Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 11:12 - ಪರಿಶುದ್ದ ಬೈಬಲ್‌

12 ಯೆಹೋಶುವನು ಈ ಎಲ್ಲ ಪಟ್ಟಣಗಳನ್ನು ವಶಪಡಿಸಿಕೊಂಡನು; ಅವುಗಳ ಎಲ್ಲ ಅರಸರನ್ನು ಕೊಂದುಹಾಕಿದನು; ಈ ಪಟ್ಟಣಗಳಲ್ಲಿದ್ದ ಎಲ್ಲವನ್ನು ನಾಶಮಾಡಿದನು. ಯೆಹೋವನ ಸೇವಕನಾದ ಮೋಶೆಯು ಆಜ್ಞಾಪಿಸಿದಂತೆಯೇ ಅವನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಂತರ ಯೆಹೋಶುವನು ಉಳಿದ ಅರಸರನ್ನೂ ಅವರ ಎಲ್ಲಾ ಪಟ್ಟಣಗಳನ್ನು ಹಿಡಿದು ಯೆಹೋವನ ಸೇವಕನಾದ ಮೋಶೆಯ ಆಜ್ಞೆಯಂತೆ ಅವರನ್ನು ಕತ್ತಿಯಿಂದ ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಯೆಹೋಶುವನು ಆ ಬೇರೆ ಅರಸರನ್ನು, ಅವರ ಎಲ್ಲ ನಗರಗಳನ್ನು ಹಿಡಿದು ಸರ್ವೇಶ್ವರನ ದಾಸ ಮೋಶೆಯ ಆಜ್ಞೆಯಂತೆ ಅವರನ್ನು ಕತ್ತಿಯಿಂದ ನಾಶಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮತ್ತು ಯೆಹೋಶುವನು ಆ ಬೇರೆ ಅರಸರನ್ನೂ ಅವರ ಎಲ್ಲಾ ಪಟ್ಟಣಗಳನ್ನೂ ಹಿಡಿದು ಯೆಹೋವನ ಸೇವಕನಾದ ಮೋಶೆಯ ಆಜ್ಞೆಯಂತೆ ಅವರನ್ನು ಕತ್ತಿಯಿಂದ ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇದಲ್ಲದೆ ಯೆಹೋಶುವನು ಆ ಅರಸುಗಳ ಸಮಸ್ತ ಪಟ್ಟಣಗಳನ್ನೂ, ಅವುಗಳ ಸಮಸ್ತ ಅರಸರನ್ನೂ ಹಿಡಿದು ಖಡ್ಗದಿಂದ ದಾಳಿಮಾಡಿ, ಯೆಹೋವ ದೇವರ ಸೇವಕನಾದ ಮೋಶೆಯು ಆಜ್ಞಾಪಿಸಿದಂತೆ ಅವರನ್ನು ಸಂಪೂರ್ಣ ನಾಶಮಾಡಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 11:12
18 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳನ್ನು ನಿಮಗೆ ಅಧೀನಪಡಿಸುವನು. ನೀವು ಅವರನ್ನು ಸೋಲಿಸಿಬಿಡುವಿರಿ. ನೀವು ಅವರನ್ನು ಸಂಪೂರ್ಣವಾಗಿ ನಾಶಮಾಡಬೇಕು. ಅವರೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳಬೇಡಿ ಮತ್ತು ಅವರಿಗೆ ಕರುಣೆಯನ್ನು ತೋರಬೇಡಿ.


ಹೀಗೆ ಮಾಡಬೇಕೆಂದು ಯೆಹೋವನು ತನ್ನ ಸೇವಕನಾದ ಮೋಶೆಗೆ ಬಹುಕಾಲದ ಹಿಂದೆಯೇ ಹೇಳಿದ್ದನು. ಮೋಶೆಯು ಈ ಕಾರ್ಯವನ್ನು ಮಾಡಲು ಯೆಹೋಶುವನಿಗೆ ಆಜ್ಞಾಪಿಸಿದ್ದನು. ಹೀಗೆ ಯೆಹೋಶುವನು ದೇವರ ಆಜ್ಞೆಯನ್ನು ಪಾಲಿಸಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೆಲ್ಲವನ್ನು ಯೆಹೋಶುವನು ಮಾಡಿದನು.


ಅವರು ಹೆಬ್ರೋನ್ ಪಟ್ಟಣವನ್ನೂ ಅದರ ರಾಜನನ್ನೂ ಮತ್ತು ಅದರ ಸಮೀಪದಲ್ಲಿದ್ದ ಎಲ್ಲ ಸಣ್ಣಪುಟ್ಟ ಊರುಗಳನ್ನೂ ಸ್ವಾಧೀನಪಡಿಸಿಕೊಂಡರು. ಇಸ್ರೇಲರು ಆ ಪಟ್ಟಣದಲ್ಲಿದ್ದ ಎಲ್ಲರನ್ನೂ ಕೊಂದರು. ಅಲ್ಲಿ ಯಾರೊಬ್ಬರೂ ಜೀವಂತವಾಗಿ ಉಳಿಯಲಿಲ್ಲ. ಅವರು ಎಗ್ಲೋನಿನಲ್ಲಿ ಮಾಡಿದಂತೆಯೇ ಇಲ್ಲಿಯೂ ಮಾಡಿದರು. ಅವರು ಪಟ್ಟಣವನ್ನು ನಾಶಮಾಡಿದರು ಮತ್ತು ಅಲ್ಲಿದ್ದ ಎಲ್ಲ ಜನರನ್ನು ಕೊಂದರು.


ಆ ದಿವಸ ಅವರು ಆ ನಗರವನ್ನು ಸ್ವಾಧೀನಪಡಿಸಿಕೊಂಡು ಅಲ್ಲಿದ್ದ ಎಲ್ಲ ಜನರನ್ನು ಕೊಂದುಹಾಕಿದರು. ಅವರು ಲಾಕೀಷಿನಲ್ಲಿ ಮಾಡಿದಂತೆ ಇಲ್ಲಿಯೂ ಮಾಡಿದರು.


ಇಸ್ರೇಲರ ಜನರು ಲಾಕೀಷ್ ಪಟ್ಟಣವನ್ನು ವಶಪಡಿಸಿಕೊಳ್ಳುವಂತೆ ಯೆಹೋವನು ಮಾಡಿದನು. ಅವರು ಎರಡನೆಯ ದಿನ ಪಟ್ಟಣವನ್ನು ಸ್ವಾಧೀನಪಡಿಸಿಕೊಂಡರು. ಇಸ್ರೇಲರು ಆ ಪಟ್ಟಣದಲ್ಲಿದ್ದವರನ್ನೆಲ್ಲಾ ಕೊಂದುಹಾಕಿದರು. ಅವರು ಲಿಬ್ನ ಪಟ್ಟಣಕ್ಕೆ ಮಾಡಿದಂತೆ ಇದಕ್ಕೂ ಮಾಡಿದರು.


ಇಸ್ರೇಲರು ಆ ಪಟ್ಟಣವನ್ನು ಮತ್ತು ಅದರ ಅರಸನನ್ನು ಸ್ವಾಧೀನಪಡಿಸಿಕೊಳ್ಳುವಂತೆ ಯೆಹೋವನು ಮಾಡಿದನು. ಆ ಪಟ್ಟಣದ ಪ್ರತಿಯೊಬ್ಬ ವ್ಯಕ್ತಿಯನ್ನು ಇಸ್ರೇಲರು ಕೊಂದುಹಾಕಿದರು. ಒಬ್ಬರನ್ನೂ ಜೀವಸಹಿತ ಬಿಡಲಿಲ್ಲ. ಅವರು ಜೆರಿಕೊ ನಗರದ ಅರಸನಿಗೆ ಮಾಡಿದಂತೆಯೇ ಆ ಅರಸನಿಗೂ ಮಾಡಿದರು.


ಆ ದಿನ ಯೆಹೋಶುವನು ಮಕ್ಕೇದವನ್ನು ಸ್ವಾಧೀನಪಡಿಸಿಕೊಂಡು ಆ ಪಟ್ಟಣದ ಅರಸನನ್ನು ಮತ್ತು ಜನರನ್ನು ಸಂಹರಿಸಿದನು. ಒಬ್ಬರೂ ಜೀವಂತವಾಗಿ ಉಳಿಯಲಿಲ್ಲ. ಯೆಹೋಶುವನು ಜೆರಿಕೊವಿನ ಅರಸನಿಗೆ ಮಾಡಿದಂತೆಯೇ ಮಕ್ಕೇದದ ಅರಸನಿಗೂ ಮಾಡಿದನು.


ಗಿಬ್ಯೋನ್ಯರು, “ನೀವು ನಮ್ಮನ್ನು ಕೊಲ್ಲಬಹುದೆಂಬ ಭಯದಿಂದ ನಾವು ನಿಮಗೆ ಸುಳ್ಳು ಹೇಳಿದೆವು; ದೇವರು ತನ್ನ ಸೇವಕನಾದ ಮೋಶೆಗೆ ಈ ಎಲ್ಲ ಭೂಪ್ರದೇಶವನ್ನು ನಿಮಗೆ ಕೊಡಬೇಕೆಂದು ಆಜ್ಞಾಪಿಸಿರುವುದನ್ನೂ ಈ ಪ್ರದೇಶದ ಎಲ್ಲ ಜನರನ್ನು ಕೊಂದುಬಿಡಬೇಕೆಂದು ನಿಮಗೆ ಹೇಳಿರುವನೆಂದೂ ನಾವು ಕೇಳಿದ್ದೆವು. ಆದ್ದರಿಂದ ನಾವು ನಿಮಗೆ ಸುಳ್ಳು ಹೇಳಿದೆವು.


ಯಜ್ಞವೇದಿಕೆಯನ್ನು ಹೇಗೆ ಕಟ್ಟಬೇಕೆಂಬುದನ್ನು ಯೆಹೋವನ ಸೇವಕನಾದ ಮೋಶೆಯು ಇಸ್ರೇಲರಿಗೆ ಹೇಳಿ ಕೊಟ್ಟಿದ್ದನು. ಆದ್ದರಿಂದ ಮೋಶೆಯ ಧರ್ಮಶಾಸ್ತ್ರದ ಗ್ರಂಥದಲ್ಲಿ ವಿವರಿಸಿದಂತೆ ಯೆಹೋಶುವನು ಯಜ್ಞವೇದಿಕೆಯನ್ನು ಕಟ್ಟಿಸಿದನು. ಯಜ್ಞವೇದಿಕೆಯನ್ನು ಕಡಿಯದ ಕಲ್ಲುಗಳಿಂದ ಮಾಡಲಾಯಿತು. ಆ ಕಲ್ಲುಗಳ ಮೇಲೆ ಯಾವ ಉಪಕರಣವನ್ನೂ ಉಪಯೋಗಿಸಿರಲಿಲ್ಲ. ಯೆಹೋವನಿಗೆ ಆ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿದರು.


“ಯೆಹೋವನು ಹೇಳಿದಂತೆಯೇ ನೀವು ಮಾಡಬೇಕು. ನೀವು ಪಟ್ಟಣವನ್ನು ಸ್ವಾಧೀನಪಡಿಸಿಕೊಂಡ ಮೇಲೆ ಅದನ್ನು ಸುಟ್ಟುಹಾಕಬೇಕು. ನನ್ನ ಕಡೆಗೆ ಗಮನವಿರಲಿ! ಆಕ್ರಮಣ ಮಾಡುವುದಕ್ಕೆ ನಾನು ಆಜ್ಞೆಯನ್ನು ಕೊಡುತ್ತೇನೆ” ಎಂದು ಆಜ್ಞಾಪಿಸಿದನು.


ಆದರೆ ಇಸ್ರೇಲಿನ ಸೈನಿಕರು ಬೆಟ್ಟಗಳ ಮೇಲೆ ಕಟ್ಟಲಾದ ಯಾವ ಪಟ್ಟಣವನ್ನೂ ಸುಡಲಿಲ್ಲ. ಬೆಟ್ಟಗಳ ಮೇಲೆ ಕಟ್ಟಿದ ಪಟ್ಟಣಗಳಲ್ಲಿ ಅವರು ಸುಟ್ಟ ಒಂದೇ ಒಂದು ಪಟ್ಟಣವೆಂದರೆ ಹಾಚೋರ್. ಈ ಪಟ್ಟಣವನ್ನು ಯೆಹೋಶುವನು ಸುಟ್ಟನು.


ಆದರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ನದಿಯನ್ನು ದಾಟುತ್ತಾನೆಂಬುದು ನಿಮಗೆ ನಿಶ್ಚಯವಾಗಿ ತಿಳಿದಿರಲಿ. ಆತನು ದಹಿಸುವ ಬೆಂಕಿಯಂತಿದ್ದಾನೆ. ಆತನು ಆ ಜನಾಂಗಗಳನ್ನು ಬೇಗನೆ ನಾಶಪಡಿಸುವನು; ನಿಮ್ಮ ಎದುರಿನಲ್ಲಿ ಅವರು ಬಿದ್ದುಹೋಗುವಂತೆ ಮಾಡುವನು. ಇದು ನೆರವೇರುವುದಾಗಿ ಯೆಹೋವನೇ ನಿಮಗೆ ವಾಗ್ದಾನ ಮಾಡಿದ್ದಾನೆ.


ಯೆಹೋಶುವನು ಮತ್ತು ಇಸ್ರೇಲಿನ ಜನರು ವೈರಿಗಳನ್ನು ಕೊಂದರು. ಆದರೆ ಕೆಲವು ಶತ್ರುಗಳು ಎತ್ತರವಾದ ಗೋಡೆಗಳುಳ್ಳ ತಮ್ಮ ಪಟ್ಟಣಗಳಿಗೆ ಹೋಗಿ ಅಡಗಿಕೊಳ್ಳಲು ಸಾಧ್ಯವಾಯಿತು. ಆ ಜನರು ಕೊಲ್ಲಲ್ಪಡಲಿಲ್ಲ.


“ಲೆಬನೋನಿನಿಂದ ಮಿಸ್ರೆಪೋತ್ಮಯಿಮಿನವರೆಗಿರುವ ಪರ್ವತ ಪ್ರದೇಶದಲ್ಲಿ ಚೀದೋನ್ಯರು ವಾಸವಾಗಿದ್ದಾರೆ. ಆದರೆ ಇಸ್ರೇಲರಿಗಾಗಿ ನಾನು ಅವರನ್ನೆಲ್ಲಾ ಹೊರ ತಳ್ಳುತ್ತೇನೆ. ಇಸ್ರೇಲರಿಗೆ ದೇಶವನ್ನು ಹಂಚುವಾಗ ಈ ಪ್ರದೇಶವನ್ನು ಸೇರಿಸಿ


ಯೆಹೋವನು ಅವರ ಪೂರ್ವಿಕರಿಗೆ ಪ್ರಮಾಣ ಮಾಡಿದಂತೆ ಅವರ ಪ್ರದೇಶದಲ್ಲೆಲ್ಲಾ ಶಾಂತಿ ನೆಲೆಸುವಂತೆ ಮಾಡಿದನು. ಅವರ ಯಾವ ಶತ್ರುಗಳೂ ಅವರನ್ನು ಸೋಲಿಸಲಿಲ್ಲ. ಇಸ್ರೇಲರು ತಮ್ಮ ಎಲ್ಲ ಶತ್ರುಗಳನ್ನು ಸೋಲಿಸುವಂತೆ ಯೆಹೋವನು ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು