ಯೆಹೋಶುವ 10:3 - ಪರಿಶುದ್ದ ಬೈಬಲ್3 ಜೆರುಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನೊಂದಿಗೆ ಮಾತನಾಡಿದನು. ಅವನು ಯರ್ಮೂತಿನ ಅರಸನಾದ ಪಿರಾಮ್, ಲಾಕೀಷಿನ ಅರಸನಾದ ಯಾಫೀಯ ಮತ್ತು ಎಗ್ಲೋನಿನ ಅರಸನಾದ ದೆಬೀರ್ ಇವರೊಂದಿಗೂ ಮಾತನಾಡಿದನು. ಜೆರುಸಲೇಮಿನ ಅರಸನು ಅವರಿಗೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆದುದರಿಂದ ಹೆಬ್ರೋನಿನ ಅರಸನಾದ ಹೋಹಾಮ್, ಯರ್ಮೂತಿನ ಅರಸನಾದ ಪಿರಾಮ್, ಲಾಕೀಷಿನ ಅರಸನಾದ ಯಾಫೀಯ, ಎಗ್ಲೋನಿನ ಅರಸನಾದ ದೆಬೀರ್ ಇವರ ಬಳಿಗೆ ದೂತರನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆದುದರಿಂದ ಹೆಬ್ರೋನಿನ ಅರಸ ಹೋಹಾಮ್, ಯರ್ಮೂತಿನ ಅರಸ ಪಿರಾಮ್, ಲಾಕೀಷಿನ ಅರಸ ಯಾಫೀಯ, ಎಗ್ಲೋನಿನ ಅರಸ ದೆಬೀರ್ ಇವರ ಬಳಿಗೆ ದೂತರನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಹೆಬ್ರೋನಿನ ಅರಸನಾದ ಹೋಹಾಮ್, ಯರ್ಮೂತಿನ ಅರಸನಾದ ಪಿರಾಮ್, ಲಾಕೀಷಿನ ಅರಸನಾದ ಯಾಫೀಯ, ಎಗ್ಲೋನಿನ ಅರಸನಾದ ದೆಬೀರ್ ಇವರ ಬಳಿಗೆ ದೂತರನ್ನು ಕಳುಹಿಸಿ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದ್ದರಿಂದ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನಿಗೂ ಯರ್ಮೂತಿನ ಅರಸನಾದ ಪಿರಾಮನಿಗೂ ಲಾಕೀಷಿನ ಅರಸನಾದ ಯಾಫೀಯನಿಗೂ ಎಗ್ಲೋನಿನ ಅರಸನಾದ ದೆಬೀರನಿಗೂ ದೂತರನ್ನು ಕಳುಹಿಸಿದನು: ಅಧ್ಯಾಯವನ್ನು ನೋಡಿ |
ಆಗ ಯೆಹೂದದ ರಾಜನಾದ ಹಿಜ್ಕೀಯನು ಲಾಕೀಷಿನಲ್ಲಿದ್ದ ಅಶ್ಶೂರದ ರಾಜನಿಗೆ ಒಂದು ಸಂದೇಶವನ್ನು ಕಳುಹಿಸಿದನು. ಹಿಜ್ಕೀಯನು, “ನಾನು ತಪ್ಪು ಮಾಡಿದ್ದೇನೆ. ನನ್ನನ್ನು ಒಬ್ಬಂಟಿಗನನ್ನಾಗಿ ಬಿಡು. ನಂತರ ನೀನು ಅಪೇಕ್ಷಿಸಿದ್ದನ್ನೆಲ್ಲಾ ಕೊಡುತ್ತೇನೆ” ಎಂದು ಹೇಳಿದನು. ಆಗ ಅಶ್ಶೂರದ ರಾಜನು ಯೆಹೂದದ ರಾಜನಾದ ಹಿಜ್ಕೀಯನಿಗೆ ಸುಮಾರು ಹನ್ನೊಂದು ಟನ್ ಬೆಳ್ಳಿಯನ್ನು ಮತ್ತು ಒಂದು ಟನ್ ಚಿನ್ನವನ್ನು ಕೊಡುವಂತೆ ಹೇಳಿದನು.
ಈ ಸಮಯದಲ್ಲಿ ಅದೋನೀಚೆದೆಕನು ಜೆರುಸಲೇಮಿನ ಅರಸನಾಗಿದ್ದನು. ಯೆಹೋಶುವನು ಆಯಿ ಪಟ್ಟಣವನ್ನು ಸ್ವಾಧೀನಪಡಿಸಿಕೊಂಡ ಮತ್ತು ಅದನ್ನು ಸಂಪೂರ್ಣವಾಗಿ ನಾಶಮಾಡಿದ ಸಂಗತಿಯನ್ನು ಅವನು ಕೇಳಿದ್ದನು. ಜೆರಿಕೊ ಪಟ್ಟಣಕ್ಕೂ ಅದರ ರಾಜನಿಗೂ ಯೆಹೋಶುವನು ಹಾಗೆಯೇ ಮಾಡಿದ್ದನೆಂಬುದನ್ನೂ ಗಿಬ್ಯೋನಿನ ಜನರು ಇಸ್ರೇಲರೊಂದಿಗೆ ಶಾಂತಿ ಒಪ್ಪಂದ ಮಾಡಿಕೊಂಡಿದ್ದಾರೆಂಬುದನ್ನೂ ಅವನು ಕೇಳಿದ್ದನು. ಅವರು ಜೆರುಸಲೇಮಿಗೆ ಅತೀಸಮೀಪದಲ್ಲಿ ವಾಸವಾಗಿದ್ದರು.