ಯೆಹೋಶುವ 11:14 - ಪರಿಶುದ್ದ ಬೈಬಲ್14 ಆ ಪಟ್ಟಣಗಳಲ್ಲಿ ಸಿಕ್ಕಿದ ಎಲ್ಲ ಪದಾರ್ಥಗಳನ್ನು ಮತ್ತು ಎಲ್ಲ ಪಶುಗಳನ್ನು ಇಸ್ರೇಲರು ತಮಗಾಗಿ ಇಟ್ಟುಕೊಂಡರು. ಆದರೆ ಅಲ್ಲಿದ್ದ ಜನರನ್ನೆಲ್ಲ ಕೊಂದರು. ಅವರಲ್ಲಿ ಯಾರನ್ನೂ ಸಜೀವವಾಗಿ ಉಳಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇಸ್ರಾಯೇಲರು ಅವುಗಳಲ್ಲಿದ್ದ ಪಶುಪ್ರಾಣಿಗಳನ್ನೂ ವಸ್ತುಗಳನ್ನೂ ಕೊಳ್ಳೆ ಹೊಡೆದರು. ಆದರೆ ಜನರೆಲ್ಲರನ್ನೂ ಕತ್ತಿಯಿಂದ ಹೊಡೆದು ನಿರ್ಮೂಲ ಮಾಡಿದರು. ಉಸಿರಿರುವ ಒಂದನ್ನೂ ಅವರು ಉಳಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅವುಗಳಲ್ಲಿದ್ದ ಪಶುಪ್ರಾಣಿಗಳನ್ನೂ ಸಾಮಾನು ಸರಂಜಾಮುಗಳನ್ನೂ ಇಸ್ರಯೇಲರು ಕೊಳ್ಳೆಹೊಡೆದರು. ಜನರನ್ನಾದರೋ ಒಬ್ಬರನ್ನೂ ಬಿಡದೆ ಕತ್ತಿಯಿಂದ ನಿರ್ಮೂಲಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಇಸ್ರಾಯೇಲ್ಯರು ಅವುಗಳಲ್ಲಿದ್ದ ಪಶುಗಳನ್ನೂ ವಸ್ತುಗಳನ್ನೂ ಕೊಳ್ಳೆ ಹಿಡಿದರು. ಆದರೆ ಜನರೆಲ್ಲರನ್ನೂ ಕತ್ತಿಯಿಂದ ಹೊಡೆದು ನಿರ್ಮೂಲಮಾಡಿದರು. ಒಂದು ಪ್ರಾಣಿಯನ್ನೂ ಉಳಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆ ಪಟ್ಟಣಗಳ ಎಲ್ಲಾ ಕೊಳ್ಳೆಯನ್ನೂ, ಪಶುಪ್ರಾಣಿಗಳನ್ನೆಲ್ಲಾ ಇಸ್ರಾಯೇಲರು ತಮಗೋಸ್ಕರ ಸುಲಿಗೆ ಮಾಡಿಕೊಂಡರು. ಖಡ್ಗದಿಂದ ಜನರನ್ನು ನಾಶಮಾಡಿದರು. ಒಬ್ಬರನ್ನೂ ಅವರು ಉಳಿಸಲಿಲ್ಲ. ಅಧ್ಯಾಯವನ್ನು ನೋಡಿ |