Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:10 - ಪರಿಶುದ್ದ ಬೈಬಲ್‌

10 ಇಸ್ರೇಲರು ಧಾಳಿಮಾಡಿದಾಗ ಯೆಹೋವನು ಆ ಶತ್ರು ಸೈನ್ಯವನ್ನು ಗಾಬರಿಗೊಳಿಸಿದನು. ಆದ್ದರಿಂದ ಇಸ್ರೇಲಿನ ಸೈನಿಕರು ಅವರನ್ನು ಸೋಲಿಸಿ ಮಹಾವಿಜಯವನ್ನು ಸಾಧಿಸಿದರು. ಇಸ್ರೇಲರು ಶತ್ರುಗಳನ್ನು ಗಿಬ್ಯೋನಿನಿಂದ ಬೇತ್‌ಹೋರೋನಿಗೆ ಹೋಗುವ ದಾರಿಯವರೆಗೂ ಬೆನ್ನಟ್ಟಿದರು. ಇಸ್ರೇಲರು ಅಜೇಕ ಮತ್ತು ಮಕ್ಕೇದದವರೆಗೆ ಅವರನ್ನು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆ ಅಮೋರಿಯರಲ್ಲಿ ಯೆಹೋವನು ಇಸ್ರಾಯೇಲರ ಕುರಿತಾಗಿ ಅವರನ್ನು ಕಳವಳಗೊಳಿಸಿದ್ದರಿಂದ ಯೆಹೋಶುವನು ಅವರನ್ನು ಗಿಬ್ಯೋನಿನ ಹತ್ತಿರ ಸಂಪೂರ್ಣವಾಗಿ ಸೋಲಿಸಿ ಬೇತ್‌ಹೋರೋನ್ ಎಂಬ ಬೆಟ್ಟದ ದಾರಿಯಲ್ಲಿ ಅಜೇಕ, ಮಕ್ಕೇದ ಎಂಬ ಊರುಗಳವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆ ಅಮೋರಿಯರಲ್ಲಿ ಇಸ್ರಯೇಲರ ಬಗ್ಗೆ ಸರ್ವೇಶ್ವರ ಭಯ ಹುಟ್ಟಿಸಿದರು. ಆದುದರಿಂದ ಯೆಹೋಶುವನು ಅವರನ್ನು ಗಿಬ್ಯೋನಿನ ಹತ್ತಿರ ಸಂಪೂರ್ಣವಾಗಿ ಸೋಲಿಸಿ ಬೇತ್ ಹೋರೋನ್ ಎಂಬ ಮೇಡು ದಾರಿಯಲ್ಲಿ ಅಜೇಕ, ಮಕ್ಕೇದ ಎಂಬ ಊರುಗಳವರೆಗೆ ಅವರನ್ನು ಹಿಂದಟ್ಟಿ ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನು ಇಸ್ರಾಯೇಲ್ಯರ ಮುಂದೆ ಅವರನ್ನು ಕಳವಳಗೊಳಿಸಿದ್ದರಿಂದ ಯೆಹೋಶುವನು ಅವರನ್ನು ಗಿಬ್ಯೋನಿನ ಹತ್ತಿರ ಪೂರ್ಣವಾಗಿ ಸೋಲಿಸಿ ಬೇತ್‍ಹೋರೋನ್ ಎಂಬ ಗಟ್ಟದ ದಾರಿಯಲ್ಲಿ ಅಜೇಕ, ಮಕ್ಕೇದ ಎಂಬ ಊರುಗಳವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಯೆಹೋವ ದೇವರು ಅವರನ್ನು ಇಸ್ರಾಯೇಲಿನ ಮುಂದೆ ಕಳವಳಗೊಳಿಸಿದರು. ಯೆಹೋಶುವನು ಮತ್ತು ಇಸ್ರಾಯೇಲರು ಗಿಬ್ಯೋನಿನಲ್ಲಿ ಸಂಪೂರ್ಣವಾಗಿ ಸಂಹರಿಸಿ, ಬೇತ್ ಹೋರೋನಿಗೆ ಹೋಗುವ ಮಾರ್ಗದಲ್ಲಿ ಅವರನ್ನು ಹಿಂದಟ್ಟಿ, ಅಜೇಕ, ಮಕ್ಕೇದದ ಎಂಬ ಊರುಗಳವರೆಗೆ ಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:10
29 ತಿಳಿವುಗಳ ಹೋಲಿಕೆ  

ಆತನು ಬಾಣಗಳನ್ನು ಎಸೆದು ವೈರಿಗಳನ್ನು ಚದರಿಸಿಬಿಟ್ಟನು; ಸಿಡಿಲುಮಿಂಚುಗಳಿಂದ ಅವರನ್ನು ಕಳವಳಗೊಳಿಸಿದನು.


ಎಫ್ರಾಯೀಮ್ ಕುಲದವರಿಗೆ ಕೊಟ್ಟ ಸ್ವಾಸ್ತ್ಯವು ಇಂತಿದೆ: ಅವರ ಸ್ವಾಸ್ತ್ಯದ ಪೂರ್ವದಿಕ್ಕಿನ ಸೀಮೆಯು ಮೇಲಿನ ಬೇತ್‌ಹೋರೋನಿನ ಹತ್ತಿರ ಇದ್ದ ಅಟಾರೋತದ್ದಾರಿನಿಂದ ಆರಂಭವಾಗುತ್ತದೆ.


ಅಲ್ಲಿಂದ ಪಶ್ಚಿಮದಿಕ್ಕಿನಲ್ಲಿರುವ ಯಪ್ಲೇಟ್ಯರ ಪ್ರಾಂತ್ಯದ ಸೀಮೆಗೆ ಮುಟ್ಟಿ ಅಲ್ಲಿಂದ ಕೆಳಗಿನ ಬೇತ್‌ಹೋರೋನ್ ಕಡೆಗೆ ಮುಂದುವರೆಯುತ್ತದೆ. ಅಲ್ಲಿಂದ ಗೆಜೆರಿಗೆ ಹೋಗಿ ಮೆಡಿಟರೆನಿಯನ್ ಸಮುದ್ರದತ್ತ ಮುಂದುವರೆಯುತ್ತದೆ.


ಪೆರಾಚೀಮ್ ಬೆಟ್ಟದ ಮೇಲೆ ಯೆಹೋವನು ಯುದ್ಧ ಮಾಡಿದಂತೆಯೇ ಆತನು ಯುದ್ಧಮಾಡುವನು. ಗಿಬ್ಯೋನ್ ಕಣಿವೆಯಲ್ಲಿ ಯೆಹೋವನು ಕೋಪಗೊಂಡಿದ್ದಂತೆಯೇ ಕೋಪಗೊಳ್ಳುವನು. ಆಗ ಆತನು ಮಾಡಬೇಕಾದ ಕಾರ್ಯಗಳನ್ನು ಮಾಡುವನು. ಯೆಹೋವನು ಕೆಲವು ಅಪರಿಚಿತವಾದ ಸಂಗತಿಗಳನ್ನು ಮಾಡುವನು. ಆದರೆ ಆತನು ತನ್ನ ಕಾರ್ಯವನ್ನು ಮಾಡಿಮುಗಿಸುವನು. ಆ ಕೆಲಸವು ಒಬ್ಬ ಪರಿಚಯವಿಲ್ಲದವನ ಕೆಲಸವಾಗಿದೆ.


ಬಾರಾಕ ಮತ್ತು ಅವನ ಜನರು ಸೀಸೆರನ ಮೇಲೆ ಧಾಳಿ ಮಾಡಿದರು. ಯೆಹೋವನು ಸೀಸೆರನಲ್ಲಿ ಮತ್ತು ಅವನ ಸೈನ್ಯದಲ್ಲಿ ಮತ್ತು ಅವನ ರಥಗಳಲ್ಲಿ ಗಲಿಬಿಲಿ ಉಂಟುಮಾಡಿದನು. ಏನು ಮಾಡಬೇಕೆಂದು ಅವರಿಗೆ ತಿಳಿಯಲಿಲ್ಲ. ಬಾರಾಕ ಮತ್ತು ಅವನ ಸೈನಿಕರು ಸೀಸೆರನ ಸೈನ್ಯವನ್ನು ಸೋಲಿಸಿದರು. ಆದರೆ ಸೀಸೆರನು ತನ್ನ ರಥವನ್ನು ಬಿಟ್ಟು ಓಡಿಹೋದನು.


ಯರ್ಮೂತ್, ಅದುಲ್ಲಾಮ್, ಸೋಕೋ, ಅಜೇಕಾ,


ಬೇತ್‌ಹೋರೋನ್ ಇಳಿಜಾರಿನಿಂದ ಅಜೇಕದವರೆಗೆ ಅವರನ್ನು ಕೊಂದರು. ಅವರು ಶತ್ರುಗಳನ್ನು ಬೆನ್ನಟ್ಟುತ್ತಿದ್ದಾಗ ಯೆಹೋವನು ಆಕಾಶದಿಂದ ಆಲಿಕಲ್ಲು ಮಳೆ ಸುರಿಯುವಂತೆ ಮಾಡಿದನು. ಬಹಳಷ್ಟು ಮಂದಿ ಶತ್ರುಗಳು ಈ ದೊಡ್ಡ ಆಲಿಕಲ್ಲುಗಳಿಂದಲೇ ಮೃತಪಟ್ಟರು. ಇಸ್ರೇಲರು ತಮ್ಮ ಖಡ್ಗಗಳಿಂದ ಕೊಂದ ಜನರಿಗಿಂತ ಹೆಚ್ಚು ಜನರು ಈ ಆಲಿಕಲ್ಲಿನ ಮಳೆಯಿಂದ ಸತ್ತರು.


ಆಗ ಬಾಬಿಲೋನಿನ ರಾಜನ ಸೈನ್ಯವು ಜೆರುಸಲೇಮಿನ ವಿರುದ್ಧ ಹೋರಾಡುತ್ತಿತ್ತು. ಬಾಬಿಲೋನಿನ ಸೈನ್ಯವು ತಾನು ಇನ್ನೂ ಸ್ವಾಧೀನಪಡಿಸಿಕೊಳ್ಳದ ಯೆಹೂದದ ನಗರಗಳ ವಿರುದ್ಧ ಕೂಡ ಹೋರಾಡುತ್ತಿತ್ತು. ಆ ಪಟ್ಟಣಗಳೆಂದರೆ ಲಾಕೀಷ್ ಮತ್ತು ಅಜೇಕ. ಯೆಹೂದದಲ್ಲಿ ಕೋಟೆಗಳನ್ನು ಹೊಂದಿದ್ದ ನಗರಗಳೆಂದರೆ ಇವೆರಡೇ.


ಆ ನಾಡಿನ ಜನಾಂಗಗಳನ್ನು ಆತನು ಬಲವಂತವಾಗಿ ಹೊರಗಟ್ಟಿದನು. ಆತನು ಇಸ್ರೇಲಿನ ಪ್ರತಿಯೊಂದು ಕುಲಕ್ಕೂ ಆ ನಾಡಿನಲ್ಲಿ ಪಾಲುಕೊಟ್ಟನು; ಆ ನಾಡಿನ ಮನೆಗಳಲ್ಲಿ ಅವರನ್ನು ನೆಲೆಗೊಳಿಸಿದನು.


ಈ ದೇಶವು ನಮಗೆ ದೊರೆತದ್ದು ನಮ್ಮ ಪೂರ್ವಿಕರ ಖಡ್ಗಗಳಿಂದಲ್ಲ. ಅವರನ್ನು ಜಯಶಾಲಿಗಳನ್ನಾಗಿ ಮಾಡಿದ್ದು ಅವರ ಭುಜಬಲವಲ್ಲ. ನಮ್ಮ ಪೂರ್ವಿಕರೊಂದಿಗೆ ನೀನಿದ್ದುದರಿಂದ ಅವರಿಗೆ ಜಯವು ದೊರೆಯಿತು. ದೇವರೇ, ನಿನ್ನ ಮಹಾಶಕ್ತಿಯು ಅವರನ್ನು ರಕ್ಷಿಸಿತು. ಅವರ ಮೇಲೆ ನಿನಗಿದ್ದ ಪ್ರೀತಿಯನ್ನು ಅದು ತೋರಿಸಿತು.


ಆಗ ಯೆಹೂದ ದೇಶದ ಆಸನ ಸೈನ್ಯವು ಇಥಿಯೋಪಿಯಾದ ಸೈನ್ಯವನ್ನು ಸೋಲಿಸುವಂತೆ ಯೆಹೋವನು ಮಾಡಿದನು.


ಎರಡನೆ ಗುಂಪು ಈಶಾನ್ಯ ದಿಕ್ಕಿನ ಮಾರ್ಗವಾಗಿ ಬೇತ್‌ಹೋರೋನಿನ ಕಡೆಗೆ ಹೊರಟಿತು. ಆ ಮೂರನೆಯ ಗುಂಪು ಪೂರ್ವದಿಕ್ಕಿನ ಗಡಿಪ್ರದೇಶದ ಕಡೆಗೆ ಹೊರಟಿತು. ಆ ರಸ್ತೆಯು ಜೆಬೋಯೀಮ್ ಕಣಿವೆಯ ಮರುಭೂಮಿಯ ಕಡೆಗೆ ಹೋಗುತ್ತಿತ್ತು.


ಕಿಬ್‌ಚೈಮ್ ಮತ್ತು ಬೇತ್‌ಹೋರೋನ್. ಒಟ್ಟಿನಲ್ಲಿ ಎಫ್ರಾಯೀಮರು ಅವರಿಗೆ ನಾಲ್ಕು ಪಟ್ಟಣಗಳನ್ನೂ ಅವರ ಪಶುಗಳಿಗಾಗಿ ಆ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನೂ ಕೊಟ್ಟರು.


ಗೆದೇರೋತ್, ಬೇತ್‌ದಾಗೋನ್, ನಾಮಾ ಮತ್ತು ಮಕ್ಕೆದಾ. ಒಟ್ಟಿನಲ್ಲಿ ಹದಿನಾರು ಊರುಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು.


ಮಕ್ಕೇದದ ಅರಸ ಬೇತೇಲಿನ ಅರಸ


ಇಸ್ರೇಲರು ಶತ್ರುಗಳನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಇಸ್ರೇಲರ ಸೈನ್ಯವು ಶತ್ರುಗಳನ್ನು ಸೋಲಿಸಿ ಅವರನ್ನು ದೊಡ್ಡ ಚೀದೋನ್ ಮತ್ತು ಮಿಸ್ರೆಪೋತ್ಮಯಿಮ್‌ವರೆಗೂ ಪೂರ್ವದಿಕ್ಕಿನಲ್ಲಿ ಮಿಚ್ಛೆಯ ಕಣಿವೆಯವರೆಗೂ ಬೆನ್ನಟ್ಟಿತು. ಶತ್ರುಗಳಲ್ಲಿ ಯಾರೂ ಉಳಿದುಕೊಳ್ಳದಂತೆ ಇಸ್ರೇಲರು ಯುದ್ಧಮಾಡಿದರು.


ಆ ದಿನ ಯೆಹೋಶುವನು ಮಕ್ಕೇದವನ್ನು ಸ್ವಾಧೀನಪಡಿಸಿಕೊಂಡು ಆ ಪಟ್ಟಣದ ಅರಸನನ್ನು ಮತ್ತು ಜನರನ್ನು ಸಂಹರಿಸಿದನು. ಒಬ್ಬರೂ ಜೀವಂತವಾಗಿ ಉಳಿಯಲಿಲ್ಲ. ಯೆಹೋಶುವನು ಜೆರಿಕೊವಿನ ಅರಸನಿಗೆ ಮಾಡಿದಂತೆಯೇ ಮಕ್ಕೇದದ ಅರಸನಿಗೂ ಮಾಡಿದನು.


ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳವರನ್ನು ಸೋಲಿಸಲು ನಿಮಗೆ ಅವಕಾಶ ಮಾಡಿಕೊಡುವನು. ಯುದ್ಧಮಾಡುವಾಗ ಅವರ ಮಧ್ಯದಲ್ಲಿ ಗಲಿಬಿಲಿ ಹುಟ್ಟಿಸಿ ಅವರು ನಾಶವಾಗುವಂತೆ ಮಾಡುವನು.


ಯೆಹೋಶುವನು ಮತ್ತು ಅವನ ಸೈನ್ಯದವರು ಇಡೀರಾತ್ರಿ ಗಿಬ್ಯೋನಿನ ಕಡೆಗೆ ಪ್ರಯಾಣ ಮಾಡಿದರು. ಯೆಹೋಶುವನು ಬರುತ್ತಿದ್ದಾನೆಂಬುದು ವೈರಿಗಳಿಗೆ ಗೊತ್ತಿರಲಿಲ್ಲ. ಯೆಹೋಶುವನು ಅವರ ಮೇಲೆ ಧಾಳಿ ಮಾಡಿದಾಗ ಅವರಿಗೆ ಅತ್ಯಾಶ್ಚರ್ಯವಾಯಿತು.


ಫಿಲಿಷ್ಟಿಯರು ತಮ್ಮ ಸೈನ್ಯವನ್ನು ಯುದ್ಧಕ್ಕಾಗಿ ಯೆಹೂದದೇಶದ ಸೋಕೋವಿನಲ್ಲಿ ಒಟ್ಟುಗೂಡಿಸಿದರು. ಅವರು ಸೋಕೋವಿಗೂ ಅಜೇಕಕ್ಕೂ ಮಧ್ಯದಲ್ಲಿರುವ ಎಫೆಸ್ದಮ್ಮೀಮ್ ಎಂಬ ಹೆಸರಿನ ಪಟ್ಟಣದಲ್ಲಿ ಪಾಳೆಯಮಾಡಿಕೊಂಡರು.


ಆತನಿಂದ ಹೊರಟ ಬಾಣಗಳು ಶತ್ರುಗಳನ್ನು ಚೆಲ್ಲಾಪಿಲ್ಲಿಯಾಗಿ ಮಾಡಿದವು. ಆತನು ಸಿಡಿಲನ್ನು ಉಂಟುಮಾಡಿದನು, ಜನರು ಭೀತಿಯಿಂದ ಓಡಿಹೋದರು.


ರಾಜನಾದ ಸೊಲೊಮೋನನು ಆ ನಗರವನ್ನು ಮತ್ತೆ ನಿರ್ಮಿಸಿದನು. ಸೊಲೊಮೋನನು ಕೆಳಗಿನ ಬೇತ್‌ಹೋರೋನ್ ನಗರವನ್ನು ಸಹ ಕಟ್ಟಿಸಿದನು;


ಸಲ್ಮೋನ್ ಪರ್ವತದ ಮೇಲೆ ದೇವರು ಶತ್ರು ರಾಜರುಗಳನ್ನು ಚದರಿಸಿಬಿಟ್ಟನು. ಅವರು ಸುರಿಯುತ್ತಿರುವ ಹಿಮದಂತಿದ್ದರು.


ಬಾರಾಕ ಮತ್ತು ಅವನ ಜನರು ಸೀಸೆರನ ಸೈನ್ಯವನ್ನು ಮತ್ತು ರಥಗಳನ್ನು ಹರೋಷೆತ್ ಹಗ್ಗೋಯಿಮ್‌ನವರೆಗೆ ಬೆನ್ನಟ್ಟಿದರು. ಬಾರಾಕ ಮತ್ತು ಅವನ ಜನರು ಖಡ್ಗದಿಂದ ಸೀಸೆರನ ಜನರನ್ನು ಕೊಂದುಹಾಕಿದರು. ಸೀಸೆರನ ಜನರಲ್ಲಿ ಒಬ್ಬನನ್ನೂ ಜೀವಂತವಾಗಿ ಬಿಡಲಿಲ್ಲ.


ಪರಲೋಕದಿಂದ ನಕ್ಷತ್ರಗಳು ಯುದ್ಧ ಮಾಡಿದವು. ನಕ್ಷತ್ರಗಳು ಆಕಾಶಪಥದಿಂದ ಸೀಸೆರನೊಡನೆ ಯುದ್ಧ ಮಾಡಿದವು.


ಅದೇ ಸಮಯದಲ್ಲಿ, ಇಸ್ರೇಲರ ಸೈನ್ಯವು ಯೆಹೂದದ ಕೆಲವು ಪಟ್ಟಣಗಳ ಮೇಲೆ ಧಾಳಿಮಾಡಿತು. ಅವರು ಬೇತ್ಹೋರೋನಿನಿಂದ ಹಿಡಿದು ಸಮಾರ್ಯದವರೆಗೆ ಇರುವ ಪಟ್ಟಣಗಳ ಮೇಲೆ ಧಾಳಿ ಮಾಡಿದರು. ಅವರು ಮೂರು ಸಾವಿರ ಜನರನ್ನು ಕೊಂದು ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡರು. ಅಮಚ್ಯನು ತನ್ನೊಂದಿಗೆ ಯುದ್ಧಕ್ಕೆ ಸೇರಿಸಿಕೊಳ್ಳದೆ ಇದ್ದದರಿಂದ ಆ ಸೈನಿಕರು ಕೋಪಗೊಂಡಿದ್ದರು.


ಯೆಹೋವನು ತನ್ನ ಮಹಾಸ್ವರವನ್ನು ಜನರು ಕೇಳುವಂತೆ ಮಾಡುವನು. ತನ್ನ ಸಾಮರ್ಥ್ಯದ ಬಾಹುವು ಕೋಪದಿಂದ ನಡುಗುವದನ್ನು ಜನರು ನೋಡುವಂತೆ ಮಾಡುವನು. ಆ ಬಾಹುವು ಎಲ್ಲವನ್ನು ಸುಡುವ ದೊಡ್ಡ ಅಗ್ನಿಯಂತಿರುವದು. ಯೆಹೋವನ ಶಕ್ತಿಯು ಆಲಿಕಲ್ಲಿನಿಂದಲೂ ಮಳೆಯಿಂದಲೂ ಕೂಡಿರುವ ಬಿರುಗಾಳಿಯಂತಿರುವುದು.


ಆಗ ಯೆಹೋವನು ಆ ಜನಾಂಗಗಳ ವಿರುದ್ಧವಾಗಿ ಯುದ್ಧ ಮಾಡುವನು. ಅದು ಭಯಂಕರವಾದ ಕಾದಾಟವಾಗಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು