ಯೆಹೋಶುವ 11:4 - ಪರಿಶುದ್ದ ಬೈಬಲ್4 ಹೀಗಾಗಿ ಈ ಎಲ್ಲ ಅರಸರ ಸೈನ್ಯಗಳು ಒಟ್ಟುಗೂಡಿದವು. ಈ ಮಹಾಸೈನ್ಯದಲ್ಲಿ ಅಸಂಖ್ಯಾತ ಯೋಧರಿದ್ದರು, ಕುದುರೆಗಳಿದ್ದವು ಮತ್ತು ರಥಗಳಿದ್ದವು. ಸಮುದ್ರತೀರದ ಮರಳು ಕಣಗಳಷ್ಟೇ ಅಸಂಖ್ಯಾತ ಯೋಧರು ಆ ಸೈನ್ಯದಲ್ಲಿರುವಂತೆ ಕಾಣುತ್ತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರು ಒಡನೆ ಬಹು ರಥಾಶ್ವಗಳಿಂದ ಕೂಡಿರುವ ತಮ್ಮ ಸರ್ವಸೈನ್ಯಗಳನ್ನು ತೆಗೆದುಕೊಂಡು ಹೊರಟರು. ಆ ಸೈನಿಕರು ಸಮುದ್ರ ತೀರದ ಮರಳಿನಂತೆ ಅಸಂಖ್ಯರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅವರು ಒಡನೆ ಬಹುರಥಾಶ್ವಗಳಿಂದ ಕೂಡಿದ್ದ ತಮ್ಮ ಸರ್ವಸೈನ್ಯಗಳನ್ನು ತೆಗೆದುಕೊಂಡು ಹೊರಟರು. ಸೈನಿಕರು ಸಮುದ್ರ ತೀರದ ಮರಳಿನಂತೆ ಅಸಂಖ್ಯರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವರು ಒಡನೆ ಬಹು ರಥಾಶ್ವಗಳಿಂದ ಕೂಡಿರುವ ತಮ್ಮ ಸರ್ವಸೈನ್ಯಗಳನ್ನು ತೆಗೆದುಕೊಂಡು ಹೊರಟರು. ಆ ಸೈನಿಕರು ಸಮುದ್ರತೀರದ ಮರಳಿನಂತೆ ಅಸಂಖ್ಯರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವರೆಲ್ಲರು ಸಮುದ್ರ ದಡದ ಮರಳಿನ ಹಾಗೆ ಅಸಂಖ್ಯರಾಗಿದ್ದರು. ಅವರು ಬಹು ರಥಗಳೂ ಕುದುರೆಗಳೂ ಸಮೂಹವಾಗಿ ತಮ್ಮ ಎಲ್ಲಾ ಸೈನ್ಯಗಳ ಸಂಗಡ ಹೊರಟರು. ಅಧ್ಯಾಯವನ್ನು ನೋಡಿ |