ಯೆಹೋಶುವ 10:2 - ಪರಿಶುದ್ದ ಬೈಬಲ್2 ಆದ್ದರಿಂದ ಅದೋನೀಚೆದೆಕನು ಮತ್ತು ಅವನ ಜನರು ಬಹಳ ಹೆದರಿಕೊಂಡರು. ಗಿಬ್ಯೋನ್ “ಆಯಿ”ಯಂತೆ ಸಣ್ಣ ಊರಾಗಿರಲಿಲ್ಲ. ಗಿಬ್ಯೋನ್ ಬಹಳ ದೊಡ್ಡ ನಗರವಾಗಿತ್ತು. ಅದು ರಾಜಧಾನಿಯಷ್ಟು ದೊಡ್ಡ ಪಟ್ಟಣವಾಗಿತ್ತು. ಆ ಪಟ್ಟಣದ ಜನರೆಲ್ಲರೂ ಒಳ್ಳೆಯ ಯೋಧರಾಗಿದ್ದರು. ಆದ್ದರಿಂದ ಆ ಅರಸನು ಭಯಗೊಂಡಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಯಿ ಎಂಬ ಊರಿಗಿಂತ ದೊಡ್ಡದೂ, ಒಂದು ರಾಜಧಾನಿಯಷ್ಟು ಶ್ರೇಷ್ಠವೂ ಆಗಿರುವ ಗಿಬ್ಯೋನ್ ಪಟ್ಟಣದಲ್ಲಿರುವ ಜನರೆಲ್ಲರೂ ಯುದ್ಧವೀರರಾಗಿದ್ದರೂ ಇಸ್ರಾಯೇಲ್ಯರ ಮಧ್ಯದಲ್ಲಿ ಜೀವದಿಂದ ಉಳಿಯುವುದಕ್ಕೋಸ್ಕರ ಅವರ ಸಂಗಡ ಸಂಧಾನ ಮಾಡಿಕೊಂಡಿದ್ದಾರೆ ಎಂಬುವುದನ್ನು ಕೇಳಿ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಬಹಳವಾಗಿ ಭಯಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಯಿ ನಗರಕ್ಕಿಂತ ದೊಡ್ಡದೂ ಒಂದು ರಾಜಧಾನಿಯಷ್ಟು ಶ್ರೇಷ್ಠವೂ ಆಗಿದ್ದ ಗಿಬ್ಯೋನ್ ನಗರದಲ್ಲಿ ಇರುವ ಜನರೆಲ್ಲರು ಯುದ್ಧವೀರರಾಗಿದ್ದರೂ ಇಸ್ರಯೇಲರ ನಡುವೆ ಜೀವದಿಂದುಳಿಯಲು ಅವರ ಸಂಗಡ ಸಂಧಾನ ಮಾಡಿಕೊಂಡಿದ್ದಾರೆ ಎಂಬುದನ್ನು ಕೂಡ ಕೇಳಿ ಅವನು ಬಹಳವಾಗಿ ಭಯಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಯಿ ಎಂಬ ಊರಿಗಿಂತ ದೊಡ್ಡದೂ ಒಂದು ರಾಜಧಾನಿಯಷ್ಟು ಶ್ರೇಷ್ಠವೂ ಆಗಿರುವ ಗಿಬ್ಯೋನ್ ಪಟ್ಟಣದಲ್ಲಿರುವ ಜನರು ತಾವೆಲ್ಲರೂ ಯುದ್ಧವೀರರಾಗಿದ್ದರೂ ಇಸ್ರಾಯೇಲ್ಯರ ಮಧ್ಯದಲ್ಲಿ ಜೀವದಿಂದುಳಿಯುವದಕ್ಕೋಸ್ಕರ ಅವರ ಸಂಗಡ ಒಡಂಬಡಿಕೆ ಮಾಡಿಕೊಂಡರೆಂಬದನ್ನೂ ಯೆರೂಸಲೇವಿುನ ಅರಸನಾದ ಅದೋನೀಚೆದೆಕನು ಕೇಳಿ ಬಹಳವಾಗಿ ಭಯಪಟ್ಟು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅದೋನೀಚೆದೆಕನು ಅವನ ಜನರೂ ಬಹು ಭಯಪಟ್ಟರು. ಏಕೆಂದರೆ ಗಿಬ್ಯೋನ್ ಒಂದು ರಾಜಧಾನಿಯಷ್ಟು ಶ್ರೇಷ್ಠ ಪಟ್ಟಣವೂ ಅದು ಆಯಿ ಪಟ್ಟಣಕ್ಕಿಂತಲೂ ದೊಡ್ಡದಾಗಿತ್ತು. ಇದಲ್ಲದೆ ಅದರಲ್ಲಿರುವ ಜನರು ಪರಾಕ್ರಮಶಾಲಿಗಳಾಗಿದ್ದರು. ಅಧ್ಯಾಯವನ್ನು ನೋಡಿ |