Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:33 - ಪರಿಶುದ್ದ ಬೈಬಲ್‌

33 ಇದೇ ಸಮಯದಲ್ಲಿ ಗೆಜೆರಿನ ಅರಸನಾದ ಹೋರಾಮನು ಲಾಕೀಷಿನವರ ಸಹಾಯಕ್ಕೆ ಬಂದನು. ಯೆಹೋಶುವನು ಅವನನ್ನು ಮತ್ತು ಅವನ ಸೈನ್ಯವನ್ನು ಸೋಲಿಸಿದನು. ಅಲ್ಲಿ ಯಾರನ್ನೂ ಜೀವಸಹಿತ ಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಇದಲ್ಲದೆ ಯೆಹೋಶುವನು ಲಾಕೀಷಿನವರ ಸಹಾಯಕ್ಕೆ ಬಂದ ಗೆಜೆರಿನ ಅರಸನಾದ ಹೋರಾಮನನ್ನೂ ಅವನ ಪ್ರಜೆಗಳೆಲ್ಲರನ್ನೂ ಸದೆಬಡಿದನು. ಒಬ್ಬನೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಇದಲ್ಲದೆ ಯೆಹೋಶುವನು ಲಾಕೀಷಿನವರ ಸಹಾಯಕ್ಕೆ ಬಂದ ಗೆಜೆರಿನ ಅರಸನಾದ ಹೋರಾಮನನ್ನೂ ಅವನ ಪ್ರಜೆಗಳೆಲ್ಲರನ್ನೂ ಸದೆಬಡಿದನು. ಒಬ್ಬನೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಇದಲ್ಲದೆ ಯೆಹೋಶುವನು ಲಾಕೀಷಿನವರ ಸಹಾಯಕ್ಕೆ ಬಂದ ಗೆಜೆರಿನ ಅರಸನಾದ ಹೋರಾಮನನ್ನೂ ಅವನ ಪ್ರಜೆಗಳೆಲ್ಲರನ್ನೂ ಹೊಡೆದುಹಾಕಿದನು; ಒಬ್ಬನೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆಗ ಗೆಜೆರಿನ ಅರಸನಾದ ಹೋರಾಮನು ಲಾಕೀಷಿಗೆ ಸಹಾಯಮಾಡಲು ಬಂದನು. ಆದರೆ ಯೆಹೋಶುವನು ಒಬ್ಬರೂ ಉಳಿಯದಂತೆ ಅವನನ್ನೂ, ಅವನ ಜನರನ್ನೂ ಸದೆಬಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:33
11 ತಿಳಿವುಗಳ ಹೋಲಿಕೆ  

ಎಫ್ರಾಯೀಮ್ ಕುಲದವರಿಗೂ ಹೀಗೆಯೇ ಆಯಿತು. ಕಾನಾನ್ಯರು ಗೆಜೆರಿನಲ್ಲಿ ವಾಸಮಾಡಿಕೊಂಡಿದ್ದರು. ಎಫ್ರಾಯೀಮ್ ಜನರಿಂದ ಕಾನಾನ್ಯರೆಲ್ಲರೂ ತಮ್ಮ ಪ್ರದೇಶವನ್ನು ಬಿಟ್ಟುಹೋಗುವಂತೆ ಮಾಡಲು ಸಾಧ್ಯವಾಗಲಿಲ್ಲ. ಆದ್ದರಿಂದ ಕಾನಾನ್ಯರು ಗೆಜೆರಿನಲ್ಲಿ ಎಫ್ರಾಯೀಮ್ಯರೊಂದಿಗೆ ನೆಲೆಸಿದರು.


ಆದರೆ ಎಫ್ರಾಯೀಮಿನ ಜನರಿಗೆ ಗೆಜೆರಿನಲ್ಲಿದ್ದ ಕಾನಾನ್ಯರನ್ನು ಅಲ್ಲಿಂದ ಹೊರದೂಡುವುದು ಸಾಧ್ಯವಾಗಲಿಲ್ಲ. ಅದಕ್ಕಾಗಿ ಇಂದಿಗೂ ಕಾನಾನ್ಯರು ಎಫ್ರಾಯೀಮ್ ಜನರೊಂದಿಗೆ ಇರುತ್ತಾರೆ. ಆದರೆ ಕಾನಾನ್ಯರು ಎಫ್ರಾಯೀಮ್ ಜನರ ದಾಸರಾಗಿದ್ದಾರೆ.


ಅಲ್ಲಿಂದ ಪಶ್ಚಿಮದಿಕ್ಕಿನಲ್ಲಿರುವ ಯಪ್ಲೇಟ್ಯರ ಪ್ರಾಂತ್ಯದ ಸೀಮೆಗೆ ಮುಟ್ಟಿ ಅಲ್ಲಿಂದ ಕೆಳಗಿನ ಬೇತ್‌ಹೋರೋನ್ ಕಡೆಗೆ ಮುಂದುವರೆಯುತ್ತದೆ. ಅಲ್ಲಿಂದ ಗೆಜೆರಿಗೆ ಹೋಗಿ ಮೆಡಿಟರೆನಿಯನ್ ಸಮುದ್ರದತ್ತ ಮುಂದುವರೆಯುತ್ತದೆ.


ಇದಾದ ಬಳಿಕ ಇಸ್ರೇಲರು ಗೆಜೆರಿನಲ್ಲಿ ಫಿಲಿಷ್ಟಿಯರ ಜೊತೆಯಲ್ಲಿ ಯುದ್ಧಮಾಡಿದರು. ಹುಷಯದವನಾದ ಸಿಬ್ಬೆಕೈ ಎಂಬವನು, ದೈತ್ಯನ ಮಗನಾದ ಸಿಪ್ಪೈ ಎಂಬವನನ್ನು ಕೊಂದನು. ಇದರಿಂದಾಗಿ ಫಿಲಿಷ್ಟಿಯರು ಇಸ್ರೇಲರಿಗೆ ಸೇವೆಮಾಡುವವರಾದರು.


ಅವರಿಗೆ ಶೆಕೆಮನ್ನು ಕೊಡಲಾಯಿತು. ಶೆಕೆಮ್ ಆಶ್ರಯನಗರವಾಗಿತ್ತು. ಇದಲ್ಲದೆ ಗೆಜೆರ್,


ಎಫ್ರಾಯೀಮ್ ಪ್ರದೇಶದ ಬೆಟ್ಟದಲ್ಲಿರುವ ಆಶ್ರಯನಗರವಾದ ಶೆಕೆಮ್, ಗೆಜೆರ್,


ಎಗ್ಲೋನಿನ ಅರಸ ಗೆಜೆರಿನ ಅರಸ


ಇಸ್ರೇಲರ ಜನರು ಲಾಕೀಷ್ ಪಟ್ಟಣವನ್ನು ವಶಪಡಿಸಿಕೊಳ್ಳುವಂತೆ ಯೆಹೋವನು ಮಾಡಿದನು. ಅವರು ಎರಡನೆಯ ದಿನ ಪಟ್ಟಣವನ್ನು ಸ್ವಾಧೀನಪಡಿಸಿಕೊಂಡರು. ಇಸ್ರೇಲರು ಆ ಪಟ್ಟಣದಲ್ಲಿದ್ದವರನ್ನೆಲ್ಲಾ ಕೊಂದುಹಾಕಿದರು. ಅವರು ಲಿಬ್ನ ಪಟ್ಟಣಕ್ಕೆ ಮಾಡಿದಂತೆ ಇದಕ್ಕೂ ಮಾಡಿದರು.


ಆಮೇಲೆ ಯೆಹೋಶುವನು ಮತ್ತು ಎಲ್ಲ ಇಸ್ರೇಲರು ಲಾಕೀಷಿನಿಂದ ಎಗ್ಲೋನಿಗೆ ಪ್ರಯಾಣ ಮಾಡಿದರು. ಅವರು ಎಗ್ಲೋನ್ ಪಟ್ಟಣಕ್ಕೆ ಮುತ್ತಿಗೆ ಹಾಕಿ ಅದರ ಮೇಲೆ ಧಾಳಿಮಾಡಿದರು.


ಯೆಹೋವನು ಆಜ್ಞಾಪಿಸಿದಂತೆಯೇ ದಾವೀದನು ಮಾಡಿದನು. ಅವನು ಫಿಲಿಷ್ಟಿಯರನ್ನು ಸೋಲಿಸಿ ಗೆಬದಿಂದ ಗೆಜೆರಿನವರೆಗೆ ಅವರನ್ನು ಅಟ್ಟಿಸಿಕೊಂಡು ಹೋಗಿ ದಾರಿಯುದ್ದಕ್ಕೂ ಅವರನ್ನು ಕೊಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು