


ಒಳ್ಳೆಯವನು ತನ್ನ ಹೃದಯದಲ್ಲಿ ಒಳ್ಳೆಯವುಗಳನ್ನು ಇಟ್ಟುಕೊಂಡಿರುತ್ತಾನೆ. ಆದ್ದರಿಂದ ಅವನು ತನ್ನ ಹೃದಯದಿಂದ ಬರುವ ಒಳ್ಳೆಯವುಗಳನ್ನೇ ಮಾತಾಡುತ್ತಾನೆ. ಆದರೆ ದುಷ್ಟನು ತನ್ನ ಹೃದಯದಲ್ಲಿ ಕೆಟ್ಟವುಗಳನ್ನು ಶೇಖರಿಸಿಕೊಂಡಿರುತ್ತಾನೆ. ಆದ್ದರಿಂದ ಅವನು ತನ್ನ ಹೃದಯದಿಂದ ಬರುವ ಕೆಟ್ಟವುಗಳನ್ನೇ ಮಾತಾಡುತ್ತಾನೆ.


ನಿನ್ನ ನೀತಿಕಾರ್ಯಗಳ ಕುರಿತು ನಾನು ಹೇಳಿದೆನು. ಅವುಗಳನ್ನು ನನ್ನ ಹೃದಯದಲ್ಲಿ ಬಚ್ಚಿಟ್ಟುಕೊಳ್ಳಲಿಲ್ಲ. ನಿನ್ನ ನಂಬಿಗಸ್ತಿಕೆಯನ್ನೂ ರಕ್ಷಣೆಯನ್ನೂ ನಾನು ಅವರಿಗೆ ತಿಳಿಸುವೆನು. ನಿನ್ನ ಪ್ರೀತಿಯನ್ನೂ ನಿನ್ನ ಸತ್ಯತೆಯನ್ನೂ ಮಹಾಸಭೆಯಲ್ಲಿ ಹೇಳುವೆನು.


ನಾನು ನಿಮಗೆ ಆಜ್ಞಾಪಿಸಿದವುಗಳಿಗೆಲ್ಲಾ ವಿಧೇಯರಾಗುವಂತೆ ಜನರಿಗೆ ಉಪದೇಶಿಸಿ, ಲೋಕಾಂತ್ಯದವರೆಗೂ ಸದಾಕಾಲ ನಾನು ನಿಮ್ಮೊಂದಿಗಿರುತ್ತೇನೆ” ಎಂದು ಹೇಳಿದನು.


“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡ ಜನರೇ ಧನ್ಯರು. ಅವರು ಜೀವವೃಕ್ಷದ ಹಣ್ಣನ್ನು ತಿನ್ನಲು ಹಕ್ಕುಳ್ಳವರಾಗಿದ್ದಾರೆ. ಅವರು ಬಾಗಿಲುಗಳ ಮೂಲಕ ನಗರದೊಳಕ್ಕೆ ಹೋಗಬಲ್ಲರು.


ಸಾಯಂಕಾಲದಲ್ಲಿ ಇಸಾಕನು ಧ್ಯಾನಮಾಡಲು ಹೊಲಕ್ಕೆ ಹೋದನು. ಇಸಾಕನು ಕಣ್ಣೆತ್ತಿ ನೋಡಿದಾಗ ಬಹುದೂರದಲ್ಲಿ ಒಂಟೆಗಳು ಬರುತ್ತಿರುವುದನ್ನು ಕಂಡನು.


ಯೆಹೋವನ ಕಟ್ಟಳೆ, ವಿಧಿನಿಯಮಗಳ ಬೋಧನೆಯನ್ನೆಲ್ಲಾ ಮೋಶೆಯು ಪುಸ್ತಕದಲ್ಲಿ ಜಾಗ್ರತೆಯಾಗಿ ಬರೆದಿಟ್ಟನು.


ಆಗ ಯೆಹೋಶುವನು ಧರ್ಮಶಾಸ್ತ್ರದ ಎಲ್ಲಾ ಆಶೀರ್ವಾದಗಳನ್ನು ಮತ್ತು ಶಾಪದ ವಾಕ್ಯಗಳನ್ನು ಧರ್ಮಶಾಸ್ತ್ರದಲ್ಲಿ ಬರೆದಿರುವಂತೆಯೇ ಓದಿದನು.


ಇಸ್ರೇಲ್ ಸಮೂಹದವರನ್ನೆಲ್ಲಾ ಮೋಶೆ ಒಟ್ಟಾಗಿ ಸೇರಿಸಿ ಅವರಿಗೆ ಹೇಳಿದ್ದೇನೆಂದರೆ: “ಇಸ್ರೇಲ್ ಜನರೇ, ನಾನು ಈ ಹೊತ್ತು ಹೇಳುವ ಕಟ್ಟಳೆಗಳಿಗೆ ಕಿವಿಗೊಡಿರಿ. ಇವುಗಳನ್ನು ಕಲಿತುಕೊಂಡು ಪಾಲಿಸುವವರಾಗಿರಿ.


ನಾವು ಅವರ ದೇಶವನ್ನು ರೂಬೇನ್, ಗಾದ್ ಮತ್ತು ಮನಸ್ಸೆಯ ಅರ್ಧ ಕುಲದವರಿಗೆ ಹಂಚಿದೆವು.


ಜೆಕರ್ಯನು ಜೀವಿಸುತ್ತಿದ್ದಾಗ ಉಜ್ಜೀಯನು ದೇವರನ್ನು ಅನುಸರಿಸಿದನು. ಅವನು ಉಜ್ಜೀಯನಿಗೆ ದೇವರಿಗೆ ಹೇಗೆ ಭಯಪಡಬೇಕು, ದೇವರನ್ನು ಹೇಗೆ ಗೌರವಿಸಬೇಕೆಂದು ಕಲಿಸಿಕೊಟ್ಟನು. ಉಜ್ಜೀಯನು ದೇವರಿಗೆ ವಿಧೇಯನಾಗಿ ಬಾಳಿದಾಗ ಯೆಹೋವ ದೇವರು ಅವನಿಗೆ ಯಶಸ್ಸನ್ನು ದಯಪಾಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು