ಯೆಹೋಶುವ 10:30 - ಪರಿಶುದ್ದ ಬೈಬಲ್30 ಇಸ್ರೇಲರು ಆ ಪಟ್ಟಣವನ್ನು ಮತ್ತು ಅದರ ಅರಸನನ್ನು ಸ್ವಾಧೀನಪಡಿಸಿಕೊಳ್ಳುವಂತೆ ಯೆಹೋವನು ಮಾಡಿದನು. ಆ ಪಟ್ಟಣದ ಪ್ರತಿಯೊಬ್ಬ ವ್ಯಕ್ತಿಯನ್ನು ಇಸ್ರೇಲರು ಕೊಂದುಹಾಕಿದರು. ಒಬ್ಬರನ್ನೂ ಜೀವಸಹಿತ ಬಿಡಲಿಲ್ಲ. ಅವರು ಜೆರಿಕೊ ನಗರದ ಅರಸನಿಗೆ ಮಾಡಿದಂತೆಯೇ ಆ ಅರಸನಿಗೂ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಯೆಹೋವನು ಅದನ್ನೂ ಅದರ ಅರಸನನ್ನೂ ಇಸ್ರಾಯೇಲ್ಯರ ಕೈವಶಮಾಡಿದನು. ಅವರು ಅದರಲ್ಲಿದ್ದ ಜನರಲ್ಲಿ ಒಬ್ಬನನ್ನೂ ಉಳಿಸದೆ ಎಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಯೆರಿಕೋವಿನ ಅರಸನಿಗಾದ ಗತಿಯೇ ಇವರ ಅರಸನಿಗೂ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಸರ್ವೇಶ್ವರ ಅದನ್ನೂ ಅದರ ಅರಸನನ್ನೂ ಇಸ್ರಯೇಲರ ಕೈವಶಮಾಡಿದರು. ಅವರು ಅದರಲ್ಲಿದ್ದ ಜನರಲ್ಲಿ ಒಬ್ಬನನ್ನೂ ಉಳಿಸದೆ ಎಲ್ಲರನ್ನೂ ಕತ್ತಿಗೆ ತುತ್ತಾಗಿಸಿದರು. ಜೆರಿಕೋವಿನ ಅರಸನಿಗಾದ ಗತಿಯೇ ಇವರ ಅರಸನಿಗೂ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಯೆಹೋವನು ಅದನ್ನೂ ಅದರ ಅರಸನನ್ನೂ ಇಸ್ರಾಯೇಲ್ಯರ ಕೈಗೆ ಕೊಟ್ಟನು. ಅವರು ಅದರಲ್ಲಿದ್ದ ಜನರಲ್ಲಿ ಒಬ್ಬನನ್ನೂ ಉಳಿಸದೆ ಎಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಯೆರಿಕೋವಿನ ಅರಸನಿಗಾದ ಗತಿಯೇ ಇದರ ಅರಸನಿಗೂ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಯೆಹೋವ ದೇವರು ಲಿಬ್ನವನ್ನೂ, ಅದರ ಅರಸನನ್ನೂ ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟರು. ಯೆಹೋಶುವನು ಅದನ್ನೂ, ಅದರಲ್ಲಿರುವ ಎಲ್ಲರನ್ನೂ ನಾಶಮಾಡಿದನು. ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಖಡ್ಗದಿಂದ ಹೊಡೆದು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆ ಅದರ ಅರಸನಿಗೂ ಮಾಡಿದನು. ಅಧ್ಯಾಯವನ್ನು ನೋಡಿ |