Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 11:13 - ಪರಿಶುದ್ದ ಬೈಬಲ್‌

13 ಆದರೆ ಇಸ್ರೇಲಿನ ಸೈನಿಕರು ಬೆಟ್ಟಗಳ ಮೇಲೆ ಕಟ್ಟಲಾದ ಯಾವ ಪಟ್ಟಣವನ್ನೂ ಸುಡಲಿಲ್ಲ. ಬೆಟ್ಟಗಳ ಮೇಲೆ ಕಟ್ಟಿದ ಪಟ್ಟಣಗಳಲ್ಲಿ ಅವರು ಸುಟ್ಟ ಒಂದೇ ಒಂದು ಪಟ್ಟಣವೆಂದರೆ ಹಾಚೋರ್. ಈ ಪಟ್ಟಣವನ್ನು ಯೆಹೋಶುವನು ಸುಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋಶುವನು ಸುಟ್ಟ ಹಾಚೋರ್ ಒಂದನ್ನು ಬಿಟ್ಟರೆ ಇಸ್ರಾಯೇಲರು ದಿನ್ನೆಯ ಮೇಲಿನ ಬೇರೆ ಯಾವ ಪಟ್ಟಣವನ್ನೂ ಸುಟ್ಟುಹಾಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಯೆಹೋಶುವನು ಸುಟ್ಟ ಹಾಚೋರ್ ಒಂದನ್ನು ಬಿಟ್ಟರೆ ಇಸ್ರಯೇಲರು ಮಲೆನಾಡಿನ ಬೇರೆ ಯಾವ ನಗರವನ್ನೂ ಸುಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋಶುವನು ಸುಟ್ಟ ಹಾಚೋರ್ ಹೊರತು ಇಸ್ರಾಯೇಲ್ಯರು ದಿನ್ನೆಯ ಮೇಲಣ ಬೇರೆ ಯಾವ ಪಟ್ಟಣವನ್ನೂ ಸುಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ ದಿನ್ನೆಯ ಮೇಲೆ ನಿಂತಿರುವ ಪಟ್ಟಣಗಳನ್ನೆಲ್ಲಾ ಇಸ್ರಾಯೇಲರು ಸುಟ್ಟು ಬಿಡಲಿಲ್ಲ. ಹಾಚೋರನ್ನು ಮಾತ್ರ ಯೆಹೋಶುವನು ಸುಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 11:13
4 ತಿಳಿವುಗಳ ಹೋಲಿಕೆ  

ಯೆಹೋವನು ಹೀಗೆನ್ನುತ್ತಾನೆ, “ಯಾಕೋಬಿನ ಜನರು ಈಗ ಬಂಧಿಗಳಾಗಿದ್ದಾರೆ. ಆದರೆ ಅವರು ಹಿಂತಿರುಗಿ ಬರುವರು. ಯಾಕೋಬಿನ ಮನೆಗಳ ಮೇಲೆ ನಾನು ಕನಿಕರ ತೋರುವೆನು. ನಗರವು ಈಗ ಕೇವಲ ಹಾಳುಬಿದ್ದ ಮನೆಗಳಿಂದ ಕೂಡಿದ ಒಂದು ದಿಬ್ಬವಾಗಿದೆ. ಆದರೆ ಆ ನಗರವು ಮತ್ತೆ ನಿರ್ಮಿಸಲ್ಪಡುವುದು. ಮುಂಚೆ ಇದ್ದ ಸ್ಥಳದಲ್ಲಿ ಅರಮನೆಯನ್ನು ಕಟ್ಟಲಾಗುವುದು.


ಯೆಹೋಶುವನು ಈ ಎಲ್ಲ ಪಟ್ಟಣಗಳನ್ನು ವಶಪಡಿಸಿಕೊಂಡನು; ಅವುಗಳ ಎಲ್ಲ ಅರಸರನ್ನು ಕೊಂದುಹಾಕಿದನು; ಈ ಪಟ್ಟಣಗಳಲ್ಲಿದ್ದ ಎಲ್ಲವನ್ನು ನಾಶಮಾಡಿದನು. ಯೆಹೋವನ ಸೇವಕನಾದ ಮೋಶೆಯು ಆಜ್ಞಾಪಿಸಿದಂತೆಯೇ ಅವನು ಮಾಡಿದನು.


ಆ ಪಟ್ಟಣಗಳಲ್ಲಿ ಸಿಕ್ಕಿದ ಎಲ್ಲ ಪದಾರ್ಥಗಳನ್ನು ಮತ್ತು ಎಲ್ಲ ಪಶುಗಳನ್ನು ಇಸ್ರೇಲರು ತಮಗಾಗಿ ಇಟ್ಟುಕೊಂಡರು. ಆದರೆ ಅಲ್ಲಿದ್ದ ಜನರನ್ನೆಲ್ಲ ಕೊಂದರು. ಅವರಲ್ಲಿ ಯಾರನ್ನೂ ಸಜೀವವಾಗಿ ಉಳಿಸಲಿಲ್ಲ.


“‘ಯೆಹೋವನಾದ ನಾನು ನಿಮಗೆ ಆ ದೇಶವನ್ನು ಕೊಟ್ಟಿದ್ದೇನೆ. ನೀವು ಆ ದೇಶಕ್ಕಾಗಿ ಏನನ್ನೂ ಮಾಡಿಲ್ಲ. ನಿಮಗೆ ಅದನ್ನು ಕೊಟ್ಟವನು ನಾನೇ. ನೀವು ಆ ನಗರಗಳನ್ನು ಕಟ್ಟಲೇ ಇಲ್ಲ. ಅವುಗಳನ್ನು ನಿಮಗೆ ಕೊಟ್ಟವನು ನಾನೇ. ಈಗ ನೀವು ಆ ಪ್ರದೇಶದಲ್ಲಿ ಮತ್ತು ಆ ನಗರಗಳಲ್ಲಿ ವಾಸಮಾಡುತ್ತಿದ್ದೀರಿ. ನೀವು ದ್ರಾಕ್ಷಿ ಮತ್ತು ಆಲಿವ್ ಮರದ ತೋಟಗಳನ್ನು ಹೊಂದಿರುವಿರಿ. ಆದರೆ ಆ ತೋಟಗಳನ್ನು ನೀವು ಬೆಳೆಸಲಿಲ್ಲ.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು