Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 11:10 - ಪರಿಶುದ್ದ ಬೈಬಲ್‌

10 ಯೆಹೋಶುವನು ಹಿಂದಿರುಗಿ ಹೋಗಿ ಹಾಚೋರನ್ನು ಸ್ವಾಧೀನಪಡಿಸಿಕೊಂಡನು. ಯೆಹೋಶುವನು ಹಾಚೋರಿನ ಅರಸನನ್ನು ಕೊಂದನು. (ಹಾಚೋರ್ ಇಸ್ರೇಲಿನ ವಿರುದ್ಧ ಹೋರಾಡಿದ ಎಲ್ಲ ರಾಜ್ಯಗಳಿಗೆ ಮುಂದಾಳಾಗಿತ್ತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕೂಡಲೇ ಯೆಹೋಶುವನು ಹಿಂದಿರುಗಿ ಹಾಚೋರನನ್ನೂ ಅವರ ಅರಸನನ್ನೂ ಕತ್ತಿಯಿಂದ ಸಂಹರಿಸಿದನು. ಹಾಚೋರೆಂಬುವುದು ಪೂರ್ವಕಾಲದಲ್ಲಿ ಆ ಎಲ್ಲಾ ರಾಜ್ಯಗಳಿಗಿಂತಲು ಶ್ರೇಷ್ಠವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಕೂಡಲೆ ಯೆಹೋಶುವನು ಹಿಂದಿರುಗಿ ಹಾಚೋರನ್ನೂ ಅದರ ಅರಸನನ್ನೂ ಕತ್ತಿಯಿಂದ ಸಂಹರಿಸಿದನು. ಏಕೆಂದರೆ ಹಾಚೋರ್ ಪೂರ್ವಕಾಲದಲ್ಲಿ ಆ ರಾಜ್ಯಗಳಲ್ಲೆಲ್ಲಾ ಶ್ರೇಷ್ಠವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕೂಡಲೆ ಯೆಹೋಶುವನು ಹಿಂದಿರುಗಿ ಹಾಚೋರನ್ನೂ ಅದರ ಅರಸನನ್ನೂ ಕತ್ತಿಯಿಂದ ಸಂಹರಿಸಿದನು. ಹಾಚೋರೆಂಬದು ಪೂರ್ವಕಾಲದಲ್ಲಿ ಆ ಎಲ್ಲಾ ರಾಜ್ಯಗಳಲ್ಲಿ ಶ್ರೇಷ್ಠವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆ ಕಾಲದಲ್ಲಿ ಯೆಹೋಶುವನು ಹಿಂದಿರುಗಿ ಹಾಚೋರನ್ನು ಹಿಡಿದು, ಅದರ ಅರಸನನ್ನು ಖಡ್ಗದಿಂದ ಸಂಹರಿಸಿದನು. ಏಕೆಂದರೆ ಹಾಚೋರು ಮೊದಲು ಆ ರಾಜ್ಯಗಳಿಗೆಲ್ಲಾ ಶಿರಸ್ಸಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 11:10
2 ತಿಳಿವುಗಳ ಹೋಲಿಕೆ  

ಆದ್ದರಿಂದ ಕಾನಾನ್ಯರ ಅರಸನಾದ ಯಾಬೀನನು ಇಸ್ರೇಲರನ್ನು ಸೋಲಿಸುವಂತೆ ಯೆಹೋವನು ಅವಕಾಶ ಮಾಡಿದನು. ಯಾಬೀನನು ಹಾಚೋರ್ ಎಂಬ ನಗರದಲ್ಲಿ ಆಳುತ್ತಿದ್ದನು. ಸೀಸೆರ ಎಂಬವನು ಅವನ ಸೇನಾಧಿಪತಿಯಾಗಿದ್ದನು. ಸೀಸೆರನು ಹರೋಷೆತ್ ಹಗ್ಗೋಯಿಮ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದನು.


ಹಾಚೋರಿನ ಅರಸನಾದ ಯಾಬೀನನು ನಡೆದ ಎಲ್ಲ ಸಂಗತಿಗಳ ಬಗ್ಗೆ ಕೇಳಿದನು. ಅದಕ್ಕಾಗಿ ಅವನು ಅನೇಕ ಅರಸರ ಸೈನ್ಯಗಳನ್ನು ಒಟ್ಟಿಗೆ ಸೇರಿಸುವ ನಿರ್ಧಾರವನ್ನು ಮಾಡಿದನು. ಮಾದೋನಿನ ಅರಸನಾದ ಯೋಬಾಬನಿಗೆ, ಶಿಮ್ರೋನಿನ ಅರಸನಿಗೆ, ಅಕ್ಷಾಫಿನ ಅರಸನಿಗೆ ಯಾಬೀನನು ಸಂದೇಶವನ್ನು ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು