ಯೆಹೋಶುವ 10:27 - ಪರಿಶುದ್ದ ಬೈಬಲ್27 ಸೂರ್ಯಾಸ್ತಮಾನದ ಹೊತ್ತಿಗೆ ಯೆಹೋಶುವನು ಆ ದೇಹಗಳನ್ನು ಮರದಿಂದ ಕೆಳಗಿಳಿಸಲು ಹೇಳಿದನು. ಆಮೇಲೆ ಅವರು ಎಲ್ಲಿ ಅಡಗಿಕೊಂಡಿದ್ದರೋ ಅದೇ ಗುಹೆಯಲ್ಲಿ ಆ ಶವಗಳನ್ನು ಬಿಸಾಡಿದರು. ಆ ಗುಹೆಯ ದ್ವಾರವನ್ನು ದೊಡ್ಡ ಕಲ್ಲುಬಂಡೆಗಳಿಂದ ಮುಚ್ಚಿದರು. ಆ ದೇಹಗಳು ಇಂದಿಗೂ ಆ ಗುಹೆಯಲ್ಲಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಸೂರ್ಯಾಸ್ತಮಾನದ ಹೊತ್ತಿಗೆ ಜನರು ಯೆಹೋಶುವನ ಅಪ್ಪಣೆಯಂತೆ ಅವುಗಳನ್ನು ಮರಗಳಿಂದ ಕೆಳಗಿಳಿಸಿ ಅವರು ಅಡಗಿಕೊಂಡಿದ್ದ ಗವಿಯಲ್ಲಿಯೇ ಹಾಕಿ ಅದರ ಬಾಯಿಗೆ ದೊಡ್ಡ ಕಲ್ಲುಗಳನ್ನು ಹೊರಳಿಸಿದರು. ಆ ಕಲ್ಲುಗಳು ಇಂದಿನವರೆಗೂ ಅಲ್ಲೇ ಇರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಸೂರ್ಯಾಸ್ತಮಾನದ ಹೊತ್ತಿಗೆ ಜನರು ಯೆಹೋಶುವನ ಅಪ್ಪಣೆಯಂತೆ ಅವುಗಳನ್ನು ಮರಗಳಿಂದ ಕೆಳಗಿಳಿಸಿ ಅವರು ಅಡಗಿಕೊಂಡಿದ್ದ ಗವಿಯಲ್ಲೇ ಹಾಕಿ ಅದರ ಬಾಯಿಗೆ ದೊಡ್ಡ ಕಲ್ಲುಗಳನ್ನು ಹೊರಳಿಸಿದರು. ಆ ಕಲ್ಲುಗಳು ಇಂದಿನವರೆಗೂ ಅಲ್ಲೇ ಇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಸೂರ್ಯಾಸ್ತಮಾನದ ಹೊತ್ತಿಗೆ ಜನರು ಯೆಹೋಶುವನ ಅಪ್ಪಣೆಯಂತೆ ಅವುಗಳನ್ನು ಮರಗಳಿಂದ ಕೆಳಗಿಳಿಸಿ ಅವರು ಅಡಗಿಕೊಂಡಿದ್ದ ಗವಿಯಲ್ಲಿಯೇ ಹಾಕಿ ಅದರ ಬಾಯಿಗೆ ದೊಡ್ಡ ಕಲ್ಲುಗಳನ್ನು ಹೊರಳಿಸಿದರು. ಆ ಕಲ್ಲುಗಳು ಇಂದಿನವರೆಗೂ ಅಲ್ಲೇ ಇರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆದರೆ ಸೂರ್ಯನು ಅಸ್ತಮಿಸುವಾಗ ಯೆಹೋಶುವನು ಆಜ್ಞಾಪಿಸಲು, ಶವವನ್ನು ಮರಗಳಿಂದ ಇಳಿಸಿ ಅವರು ಬಚ್ಚಿಟ್ಟುಕೊಂಡಿದ್ದ ಗವಿಯಲ್ಲಿಯೇ ಅವರನ್ನು ಹಾಕಿ, ಈವರೆಗೂ ಇರುವ ಹಾಗೆ ದೊಡ್ಡ ಕಲ್ಲುಗಳನ್ನು ಅದರ ಬಾಯಿಗೆ ಮುಚ್ಚಿದರು. ಅಧ್ಯಾಯವನ್ನು ನೋಡಿ |