Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:6 - ಪರಿಶುದ್ದ ಬೈಬಲ್‌

6 ಗಿಲ್ಗಾಲಿನ ಪಾಳೆಯದಲ್ಲಿದ್ದ ಯೆಹೋಶುವನಿಗೆ ಗಿಬ್ಯೋನ್ ನಗರದ ಜನರು ಒಂದು ಸಂದೇಶವನ್ನು ಕಳಿಸಿದರು. ಆ ಸಂದೇಶ ಹೀಗಿತ್ತು: “ನಾವು ನಿಮ್ಮ ಸೇವಕರಾಗಿದ್ದೇವೆ, ನಮ್ಮನ್ನು ನಿಸ್ಸಹಾಯಕರಾಗಿ ಬಿಡಬೇಡಿರಿ. ಬಂದು ನಮಗೆ ಸಹಾಯ ಮಾಡಿರಿ; ತ್ವರೆಮಾಡಿರಿ; ನಮ್ಮನ್ನು ಉಳಿಸಿರಿ. ಬೆಟ್ಟಪ್ರದೇಶದ ಅಮೋರಿಯರ ಅರಸರೆಲ್ಲಾ ತಮ್ಮ ಸೈನ್ಯವನ್ನು ಒಟ್ಟುಗೂಡಿಸಿ ನಮ್ಮ ವಿರುದ್ಧ ಯುದ್ಧಮಾಡುತ್ತಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಗಿಬ್ಯೋನ್ಯರು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ದೂತರನ್ನು ಕಳುಹಿಸಿದರು. “ನಿಮ್ಮ ಸೇವಕರಾದ ನಮ್ಮನ್ನು ಕೈಬಿಡದೆ, ಬೇಗನೆ ಬಂದು ಸಹಾಯಮಾಡಿ ನಮಗೆ ವಿರೋಧವಾಗಿ ಸೇರಿ ಬಂದಿರುವ ಈ ಬೆಟ್ಟದ ಸೀಮೆಯ ಎಲ್ಲಾ ಅಮೋರಿಯ ರಾಜರಿಂದ ನಮ್ಮನ್ನು ತಪ್ಪಿಸಿರಿ” ಎಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಗಿಬ್ಯೋನ್ಯರು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ದೂತರನ್ನು ಕಳಿಸಿದರು. “ನಿಮ್ಮ ಸೇವಕರಾದ ನಮ್ಮನ್ನು ಕೈಬಿಡಬೇಡಿ, ಬೇಗನೆ ಬಂದು ಸಹಾಯ ಮಾಡಿ. ನಮಗೆ ವಿರುದ್ಧ ಕೂಡಿಬಂದಿರುವ ಈ ಬೆಟ್ಟದ ಸೀಮೆಯ ಎಲ್ಲ ಅಮೋರಿಯ ರಾಜರಿಂದ ನಮ್ಮನ್ನು ತಪ್ಪಿಸಿ,” ಎಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಗಿಬ್ಯೋನ್ಯರು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ದೂತರನ್ನು ಕಳುಹಿಸಿ - ನಿನ್ನ ಸೇವಕರನ್ನು ಕೈಬಿಡಬೇಡ; ಬೇಗ ಬಂದು ಸಹಾಯಮಾಡು; ನಮಗೆ ವಿರೋಧವಾಗಿ ಕೂಡಿ ಬಂದಿರುವ ಈ ಬೆಟ್ಟದ ಸೀಮೆಯ ಎಲ್ಲಾ ಅಮೋರಿಯ ರಾಜರಿಂದ ನಮ್ಮನ್ನು ತಪ್ಪಿಸು ಎಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಗಿಬ್ಯೋನಿನ ಜನರು, “ಪರ್ವತಗಳಲ್ಲಿ ವಾಸವಾಗಿರುವ ಅಮೋರಿಯರ ಅರಸುಗಳೆಲ್ಲರೂ ನಮಗೆ ವಿರೋಧವಾಗಿ ಕೂಡಿಬಂದಿದ್ದಾರೆ. ನಿನ್ನ ಸೇವಕರರಾದ ನಮ್ಮನ್ನು ಕೈಬಿಡದೆ ಶೀಘ್ರವಾಗಿ ನಮ್ಮ ಬಳಿಗೆ ಬಂದು, ನಮ್ಮನ್ನು ಕಾಪಾಡು! ನಮಗೆ ಸಹಾಯಮಾಡು,” ಎಂದು ಗಿಲ್ಗಾಲಿನಲ್ಲಿ ಪಾಳೆಯ ಮಾಡಿದ್ದ ಯೆಹೋಶುವನ ಬಳಿಗೆ ಹೇಳಿ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:6
14 ತಿಳಿವುಗಳ ಹೋಲಿಕೆ  

ಅವರು ಇಸ್ರೇಲರ ಪಾಳೆಯಕ್ಕೆ ಹೋದರು. ಈ ಪಾಳೆಯವು ಗಿಲ್ಗಾಲಿನ ಹತ್ತಿರ ಇತ್ತು. ಅವರು ಯೆಹೋಶುವನ ಬಳಿಗೆ ಹೋಗಿ ಅವನಿಗೆ, “ನಾವು ಬಹುದೂರ ದೇಶದಿಂದ ಪ್ರಯಾಣ ಮಾಡಿ ಬಂದಿದ್ದೇವೆ. ನಾವು ನಿಮ್ಮ ಜೊತೆ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಲು ಇಚ್ಛಿಸುತ್ತೇವೆ” ಎಂದು ಹೇಳಿದರು.


ಇಸ್ರೇಲರು ಇನ್ನೂ ಗಿಲ್ಗಾಲಿನಲ್ಲಿಯೇ ಇಳಿದುಕೊಂಡಿದ್ದಾಗ ಜೆರಿಕೊವಿನ ಮೈದಾನಗಳಲ್ಲಿ ಅವರು ಆ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ಪಸ್ಕಹಬ್ಬವನ್ನು ಆಚರಿಸಿದರು.


ಆಗ ಮರಿಯಳು ಎದ್ದು ಜುದೇಯದ ಗುಡ್ಡಪ್ರದೇಶದಲ್ಲಿರುವ ಒಂದು ಊರಿಗೆ ಬೇಗಬೇಗನೆ ಹೋದಳು.


ಪರ್ವತಗಳು ಜೆರುಸಲೇಮಿನ ಸುತ್ತಲೂ ಇವೆ. ಯೆಹೋವನು ತನ್ನ ಜನರ ಸುತ್ತಲೂ ಇರುವನು. ಆತನು ತನ್ನ ಜನರನ್ನು ಸದಾಕಾಲ ಸಂರಕ್ಷಿಸುವನು.


ನಂತರ ಅವಳು ಒಂದು ತಡಿಯನ್ನು ಕತ್ತೆಯ ಮೇಲೆ ಹಾಕಿ ತನ್ನ ಸೇವಕನಿಗೆ, “ಬೇಗ ಬಾ! ನಾವು ವೇಗವಾಗಿ ಸವಾರಿ ಮಾಡಿಕೊಂಡು ಹೋಗೋಣ. ನಾನು ನಿನಗೆ ಹೇಳಿದಾಗ ನಿಧಾನಿಸು!” ಎಂದು ಹೇಳಿದಳು.


ಅವರಿಗೆ ಹೆಬ್ರೋನ್ ಎಂಬ ಕಿರ್ಯತರ್ಬನಗರ (ಇದಕ್ಕೆ ಅನಾಕನ ತಂದೆಯಾದ ಅರ್ಬನ ಹೆಸರಿಡಲಾಗಿತ್ತು.) ಮತ್ತು ಅವರ ಪಶುಗಳಿಗಾಗಿ ಆ ನಗರದ ಹತ್ತಿರದ ಸ್ವಲ್ಪ ಭೂಮಿಯನ್ನು ಕೊಡಲಾಯಿತು.


ಯೆಹೋಶುವನು ಅವರೊಂದಿಗೆ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಲು ಒಪ್ಪಿಕೊಂಡನು. ಅವರು ಜೀವಸಹಿತ ಇರಲು ಅವಕಾಶ ಮಾಡಿಕೊಟ್ಟನು. ಯೆಹೋಶುವನ ಈ ಒಪ್ಪಂದಕ್ಕೆ ಇಸ್ರೇಲಿನ ಜನನಾಯಕರು ಒಪ್ಪಿಕೊಂಡರು.


“ಆದ್ದರಿಂದ, ನಿಮ್ಮ ಕುಲಗಳಿಂದ ನೀವು ಆರಿಸಿಕೊಂಡ ಬುದ್ಧಿವಂತರಾದ ಮತ್ತು ಅನುಭವಸ್ಥರಾದ ಜನರನ್ನು ನಾನು ನೇಮಿಸಿದೆನು. ಈ ರೀತಿಯಾಗಿ ಅವರನ್ನು ಸಾವಿರ ಜನರ ಮೇಲೆಯೂ, ನೂರು ಜನರ ಮೇಲೆಯೂ, ಐವತ್ತು ಜನರ ಮೇಲೆಯೂ ಮತ್ತು ಹತ್ತು ಜನರ ಮೇಲೆಯೂ ನಾಯಕರನ್ನಾಗಿ ನೇಮಿಸಿದೆನು. ಅಲ್ಲದೆ ನಿಮ್ಮನಿಮ್ಮ ಕುಲಗಳಿಗೆ ಪ್ರಧಾನರನ್ನೂ ನೇಮಿಸಿದೆನು.


ಅಮಾಲೇಕ್ಯರು ನೆಗೆವ್‌ನಲ್ಲಿ ವಾಸಿಸುತ್ತಾರೆ. ಹಿತ್ತಿಯರು, ಯೆಬೂಸಿಯರು ಮತ್ತು ಅಮೋರಿಯರು ಪರ್ವತ ಪ್ರದೇಶದಲ್ಲಿ ವಾಸಿಸುತ್ತಾರೆ. ಕಾನಾನ್ಯರು ಸಮುದ್ರ ತೀರದಲ್ಲಿಯೂ ಮತ್ತು ಯೋರ್ದನ್ ನದಿಯ ಉದ್ದಕ್ಕೂ ವಾಸಿಸುತ್ತಾರೆ” ಎಂದು ಹೇಳಿದರು.


ಆಗ ಆ ಐದು ಮಂದಿ ಅಮೋರಿಯರ ಅರಸರು ಸೈನ್ಯವನ್ನು ಸೇರಿಸಿದರು. (ಜೆರುಸಲೇಮಿನ ಅರಸ, ಹೆಬ್ರೋನಿನ ಅರಸ, ಯರ್ಮೂತಿನ ಅರಸ, ಲಾಕೀಷಿನ ಅರಸ ಮತ್ತು ಎಗ್ಲೋನಿನ ಅರಸ; ಇವರೇ ಆ ಐದು ಮಂದಿ ಅರಸರು.) ಆ ಸೈನ್ಯಗಳು ಗಿಬ್ಯೋನಿಗೆ ಹೋಗಿ ಪಟ್ಟಣವನ್ನು ಸುತ್ತುವರಿದು ಅದರ ವಿರುದ್ಧ ಹೋರಾಟ ಪ್ರಾರಂಭಿಸಿದವು.


ಆದ್ದರಿಂದ ಯೆಹೋಶುವನು ತನ್ನ ಎಲ್ಲ ಸೈನ್ಯದೊಂದಿಗೆ ಗಿಲ್ಗಾಲಿನಿಂದ ಹೊರಟನು. ಯೆಹೋಶುವನೊಂದಿಗೆ ಅತ್ಯುತ್ತಮವಾದ ಯೋಧರಿದ್ದರು.


ಹಿವ್ವಿಯರು ಯೆಹೋಶುವನಿಗೆ, “ನಾವು ನಿಮ್ಮ ಸೇವಕರು” ಎಂದು ಹೇಳಿದರು. ಆದರೆ ಯೆಹೋಶುವನು, “ನೀವು ಯಾರು? ಎಲ್ಲಿಂದ ಬಂದಿರುವಿರಿ?” ಎಂದು ಪ್ರಶ್ನಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು