ಯೆಹೋಶುವ 10:14 - ಪರಿಶುದ್ದ ಬೈಬಲ್14 ಅದಕ್ಕಿಂತ ಮೊದಲೆಂದೂ ಹೀಗಾಗಿರಲಿಲ್ಲ; ಆಮೇಲೆಯೂ ಆಗಲಿಲ್ಲ. ಯೆಹೋವನು ಒಬ್ಬ ಮಾನವನ ಆಜ್ಞೆಯನ್ನು ಪಾಲಿಸಿದ ದಿನ ಅದಾಗಿತ್ತು. ಇಸ್ರೇಲರಿಗೋಸ್ಕರ ಯೆಹೋವನು ನಿಜವಾಗಿಯೂ ಯುದ್ಧಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯೆಹೋವನು ಈ ಪ್ರಕಾರ ಒಬ್ಬ ಮನುಷ್ಯನ ಮಾತಿಗೆ ಕಿವಿಗೊಟ್ಟ ದಿನವು ಅದಕ್ಕಿಂತ ಹಿಂದೆಯೂ ಮುಂದೆಯೂ ಇಲ್ಲವೇ ಇಲ್ಲ. ಯೆಹೋವನು ತಾನೇ ಇಸ್ರಾಯೇಲ್ಯರಿಗೋಸ್ಕರ ಯುದ್ಧಮಾಡುತ್ತಾ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆ ಪ್ರಕಾರ ಹಿಂದೆಯಾಗಲಿ ಮುಂದೆಯಾಗಲಿ ಸರ್ವೇಶ್ವರ ಒಬ್ಬ ಮನುಷ್ಯನ ಮಾತಿಗೆ ಕಿವಿಗೊಟ್ಟಂಥ ದಿವಸ ಇಲ್ಲವೇ ಇಲ್ಲ! ಸರ್ವೇಶ್ವರಸ್ವಾಮಿ ತಾವೇ ಇಸ್ರಯೇಲರ ಪರವಾಗಿ ಯುದ್ಧಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯೆಹೋವನು ಈ ಪ್ರಕಾರ ಒಬ್ಬ ಮನುಷ್ಯನ ಮಾತಿಗೆ ಕಿವಿಗೊಟ್ಟ ದಿವಸವು ಅದಕ್ಕಿಂತ ಹಿಂದೆಯೂ ಮುಂದೆಯೂ ಇಲ್ಲವೇ ಇಲ್ಲ. ಯೆಹೋವನು ತಾನೇ ಇಸ್ರಾಯೇಲ್ಯರಿಗೋಸ್ಕರ ಯುದ್ಧಮಾಡುತ್ತಾ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯೆಹೋವ ದೇವರು ಒಬ್ಬ ಮನುಷ್ಯನ ಮಾತನ್ನು ಕೇಳಿದಂಥ ಆ ದಿನಕ್ಕೆ ಸಮಾನವಾದ ದಿನವು ಹಿಂದೆಯೂ ಇಲ್ಲ, ಮುಂದೆಯೂ ಇಲ್ಲ. ಏಕೆಂದರೆ ಯೆಹೋವ ದೇವರು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದರು. ಅಧ್ಯಾಯವನ್ನು ನೋಡಿ |