Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:31 - ಪರಿಶುದ್ದ ಬೈಬಲ್‌

31 ಆಮೇಲೆ ಯೆಹೋಶುವನು ಮತ್ತು ಇಸ್ರೇಲರೆಲ್ಲರು ಲಿಬ್ನವನ್ನು ಬಿಟ್ಟು ಲಾಕೀಷಿಗೆ ಹೋದರು. ಯೆಹೋಶುವನು ಮತ್ತು ಅವನ ಜನರು ಲಾಕೀಷಿಗೆ ಮುತ್ತಿಗೆಹಾಕಿ ಅದರ ಮೇಲೆ ಧಾಳಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅಲ್ಲಿಂದ ಯೆಹೋಶುವನು ಇಸ್ರಾಯೇಲ್ಯರ ಸಹಿತವಾಗಿ ಲಾಕೀಷಿಗೆ ಹೋಗಿ ಮುತ್ತಿಗೆಹಾಕಿ ಯುದ್ಧಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅಲ್ಲಿಂದ ಯೆಹೋಶುವನು ಇಸ್ರಯೇಲರ ಸಹಿತ ಲಾಕೀಷಿಗೆ ಹೋಗಿ ಮುತ್ತಿಗೆ ಹಾಕಿ ಯುದ್ಧಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅಲ್ಲಿಂದ ಯೆಹೋಶುವನು ಇಸ್ರಾಯೇಲ್ಯರ ಸಹಿತವಾಗಿ ಲಾಕೀಷಿಗೆ ಹೋಗಿ ಮುತ್ತಿಗೆಹಾಕಿ ಯುದ್ಧಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅಲ್ಲಿಂದ ಯೆಹೋಶುವನು ಇಸ್ರಾಯೇಲರ ಸಹಿತವಾಗಿ ಲಿಬ್ನದಿಂದ ಲಾಕೀಷಿಗೆ ಹೋಗಿ, ಅದರ ಎದುರಿಗೆ ಪಾಳೆಯ ಮಾಡಿಕೊಂಡು, ಅದರ ಮೇಲೆ ಯುದ್ಧಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:31
11 ತಿಳಿವುಗಳ ಹೋಲಿಕೆ  

ಜೆರುಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನೊಂದಿಗೆ ಮಾತನಾಡಿದನು. ಅವನು ಯರ್ಮೂತಿನ ಅರಸನಾದ ಪಿರಾಮ್, ಲಾಕೀಷಿನ ಅರಸನಾದ ಯಾಫೀಯ ಮತ್ತು ಎಗ್ಲೋನಿನ ಅರಸನಾದ ದೆಬೀರ್ ಇವರೊಂದಿಗೂ ಮಾತನಾಡಿದನು. ಜೆರುಸಲೇಮಿನ ಅರಸನು ಅವರಿಗೆ,


ಲಾಕೀಷಿನ ಸ್ತ್ರೀಯೇ, ವೇಗವಾಗಿ ಓಡುವ ಕುದುರೆಯನ್ನು ನಿನ್ನ ಬಂಡಿಗೆ ಬಿಗಿ. ಚೀಯೋನಿನ ಪಾಪವು ಲಾಕೀಷಿನಲ್ಲಿ ಪ್ರಾರಂಭವಾಯಿತು. ಯಾಕೆಂದರೆ ನೀನು ಇಸ್ರೇಲಿನ ಪಾಪವನ್ನು ಅನುಸರಿಸಿದಿ.


ಅಶ್ಶೂರದ ಅರಸನಿಗೆ ಒಂದು ಸಂದೇಶವು ಬಂದು ತಲುಪಿತು. ಅದರಲ್ಲಿ, “ಇಥಿಯೋಪ್ಯದ ಅರಸನಾದ ತಿರ್ಹಾಕನು ನಿನ್ನೊಂದಿಗೆ ಯುದ್ಧಮಾಡಲು ಬರುತ್ತಿದ್ದಾನೆ” ಎಂದು ಬರೆದಿತ್ತು. ಅದನ್ನು ಕೇಳಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಲಿಬ್ನಕ್ಕೆ ಹೋದನು. ಸೇನಾದಂಡನಾಯಕನಿಗೆ ಈ ಸಮಾಚಾರ ಮುಟ್ಟಿದ ಕೂಡಲೇ ಅವನು ತನ್ನ ಅರಸನು ಯುದ್ಧಮಾಡುತ್ತಿದ್ದ ಲಿಬ್ನ ಪಟ್ಟಣಕ್ಕೆ ಹೋದನು. ಅಲ್ಲಿಂದ ಅವನು ಹಿಜ್ಕೀಯನ ಬಳಿಗೆ ತನ್ನ ದೂತರನ್ನು ಕಳುಹಿಸಿ,


ಅಶ್ಶೂರದ ರಾಜನು ಲಾಕೀಷನ್ನು ಬಿಟ್ಟುಹೋದನೆಂಬ ಸುದ್ದಿಯನ್ನು ಸೇನಾಧಿಪತಿಯು ಕೇಳಿ ಲಿಬ್ನಕ್ಕೆ ಹೋದಾಗ ರಾಜನು ಲಿಬ್ನದ ವಿರುದ್ಧ ಯುದ್ಧ ಮಾಡುತ್ತಿದ್ದನು.


ಲಾಕೀಷ್, ಬೊಚ್ಕತ್, ಎಗ್ಲೋನ್,


ಯರ್ಮೂತಿನ ಅರಸ ಲಾಕೀಷಿನ ಅರಸ


ಆಗ ಆ ಐದು ಮಂದಿ ಅಮೋರಿಯರ ಅರಸರು ಸೈನ್ಯವನ್ನು ಸೇರಿಸಿದರು. (ಜೆರುಸಲೇಮಿನ ಅರಸ, ಹೆಬ್ರೋನಿನ ಅರಸ, ಯರ್ಮೂತಿನ ಅರಸ, ಲಾಕೀಷಿನ ಅರಸ ಮತ್ತು ಎಗ್ಲೋನಿನ ಅರಸ; ಇವರೇ ಆ ಐದು ಮಂದಿ ಅರಸರು.) ಆ ಸೈನ್ಯಗಳು ಗಿಬ್ಯೋನಿಗೆ ಹೋಗಿ ಪಟ್ಟಣವನ್ನು ಸುತ್ತುವರಿದು ಅದರ ವಿರುದ್ಧ ಹೋರಾಟ ಪ್ರಾರಂಭಿಸಿದವು.


ಇಸ್ರೇಲರು ಆ ಪಟ್ಟಣವನ್ನು ಮತ್ತು ಅದರ ಅರಸನನ್ನು ಸ್ವಾಧೀನಪಡಿಸಿಕೊಳ್ಳುವಂತೆ ಯೆಹೋವನು ಮಾಡಿದನು. ಆ ಪಟ್ಟಣದ ಪ್ರತಿಯೊಬ್ಬ ವ್ಯಕ್ತಿಯನ್ನು ಇಸ್ರೇಲರು ಕೊಂದುಹಾಕಿದರು. ಒಬ್ಬರನ್ನೂ ಜೀವಸಹಿತ ಬಿಡಲಿಲ್ಲ. ಅವರು ಜೆರಿಕೊ ನಗರದ ಅರಸನಿಗೆ ಮಾಡಿದಂತೆಯೇ ಆ ಅರಸನಿಗೂ ಮಾಡಿದರು.


ಇಸ್ರೇಲರ ಜನರು ಲಾಕೀಷ್ ಪಟ್ಟಣವನ್ನು ವಶಪಡಿಸಿಕೊಳ್ಳುವಂತೆ ಯೆಹೋವನು ಮಾಡಿದನು. ಅವರು ಎರಡನೆಯ ದಿನ ಪಟ್ಟಣವನ್ನು ಸ್ವಾಧೀನಪಡಿಸಿಕೊಂಡರು. ಇಸ್ರೇಲರು ಆ ಪಟ್ಟಣದಲ್ಲಿದ್ದವರನ್ನೆಲ್ಲಾ ಕೊಂದುಹಾಕಿದರು. ಅವರು ಲಿಬ್ನ ಪಟ್ಟಣಕ್ಕೆ ಮಾಡಿದಂತೆ ಇದಕ್ಕೂ ಮಾಡಿದರು.


ಜನರು ಜೆರುಸಲೇಮಿನಲ್ಲಿ ಅಮಚ್ಯನ ವಿರುದ್ಧವಾಗಿ ಒಳಸಂಚು ಮಾಡಿದರು. ಅಮಚ್ಯನು ಲಾಕೀಷಿಗೆ ಓಡಿಹೋದನು. ಆದರೆ ಜನರು ಅಮಚ್ಯನ ಹಿಂದೆ ಲಾಕೀಷಿಗೆ ಆಳುಗಳನ್ನು ಕಳುಹಿಸಿದರು. ಅವರು ಲಾಕೀಷಿನಲ್ಲಿ ಅಮಚ್ಯನನ್ನು ಕೊಂದುಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು