ಯೆಹೋಶುವ 11:15 - ಪರಿಶುದ್ದ ಬೈಬಲ್15 ಹೀಗೆ ಮಾಡಬೇಕೆಂದು ಯೆಹೋವನು ತನ್ನ ಸೇವಕನಾದ ಮೋಶೆಗೆ ಬಹುಕಾಲದ ಹಿಂದೆಯೇ ಹೇಳಿದ್ದನು. ಮೋಶೆಯು ಈ ಕಾರ್ಯವನ್ನು ಮಾಡಲು ಯೆಹೋಶುವನಿಗೆ ಆಜ್ಞಾಪಿಸಿದ್ದನು. ಹೀಗೆ ಯೆಹೋಶುವನು ದೇವರ ಆಜ್ಞೆಯನ್ನು ಪಾಲಿಸಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೆಲ್ಲವನ್ನು ಯೆಹೋಶುವನು ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯೆಹೋವನ ಸೇವಕನಾದ ಮೋಶೆಯು ದೇವರು ತನಗೆ ಹೇಳಿದ್ದನ್ನೆಲ್ಲಾ ಯೆಹೋಶುವನಿಗೆ ಹೇಳಿದ್ದನು. ಯೆಹೋಶುವನು ಅದರಂತೆಯೇ ಮಾಡಿದನು, ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಮೀರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸರ್ವೇಶ್ವರನ ದಾಸ ಮೋಶೆ, ದೇವರು ತನಗೆ ಹೇಳಿದ್ದನ್ನೆಲ್ಲಾ ಯೆಹೋಶುವನಿಗೆ ಹೇಳಿದ್ದನು. ಅದರಂತೆಯೇ ಯೆಹೋಶುವ ಮಾಡಿದನು. ಸರ್ವೇಶ್ವರ ಮೋಶೆಯ ಮುಖಾಂತರ ಆಜ್ಞಾಪಿಸಿದ್ದರಲ್ಲಿ ಯೆಹೋಶುವ ಒಂದನ್ನೂ ಮೀರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಯೆಹೋವನ ಸೇವಕನಾದ ಮೋಶೆಯು ದೇವರು ತನಗೆ ಹೇಳಿದ್ದನ್ನೆಲ್ಲಾ ಯೆಹೋಶುವನಿಗೆ ಹೇಳಿದ್ದನು. ಯೆಹೋಶುವನು ಅದರಂತೆಯೇ ಮಾಡಿದನು; ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ್ದರಲ್ಲಿ ಅವನು ಒಂದನ್ನೂ ಮೀರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಯೆಹೋವ ದೇವರು ತಮ್ಮ ಸೇವಕನಾದ ಮೋಶೆಗೆ ಹೇಗೆ ಆಜ್ಞಾಪಿಸಿದರೋ, ಹಾಗೆಯೇ ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿದನು. ಯೆಹೋಶುವನೂ ಹಾಗೆಯೇ ಮಾಡಿದನು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದರಲ್ಲಿ ಯೆಹೋಶುವನು ಒಂದನ್ನೂ ಮೀರದೆ ಎಲ್ಲವನ್ನೂ ಮಾಡಿದನು. ಅಧ್ಯಾಯವನ್ನು ನೋಡಿ |
“ಫರಿಸಾಯರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದೇವರಿಗೆ ನಿಮ್ಮಲ್ಲಿರುವ ಪ್ರತಿಯೊಂದರಲ್ಲಿಯೂ ಹತ್ತನೆಯ ಒಂದು ಭಾಗವನ್ನು ಕೊಡುತ್ತೀರಿ. ನಿಮ್ಮ ತೋಟದಲ್ಲಿ ಬೆಳೆಯುವ ಮರುಗ, ಸದಾಪು ಮುಂತಾದ ಚಿಕ್ಕ ಸಸಿಗಳಲ್ಲಿಯೂ ಹತ್ತನೆಯ ಒಂದು ಭಾಗವನ್ನು ಕೊಡುತ್ತೀರಿ. ಆದರೆ ಬೇರೆಯವರಿಗೆ ನ್ಯಾಯತೋರಿಸುವುದನ್ನೂ ದೇವರನ್ನು ಪ್ರೀತಿಸುವುದನ್ನೂ ಮರೆತುಬಿಟ್ಟಿದ್ದೀರಿ. ನೀವು ಮೊದಲು ಇವುಗಳನ್ನು ಮಾಡಬೇಕು ಮತ್ತು ಉಳಿದವುಗಳನ್ನು ಕಡೆಗಣಿಸಬಾರದು.
“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನಿಮ್ಮಲ್ಲಿರುವ ಪ್ರತಿಯೊಂದರಲ್ಲೂ ನಿಮ್ಮ ಪುದೀನ, ಸಬ್ಬಸ್ಸಿಗೆ ಸೊಪ್ಪು, ಜೀರಿಗೆ ಗಿಡಗಳಲ್ಲಿಯೂ ಸಹ ಹತ್ತರಲ್ಲೊಂದು ಪಾಲನ್ನು ದೇವರಿಗೆ ಕೊಡುತ್ತೀರಿ. ಆದರೆ ಧರ್ಮಶಾಸ್ತ್ರದ ಬೋಧನೆಗಳಲ್ಲಿ ನಿಜವಾಗಿಯೂ ಪ್ರಾಮುಖ್ಯವಾದ ಆಜ್ಞೆಗಳನ್ನು ಅಂದರೆ ನ್ಯಾಯವನ್ನೂ ಕರುಣೆಯನ್ನೂ ಯಥಾರ್ಥತೆಯನ್ನೂ ನೀವು ತೊರೆದುಬಿಟ್ಟಿದ್ದೀರಿ. ಈ ಆಜ್ಞೆಗಳಿಗೆ ನೀವು ಮೊದಲು ವಿಧೇಯರಾಗಿ, ಈಗ ಮಾಡುತ್ತಿರುವಂಥ ಕಾರ್ಯಗಳನ್ನು ಮಾಡಬೇಕಿತ್ತು.