Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 11:6 - ಪರಿಶುದ್ದ ಬೈಬಲ್‌

6 ಆಗ ಯೆಹೋವನು ಯೆಹೋಶುವನಿಗೆ, “ಆ ಸೈನ್ಯಕ್ಕೆ ನೀನು ಹೆದರಬೇಡ; ನೀವು ಅವರನ್ನು ಸೋಲಿಸುವಂತೆ ನಾನು ಮಾಡುತ್ತೇನೆ. ನಾಳೆ ಇಷ್ಟು ಹೊತ್ತಿಗೆ ನೀವು ಅವರೆಲ್ಲರನ್ನು ಕೊಂದುಬಿಡುವಿರಿ. ನೀವು ಅವರ ಕುದುರೆಗಳ ಕಾಲುಗಳನ್ನು ಕತ್ತರಿಸುವಿರಿ; ಅವರ ರಥಗಳನ್ನು ಸುಟ್ಟುಹಾಕುವಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಯೆಹೋವನು “ಯೆಹೋಶುವನಿಗೆ ನೀನು ಅವರಿಗೆ ಹೆದರಬೇಡ. ನಾಳೆ ಇದೇ ವೇಳೆಗೆ ಅವರನ್ನು ಇಸ್ರಾಯೇಲ್ಯರಿಗೆ ಒಪ್ಪಿಸುವೆನು, ಇಸ್ರಾಯೇಲರು ಅವರನ್ನು ಸಂಹರಿಸಿ ಬಿಡುವರು. ನೀನು ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದು ರಥಗಳನ್ನು ಸುಟ್ಟುಬಿಡಬೇಕು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ಸರ್ವೇಶ್ವರಸ್ವಾಮಿ ಯೆಹೋಶುವನಿಗೆ, “ನೀನು ಅವರಿಗೆ ಹೆದರಬೇಡ; ನಾಳೆ ಇದೇ ವೇಳೆಗೆ ಅವರನ್ನು ಇಸ್ರಯೇಲರಿಗೆ ಒಪ್ಪಿಸುವೆನು. ಇಸ್ರಯೇಲರು ಅವರನ್ನು ಹತಿಸಿಬಿಡುವರು. ನೀನು ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕಡಿದು ರಥಗಳನ್ನು ಸುಟ್ಟುಬಿಡಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಗ ಯೆಹೋವನು ಯೆಹೋಶುವನಿಗೆ - ನೀನು ಅವರಿಗೆ ಹೆದರಬೇಡ; ನಾಳೆ ಇಷ್ಟೇ ಹೊತ್ತಿಗೆ ಅವರನ್ನು ಇಸ್ರಾಯೇಲ್ಯರಿಗೆ ಒಪ್ಪಿಸುವೆನು; ಅವರು ಅವರನ್ನು ಹತಿಸಿಬಿಡುವರು. ನೀನು ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯಿದು ರಥಗಳನ್ನು ಸುಟ್ಟುಬಿಡಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಯೆಹೋವ ದೇವರು ಯೆಹೋಶುವನಿಗೆ, “ಅವರಿಗೆ ಭಯಪಡಬೇಡ, ಏಕೆಂದರೆ ನಾಳೆ ಇಷ್ಟು ಹೊತ್ತಿಗೆ ಅವರೆಲ್ಲರೂ ಸಂಹಾರವಾಗುವಂತೆ ಇಸ್ರಾಯೇಲರಿಗೆ ಒಪ್ಪಿಸಿಕೊಡುವೆನು. ನೀನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯ್ದು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 11:6
24 ತಿಳಿವುಗಳ ಹೋಲಿಕೆ  

ಯೆಹೋವನು ಯೆಹೋಶುವನಿಗೆ, “ಆ ಸೈನ್ಯಗಳಿಗೆ ಹೆದರಬೇಡ, ನೀನು ಅವರನ್ನು ಸೋಲಿಸುವಂತೆ ಮಾಡುತ್ತೇನೆ. ಆ ಸೈನ್ಯದ ಯಾರೊಬ್ಬರೂ ನಿನ್ನನ್ನು ಸೋಲಿಸಲು ಸಾಧ್ಯವಿಲ್ಲ” ಎಂದು ಹೇಳಿದನು.


ಹದದೆಜೆರನಿಂದ ಒಂದು ಸಾವಿರ ರಥಗಳನ್ನೂ ಒಂದು ಸಾವಿರದ ಏಳುನೂರು ಅಶ್ವಪಡೆಗಳನ್ನೂ ದಾವೀದನು ತೆಗೆದುಕೊಂಡನು. ಅವನು ಇಪ್ಪತ್ತು ಸಾವಿರ ಕಾಲಾಳು ಸೈನಿಕರನ್ನು ಸಹ ಪಡೆದನು. ದಾವೀದನು ಒಂದು ನೂರು ರಥದ ಕುದುರೆಗಳನ್ನು ಇಟ್ಟುಕೊಂಡು ಉಳಿದವುಗಳನ್ನು ಕುಂಟುವಂತೆ ಮಾಡಿದನು.


ಸೌಲನು ಮತ್ತು ಅವನ ಸೈನಿಕರು ಯಾಬೇಷಿನ ಸಂದೇಶಕರಿಗೆ, “ಗಿಲ್ಯಾದಿನ ಯಾಬೇಷ್ ಜನರಿಗೆ ನಾಳೆ ನಡುಮಧ್ಯಾಹ್ನದೊಳಗೆ ನಿಮ್ಮನ್ನು ರಕ್ಷಿಸುತ್ತೇವೆಂದು ತಿಳಿಸಿ” ಎಂಬುದಾಗಿ ಹೇಳಿದರು. ಯಾಬೇಷಿನ ಜನರಿಗೆ ಸೌಲನ ಸಂದೇಶವನ್ನು ಸಂದೇಶಕರು ತಿಳಿಸಿದರು. ಯಾಬೇಷಿನ ಜನರು ಹರ್ಷಿತರಾದರು.


ಫೀನೆಹಾಸನು ಅಲ್ಲಿ ದೇವರ ಸೇವೆ ಮಾಡುವ ಯಾಜಕನಾಗಿದ್ದನು. ಫೀನೆಹಾಸನು ಎಲ್ಲಾಜಾರನ ಮಗನಾಗಿದ್ದನು. ಎಲ್ಲಾಜಾರನು ಆರೋನನ ಮಗನಾಗಿದ್ದನು.) ಇಸ್ರೇಲರು, “ಬೆನ್ಯಾಮೀನ್ಯರು ನಮ್ಮ ಬಂಧುಗಳು. ನಾವು ಅವರ ವಿರುದ್ಧ ಯುದ್ಧ ಮಾಡುವುದಕ್ಕೆ ಮತ್ತೆ ಹೋಗಬೇಕೇ? ಅಥವಾ ನಾವು ಯುದ್ಧ ಮಾಡುವುದನ್ನು ನಿಲ್ಲಿಸಿ ಬಿಡಬೇಕೇ?” ಎಂದು ಯೆಹೋವನನ್ನು ಕೇಳಿದರು. “ಹೋಗಿರಿ, ನಾಳೆ ಅವರನ್ನು ಸೋಲಿಸಲು ನಾನು ನಿಮಗೆ ಸಹಾಯ ಮಾಡುತ್ತೇನೆ” ಎಂದು ಯೆಹೋವನು ಉತ್ತರಕೊಟ್ಟನು.


ಯೆಹೋವನು ಹೇಳಿದಂತೆಯೇ ಯೆಹೋಶುವನು ಮಾಡಿದನು. ಯೆಹೋಶುವನು ಅವರ ಕುದುರೆಯ ಕಾಲುಗಳನ್ನು ಕತ್ತರಿಸಿದನು; ಅವರ ರಥಗಳನ್ನು ಸುಟ್ಟುಹಾಕಿದನು.


ಅಶ್ಶೂರವು ನಮ್ಮನ್ನು ರಕ್ಷಿಸಲಾರದು. ನಾವು ಕುದುರೆ ಮೇಲೆ ಸವಾರಿ ಮಾಡುವದಿಲ್ಲ. ನಮ್ಮ ಕೈಗಳು ತಯಾರಿಸಿದ ಬೊಂಬೆಗಳಿಗೆ ನಾವು ಇನ್ನು ‘ನಮ್ಮ ದೇವರು’ ಎಂದು ಹೇಳುವದಿಲ್ಲ. ಯಾಕೆಂದರೆ ಅನಾಥರಿಗೆ ಕರುಣೆಯನ್ನು ತೋರಿಸುವವನು ನೀನೇ.”


ಸಹಾಯಕ್ಕಾಗಿ ಈಜಿಪ್ಟಿಗೆ ಹೋಗುವ ಜನರನ್ನು ನೋಡಿರಿ. ಆ ಜನರು ಕುದುರೆಗಳಿಗಾಗಿ ಕೇಳುತ್ತಿದ್ದಾರೆ. ಕುದುರೆಗಳು ಅವರನ್ನು ರಕ್ಷಿಸುತ್ತವೆ ಎಂದು ಅವರು ಭಾವಿಸುತ್ತಾರೆ. ಈಜಿಪ್ಟಿನ ಬಹಳ ರಥಗಳು ಮತ್ತು ಬಹಳ ಕುದುರೆಗಳು ಅವರನ್ನು ಕಾಪಾಡುವವು ಎಂದು ಜನರು ತಿಳಿದುಕೊಳ್ಳುತ್ತಾರೆ. ಸೈನ್ಯವು ದೊಡ್ಡದಾಗಿರುವದರಿಂದ ಯಾವ ಅಪಾಯವೂ ಬಾರದು ಎಂದು ಅವರು ತಿಳಿದುಕೊಳ್ಳುತ್ತಾರೆ. ಜನರು ಇಸ್ರೇಲಿನ ಪರಿಶುದ್ಧನನ್ನು ನಂಬುವದಿಲ್ಲ. ಅವರು ಯೆಹೋವನ ಸಹಾಯವನ್ನು ಕೋರುವದಿಲ್ಲ.


ನೀವು, “ನಮಗೆ ಸಹಾಯ ಬೇಡ. ಓಡಿಹೋಗಲು ಕುದುರೆಗಳು ಬೇಕು” ಎಂದು ಹೇಳುವಿರಿ. ಅದು ಸರಿಯಾದ ಮಾತು. ನೀವು ಕುದುರೆಗಳ ಮೂಲಕವೇ ಓಡುವಿರಿ. ಆದರೆ ಶತ್ರುಗಳು ನಿಮ್ಮನ್ನು ಹಿಂದಟ್ಟುವರು. ಅವರು ನಿಮ್ಮ ಕುದುರೆಗಳಿಗಿಂತ ವೇಗಶಾಲಿಗಳಾಗಿದ್ದಾರೆ.


ಸಧರ್ಮಿಯು ಒಳ್ಳೆಯ ರೀತಿಯಲ್ಲಿ ಜೀವಿಸುತ್ತಾನೆ; ಅವನ ಮಕ್ಕಳಿಗೆ ಆಶೀರ್ವಾದವಾಗುವುದು.


ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. ಯಾಕೋಬನ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ.


ಇಡೀ ಪ್ರಪಂಚದಲ್ಲಿ ಆತನು ಯುದ್ಧವನ್ನು ನಿಲ್ಲಿಸುವನು; ಬಿಲ್ಲುಗಳನ್ನೂ ಗುರಾಣಿಗಳನ್ನೂ ಮುರಿದುಹಾಕುವನು; ಗುರಾಣಿಗಳನ್ನು ಬೆಂಕಿಯಿಂದ ಸುಟ್ಟುಹಾಕುವನು.


ನಾಳೆ ಅವರ ವಿರುದ್ಧವಾಗಿ ಹೊರಟು ಅವರೊಂದಿಗೆ ಹೋರಾಡಿ. ಅವರು ಹಜ್ಜೀಜ್ ಕಣಿವೆಯಿಂದ ಬರುವರು. ನೀವು ಅವರನ್ನು ಯೆರೂವೇಲ್ ಅರಣ್ಯದ ಮುಂದಿರುವ ಕಣಿವೆಯ ತುದಿಯಲ್ಲಿ ಅವರನ್ನು ಸಂಧಿಸುವಿರಿ.


“ನಿಮ್ಮನ್ನು ನೀವು ಶುದ್ಧೀಕರಿಸಿಕೊಳ್ಳಿರಿ. ನಾಳೆ ನಿಮ್ಮ ದೇವರಾದ ಯೆಹೋವನು ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ಮಾಡುತ್ತಾನೆ” ಎಂದು ಯೆಹೋಶುವನು ಜನರಿಗೆ ತಿಳಿಸಿದನು.


ಆ ದೇಶದಲ್ಲಿ ನೀವು ಯೆಹೋವನ ಸಹಾಯದಿಂದ ಸೋಲಿಸುವ ಜನರನ್ನೆಲ್ಲಾ ಕೊಂದುಬಿಡಬೇಕು. ಅವರಿಗೆ ಕನಿಕರ ತೋರಬಾರದು. ಅವರ ದೇವರುಗಳನ್ನು ಪೂಜಿಸಕೂಡದು! ಯಾಕೆಂದರೆ ಅವು ನಿಮಗೆ ಉರುಲಾಗಿ ನಿಮ್ಮ ಜೀವಿತವನ್ನು ಹಾಳುಮಾಡುತ್ತವೆ.


ಈ ಎಲ್ಲ ಅರಸರು ಮೇರೋಮ್ ಸಣ್ಣ ನದಿಯ ಹತ್ತಿರ ಒಟ್ಟುಗೂಡಿ ತಮ್ಮ ಸೈನ್ಯಗಳನ್ನು ಒಂದೇ ಪಾಳೆಯದಲ್ಲಿ ಸೇರಿಸಿದರು. ಅವರು ಇಸ್ರೇಲಿನ ವಿರುದ್ಧ ಯುದ್ಧ ಮಾಡಲು ಯೋಜನೆಗಳನ್ನು ಮಾಡಿದರು.


ಯೆಹೋಶುವನು ಮತ್ತು ಅವನ ಎಲ್ಲ ಸೈನಿಕರು ಶತ್ರುಗಳನ್ನು ಬೆರಗುಗೊಳಿಸಿದರು. ಮೇರೋಮ್ ನದಿಯ ಬಳಿಯಲ್ಲಿ ಅವರು ಶತ್ರುಗಳ ಮೇಲೆ ಧಾಳಿಮಾಡಿದರು.


ಅಂದು ರಾತ್ರಿ ಯೆಹೋವನು ಗಿದ್ಯೋನನಿಗೆ, “ಏಳು, ನೀನು ಮಿದ್ಯಾನ್ಯರ ಸೈನ್ಯವನ್ನು ಸೋಲಿಸುವಂತೆ ಮಾಡುತ್ತೇನೆ. ಅವರ ಪಾಳೆಯಕ್ಕೆ ಹೋಗು.


“ಆ ಸಮಯದಲ್ಲಿ ಇಸ್ರೇಲಿನ ನಗರಗಳಲ್ಲಿ ವಾಸಿಸುವ ಜನರು ಹೊರಗೆ ಬಯಲಿಗೆ ಹೋಗುವರು. ಅಲ್ಲಿ ಅವರು ವೈರಿಗಳ ಆಯುಧಗಳನ್ನು ಕೂಡಿಸಿ ಸುಟ್ಟುಬಿಡುವರು. ಎಲ್ಲಾ ಬಿಲ್ಲುಬಾಣಗಳನ್ನು, ಗುರಾಣಿ, ಬರ್ಜಿ, ಗದೆಗಳನ್ನೆಲ್ಲಾ ಬೆಂಕಿಯಲ್ಲಿ ಹಾಕುವರು. ಏಳು ವರ್ಷಗಳ ತನಕ ಈ ಆಯುಧಗಳನ್ನು ಸೌದೆಯಾಗಿ ಉಪಯೋಗಿಸುವರು.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನಿನೆವೆಯೇ, ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ರಥಗಳನ್ನು ಸುಟ್ಟುಹಾಕುತ್ತೇನೆ. ನಿನ್ನ ಎಳೆ ಸಿಂಹಗಳನ್ನು ರಣರಂಗದಲ್ಲಿ ಸಾಯಿಸುತ್ತೇನೆ. ಈ ಭೂಮಿಯ ಮೇಲೆ ಇನ್ನು ಯಾರನ್ನೂ ಭೇಟಿ ಮಾಡದಿರುವೆ. ನಿನ್ನ ಸಂದೇಶವಾಹಕರಿಂದ ಕೆಟ್ಟ ಸಮಾಚಾರವನ್ನು ಜನರು ಇನ್ನು ಎಂದಿಗೂ ಕೇಳರು.”


ಎಲೀಷನು, “ನೀನು ಹೆದರದಿರು! ನಮಗಾಗಿ ಯುದ್ಧಮಾಡುವ ಸೇನೆಯು ಅರಾಮ್ಯರಿಗಾಗಿ ಯುದ್ಧಮಾಡುವ ಸೇನೆಗಿಂತ ಬಹಳ ಹೆಚ್ಚಿನದಾಗಿದೆ!” ಎಂದು ಹೇಳಿದನು.


ದೇವರು ಹೀಗೆನ್ನುವನು: “ಹೋರಾಡುವುದನ್ನು ನಿಲ್ಲಿಸಿ, ನಾನೇ ದೇವರೆಂಬುದನ್ನು ಕಲಿತುಕೊಳ್ಳಿ! ನಾನು ಜನಾಂಗಗಳನ್ನು ಸೋಲಿಸುವೆನು! ಇಡೀ ಲೋಕವನ್ನು ಹತೋಟಿಗೆ ತೆಗೆದುಕೊಳ್ಳುವೆನು!”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು