5 ಆಗ ಆ ಐದು ಮಂದಿ ಅಮೋರಿಯರ ಅರಸರು ಸೈನ್ಯವನ್ನು ಸೇರಿಸಿದರು. (ಜೆರುಸಲೇಮಿನ ಅರಸ, ಹೆಬ್ರೋನಿನ ಅರಸ, ಯರ್ಮೂತಿನ ಅರಸ, ಲಾಕೀಷಿನ ಅರಸ ಮತ್ತು ಎಗ್ಲೋನಿನ ಅರಸ; ಇವರೇ ಆ ಐದು ಮಂದಿ ಅರಸರು.) ಆ ಸೈನ್ಯಗಳು ಗಿಬ್ಯೋನಿಗೆ ಹೋಗಿ ಪಟ್ಟಣವನ್ನು ಸುತ್ತುವರಿದು ಅದರ ವಿರುದ್ಧ ಹೋರಾಟ ಪ್ರಾರಂಭಿಸಿದವು.
5 ಆಗ ಯೆರೂಸಲೇಮ್, ಹೆಬ್ರೋನ್, ಯರ್ಮೂತ್, ಲಾಕೀಷ್, ಎಗ್ಲೋನ್ ಎಂಬ ಪಟ್ಟಣಗಳ ಐದು ಮಂದಿ ಅಮೋರಿಯ ರಾಜರು ಒಟ್ಟಾಗಿ ಸೇರಿ ದಂಡೆತ್ತಿ ಬಂದರು. ಅವರು ಗಿಬ್ಯೋನಿಗೆ ಮುತ್ತಿಗೆಹಾಕಿ ಯುದ್ಧಮಾಡಿದರು.
5 ಹಾಗೆಯೇ ಅಮೋರಿಯರ ಐದು ಮಂದಿ ಅರಸರಾದ, ಯೆರೂಸಲೇಮಿನ ಅರಸನೂ ಹೆಬ್ರೋನಿನ ಅರಸನೂ ಯರ್ಮೂತಿನ ಅರಸನೂ ಲಾಕೀಷಿನ ಅರಸನೂ ಎಗ್ಲೋನಿನ ಅರಸನೂ ಒಟ್ಟುಸೇರಿದರು. ಇವರೂ ಇವರ ಸೈನ್ಯವೂ ಹೊರಟುಹೋಗಿ ಗಿಬ್ಯೋನಿನ ಮುಂದೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧಮಾಡಿದರು.
ಗಿಲ್ಗಾಲಿನ ಪಾಳೆಯದಲ್ಲಿದ್ದ ಯೆಹೋಶುವನಿಗೆ ಗಿಬ್ಯೋನ್ ನಗರದ ಜನರು ಒಂದು ಸಂದೇಶವನ್ನು ಕಳಿಸಿದರು. ಆ ಸಂದೇಶ ಹೀಗಿತ್ತು: “ನಾವು ನಿಮ್ಮ ಸೇವಕರಾಗಿದ್ದೇವೆ, ನಮ್ಮನ್ನು ನಿಸ್ಸಹಾಯಕರಾಗಿ ಬಿಡಬೇಡಿರಿ. ಬಂದು ನಮಗೆ ಸಹಾಯ ಮಾಡಿರಿ; ತ್ವರೆಮಾಡಿರಿ; ನಮ್ಮನ್ನು ಉಳಿಸಿರಿ. ಬೆಟ್ಟಪ್ರದೇಶದ ಅಮೋರಿಯರ ಅರಸರೆಲ್ಲಾ ತಮ್ಮ ಸೈನ್ಯವನ್ನು ಒಟ್ಟುಗೂಡಿಸಿ ನಮ್ಮ ವಿರುದ್ಧ ಯುದ್ಧಮಾಡುತ್ತಿದ್ದಾರೆ.”
ಅಮಾಲೇಕ್ಯರು ನೆಗೆವ್‌ನಲ್ಲಿ ವಾಸಿಸುತ್ತಾರೆ. ಹಿತ್ತಿಯರು, ಯೆಬೂಸಿಯರು ಮತ್ತು ಅಮೋರಿಯರು ಪರ್ವತ ಪ್ರದೇಶದಲ್ಲಿ ವಾಸಿಸುತ್ತಾರೆ. ಕಾನಾನ್ಯರು ಸಮುದ್ರ ತೀರದಲ್ಲಿಯೂ ಮತ್ತು ಯೋರ್ದನ್ ನದಿಯ ಉದ್ದಕ್ಕೂ ವಾಸಿಸುತ್ತಾರೆ” ಎಂದು ಹೇಳಿದರು.
ನಾಲ್ಕು ತಲೆಮಾರುಗಳ ನಂತರ ನಿನ್ನ ಜನರು ಈ ನಾಡಿಗೆ ಹಿಂತಿರುಗುವರು. ಆ ಕಾಲದಲ್ಲಿ ನಿನ್ನ ಜನರು ಅಮೋರಿಯರನ್ನು ಸೋಲಿಸುವರು. ಇಲ್ಲಿ ವಾಸಿಸುತ್ತಿರುವ ಅಮೋರಿಯರನ್ನು ನಿನ್ನ ಜನರ ಮೂಲಕ ನಾನೇ ಶಿಕ್ಷಿಸುವೆನು. ಇದು ಮುಂದೆ ನಡೆಯುವ ಸಂಗತಿ. ಯಾಕೆಂದರೆ ಆ ಸಮಯದಲ್ಲಿ ಅಮೋರಿಯರು ಅಂಥ ಶಿಕ್ಷೆ ಅನುಭವಿಸುವಷ್ಟು ಕೆಟ್ಟವರಾಗಿರಲಿಲ್ಲ” ಎಂದು ಹೇಳಿದನು.
ಫಿಲಿಷ್ಟಿಯರು ಎಕ್ರೋನ್‌ನಿಂದ ಗತ್‌ವರೆಗಿನ ಪ್ರದೇಶದ ಇಸ್ರೇಲ್ ಪಟ್ಟಣಗಳನ್ನು ವಶಪಡಿಸಿಕೊಂಡಿದ್ದರು. ಆದರೆ ಇಸ್ರೇಲರು ಆ ಪಟ್ಟಣಗಳನ್ನು ಮರಳಿ ಗೆದ್ದುಕೊಂಡರು ಮತ್ತು ಆ ಪಟ್ಟಣದ ಸುತ್ತಲಿನ ಪ್ರದೇಶಗಳನ್ನು ವಶಪಡಿಸಿಕೊಂಡರು. ಇಸ್ರೇಲರ ಮತ್ತು ಅಮೋರಿಯರ ಮಧ್ಯೆ ಶಾಂತಿ ನೆಲೆಸಿತ್ತು.
ಆಗ ಬಾಬಿಲೋನಿನ ರಾಜನ ಸೈನ್ಯವು ಜೆರುಸಲೇಮಿನ ವಿರುದ್ಧ ಹೋರಾಡುತ್ತಿತ್ತು. ಬಾಬಿಲೋನಿನ ಸೈನ್ಯವು ತಾನು ಇನ್ನೂ ಸ್ವಾಧೀನಪಡಿಸಿಕೊಳ್ಳದ ಯೆಹೂದದ ನಗರಗಳ ವಿರುದ್ಧ ಕೂಡ ಹೋರಾಡುತ್ತಿತ್ತು. ಆ ಪಟ್ಟಣಗಳೆಂದರೆ ಲಾಕೀಷ್ ಮತ್ತು ಅಜೇಕ. ಯೆಹೂದದಲ್ಲಿ ಕೋಟೆಗಳನ್ನು ಹೊಂದಿದ್ದ ನಗರಗಳೆಂದರೆ ಇವೆರಡೇ.