Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 11:8 - ಪರಿಶುದ್ದ ಬೈಬಲ್‌

8 ಇಸ್ರೇಲರು ಶತ್ರುಗಳನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಇಸ್ರೇಲರ ಸೈನ್ಯವು ಶತ್ರುಗಳನ್ನು ಸೋಲಿಸಿ ಅವರನ್ನು ದೊಡ್ಡ ಚೀದೋನ್ ಮತ್ತು ಮಿಸ್ರೆಪೋತ್ಮಯಿಮ್‌ವರೆಗೂ ಪೂರ್ವದಿಕ್ಕಿನಲ್ಲಿ ಮಿಚ್ಛೆಯ ಕಣಿವೆಯವರೆಗೂ ಬೆನ್ನಟ್ಟಿತು. ಶತ್ರುಗಳಲ್ಲಿ ಯಾರೂ ಉಳಿದುಕೊಳ್ಳದಂತೆ ಇಸ್ರೇಲರು ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ಅವರನ್ನು ಇಸ್ರಾಯೇಲರ ಕೈಗೆ ಒಪ್ಪಿಸಿದನು. ಇವರು ಅವರನ್ನು ದೊಡ್ಡ ಚೀದೋನ್ ಹಾಗೂ ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಪೂರ್ವದಿಕ್ಕಿನಲ್ಲಿರುವ ಮಿಚ್ಪೆಯ ಬೈಲಿನವರೆಗೂ ಅವರನ್ನು ಹಿಂದಟ್ಟಿ ಹೊಡೆದರು. ಒಬ್ಬನಾದರೂ ಉಳಿಯದಂತೆ ಎಲ್ಲರನ್ನೂ ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸರ್ವೇಶ್ವರ ಅವರನ್ನು ಇಸ್ರಯೇಲರ ಕೈವಶ ಮಾಡಿದರು. ಇವರು ಅವರನ್ನು ದೊಡ್ಡ ಚೀದೋನ್ ಹಾಗು ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಮತ್ತು ಪೂರ್ವ ದಿಕ್ಕಿನಲ್ಲಿರುವ ಮಿಚ್ಫೆಯ ಬಯಲಿನವರೆಗೂ ಹಿಂದಟ್ಟಿ, ಒಬ್ಬನೂ ಉಳಿಯದಂತೆ ಸದೆಬಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿದನು. ಇವರು ಅವರನ್ನು ದೊಡ್ಡ ಚೀದೋನ್, ವಿುಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಪೂರ್ವದಿಕ್ಕಿನಲ್ಲಿರುವ ವಿುಚ್ಪೆಯ ಬೈಲಿನವರೆಗೂ ಹಿಂದಟ್ಟಿ ಹೊಡೆದರು. ಒಬ್ಬನಾದರೂ ಉಳಿಯದಂತೆ ಎಲ್ಲರನ್ನೂ ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರು ಅವರನ್ನು ಇಸ್ರಾಯೇಲರ ಕೈಯಲ್ಲಿ ಒಪ್ಪಿಸಿಕೊಟ್ಟರು. ಇವರು ಅವರನ್ನು ಹೊಡೆದು ದೊಡ್ಡ ಸೀದೋನ್, ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಪೂರ್ವದಿಕ್ಕಿನಲ್ಲಿರುವ ಮಿಚ್ಪೆಯ ಕಣಿವೆಯವರೆಗೂ ಹಿಂದಟ್ಟಿ, ಅವರಲ್ಲಿ ಒಬ್ಬನನ್ನಾದರೂ ಉಳಿಸದೆ ಎಲ್ಲರನ್ನು ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 11:8
13 ತಿಳಿವುಗಳ ಹೋಲಿಕೆ  

“ಲೆಬನೋನಿನಿಂದ ಮಿಸ್ರೆಪೋತ್ಮಯಿಮಿನವರೆಗಿರುವ ಪರ್ವತ ಪ್ರದೇಶದಲ್ಲಿ ಚೀದೋನ್ಯರು ವಾಸವಾಗಿದ್ದಾರೆ. ಆದರೆ ಇಸ್ರೇಲರಿಗಾಗಿ ನಾನು ಅವರನ್ನೆಲ್ಲಾ ಹೊರ ತಳ್ಳುತ್ತೇನೆ. ಇಸ್ರೇಲರಿಗೆ ದೇಶವನ್ನು ಹಂಚುವಾಗ ಈ ಪ್ರದೇಶವನ್ನು ಸೇರಿಸಿ


ಅಲ್ಲಿಂದ ಆ ಮೇರೆಯು ಎಬ್ರೋನ್, ರೆಹೋಬ್, ಹಮ್ಮೋನ್ ಮತ್ತು ಕಾನಾ ಇವುಗಳ ಮೂಲಕ ಚೀದೋನ್ ಎಂಬ ಮಹಾನಗರಕ್ಕೆ ತಲುಪಿತ್ತು.


ಈ ಸಂದೇಶವು ಹಮಾತನಿಗೆ ವಿರುದ್ಧವಾದದ್ದು. ಅವನ ಮೊರೆಯು ಹದ್ರಾಕ್ ದೇಶಕ್ಕೆ ತಾಗಿ ಇದೆ. ಈ ಸಂದೇಶವು ತೂರ್ ಚೀದೋನಿನ ಜನರ ವಿರುದ್ಧವಾಗಿಯೂ ಇದೆ. ಆ ಜನರು ಜ್ಞಾನಿಗಳೂ ಕುಶಲಕರ್ಮಿಗಳೂ ಆಗಿರಬಹುದು.


ಯೆಹೋವನು ಅವರ ಪೂರ್ವಿಕರಿಗೆ ಪ್ರಮಾಣ ಮಾಡಿದಂತೆ ಅವರ ಪ್ರದೇಶದಲ್ಲೆಲ್ಲಾ ಶಾಂತಿ ನೆಲೆಸುವಂತೆ ಮಾಡಿದನು. ಅವರ ಯಾವ ಶತ್ರುಗಳೂ ಅವರನ್ನು ಸೋಲಿಸಲಿಲ್ಲ. ಇಸ್ರೇಲರು ತಮ್ಮ ಎಲ್ಲ ಶತ್ರುಗಳನ್ನು ಸೋಲಿಸುವಂತೆ ಯೆಹೋವನು ಮಾಡಿದನು.


ಯಾಬೀನನು ಪೂರ್ವ ಮತ್ತು ಪಶ್ಚಿಮದಲ್ಲಿದ್ದ ಕಾನಾನಿನ ಅರಸರಿಗೂ ಅಮೋರಿಯರಿಗೂ ಹಿತ್ತಿಯರಿಗೂ ಪೆರಿಜ್ಜೀಯರಿಗೂ ಬೆಟ್ಟಪ್ರದೇಶದ ಯೆಬೂಸಿಯರಿಗೂ ಹೆರ್ಮೋನ್ ಪರ್ವತದ ಬುಡದಲ್ಲಿ ಮಿಚ್ಛಾದ ಹತ್ತಿರ ವಾಸವಾಗಿದ್ದ ಹಿವ್ವಿಯರಿಗೂ ಸಂದೇಶವನ್ನು ಕಳುಹಿಸಿದನು.


“ಜೆಬುಲೂನನು ಸಮುದ್ರದ ಕರಾವಳಿಯಲ್ಲಿ ವಾಸಿಸುವನು; ಸಮುದ್ರ ತೀರವು ಅವನ ಹಡಗುಗಳಿಗೆ ಸುರಕ್ಷಿತವಾದ ಸ್ಥಳವಾಗಿದೆ. ಅವನ ನಾಡು ಚೀದೋನ್ ಪಟ್ಟಣದವರೆಗೂ ವಿಸ್ತರಿಸುವುದು.”


ಕಾನಾನನು ಸೀದೋನನ ತಂದೆ. ಕಾನಾನನ ಮೊದಲನೆಯ ಮಗನೇ ಸೀದೋನ್. ಇವನು ಹಿತ್ತಿಯರ ಮೂಲಪಿತೃ.


ಯೆಹೋಶುವನು ಮತ್ತು ಅವನ ಎಲ್ಲ ಸೈನಿಕರು ಶತ್ರುಗಳನ್ನು ಬೆರಗುಗೊಳಿಸಿದರು. ಮೇರೋಮ್ ನದಿಯ ಬಳಿಯಲ್ಲಿ ಅವರು ಶತ್ರುಗಳ ಮೇಲೆ ಧಾಳಿಮಾಡಿದರು.


ಚೀದೋನೇ, ನೀನು ತುಂಬಾ ದುಃಖದಿಂದಿರಬೇಕು. ಯಾಕೆಂದರೆ ಸಮುದ್ರವೂ ಸಮುದ್ರದ ಕೋಟೆಯೂ ಹೇಳುವುದೇನೆಂದರೆ, “ನನಗೆ ಮಕ್ಕಳಿಲ್ಲ, ನಾನು ಪ್ರಸವವೇದನೆ ಅನುಭವಿಸಲಿಲ್ಲ. ನಾನು ಮಕ್ಕಳನ್ನು ಹೆರಲಿಲ್ಲ. ನಾನು ಗಂಡುಮಕ್ಕಳನ್ನಾಗಲಿ ಹೆಣ್ಣುಮಕ್ಕಳನ್ನಾಗಲಿ ಬೆಳೆಸಲಿಲ್ಲ.”


ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳನ್ನು ನಿಮಗೆ ಅಧೀನಪಡಿಸುವನು. ನೀವು ಅವರನ್ನು ಸೋಲಿಸಿಬಿಡುವಿರಿ. ನೀವು ಅವರನ್ನು ಸಂಪೂರ್ಣವಾಗಿ ನಾಶಮಾಡಬೇಕು. ಅವರೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳಬೇಡಿ ಮತ್ತು ಅವರಿಗೆ ಕರುಣೆಯನ್ನು ತೋರಬೇಡಿ.


ಆದರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ನದಿಯನ್ನು ದಾಟುತ್ತಾನೆಂಬುದು ನಿಮಗೆ ನಿಶ್ಚಯವಾಗಿ ತಿಳಿದಿರಲಿ. ಆತನು ದಹಿಸುವ ಬೆಂಕಿಯಂತಿದ್ದಾನೆ. ಆತನು ಆ ಜನಾಂಗಗಳನ್ನು ಬೇಗನೆ ನಾಶಪಡಿಸುವನು; ನಿಮ್ಮ ಎದುರಿನಲ್ಲಿ ಅವರು ಬಿದ್ದುಹೋಗುವಂತೆ ಮಾಡುವನು. ಇದು ನೆರವೇರುವುದಾಗಿ ಯೆಹೋವನೇ ನಿಮಗೆ ವಾಗ್ದಾನ ಮಾಡಿದ್ದಾನೆ.


ಯೆಹೋಶುವನು ಮತ್ತು ಇಸ್ರೇಲಿನ ಜನರು ವೈರಿಗಳನ್ನು ಕೊಂದರು. ಆದರೆ ಕೆಲವು ಶತ್ರುಗಳು ಎತ್ತರವಾದ ಗೋಡೆಗಳುಳ್ಳ ತಮ್ಮ ಪಟ್ಟಣಗಳಿಗೆ ಹೋಗಿ ಅಡಗಿಕೊಳ್ಳಲು ಸಾಧ್ಯವಾಯಿತು. ಆ ಜನರು ಕೊಲ್ಲಲ್ಪಡಲಿಲ್ಲ.


ಆಗ ಅವರು ಗಿಲ್ಯಾದಿಗೆ ಮತ್ತು ತಖ್ತೀಮ್ ಹೊಜೀ ಪ್ರದೇಶಕ್ಕೂ ಯಾನಿನದಾನಿಗೂ, ಚೀದೋನಿನ ಸುತ್ತಲೂ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು