Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:20 - ಪರಿಶುದ್ದ ಬೈಬಲ್‌

20 ಯೆಹೋಶುವನು ಮತ್ತು ಇಸ್ರೇಲಿನ ಜನರು ವೈರಿಗಳನ್ನು ಕೊಂದರು. ಆದರೆ ಕೆಲವು ಶತ್ರುಗಳು ಎತ್ತರವಾದ ಗೋಡೆಗಳುಳ್ಳ ತಮ್ಮ ಪಟ್ಟಣಗಳಿಗೆ ಹೋಗಿ ಅಡಗಿಕೊಳ್ಳಲು ಸಾಧ್ಯವಾಯಿತು. ಆ ಜನರು ಕೊಲ್ಲಲ್ಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಈ ರೀತಿಯಾಗಿ ಯೆಹೋಶುವನೂ ಹಾಗೂ ಇಸ್ರಾಯೇಲ್ಯರೂ ಅವರನ್ನು ಸಂಪೂರ್ಣವಾಗಿ ಸೋಲಿಸಿ ಸಂಹರಿಸಿಬಿಟ್ಟರು. ಸ್ವಲ್ಪ ಜನರು ಮಾತ್ರ ತಪ್ಪಿಸಿಕೊಂಡು ಕೋಟೆ ಕೊತ್ತಲುಗಳಿದ್ದ ಪಟ್ಟಣಗಳನ್ನು ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಹೀಗೆ ಯೆಹೋಶುವನು ಹಾಗೂ ಇಸ್ರಯೇಲರು ಅವರನ್ನು ಸಂಪೂರ್ಣವಾಗಿ ಸೋಲಿಸಿ ಸಂಹರಿಸಿದರು. ಕೆಲವರು ಮಾತ್ರ ತಪ್ಪಿಸಿಕೊಂಡು ಕೋಟೆಕೊತ್ತಲಗಳಿದ್ದ ಪಟ್ಟಣಗಳನ್ನು ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಈ ಪ್ರಕಾರ ಯೆಹೋಶುವನೂ ಇಸ್ರಾಯೇಲ್ಯರೂ ಅವರನ್ನು ಸಂಪೂರ್ಣವಾಗಿ ಸೋಲಿಸಿ ಸಂಹರಿಸಿಬಿಟ್ಟರು. ಸ್ವಲ್ಪ ಜನರು ಮಾತ್ರ ತಪ್ಪಿಸಿಕೊಂಡು ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯೆಹೋಶುವನೂ ಇಸ್ರಾಯೇಲರೂ ಅವರನ್ನು ಸಂಪೂರ್ಣವಾಗಿ ಸಂಹರಿಸಿದರು. ಆದರೂ ಅವರಲ್ಲಿ ಉಳಿದವರು ಕೋಟೆಗಳುಳ್ಳ ಪಟ್ಟಣಗಳಲ್ಲಿ ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:20
12 ತಿಳಿವುಗಳ ಹೋಲಿಕೆ  

ಯುದ್ಧದಲ್ಲಿ ಇಸ್ರೇಲರು “ಆಯಿ”ಯ ಜನರನ್ನು ಬೆನ್ನಟ್ಟಿ ಬಯಲುಗಳಲ್ಲಿಯೂ ಅರಣ್ಯದಲ್ಲಿಯೂ ಕೊಂದುಹಾಕಿದರು. ಬಳಿಕ ಇಸ್ರೇಲರು “ಆಯಿ”ಗೆ ಹಿಂತಿರುಗಿ ಪಟ್ಟಣದಲ್ಲಿ ಜೀವಸಹಿತ ಉಳಿದಿದ್ದ ಎಲ್ಲರನ್ನು ಕೊಂದುಹಾಕಿದರು.


“ನಾವು ಇಲ್ಲಿ ಸುಮ್ಮನೆ ಕುಳಿತುಕೊಂಡಿರುವುದೇಕೆ? ಬನ್ನಿ, ನಾವು ಭದ್ರವಾದ ಪಟ್ಟಣಗಳಿಗೆ ಓಡಿಹೋಗೋಣ. ನಮ್ಮ ದೇವರಾದ ಯೆಹೋವನು ನಮ್ಮನ್ನು ಸಾಯುವಂತೆ ಮಾಡಿದರೆ ಅಲ್ಲಿಯೇ ಸತ್ತುಹೋಗೋಣ. ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ. ಆದ್ದರಿಂದ ಆತನು ನಮಗೆ ಕುಡಿಯಲು ವಿಷಮಿಶ್ರಿತ ನೀರನ್ನು ಕೊಟ್ಟಿದ್ದಾನೆ.


ಅಬೀಯನ ಸೈನ್ಯವು ಇಸ್ರೇಲಿನ ಸೈನ್ಯದ ಮೇಲೆ ಮಹಾಜಯವನ್ನು ಗಳಿಸಿತು. ಯಾರೊಬ್ಬಾಮನ ಐದು ಲಕ್ಷ ಪಳಗಿದ ಸೈನಿಕರು ಕೊಲ್ಲಲ್ಪಟ್ಟರು.


ದಾವೀದನು ಅಬೀಷೈಯನಿಗೆ, “ಬಿಕ್ರೀಯ ಮಗನಾದ ಶೆಬನು ಅಬ್ಷಾಲೋಮನಿಗಿಂತ ನಮಗೆ ಹೆಚ್ಚು ಅಪಾಯಕಾರಿಯಾಗಿದ್ದಾನೆ. ಆದ್ದರಿಂದ ನನ್ನ ಸೇವಕರನ್ನು ಕರೆದುಕೊಂಡು, ಶೆಬನನ್ನು ಅಟ್ಟಿಸಿಕೊಂಡು ಹೋಗು. ಶೆಬನು ಕೋಟೆಗಳಿರುವ ನಗರಗಳಲ್ಲಿ ಸೇರಿಕೊಳ್ಳುವುದಕ್ಕಿಂತ ಮುಂಚೆಯೇ ತ್ವರಿತವಾಗಿ ಹೋಗು. ಶೆಬನು ಕೋಟೆಗಳಿರುವ ನಗರಗಳಲ್ಲಿ ಸೇರಿಕೊಂಡರೆ, ಅವನು ನಮ್ಮಿಂದ ತಪ್ಪಿಸಿಕೊಂಡು ಬಿಡುತ್ತಾನೆ” ಎಂದು ಹೇಳಿದನು.


ಇಸ್ರೇಲರು ಧಾಳಿಮಾಡಿದಾಗ ಯೆಹೋವನು ಆ ಶತ್ರು ಸೈನ್ಯವನ್ನು ಗಾಬರಿಗೊಳಿಸಿದನು. ಆದ್ದರಿಂದ ಇಸ್ರೇಲಿನ ಸೈನಿಕರು ಅವರನ್ನು ಸೋಲಿಸಿ ಮಹಾವಿಜಯವನ್ನು ಸಾಧಿಸಿದರು. ಇಸ್ರೇಲರು ಶತ್ರುಗಳನ್ನು ಗಿಬ್ಯೋನಿನಿಂದ ಬೇತ್‌ಹೋರೋನಿಗೆ ಹೋಗುವ ದಾರಿಯವರೆಗೂ ಬೆನ್ನಟ್ಟಿದರು. ಇಸ್ರೇಲರು ಅಜೇಕ ಮತ್ತು ಮಕ್ಕೇದದವರೆಗೆ ಅವರನ್ನು ಕೊಂದರು.


“ಆದರೆ ನಿಮಗೆ ವಾಗ್ದಾನ ಮಾಡಿದ ದೇಶದ ಪಟ್ಟಣಗಳನ್ನು ಸ್ವಾಧೀನ ಮಾಡುವಾಗ ನೀವು ಪಟ್ಟಣದಲ್ಲಿರುವವರೆಲ್ಲರನ್ನು ಕೊಲ್ಲಬೇಕು.


ಆದರೆ ನೀವು ಅಲ್ಲಿ ನಿಂತುಕೊಳ್ಳಬೇಡಿರಿ; ಶತ್ರುಗಳನ್ನು ಬೆನ್ನಟ್ಟಿ ಅವರ ಮೇಲೆ ಧಾಳಿಮಾಡಿ. ತಮ್ಮ ಪಟ್ಟಣಕ್ಕೆ ಸುರಕ್ಷಿತವಾಗಿ ಸೇರಲು ಅವರಿಗೆ ಅವಕಾಶಕೊಡಬೇಡಿ. ನಿಮ್ಮ ದೇವರಾದ ಯೆಹೋವನು ನಿಮಗೆ ಅವರ ಮೇಲೆ ಜಯವನ್ನು ಅನುಗ್ರಹಿಸಿದ್ದಾನೆ” ಎಂದು ಆಜ್ಞಾಪಿಸಿದನು.


ಯುದ್ಧದ ತರುವಾಯ ಯೆಹೋಶುವನ ಜನರು ಅವನ ಹತ್ತಿರ ಮಕ್ಕೇದಕ್ಕೆ ಬಂದರು. ಆ ದೇಶದಲ್ಲಿ ಇಸ್ರೇಲರ ವಿರುದ್ಧ ಮಾತಾಡಲು ಯಾರಿಗೂ ಧೈರ್ಯವಿರಲಿಲ್ಲ.


“ಈ ಸಂದೇಶವನ್ನು ಯೆಹೂದ ಜನರಲ್ಲಿ ಸಾರಿರಿ: ಜೆರುಸಲೇಮ್ ನಗರದ ಪ್ರತಿಯೊಬ್ಬನಿಗೂ ದೇಶದಲ್ಲೆಲ್ಲಾ ತುತ್ತೂರಿಗಳನ್ನು ಊದಿರಿ ಎಂದು ಹೇಳಿರಿ. ದೊಡ್ಡ ಧ್ವನಿಯಲ್ಲಿ ‘ಒಂದು ಕಡೆ ಸೇರೋಣ ಬನ್ನಿ, ರಕ್ಷಣೆಗಾಗಿ ಭದ್ರವಾದ ನಗರಗಳಿಗೆ ಓಡಿಹೋಗೋಣ ಬನ್ನಿ’ ಎಂದು ಕೂಗಿ ಹೇಳಿರಿ.


ಇಸ್ರೇಲರು ಶತ್ರುಗಳನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಇಸ್ರೇಲರ ಸೈನ್ಯವು ಶತ್ರುಗಳನ್ನು ಸೋಲಿಸಿ ಅವರನ್ನು ದೊಡ್ಡ ಚೀದೋನ್ ಮತ್ತು ಮಿಸ್ರೆಪೋತ್ಮಯಿಮ್‌ವರೆಗೂ ಪೂರ್ವದಿಕ್ಕಿನಲ್ಲಿ ಮಿಚ್ಛೆಯ ಕಣಿವೆಯವರೆಗೂ ಬೆನ್ನಟ್ಟಿತು. ಶತ್ರುಗಳಲ್ಲಿ ಯಾರೂ ಉಳಿದುಕೊಳ್ಳದಂತೆ ಇಸ್ರೇಲರು ಯುದ್ಧಮಾಡಿದರು.


ಯೆಹೋಶುವನು ಈ ಎಲ್ಲ ಪಟ್ಟಣಗಳನ್ನು ವಶಪಡಿಸಿಕೊಂಡನು; ಅವುಗಳ ಎಲ್ಲ ಅರಸರನ್ನು ಕೊಂದುಹಾಕಿದನು; ಈ ಪಟ್ಟಣಗಳಲ್ಲಿದ್ದ ಎಲ್ಲವನ್ನು ನಾಶಮಾಡಿದನು. ಯೆಹೋವನ ಸೇವಕನಾದ ಮೋಶೆಯು ಆಜ್ಞಾಪಿಸಿದಂತೆಯೇ ಅವನು ಮಾಡಿದನು.


ರಾಜನಾದ ಅಹಾಬನು ತನ್ನ ಸೈನ್ಯವನ್ನು ಮುನ್ನಡೆಸಿ, ಅರಾಮ್ಯರ ಸೇನೆಯಿಂದ ರಥಗಳನ್ನೂ ಅಶ್ವಸೇನೆಯನ್ನೂ ಸೋಲಿಸಿದನು. ಅರಾಮ್ಯರ ಸೇನೆಯ ಮಹಾ ಅಪಜಯಕ್ಕೆ ರಾಜನಾದ ಅಹಾಬನು ಕಾರಣನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು