Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 11:23 - ಪರಿಶುದ್ದ ಬೈಬಲ್‌

23 ಬಹಳ ಹಿಂದೆಯೇ ಯೆಹೋವನು ಮೋಶೆಗೆ ಹೇಳಿದ ಪ್ರಕಾರ ಯೆಹೋಶುವನು ಇಸ್ರೇಲಿನ ಪ್ರದೇಶವನ್ನೆಲ್ಲ ಸ್ವಾಧೀನಪಡಿಸಿಕೊಂಡನು. ಯೆಹೋವನು ತಾನು ವಾಗ್ದಾನ ಮಾಡಿದಂತೆ ಆ ಪ್ರದೇಶವನ್ನು ಇಸ್ರೇಲರಿಗೆ ಕೊಟ್ಟುಬಿಟ್ಟನು. ಆಗ ಯೆಹೋಶುವನು ಆ ಪ್ರದೇಶವನ್ನು ಕುಲಗಳ ಪ್ರಕಾರ ಹಂಚಿಕೊಟ್ಟನು. ಆಗ ಯುದ್ಧವು ಮುಗಿಯಿತು, ಕೊನೆಗೆ ಆ ಪ್ರದೇಶದಲ್ಲಿ ಶಾಂತಿ ನೆಲೆಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೆಹೋವನು ಮೋಶೆಯ ಮುಖಾಂತರ ವಾಗ್ದಾನ ಮಾಡಿದ ಪ್ರದೇಶಗಳನ್ನೆಲ್ಲಾ ಯೆಹೋಶುವನು ಸೆರೆ ಹಿಡಿದುಕೊಂಡು ಇಸ್ರಾಯೇಲ್ ಕುಲಭಾಗಗಳಿಗನುಗುಣವಾಗಿ ಅವುಗಳನ್ನು ವಿಭಾಗಿಸಿ ಹಂಚಿಕೊಟ್ಟನು. ಯುದ್ಧವು ನಿಂತು ದೇಶದಲ್ಲೆಲ್ಲಾ ಸಮಾಧಾನವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸರ್ವೇಶ್ವರ ಮೋಶೆಯ ಮುಖಾಂತರ ವಾಗ್ದಾನ ಮಾಡಿದ್ದ ಪ್ರದೇಶವನ್ನೆಲ್ಲಾ ಯೆಹೋಶುವ ಹಿಡಿದುಕೊಂಡನು, ಇಸ್ರಯೇಲ್ ಕುಲಭಾಗಗಳಿಗನುಸಾರ ಅದನ್ನು ಹಂಚಿಕೊಟ್ಟನು. ಯುದ್ಧ ನಿಂತಿತು. ದೇಶದಲ್ಲೆಲ್ಲಾ ಶಾಂತಿಸಮಾಧಾನ ನೆಲೆಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೆಹೋವನು ಮೋಶೆಯ ಮೂಲಕ ವಾಗ್ದಾನ ಮಾಡಿದ್ದ ಪ್ರದೇಶವನ್ನೆಲ್ಲಾ ಯೆಹೋಶುವನು ಹಿಡಿದುಕೊಂಡು ಇಸ್ರಾಯೇಲ್ ಕುಲಭಾಗಗಳಿಗನುಸಾರವಾಗಿ ಹಂಚಿಕೊಟ್ಟನು. ಯುದ್ಧವು ನಿಂತು ದೇಶದಲ್ಲೆಲ್ಲಾ ಸಮಾಧಾನವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಹೀಗೆ ಯೆಹೋಶುವನು ದೇಶವನ್ನೆಲ್ಲಾ ಯೆಹೋವ ದೇವರು ಮೋಶೆಗೆ ಹೇಳಿದ ಪ್ರಕಾರವೇ ಸ್ವಾಧೀನಮಾಡಿಕೊಂಡನು. ಅದನ್ನು ಇಸ್ರಾಯೇಲರಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 11:23
20 ತಿಳಿವುಗಳ ಹೋಲಿಕೆ  

ಇಡೀ ಪ್ರಪಂಚದಲ್ಲಿ ಆತನು ಯುದ್ಧವನ್ನು ನಿಲ್ಲಿಸುವನು; ಬಿಲ್ಲುಗಳನ್ನೂ ಗುರಾಣಿಗಳನ್ನೂ ಮುರಿದುಹಾಕುವನು; ಗುರಾಣಿಗಳನ್ನು ಬೆಂಕಿಯಿಂದ ಸುಟ್ಟುಹಾಕುವನು.


ಯೆಹೋವನು ಇಸ್ರೇಲರ ಶತ್ರುಗಳನ್ನು ಸದೆಬಡೆದು ಅವರಿಗೆ ವಿಶ್ರಾಂತಿಯನ್ನು ಕೊಟ್ಟನು. ಯೆಹೋವನು ಇಸ್ರೇಲನ್ನು ಸುರಕ್ಷಿತಗೊಳಿಸಿದನು. ಅನೇಕ ವರ್ಷಗಳು ಕಳೆದವು. ಯೆಹೋಶುವನು ಬಹಳ ಮುದುಕನಾದನು.


ನಿಮ್ಮ ದೇವರಾದ ಯೆಹೋವನು ಇಸ್ರೇಲರಿಗೆ ಶಾಂತಿಯನ್ನು ದಯಪಾಲಿಸುವುದಾಗಿ ವಾಗ್ದಾನ ಮಾಡಿದ್ದನು. ಈಗ ಯೆಹೋವನು ತನ್ನ ವಾಗ್ದಾನವನ್ನು ಪೂರ್ಣಗೊಳಿಸಿದ್ದಾನೆ. ಆದ್ದರಿಂದ ಈಗ ನೀವು ನಿಮ್ಮ ಮನೆಗಳಿಗೆ ಹೋಗಬಹುದು. ಯೆಹೋವನ ಸೇವಕನಾದ ಮೋಶೆಯು ನಿಮಗೆ ಜೋರ್ಡನ್ ನದಿಯ ಪೂರ್ವಕ್ಕೆ ಸ್ವಾಸ್ತ್ಯವನ್ನು ಕೊಟ್ಟಿದ್ದಾನೆ. ಈಗ ನೀವು ಆ ಪ್ರದೇಶದಲ್ಲಿರುವ ನಿಮ್ಮ ಮನೆಗಳಿಗೆ ಹೋಗಬಹುದು.


ಯೆಹೋಶುವನು ಅವರಿಗಾಗಿ ಶೀಲೋವಿನಲ್ಲಿ ಯೆಹೋವನ ಮುಂದೆ ಚೀಟುಹಾಕಿದನು. ಹೀಗೆ ಯೆಹೋಶುವನು ಭೂಮಿಯನ್ನು ಹಂಚಿದನು; ಪ್ರತಿಯೊಂದು ಕುಲಕ್ಕೆ ಅದರ ಭೂಭಾಗವನ್ನು ಕೊಟ್ಟನು.


ಯೆಹೋಶುವನು ಆ ಅರಸರ ವಿರುದ್ಧ ಬಹುಕಾಲದವರೆಗೆ ಹೋರಾಡಿದನು.


ಆದ್ದರಿಂದಲೇ ಅಮಾಲೇಕ್ಯರನ್ನು ಈ ಭೂಮುಖದಲ್ಲಿರದಂತೆ ಮಾಡಬೇಕು. ನೀವು ನಿಮ್ಮ ದೇಶವನ್ನು ಪ್ರವೇಶಿಸುವಾಗ ನೀವು ಹಾಗೆ ಮಾಡಬೇಕು. ನಿಮ್ಮ ಸುತ್ತಮುತ್ತಲಿರುವ ವೈರಿಗಳಿಂದ ದೇವರು ನಿಮಗೆ ಶಾಂತಿಯನ್ನು ಅನುಗ್ರಹಿಸುವನು. ಆದರೆ ಅಮಾಲೇಕ್ಯರನ್ನು ನಾಶಮಾಡುವ ಕಾರ್ಯವನ್ನು ಮರೆಯಬೇಡಿರಿ.


ಆದರೆ ನಿನ್ನ ಸಹಾಯಕನಾದ ನೂನನ ಮಗನಾದ ಯೆಹೋಶುವನು ಆ ದೇಶವನ್ನು ಪ್ರವೇಶಿಸುವನು. ಯೆಹೋಶುವನನ್ನು ಪ್ರೋತ್ಸಾಹಿಸು; ಯಾಕೆಂದರೆ ಆ ದೇಶವನ್ನು ವಶಪಡಿಸಿಕೊಳ್ಳಲು ಅವನು ಇಸ್ರೇಲರನ್ನು ಮುನ್ನಡೆಸಬೇಕು’ ಎಂದು ಹೇಳಿದನು.


ನಾನು ಈ ದಿನ ಕೊಡುವ ಆಜ್ಞೆಗಳಿಗೆ ವಿಧೇಯರಾಗಿರಿ. ನಿಮ್ಮ ವೈರಿಗಳಾದ ಅಮೋರಿಯರನ್ನು, ಕಾನಾನ್ಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಮತ್ತು ಯೆಬೂಸಿಯರನ್ನು ನಾನು ಹೊರಗಟ್ಟುವೆನು.


ಆ ಮಕ್ಕಳು ದೇಶವನ್ನು ಸ್ವಾಧೀನಪಡಿಸಿಕೊಂಡರು; ಅಲ್ಲಿ ವಾಸಿಸಿದ್ದ ಕಾನಾನ್ಯರನ್ನು ಓಡಿಸಿದರು. ಅವರನ್ನು ಸೋಲಿಸುವಂತೆ ನೀನೇ ಮಾಡಿದೆ. ಆ ರಾಜ್ಯಗಳಿಗೆ, ರಾಜರುಗಳಿಗೆ ಅವರು ಮಾಡಬೇಕೆಂದಿದ್ದನ್ನು ಮಾಡುವಂತೆ ಅವರಿಗೇ ಅವಕಾಶಮಾಡಿಕೊಟ್ಟೆ.


ಭೂಪ್ರದೇಶದ ಈ ಭಾಗವು ಅಧಿಪತಿಗೆ ಸೇರಿದೆ. ಹೀಗೆ, ಹಿಂದಿನ ಕಾಲದ ಅಧಿಪತಿಗಳು ಮಾಡಿದಂತೆ ಈ ಅಧಿಪತಿಯು ಜನರನ್ನು ಹಿಂಸಿಸಿ ಅವರ ಭೂಮಿಯನ್ನು ಕಸಿದುಕೊಳ್ಳುವುದಿಲ್ಲ. ಉಳಿದ ಭೂಭಾಗವು ಇಸ್ರೇಲಿನ ಇತರ ಕುಲಗಳವರಿಗೆ ಯಾವಾಗಲೂ ಸೇರಿರುತ್ತದೆ.”


ಇಸ್ರೇಲರು ಜೋರ್ಡನ್ ನದಿಯ ಪಶ್ಚಿಮ ಪ್ರದೇಶದಲ್ಲಿದ್ದ ಅರಸರನ್ನು ಸಹ ಸೋಲಿಸಿದರು. ಈ ಪ್ರದೇಶದಲ್ಲಿ ಯೆಹೋಶುವನು ಜನರ ಮುಂದಾಳಾದನು. ಯೆಹೋಶುವನು ಈ ಪ್ರದೇಶವನ್ನು ಇಸ್ರೇಲಿನ ಹನ್ನೆರಡು ಕುಲಗಳಿಗೆ ಹಂಚಿದನು. ದೇವರು ಅವರಿಗೆ ಕೊಡುವುದಾಗಿ ವಾಗ್ದಾನ ಮಾಡಿದ್ದ ಪ್ರದೇಶವೇ ಅದಾಗಿತ್ತು. ಈ ಪ್ರದೇಶವು ಲೆಬನೋನ್ ಕಣಿವೆಯ ಬಾಲ್ಗಾದ್ ಮತ್ತು ಸೇಯೀರ್ ಹತ್ತಿರವಿದ್ದ ಹಾಲಾಕ್ ಬೆಟ್ಟದ ನಡುವೆ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು