Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:29 - ಪರಿಶುದ್ದ ಬೈಬಲ್‌

29 ಆಗ ಯೆಹೋಶುವನು ಮತ್ತು ಇಸ್ರೇಲರೆಲ್ಲರು ಮಕ್ಕೇದದಿಂದ ಪ್ರಯಾಣ ಮಾಡಿ ಲಿಬ್ನಕ್ಕೆ ಹೋಗಿ ಆ ಪಟ್ಟಣದ ಮೇಲೆ ಧಾಳಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯೆಹೋಶುವನು ಜನರೆಲ್ಲರ ಸಹಿತವಾಗಿ ಮಕ್ಕೇದದಿಂದ ಲಿಬ್ನಕ್ಕೆ ಹೋಗಿ ಅಲ್ಲಿಯವರೊಡನೆ ಯುದ್ಧಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಯೆಹೋಶುವನು ಜನರೆಲ್ಲರ ಸಮೇತ ಮಕ್ಕೇದದಿಂದ ಲಿಬ್ನಕ್ಕೆ ಹೋಗಿ ಅಲ್ಲಿಯವರೊಡನೆ ಯುದ್ಧಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯೆಹೋಶುವನು ಜನರೆಲ್ಲರ ಸಹಿತವಾಗಿ ಮಕ್ಕೇದದಿಂದ ಲಿಬ್ನಕ್ಕೆ ಹೋಗಿ ಅಲ್ಲಿಯವರೊಡನೆ ಯುದ್ಧ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆಗ ಯೆಹೋಶುವನೂ ಅವನ ಸಂಗಡ ಇದ್ದ ಸಮಸ್ತ ಇಸ್ರಾಯೇಲರೆಲ್ಲರೂ ಮಕ್ಕೇದದಿಂದ ಲಿಬ್ನಕ್ಕೆ ಹೋಗಿ, ಅದರ ಮೇಲೆ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:29
14 ತಿಳಿವುಗಳ ಹೋಲಿಕೆ  

ಆದ್ದರಿಂದ ಆರೋನನ ಸಂತತಿಯವರಿಗೆ ಆಶ್ರಯನಗರವಾದ ಹೆಬ್ರೋನ್ ನಗರವನ್ನು ಕೊಡಲಾಯಿತು. ಆರೋನನ ಸಂತತಿಯವರಿಗೆ ಅವರು ಲಿಬ್ನಾ,


ಯೆಹೂದದ ಜನರು ಈ ಊರುಗಳನ್ನು ಸಹ ಪಡೆದುಕೊಂಡರು: ಲಿಬ್ನಾ, ಎತೆರ್, ಆಷಾನ್,


ಚಿದ್ಕೀಯನು ಯೆಹೂದದ ರಾಜನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು. ಚಿದ್ಕೀಯನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿಯ ಹೆಸರು ಹಮೂಟಲ್. ಈಕೆ ಯೆರೆಮೀಯನ ಮಗಳು. ಹಮೂಟಲಳ ಮನೆತನದವರು ಲಿಬ್ನ ಪಟ್ಟಣದ ನಿವಾಸಿಗಳಾಗಿದ್ದರು.


ಅಶ್ಶೂರದ ರಾಜನು ಲಾಕೀಷನ್ನು ಬಿಟ್ಟುಹೋದನೆಂಬ ಸುದ್ದಿಯನ್ನು ಸೇನಾಧಿಪತಿಯು ಕೇಳಿ ಲಿಬ್ನಕ್ಕೆ ಹೋದಾಗ ರಾಜನು ಲಿಬ್ನದ ವಿರುದ್ಧ ಯುದ್ಧ ಮಾಡುತ್ತಿದ್ದನು.


ಹೀಗೆ ಎದೋಮ್ಯರು ಯೆಹೂದದ ಆಳ್ವಿಕೆಯಿಂದ ಬೇರ್ಪಟ್ಟರು. ಅವರು ಇಂದಿನ ತನಕ ಯೆಹೂದದ ಆಳ್ವಿಕೆಯಿಂದ ಬೇರ್ಪಟ್ಟು ಸ್ವತಂತ್ರರಾಗಿದ್ದಾರೆ. ಅದೇ ಸಮಯದಲ್ಲಿ ಲಿಬ್ನದವರು ಯೆಹೂದದ ಆಳ್ವಿಕೆಯಿಂದ ಬೇರೆಯಾದರು.


ಲಿಬ್ನದ ಅರಸ ಅದುಲ್ಲಾಮದ ಅರಸ


ಆ ದಿನ ಯೆಹೋಶುವನು ಮಕ್ಕೇದವನ್ನು ಸ್ವಾಧೀನಪಡಿಸಿಕೊಂಡು ಆ ಪಟ್ಟಣದ ಅರಸನನ್ನು ಮತ್ತು ಜನರನ್ನು ಸಂಹರಿಸಿದನು. ಒಬ್ಬರೂ ಜೀವಂತವಾಗಿ ಉಳಿಯಲಿಲ್ಲ. ಯೆಹೋಶುವನು ಜೆರಿಕೊವಿನ ಅರಸನಿಗೆ ಮಾಡಿದಂತೆಯೇ ಮಕ್ಕೇದದ ಅರಸನಿಗೂ ಮಾಡಿದನು.


ಯೆಹೋಶುವನು “ಆಯಿ”ಯ ಅರಸನನ್ನು ಒಂದು ಮರಕ್ಕೆ ಸಾಯಂಕಾಲದವರೆಗೂ ನೇತುಹಾಕಿದನು. ಸೂರ್ಯನು ಮುಳುಗಿದ ಮೇಲೆ, ಯೆಹೋಶುವನು ಆ ಅರಸನ ಶವವನ್ನು ಮರದಿಂದ ಕೆಳಗಿಳಿಸಿ ನಗರದ ದ್ವಾರದಲ್ಲೇ ಬಿಸಾಡಿ ಅದರ ಮೇಲೆ ಕಲ್ಲಿನ ದೊಡ್ಡ ಕುಪ್ಪೆಯನ್ನು ಮಾಡಿಸಿದನು. ಅದು ಇಂದಿನವರೆಗೂ ಹಾಗೆಯೇ ಇದೆ.


ಜೆರಿಕೊ ಮತ್ತು ಅದರ ಅರಸನಿಗೆ ಮಾಡಿದಂತೆಯೇ ನೀವು ‘ಆಯಿ’ ಮತ್ತು ಅದರ ಅರಸನಿಗೆ ಮಾಡಬೇಕು. ಈ ಸಲ ಮಾತ್ರ ನೀವು ಎಲ್ಲ ಸಂಪತ್ತನ್ನು ತೆಗೆದುಕೊಂಡು ನಿಮಗಾಗಿ ಇಟ್ಟುಕೊಳ್ಳಬೇಕು. ನೀವು ಈ ಸಂಪತ್ತನ್ನು ನಿಮ್ಮ ಜನರೊಂದಿಗೆ ಹಂಚಿಕೊಳ್ಳಿರಿ. ಈಗ, ನಿಮ್ಮ ಕೆಲವು ಯೋಧರಿಗೆ ಪಟ್ಟಣದ ಹಿಂಭಾಗದಲ್ಲಿ ಅಡಗಿಕೊಂಡಿರಲು ತಿಳಿಸು” ಅಂದನು.


ಅವರು ನಗರದಲ್ಲಿದ್ದ ಎಲ್ಲವನ್ನು ನಾಶಪಡಿಸಿದರು; ಅಲ್ಲಿದ್ದ ತರುಣರನ್ನು, ವೃದ್ಧರನ್ನು, ತರುಣಿಯರನ್ನು, ವೃದ್ಧೆಯರನ್ನು, ದನಕರುಗಳನ್ನು, ಕುರಿಗಳನ್ನು ಮತ್ತು ಕತ್ತೆಗಳನ್ನು ಕೊಂದುಹಾಕಿದರು.


ರಿಮ್ಮೋನ್ ಪೆರೆಚಿನಿಂದ ಹೊರಟು ಲಿಬ್ನದಲ್ಲಿ ಇಳಿದುಕೊಂಡರು.


ಇಸ್ರೇಲರು ಆ ಪಟ್ಟಣವನ್ನು ಮತ್ತು ಅದರ ಅರಸನನ್ನು ಸ್ವಾಧೀನಪಡಿಸಿಕೊಳ್ಳುವಂತೆ ಯೆಹೋವನು ಮಾಡಿದನು. ಆ ಪಟ್ಟಣದ ಪ್ರತಿಯೊಬ್ಬ ವ್ಯಕ್ತಿಯನ್ನು ಇಸ್ರೇಲರು ಕೊಂದುಹಾಕಿದರು. ಒಬ್ಬರನ್ನೂ ಜೀವಸಹಿತ ಬಿಡಲಿಲ್ಲ. ಅವರು ಜೆರಿಕೊ ನಗರದ ಅರಸನಿಗೆ ಮಾಡಿದಂತೆಯೇ ಆ ಅರಸನಿಗೂ ಮಾಡಿದರು.


ಅಶ್ಶೂರದ ಅರಸನಿಗೆ ಒಂದು ಸಂದೇಶವು ಬಂದು ತಲುಪಿತು. ಅದರಲ್ಲಿ, “ಇಥಿಯೋಪ್ಯದ ಅರಸನಾದ ತಿರ್ಹಾಕನು ನಿನ್ನೊಂದಿಗೆ ಯುದ್ಧಮಾಡಲು ಬರುತ್ತಿದ್ದಾನೆ” ಎಂದು ಬರೆದಿತ್ತು. ಅದನ್ನು ಕೇಳಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಲಿಬ್ನಕ್ಕೆ ಹೋದನು. ಸೇನಾದಂಡನಾಯಕನಿಗೆ ಈ ಸಮಾಚಾರ ಮುಟ್ಟಿದ ಕೂಡಲೇ ಅವನು ತನ್ನ ಅರಸನು ಯುದ್ಧಮಾಡುತ್ತಿದ್ದ ಲಿಬ್ನ ಪಟ್ಟಣಕ್ಕೆ ಹೋದನು. ಅಲ್ಲಿಂದ ಅವನು ಹಿಜ್ಕೀಯನ ಬಳಿಗೆ ತನ್ನ ದೂತರನ್ನು ಕಳುಹಿಸಿ,


ಅಂದಿನಿಂದ ಇಂದಿನ ತನಕವೂ ಎದೋಮ್ ರಾಜ್ಯವು ಯೆಹೂದರಾಜ್ಯಕ್ಕೆ ಒಳಗಾಗಲೇ ಇಲ್ಲ. ಲಿಬ್ನ ಪಟ್ಟಣದ ಜನರೂ ಯೆಹೋರಾಮನಿಗೆ ಎದುರುನಿಂತರು. ತನ್ನ ಪೂರ್ವಿಕರು ಆರಾಧಿಸುತ್ತಿದ್ದ ದೇವರಾದ ಯೆಹೋವನನ್ನು ಯೆಹೋರಾಮನು ತೊರೆದುಬಿಟ್ಟಿದ್ದರಿಂದ ಇವೆಲ್ಲಾ ಅವನಿಗೆ ಸಂಭವಿಸಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು