Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 11:7 - ಪರಿಶುದ್ದ ಬೈಬಲ್‌

7 ಯೆಹೋಶುವನು ಮತ್ತು ಅವನ ಎಲ್ಲ ಸೈನಿಕರು ಶತ್ರುಗಳನ್ನು ಬೆರಗುಗೊಳಿಸಿದರು. ಮೇರೋಮ್ ನದಿಯ ಬಳಿಯಲ್ಲಿ ಅವರು ಶತ್ರುಗಳ ಮೇಲೆ ಧಾಳಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋಶುವನು ಮಿಚ್ಪೆಯ ತನ್ನ ಎಲ್ಲಾ ಭಟರೊಡನೆ ಹೊರಟು ಹೋಗಿ, ಮೇರೋಮ್ ಜಲಾಶಯದ ಬಳಿಯಲ್ಲಿದ್ದ ಶತ್ರುಗಳ ಮೇಲೆ ಪಕ್ಕನೆ ಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯೆಹೋಶುವನು ತನ್ನ ಎಲ್ಲ ಯೋಧರೊಡನೆ ಹೊರಟು ಮೇರೋಮ್ ಜಲಾಶಯದ ಬಳಿಯಲ್ಲಿದ್ದ ಶತ್ರುಗಳ ಮೇಲೆ ಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋಶುವನು ತನ್ನ ಎಲ್ಲಾ ಭಟರೊಡನೆ ಹೊರಟುಹೋಗಿ ಮೇರೋಮ್ ಜಲಾಶಯದ ಬಳಿಯಲ್ಲಿದ್ದ ಶತ್ರುಗಳ ಮೇಲೆ ಫಕ್ಕನೆ ಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಯೆಹೋಶುವನೂ ಅವನ ಸಂಗಡ ಇದ್ದ ಸೈನಿಕರೆಲ್ಲರೂ ಬಂದು ಫಕ್ಕನೆ ಮೇರೋಮ ಜಲಾಶಯದ ಬಳಿಯಲ್ಲಿ ಅವರ ಮೇಲೆ ದಾಳಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 11:7
4 ತಿಳಿವುಗಳ ಹೋಲಿಕೆ  

ಯೆಹೋಶುವನು ಮತ್ತು ಅವನ ಸೈನ್ಯದವರು ಇಡೀರಾತ್ರಿ ಗಿಬ್ಯೋನಿನ ಕಡೆಗೆ ಪ್ರಯಾಣ ಮಾಡಿದರು. ಯೆಹೋಶುವನು ಬರುತ್ತಿದ್ದಾನೆಂಬುದು ವೈರಿಗಳಿಗೆ ಗೊತ್ತಿರಲಿಲ್ಲ. ಯೆಹೋಶುವನು ಅವರ ಮೇಲೆ ಧಾಳಿ ಮಾಡಿದಾಗ ಅವರಿಗೆ ಅತ್ಯಾಶ್ಚರ್ಯವಾಯಿತು.


ಆಗ ಯೆಹೋವನು ಯೆಹೋಶುವನಿಗೆ, “ಆ ಸೈನ್ಯಕ್ಕೆ ನೀನು ಹೆದರಬೇಡ; ನೀವು ಅವರನ್ನು ಸೋಲಿಸುವಂತೆ ನಾನು ಮಾಡುತ್ತೇನೆ. ನಾಳೆ ಇಷ್ಟು ಹೊತ್ತಿಗೆ ನೀವು ಅವರೆಲ್ಲರನ್ನು ಕೊಂದುಬಿಡುವಿರಿ. ನೀವು ಅವರ ಕುದುರೆಗಳ ಕಾಲುಗಳನ್ನು ಕತ್ತರಿಸುವಿರಿ; ಅವರ ರಥಗಳನ್ನು ಸುಟ್ಟುಹಾಕುವಿರಿ” ಎಂದನು.


ಇಸ್ರೇಲರು ಶತ್ರುಗಳನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಇಸ್ರೇಲರ ಸೈನ್ಯವು ಶತ್ರುಗಳನ್ನು ಸೋಲಿಸಿ ಅವರನ್ನು ದೊಡ್ಡ ಚೀದೋನ್ ಮತ್ತು ಮಿಸ್ರೆಪೋತ್ಮಯಿಮ್‌ವರೆಗೂ ಪೂರ್ವದಿಕ್ಕಿನಲ್ಲಿ ಮಿಚ್ಛೆಯ ಕಣಿವೆಯವರೆಗೂ ಬೆನ್ನಟ್ಟಿತು. ಶತ್ರುಗಳಲ್ಲಿ ಯಾರೂ ಉಳಿದುಕೊಳ್ಳದಂತೆ ಇಸ್ರೇಲರು ಯುದ್ಧಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು