Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 11:3 - ಪರಿಶುದ್ದ ಬೈಬಲ್‌

3 ಯಾಬೀನನು ಪೂರ್ವ ಮತ್ತು ಪಶ್ಚಿಮದಲ್ಲಿದ್ದ ಕಾನಾನಿನ ಅರಸರಿಗೂ ಅಮೋರಿಯರಿಗೂ ಹಿತ್ತಿಯರಿಗೂ ಪೆರಿಜ್ಜೀಯರಿಗೂ ಬೆಟ್ಟಪ್ರದೇಶದ ಯೆಬೂಸಿಯರಿಗೂ ಹೆರ್ಮೋನ್ ಪರ್ವತದ ಬುಡದಲ್ಲಿ ಮಿಚ್ಛಾದ ಹತ್ತಿರ ವಾಸವಾಗಿದ್ದ ಹಿವ್ವಿಯರಿಗೂ ಸಂದೇಶವನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕಾನಾನ್ಯರು, ಅಮೋರಿಯರು, ಹಿತ್ತಿಯರು, ಪೆರಿಜ್ಜೀಯರು, ಬೆಟ್ಟದ ಮೇಲಿನ ಪ್ರದೇಶದಲ್ಲಿದ್ದ ಯೆಬೂಸಿಯರು, ಹೆರ್ಮೋನಿನ ತಗ್ಗಿನಲ್ಲಿದ್ದ ಮಿಚ್ಪಾ ದೇಶದಲ್ಲಿದ್ದ ಹಿವ್ವಿಯರು ಇವರನ್ನೂ ಕರೆಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಪೂರ್ವ ಪಶ್ಚಿಮಗಳಲ್ಲಿರುವ ಕಾನಾನ್ಯರು, ಅಮೋರಿಯರು, ಹಿತ್ತಿಯರು, ಪೆರಿಜ್ಜೀಯರು, ಮಲೆನಾಡಿನ ಪ್ರದೇಶದಲ್ಲಿದ್ದ ಯೆಬೂಸಿಯರು, ಹೆರ್ನೋನಿನ ಬುಡದಲ್ಲಿ ಮಿಚ್ಪಾನಾಡಿನಲ್ಲಿದ್ದ ಹಿವ್ವಿಯರು ಇವರಿಗೂ ಹೇಳಿಕಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಪೂರ್ವಪಶ್ಚಿಮಗಳಲ್ಲಿರುವ ಕಾನಾನ್ಯರು, ಅಮೋರಿಯರು, ಹಿತ್ತಿಯರು, ಪೆರಿಜ್ಜೀಯರು, ಬೆಟ್ಟದ ಮೇಲಿನ ಪ್ರದೇಶದಲ್ಲಿದ್ದ ಯೆಬೂಸಿಯರು, ಹೆರ್ಮೋನಿನ ಬುಡದಲ್ಲಿ ವಿುಚ್ಪಾ ದೇಶದಲ್ಲಿದ್ದ ಹಿವ್ವಿಯರು ಇವರನ್ನೂ ಕರೇಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಪೂರ್ವ ಪಶ್ಚಿಮಕ್ಕಿರುವ ಕಾನಾನ್ಯರ ಬಳಿಗೂ ಪರ್ವತಗಳಲ್ಲಿರುವ ಅಮೋರಿಯರ, ಹಿತ್ತಿಯರ, ಪೆರಿಜೀಯರ, ಯೆಬೂಸಿಯರ ಬಳಿಗೂ, ಮಿಚ್ಪಾ ದೇಶದಲ್ಲಿ ಹೆರ್ಮೋನ್ ಪರ್ವತದ ಕೆಳಭಾಗದಲ್ಲಿರುವ ಹಿವ್ವಿಯರ ಬಳಿಗೂ ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 11:3
30 ತಿಳಿವುಗಳ ಹೋಲಿಕೆ  

ಐದು ಮಂದಿ ಫಿಲಿಷ್ಟಿಯ ಪ್ರಭುಗಳು, ಎಲ್ಲಾ ಕಾನಾನ್ಯರು, ಚೀದೋನ್ಯರು, ಲೆಬನೋನ್ ಪರ್ವತಾವಳಿಯಲ್ಲಿ ಬಾಳ್‌ಹೆರ್ಮೊನ್ ಬೆಟ್ಟದಿಂದ ಲೆಬೂಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು.


ಮಿಚ್ಪೆ, ಕೆಫೀರಾ, ಮೋಚಾ,


ಲಾಬಾನನು, “ನಾವು ಒಬ್ಬರನ್ನೊಬ್ಬರು ಅಗಲಿರುವಾಗ ಯೆಹೋವನೇ ನಮ್ಮನ್ನು ನೋಡಿಕೊಳ್ಳಲಿ” ಎಂದು ಹೇಳಿದನು. ಆದ್ದರಿಂದ ಆ ಸ್ಥಳಕ್ಕೆ ಮಿಚ್ಪಾ ಎಂದೂ ಹೆಸರಿಡಲಾಯಿತು.


ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಹಾಕಲು ಯೆಹೂದ ಕುಲದವರಿಗೆ ಸಾಧ್ಯವಾಗಲಿಲ್ಲ. ಆದ್ದರಿಂದ ಯೆಬೂಸಿಯರು ಇಂದಿನವರೆಗೂ ಜೆರುಸಲೇಮಿನಲ್ಲಿ ಯೆಹೂದ ಕುಲದವರೊಡನೆ ವಾಸವಾಗಿದ್ದಾರೆ.


ಗಿಲ್ಯಾದ್ ಪಟ್ಟಣವೂ ಸಹ ಈ ಪ್ರದೇಶಕ್ಕೆ ಒಳಪಟ್ಟಿತ್ತು. ಗೆಷೂರ್ಯರು ಮತ್ತು ಮಾಕತೀಯರು ವಾಸಮಾಡುತ್ತಿದ್ದ ಪ್ರದೇಶವು ಸಹ ಈ ಪ್ರದೇಶಕ್ಕೆ ಸೇರಿತ್ತು. ಇಡೀ ಹೆರ್ಮೋನ್ ಬೆಟ್ಟಪ್ರದೇಶ ಮತ್ತು ಸಲ್ಕಾ ಪಟ್ಟಣದವರೆಗೆ ವಿಸ್ತರಿಸಿಕೊಂಡಿದ್ದ ಬಾಷಾನಿನ ಎಲ್ಲಾ ಪ್ರಾಂತ್ಯಗಳು ಆ ಪ್ರದೇಶಕ್ಕೆ ಸೇರಿಕೊಂಡಿದ್ದವು.


ಆಗ, ಇಷ್ಮಾಯೇಲನು ಮಿಚ್ಫದಲ್ಲಿ ಸೆರೆಹಿಡಿದುಕೊಂಡು ಹೋಗಿದ್ದ ಎಲ್ಲಾ ಜನರು ಕಾರೇಹನ ಮಗನಾದ ಯೋಹಾನಾನನ ಕಡೆಗೆ ಓಡಿದರು.


ಇಷ್ಮಾಯೇಲನು ಗೆದಲ್ಯನ ಸಂಗಡ ಮಿಚ್ಫದಲ್ಲಿದ್ದ ಎಲ್ಲಾ ಯೆಹೂದ್ಯರನ್ನು ಸಹ ಕೊಂದನು. ಇಷ್ಮಾಯೇಲನು ಗೆದಲ್ಯನ ಸಂಗಡ ಇದ್ದ ಎಲ್ಲಾ ಬಾಬಿಲೋನಿನ ಸೈನಿಕರನ್ನು ಸಹ ಕೊಂದುಹಾಕಿದನು.


ನಾನು ಸ್ವತಃ ಮಿಚ್ಫದಲ್ಲಿ ವಾಸಮಾಡುತ್ತೇವೆ. ಇಲ್ಲಿಗೆ ಬರುವ ಕಸ್ದೀಯರ ಮುಂದೆ ನಿಮ್ಮ ಪರವಾಗಿ ಮಾತನಾಡುತ್ತೇನೆ. ಆ ಕೆಲಸವನ್ನು ನೀವು ನನಗೆ ಬಿಟ್ಟುಬಿಡಿ. ನೀವು ದ್ರಾಕ್ಷಾರಸ, ಹಣ್ಣು ಮತ್ತು ಎಣ್ಣೆ ಇವುಗಳನ್ನು ಸಂಗ್ರಹಿಸಿ ನಿಮ್ಮ ಪಾತ್ರೆಗಳಲ್ಲಿ ತುಂಬಿಸಿಟ್ಟು ನೀವು ಹಿಡಿದುಕೊಂಡ ಪಟ್ಟಣಗಳಲ್ಲಿ ವಾಸಿಸಿರಿ.”


ಯೆರೆಮೀಯನು ಅಹೀಕಾಮನ ಮಗನಾದ ಗೆದಲ್ಯನು ಇದ್ದ ಮಿಚ್ಫಕ್ಕೆ ಹೋದನು. ಯೆರೆಮೀಯನು ಗೆದಲ್ಯನ ಸಂಗಡ ದೇಶದಲ್ಲಿ ಉಳಿದ ಜನರ ಮಧ್ಯೆ ವಾಸಮಾಡಿದನು.


ನನ್ನ ವಧುವೇ, ಲೆಬನೋನಿನಿಂದ ನನ್ನೊಂದಿಗೆ ಬಾ! ಲೆಬನೋನಿನಿಂದ ನನ್ನೊಂದಿಗೆ ಬಾ! ಅಮಾನದ ತುದಿಯಿಂದಲೂ ಶೆನೀರಿನ ತುದಿಯಿಂದಲೂ ಹೆರ್ಮೋನಿನ ತುದಿಯಿಂದಲೂ ಸಿಂಹದ ಗವಿಗಳಿಂದಲೂ ಚಿರತೆಗಳ ಬೆಟ್ಟಗಳಿಂದಲೂ ಬಾ!


ಅದು ಹೆರ್ಮೋನ್ ಪರ್ವತದಿಂದ ಹುಟ್ಟಿ ಚೀಯೋನ್ ಪರ್ವತದ ಮೇಲೆ ಬೀಳುವ ದಟ್ಟವಾದ ಮಂಜಿನಂತಿರುವುದು. ಯೆಹೋವನು ನಿತ್ಯಜೀವವೆಂಬ ತನ್ನ ಆಶೀರ್ವಾದವನ್ನು ಅನುಗ್ರಹಿಸಿದ್ದು ಚೀಯೋನಿನಲ್ಲಿಯೇ.


ಉತ್ತರ, ದಕ್ಷಿಣ ದಿಕ್ಕುಗಳನ್ನೂ ಪ್ರತಿಯೊಂದನ್ನೂ ಸೃಷ್ಟಿಸಿದಾತನು ನೀನೇ. ತಾಬೋರ್ ಮತ್ತು ಹೆರ್ಮೋನ್ ಬೆಟ್ಟಗಳು ನಿನ್ನ ಹೆಸರನ್ನು ಸಂಕೀರ್ತಿಸುತ್ತವೆ.


ಆಗ ರಾಜನಾದ ಆಸನು ಯೆಹೂದದ ಜನರಿಗೆಲ್ಲ ಒಂದು ಆಜ್ಞೆಯನ್ನು ಮಾಡಿದನು. ಆದ್ದರಿಂದ ಪ್ರತಿಯೊಬ್ಬ ವ್ಯಕ್ತಿಯೂ ಸಹಾಯಮಾಡಬೇಕಾಯಿತು. ಬಾಷನು ರಾಮ ನಗರವನ್ನು ಬಲಪಡಿಸಲೆಂದು ಉಪಯೋಗಿಸುತ್ತಿದ್ದ ಎಲ್ಲಾ ಕಲ್ಲುಗಳನ್ನು ಮತ್ತು ಮರಗಳನ್ನು ಅವರು ರಾಮಕ್ಕೆ ಹೋಗಿ ತೆಗೆದುಕೊಂಡು ಬಂದರು. ಅವರು ಆ ವಸ್ತುಗಳನ್ನು ಬೆನ್ಯಾಮೀನ್ ದೇಶದ ಗೆಬಕ್ಕೆ ಮತ್ತು ಮಿಚ್ಛೆಗಳಿಗೆ ತೆಗೆದುಕೊಂಡು ಹೋದರು. ನಂತರ ರಾಜನಾದ ಆಸನು ಆ ಪಟ್ಟಣಗಳನ್ನು ಮತ್ತಷ್ಟು ಬಲಪಡಿಸಿದನು.


ಆ ದೇಶದಲ್ಲಿ ಇಸ್ರೇಲರಲ್ಲದ ಅನ್ಯಜನರೂ ಇದ್ದರು. ಆ ಜನರೆಂದರೆ: ಅಮೋರಿಯರು, ಹಿತ್ತಿಯರು, ಪೆರಿಜ್ಜೀಯರು, ಹಿವ್ವೀಯರು ಮತ್ತು ಯೆಬೂಸಿಯರು.


ದೇವದೂತನು ಜೆರುಸಲೇಮನ್ನು ನಾಶಗೊಳಿಸಲು ಅದರತ್ತ ತನ್ನ ಕೈಯನ್ನು ಚಾಚಿದನು. ಆದರೆ ಸಂಭವಿಸಿದ ಕೆಟ್ಟಕಾರ್ಯಗಳ ಬಗ್ಗೆ ಯೆಹೋವನು ಪಶ್ಚಾತ್ತಾಪಪಟ್ಟನು. ಯೆಹೋವನು ಜನರನ್ನು ನಾಶಗೊಳಿಸಿದ ದೇವದೂತನಿಗೆ, “ಇಲ್ಲಿಗೆ ಸಾಕು! ನಿನ್ನ ಕೈಯನ್ನು ಕೆಳಗಿಳಿಸು” ಎಂದು ಹೇಳಿದನು. ಆಗ ಆ ಯೆಹೋವನ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.


ಸಮುವೇಲನು ಇಸ್ರೇಲರನ್ನು ಮಿಚ್ಪೆಗೆ ಕರೆಸಿ, ಯೆಹೋವನ ಸನ್ನಿಧಿಯಲ್ಲಿ ಸಭೆಸೇರಿಸಿದನು.


ಆಗ ಇಸ್ರೇಲರು, “ಇಲ್ಲಿ ಮಿಚ್ಛೆಗೆ ಇಸ್ರೇಲರಲ್ಲಿ ಬರದಿರುವವರು ಯಾರಾದರೂ ಇರುವರೇ?” ಎಂದು ವಿಚಾರ ಮಾಡಿದರು. ಆಗ ಯಾಬೇಷ್ ಗಿಲ್ಯಾದ್ ನಗರದವರಲ್ಲಿ ಯಾರೂ ಬಂದಿಲ್ಲವೆಂದು ಗೊತ್ತಾಯಿತು.


ಆಮೇಲೆ ಇಸ್ರೇಲರು, “ಯೆಹೋವನ ಮುಂದೆ ಸಭೆ ಸೇರಿದಾಗ ಅದಕ್ಕೆ ಬಾರದೆ ಇದ್ದಂಥ ಇಸ್ರೇಲರು ಯಾರಾದರೂ ಇದ್ದಾರೆಯೇ” ಎಂದು ವಿಚಾರಮಾಡಿದರು. ಮಿಚ್ಛೆ ನಗರದಲ್ಲಿ ಬೇರೆ ಕುಲಗಳ ಜೊತೆಗೆ ಯಾರು ಸೇರುವುದಿಲ್ಲವೋ ಅವರನ್ನು ಕೊಲೆ ಮಾಡುವುದಾಗಿ ಅವರು ಪ್ರತಿಜ್ಞೆ ಮಾಡಿದ್ದರು. ಅದಕ್ಕಾಗಿ ಅವರು ಅದರ ಬಗ್ಗೆ ವಿಚಾರಮಾಡಿದರು.


ಇಸ್ರೇಲಿನ ಜನರೆಲ್ಲರೂ ಒಟ್ಟುಗೂಡಿದರು. ಮಿಚ್ಛೆ ನಗರದಲ್ಲಿ ಯೆಹೋವನ ಎದುರಿಗೆ ನಿಲ್ಲುವುದಕ್ಕಾಗಿ ಅವರು ಒಂದು ಕಡೆ ಸೇರಿದ್ದರು. ಇಸ್ರೇಲಿನ ಎಲ್ಲ ಕಡೆಯಿಂದಲೂ ಜನರು ಬಂದರು. ಗಿಲ್ಯಾದಿನಲ್ಲಿದ್ದ ಇಸ್ರೇಲರು ಸಹ ಅಲ್ಲಿ ಬಂದಿದ್ದರು.


ಇಸ್ರೇಲರು ಕಾನಾನ್ಯ, ಹಿತ್ತಿಯ, ಅಮೋರಿಯ, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ಜನಾಂಗಗಳೊಡನೆ ವಾಸಮಾಡತೊಡಗಿದರು.


ದಿಲಾನ್, ಮಿಚ್ಪೆ, ಯೊಕ್ತೇಲ್,


“ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶಕ್ಕೆ ಯೆಹೋವನು ನಿಮ್ಮನ್ನು ನಡೆಸುವನು. ನಿಮಗಿಂತ ಬಲಿಷ್ಠವಾಗಿದ್ದು ಅಲ್ಲಿ ವಾಸಿಸುತ್ತಿರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ಆ ದೇಶದಿಂದ ನಿಮಗಾಗಿ ಹೊರಗಟ್ಟುವನು.


ಈ ಪ್ರದೇಶವು ಅರ್ನೋನ್ ತಗ್ಗಿನಲ್ಲಿರುವ ಅರೋಯೇರಿನಿಂದ ಹಿಡಿದು ಸೀಯೋನ್ ಎಂಬ ಹೆರ್ಮೋನ್ ಪರ್ವತದ ತನಕ ವಿಸ್ತರಿಸಿಯದೆ.


ಅಮಾಲೇಕ್ಯರು ನೆಗೆವ್‌ನಲ್ಲಿ ವಾಸಿಸುತ್ತಾರೆ. ಹಿತ್ತಿಯರು, ಯೆಬೂಸಿಯರು ಮತ್ತು ಅಮೋರಿಯರು ಪರ್ವತ ಪ್ರದೇಶದಲ್ಲಿ ವಾಸಿಸುತ್ತಾರೆ. ಕಾನಾನ್ಯರು ಸಮುದ್ರ ತೀರದಲ್ಲಿಯೂ ಮತ್ತು ಯೋರ್ದನ್ ನದಿಯ ಉದ್ದಕ್ಕೂ ವಾಸಿಸುತ್ತಾರೆ” ಎಂದು ಹೇಳಿದರು.


ಇಸ್ರೇಲರು ಶತ್ರುಗಳನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಇಸ್ರೇಲರ ಸೈನ್ಯವು ಶತ್ರುಗಳನ್ನು ಸೋಲಿಸಿ ಅವರನ್ನು ದೊಡ್ಡ ಚೀದೋನ್ ಮತ್ತು ಮಿಸ್ರೆಪೋತ್ಮಯಿಮ್‌ವರೆಗೂ ಪೂರ್ವದಿಕ್ಕಿನಲ್ಲಿ ಮಿಚ್ಛೆಯ ಕಣಿವೆಯವರೆಗೂ ಬೆನ್ನಟ್ಟಿತು. ಶತ್ರುಗಳಲ್ಲಿ ಯಾರೂ ಉಳಿದುಕೊಳ್ಳದಂತೆ ಇಸ್ರೇಲರು ಯುದ್ಧಮಾಡಿದರು.


ಸೇಯೀರಿನ ಹತ್ತಿರವಿರುವ ಹಾಲಾಕ್ ಬೆಟ್ಟದಿಂದ ಹೆರ್ಮೋನ್ ಬೆಟ್ಟದ ಬುಡದಲ್ಲಿ ಲೆಬನೋನ್ ಕಣಿವೆಯಲ್ಲಿರುವ ಬಾಲ್ಗಾದ್ ಪಟ್ಟಣದವರೆಗೂ ಇರುವ ಭೂಮಿಯು ಅವನ ಸ್ವಾಧೀನವಾಯಿತು. ಯೆಹೋಶುವನು ಆ ಪ್ರದೇಶದ ಎಲ್ಲ ಅರಸರನ್ನು ಸೆರೆಹಿಡಿದು ಕೊಂದುಹಾಕಿದನು.


ನೀನು ಇಲ್ಲಿಯವರೆಗೂ ಗೆಬಾಲ್ಯರನ್ನು ಸೋಲಿಸಿಲ್ಲ. ಹೆರ್ಮೋನ್ ಬೆಟ್ಟದ ಬುಡದಲ್ಲಿರುವ ಬಾಲ್ಗಾದಿನ ಪೂರ್ವದಿಂದಿಡಿದು ಲೆಬೊಹಾಮಾತಿನವರೆಗೆ ಇರುವ ಪ್ರದೇಶವನ್ನು ನೀನು ಗೆಲ್ಲಬೇಕು. ಬಾಲ್ಗಾದ್ ಲೆಬನೋನ್ ಪ್ರದೇಶದಲ್ಲಿದೆ.


ಅವರು ತೂರ್ ಕೋಟೆಗೂ ಹಿವ್ವಿಯರ ಮತ್ತು ಕಾನಾನ್ಯರ ಎಲ್ಲಾ ನಗರಗಳಿಗೂ ಯೆಹೂದದ ದಕ್ಷಿಣಕ್ಕಿರುವ ಬೇರ್ಷೆಬಕ್ಕೂ ಹೋದರು.


ಚೈತನ್ಯಸ್ವರೂಪನಾದ ದೇವರು ನಿಜವಾಗಿಯೂ ನಿಮ್ಮ ಸಂಗಡ ಇದ್ದಾನೆ ಎಂಬುದಕ್ಕೆ ಇಲ್ಲಿ ಒಂದು ಸಾಕ್ಷಿ ಇದೆ. ಆತನು ನಿಜವಾಗಿಯೂ ನಿಮ್ಮ ವೈರಿಗಳನ್ನು ಸೋಲಿಸುತ್ತಾನೆ ಎಂಬುದಕ್ಕೆ ಇಲ್ಲಿ ಸಾಕ್ಷಿ ಇದೆ. ಕಾನಾನ್ಯರು, ಹಿತ್ತಿಯರು, ಹಿವ್ವಿಯರು, ಪೆರಿಜೀಯರು, ಗಿರ್ಗಾಷಿಯರು, ಅಮೋರಿಯರು, ಯೆಬೂಸಿಯರು, ಇವರನ್ನೆಲ್ಲಾ ಆತನು ಸೋಲಿಸುತ್ತಾನೆ. ಆ ದೇಶದಿಂದ ಅವರನ್ನು ಬಲವಂತವಾಗಿ ಹೊರಗಟ್ಟುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು