ಯೆಹೋಶುವ 11:11 - ಪರಿಶುದ್ದ ಬೈಬಲ್11 ಇಸ್ರೇಲಿನ ಸೈನಿಕರು ಆ ಪಟ್ಟಣದಲ್ಲಿದ್ದವರನ್ನೆಲ್ಲಾ ಕೊಂದುಬಿಟ್ಟರು; ಒಬ್ಬರನ್ನೂ ಜೀವಂತವಾಗಿ ಅಲ್ಲಿ ಉಳಿಸಲಿಲ್ಲ. ಆಮೇಲೆ ಅವರು ಆ ಪಟ್ಟಣವನ್ನು ಸುಟ್ಟುಬಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇಸ್ರಾಯೇಲ್ಯರು ಅದರಲ್ಲಿದ್ದ ಎಲ್ಲರನ್ನು ಕತ್ತಿಯಿಂದ ಸಂಹರಿಸಿ ಹಾಚೋರ್ ಪಟ್ಟಣವನ್ನು ಸುಟ್ಟುಬಿಟ್ಟರು. ಒಂದು ಜೀವಿಯಾದರೂ ಉಳಿಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಇಸ್ರಯೇಲರು ಅದರಲ್ಲಿದ್ದ ಜನರನ್ನೆಲ್ಲಾ ಕತ್ತಿಗೆ ಈಡಾಗಿಸಿ ಹಾಚೋರ್ ನಗರವನ್ನು, ಪ್ರಾಣಿಯೊಂದೂ ಉಳಿಯದಂತೆ ಸುಟ್ಟುಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಇಸ್ರಾಯೇಲ್ಯರು ಅದರಲ್ಲಿದ್ದ ಎಲ್ಲಾ ಜನರನ್ನು ಕತ್ತಿಯಿಂದ ಸಂಹರಿಸಿ ಹಾಚೋರ್ ಪಟ್ಟಣವನ್ನು ಸುಟ್ಟುಬಿಟ್ಟರು. ಒಂದು ಪ್ರಾಣಿಯಾದರೂ ಉಳಿಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವರು ಒಬ್ಬರನ್ನಾದರೂ ಉಳಿಸದೆ, ಅದರಲ್ಲಿದ್ದ ಪ್ರತಿಯೊಬ್ಬರನ್ನೂ ಖಡ್ಗದಿಂದ ಸಂಹರಿಸಿದನು. ಹಾಚೋರನ್ನು ಬೆಂಕಿಯಿಂದ ಸುಟ್ಟುಬಿಟ್ಟನು. ಅಧ್ಯಾಯವನ್ನು ನೋಡಿ |