Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 12:4 - ಪರಿಶುದ್ದ ಬೈಬಲ್‌

4 ಅವರು ಬಾಷಾನಿನ ಅರಸನಾದ ಓಗನನ್ನು ಸಹ ಸೋಲಿಸಿದರು. ಓಗನು ರೆಫಾಯರ ವಂಶಸ್ಥನಾಗಿದ್ದನು. ಅಷ್ಟರೋತ್ ಮತ್ತು ಎದ್ರೈ ಎಂಬ ನಗರಗಳಲ್ಲಿ ವಾಸವಾಗಿದ್ದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅಷ್ಟರೋತ್ ಹಾಗೂ ಎದ್ರೈ ಎಂಬ ಊರುಗಳಲ್ಲಿ ವಾಸವಾಗಿದ್ದ ರೆಫಾಯರ ವಂಶಸ್ಥರು ಬಾಷಾನಿನ ಅರಸನೂ ಆದ ಓಗನು ಸಂಹರಿಸಲ್ಪಟ್ಟವರಲ್ಲಿ ಎರಡನೆಯವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅಷ್ಟರೋತ್ ಹಾಗೂ ಎದ್ರೈ ಎಂಬ ಊರುಗಳಲ್ಲಿ ವಾಸವಾಗಿದ್ದ ರೆಫಾಯರ ವಂಶಸ್ಥನೂ ಬಾಷಾನಿನ ಅರಸನೂ ಆದ ಓಗನು ವಧಿತರಾದವರಲ್ಲಿ ಎರಡನೆಯವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅಷ್ಟರೋತ್, ಎದ್ರೈ ಎಂಬ ಊರುಗಳಲ್ಲಿ ವಾಸವಾಗಿದ್ದ ರೆಫಾಯರ ವಂಶಸ್ಥನೂ ಬಾಷಾನಿನ ಅರಸನೂ ಆದ ಓಗನು [ಎರಡನೆಯವನು].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅಷ್ಟಾರೋತ್ ಮತ್ತು ಎದ್ರೈ ಎಂಬ ಊರುಗಳಲ್ಲಿ ವಾಸಮಾಡಿದ್ದ ರೆಫಾಯರ ವಂಶಸ್ಥನೂ ಬಾಷಾನಿನ ಅರಸನೂ ಆದ ಓಗನು ಎರಡನೆಯವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 12:4
6 ತಿಳಿವುಗಳ ಹೋಲಿಕೆ  

ಸೀಹೋನನನ್ನು ಮತ್ತು ಓಗನನ್ನು ದೇವರಾದ ಯೆಹೋವನು ಸೋಲಿಸಿದ ಬಳಿಕ ನಡೆದ ಸಂಗತಿಯಿದು. (ಸೀಹೋನನು ಅಮೋರಿಯರ ರಾಜನಾಗಿದ್ದನು. ಅವನು ಹೆಷ್ಬೋನಿನಲ್ಲಿ ವಾಸಿಸುತ್ತಿದ್ದನು. ಓಗನು ಬಾಷಾನಿನ ಅರಸನು. ಇವನು ಅಷ್ಟಾರೋತ್ ಮತ್ತು ಎದ್ರೈ ಎಂಬಲ್ಲಿ ವಾಸವಾಗಿದ್ದನು.)


ಓಗ್ ರಾಜನ ಎಲ್ಲ ಪ್ರಾಂತ್ಯಗಳು ಆ ಪ್ರದೇಶದಲ್ಲಿ ಸೇರಿತ್ತು. ಓಗ್ ರಾಜನು ಬಾಷಾನಿನಲ್ಲಿ ಆಳುತ್ತಿದ್ದನು. ಮೊದಲು ಅವನು ಅಷ್ಟರೋತ್ ಮತ್ತು ಎದ್ರೈಗಳಲ್ಲಿದ್ದುಕೊಂಡು ಆಳುತ್ತಿದ್ದನು. ಓಗನು ರೆಫಾಯರ ವಂಶಸ್ಥನಾಗಿದ್ದನು. ಮೊದಲು ಮೋಶೆಯು ಆ ಜನರನ್ನು ಸೋಲಿಸಿ ಅವರ ಪ್ರದೇಶವನ್ನು ತೆಗೆದುಕೊಂಡಿದ್ದನು.


ಗಿಲ್ಯಾದಿನ ಅರ್ಧಭಾಗವು, ಅಷ್ಟರೋತ್, ಎದ್ರೈ ಎಂಬ ಪಟ್ಟಣಗಳೂ ಇದರಲ್ಲಿ ಸೇರಿವೆ. (ಗಿಲ್ಯಾದ್, ಅಷ್ಟರೋತ್ ಮತ್ತು ಎದ್ರೈ ಎಂಬ ಪಟ್ಟಣಗಳಲ್ಲಿ ರಾಜನಾದ ಓಗ್ ವಾಸವಾಗಿದ್ದನು.) ಈ ಎಲ್ಲ ಪ್ರದೇಶವನ್ನು ಮನಸ್ಸೆಯ ಮಗನಾದ ಮಾಕೀರನ ಅರ್ಧಗೋತ್ರದವರಿಗೆ ಕೊಡಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು