Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 12:5 - ಪರಿಶುದ್ದ ಬೈಬಲ್‌

5 ಓಗನು ಹೆರ್ಮೋನ್ ಬೆಟ್ಟದ ಮೇಲಿನ ಸೀಮೆ, ಸಲ್ಕಾ ಮತ್ತು ಬಾಷಾನಿನ ಎಲ್ಲ ಪ್ರದೇಶ, ಇವುಗಳನ್ನು ಆಳುತ್ತಿದ್ದನು. ಗೆಷೂರ್ಯರು ಮತ್ತು ಮಾಕತೀ ಜನರು ವಾಸಮಾಡುವ ಪ್ರದೇಶವು ಇವನ ರಾಜ್ಯದ ಮೇರೆಯಾಗಿತ್ತು. ಹೆಷ್ಬೋನಿನ ಅರಸನಾದ ಸೀಹೋನನ ರಾಜ್ಯದ ಮೇರೆಯವರೆಗೆ ಹಬ್ಬಿದ ಗಿಲ್ಯಾದಿನ ಅರ್ಧಪ್ರಾಂತ್ಯವನ್ನು ಕೂಡ ಓಗನು ಆಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇವನ ರಾಜ್ಯ ಹೆರ್ಮೋನ್ ಬೆಟ್ಟದ ಮೇಲಿನ ಸೀಮೆ, ಸಲ್ಕಾ ಪಟ್ಟಣವು, ಗೆಷೂರ್ಯರ ಮತ್ತು ಮಾಕತೀಯರ ಮೇರೆವರೆಗೆ ಇದ್ದ ಬಾಷಾನಿನ ಸೀಮೆ, ಹೆಷ್ಬೋನಿನ ಅರಸನಾದ ಸೀಹೋನನ ಮೇರೆಯವರೆಗೆ ಇದ್ದ ಗಿಲ್ಯಾದಿನ ಅರ್ಧ ಪ್ರಾಂತ್ಯದ ವರೆಗಿದ್ದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇವನ ರಾಜ್ಯ, ಹೆರ್ಮೋನ್ ಮಲೆನಾಡು, ಸಲ್ಕಾನಗರ, ಗೆಷೂರ್ಯರ ಮತ್ತು ಮಾಕತೀಯರ ಮೇರೆಯವರೆಗಿದ್ದ ಬಾಷಾನ್ ನಾಡು, ಹೆಷ್ಬೋನಿನ ಅರಸನದ ಸೀಹೋನನ ಮೇರೆಯವರೆಗಿದ್ದ ಗಿಲ್ಯಾದಿನ ಅರ್ಧಪ್ರಾಂತ್ಯ ಇವುಗಳಿಂದ ಕೂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹೆರ್ಮೋನ್ ಬೆಟ್ಟದ ಮೇಲಿನ ಸೀಮೆ, ಸಲ್ಕಾ ಪಟ್ಟಣವು, ಗೆಷೂರ್ಯರ ಮತ್ತು ಮಾಕತೀಯರ ಮೇರೆಯವರೆಗಿದ್ದ ಬಾಷಾನ್ ಸೀಮೆ, ಹೆಷ್ಬೋನಿನ ಅರಸನಾದ ಸೀಹೋನನ ಮೇರೆಯವರೆಗಿದ್ದ ಗಿಲ್ಯಾದಿನ ಅರ್ಧಪ್ರಾಂತವು ಇವೇ ಇವನ ರಾಜ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವನು ಹೆರ್ಮೋನ್ ಬೆಟ್ಟವನ್ನೂ ಸಲ್ಕಾ ನಗರವನ್ನೂ ಗೆಷೂರಿಯರ ಮತ್ತು ಮಾಕಾತೀಯರ ಮೇರೆಯವರೆಗೂ ಇದ್ದ ಇಡೀ ಬಾಷಾನ್ ನಾಡನ್ನು ಆಳುತ್ತಿದ್ದನು. ಹೆಷ್ಬೋನಿನ ಅರಸನಾದ ಸೀಹೋನನ ಮೇರೆಯವರೆಗಿದ್ದ ಗಿಲ್ಯಾದಿನ ಅರ್ಧ ಪ್ರಾಂತ್ಯದವರೆಗೂ ಅವನು ಆಳಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 12:5
14 ತಿಳಿವುಗಳ ಹೋಲಿಕೆ  

ಮನಸ್ಸೆ ಕುಲದ ಯಾಯೀರ ಎಂಬಾತನು ಅರ್ಗೋಬ್ ಪ್ರದೇಶಗಳನ್ನು ವಶಪಡಿಸಿಕೊಂಡನು. ಆ ಪ್ರದೇಶ ಗೆಷೂರ್ಯರ ಮತ್ತು ಮಾಕಾತ್ಯರ ದೇಶದ ಮೇರೆಯ ತನಕ ಹಬ್ಬಿತ್ತು. ಆದ್ದರಿಂದ ಆ ಪ್ರದೇಶಕ್ಕೆ ಯಾಯೀರ್ ಎಂಬ ಹೆಸರು ಬಂತು. ಇಂದಿಗೂ ಜನರು ಆ ಊರುಗಳಿಗೆ, “ಯಾಯೀರನ ಬಾಷಾನ್ ಊರುಗಳು” ಎಂದು ಕರೆಯುತ್ತಾರೆ.)


ದಾವೀದನು ಮತ್ತು ಅವನ ಜನರು ಅಮಾಲೇಕ್ಯರ ಮೇಲೆಯೂ ಗೆಷೂರ್ಯರ ಮೇಲೆಯೂ ಗಿಜ್ರೀಯರ ಮೇಲೆಯೂ ಯುದ್ಧಮಾಡಲು ಹೋದರು. ದಾವೀದನ ಜನರು ಅವರನ್ನು ಸೋಲಿಸಿ ಅವರ ಸಂಪತ್ತನ್ನು ವಶಪಡಿಸಿಕೊಂಡರು. ಈಜಿಪ್ಟಿನವರೆಗೆ ವಿಸ್ತರಿಸಿರುವ ಶೂರಿನ ಸಮೀಪದ ತೇಲಾಮಿನವರೆಗೂ ಆ ಜನರು ವಾಸಿಸುತ್ತಿದ್ದರು.


ಗಿಲ್ಯಾದ್ ಪಟ್ಟಣವೂ ಸಹ ಈ ಪ್ರದೇಶಕ್ಕೆ ಒಳಪಟ್ಟಿತ್ತು. ಗೆಷೂರ್ಯರು ಮತ್ತು ಮಾಕತೀಯರು ವಾಸಮಾಡುತ್ತಿದ್ದ ಪ್ರದೇಶವು ಸಹ ಈ ಪ್ರದೇಶಕ್ಕೆ ಸೇರಿತ್ತು. ಇಡೀ ಹೆರ್ಮೋನ್ ಬೆಟ್ಟಪ್ರದೇಶ ಮತ್ತು ಸಲ್ಕಾ ಪಟ್ಟಣದವರೆಗೆ ವಿಸ್ತರಿಸಿಕೊಂಡಿದ್ದ ಬಾಷಾನಿನ ಎಲ್ಲಾ ಪ್ರಾಂತ್ಯಗಳು ಆ ಪ್ರದೇಶಕ್ಕೆ ಸೇರಿಕೊಂಡಿದ್ದವು.


ಬಾಬಿಲೋನ್ ರಾಜನು ಗೆದಲ್ಯನನ್ನು ರಾಜ್ಯಪಾಲನನ್ನಾಗಿ ನೇಮಿಸಿರುವುದನ್ನು ಸೇನಾಧಿಪತಿಗಳು ಮತ್ತು ಅವನ ಜನರು ಕೇಳಿ ಮಿಚ್ಛದಲ್ಲಿದ್ದ ಗೆದಲ್ಯನ ಬಳಿಗೆ ಬಂದರು. ಈ ಸೇನಾಧಿಪತಿಗಳು ಯಾರೆಂದರೆ: ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಗನಾದ ಯೋಹಾನಾನ್, ನೆಟೋಫದವನೂ ತನ್ಹುಮೆತನ ಮಗನೂ ಆದ ಸೆರಾಯ, ಮಾಕಾತ್ಯರಲ್ಲಿ ಒಬ್ಬನ ಮಗನಾದ ಯಾಜನ್ಯ.


ಮಾಕಾದ ಅಹಸ್ಬೈನ ಮಗನಾದ ಎಲೀಫೆಲೆಟ್, ಗಿಲೋವಿನ ಅಹೀತೋಫೆಲನ ಮಗ ಎಲೀಯಾಮ್,


ನಾನು ಅರಾಮಿನ ಗೆಷೂರಿನಲ್ಲಿ ನೆಲೆಸಿದ್ದಾಗ, ‘ಯೆಹೋವನು ನನ್ನನ್ನು ಜೆರುಸಲೇಮಿಗೆ ಮತ್ತೆ ಕರೆಸಿಕೊಂಡರೆ, ನಾನು ಯೆಹೋವನ ಆರಾಧನೆ ಮಾಡುತ್ತೇನೆ, ಎಂಬ ವಿಶೇಷ ಪ್ರಮಾಣವನ್ನು ಮಾಡಿದ್ದೆನು’” ಎಂದನು.


ದಾವೀದನು ತನ್ನ ಮಗನಿಗಾಗಿ ಪ್ರತಿನಿತ್ಯವೂ ಗೋಳಾಡುತ್ತಿದ್ದನು. ಗೆಷೂರಿನ ರಾಜನೂ ಅಮ್ಮೀಹೂದನ ಮಗನೂ ಆದ ತಲ್ಮೈನ ಹತ್ತಿರಕ್ಕೆ ಅಬ್ಷಾಲೋಮನು ಓಡಿಹೋದನು.


ಕಿಲಾಬನು ಎರಡನೆಯ ಮಗ. ಕರ್ಮೆಲ್ಯನಾದ ನಾಬಾಲನ ವಿಧವೆಯಾದ ಅಬೀಗೈಲಳು ಕಿಲಾಬನ ತಾಯಿ. ಅಬ್ಷಾಲೋಮನು ಮೂರನೆಯ ಮಗ. ಗೆಷೂರಿನ ರಾಜ ತಲ್ಮೈನ ಮಗಳಾದ ಮಾಕಳು ಅಬ್ಷಾಲೋಮನ ತಾಯಿ.


ಇಸ್ರೇಲರು ಜೋರ್ಡನ್ ನದಿಯ ಪೂರ್ವದಿಕ್ಕಿನ ಭೂಮಿಯನ್ನು ಸ್ವಾಧೀನಪಡಿಸಿಕೊಂಡರು. ಅರ್ನೋನ್ ನದಿಯಿಂದ ಹೆರ್ಮೋನ್ ಪರ್ವತದವರೆಗಿನ ಪ್ರದೇಶ ಮತ್ತು ಜೋರ್ಡನ್ ಕಣಿವೆಯ ಪೂರ್ವದಿಕ್ಕಿಗೆ ಉದ್ದಕ್ಕೂ ಹಬ್ಬಿರುವ ಪ್ರದೇಶ ಅವರ ವಶಕ್ಕೆ ಬಂತು. ಈ ದೇಶವನ್ನು ತೆಗೆದುಕೊಳ್ಳುವುದಕ್ಕಾಗಿ ಇಸ್ರೇಲರು ಸೋಲಿಸಿದ ಅರಸರ ವಿವರ ಹೀಗಿದೆ:


ಯಾಬೀನನು ಪೂರ್ವ ಮತ್ತು ಪಶ್ಚಿಮದಲ್ಲಿದ್ದ ಕಾನಾನಿನ ಅರಸರಿಗೂ ಅಮೋರಿಯರಿಗೂ ಹಿತ್ತಿಯರಿಗೂ ಪೆರಿಜ್ಜೀಯರಿಗೂ ಬೆಟ್ಟಪ್ರದೇಶದ ಯೆಬೂಸಿಯರಿಗೂ ಹೆರ್ಮೋನ್ ಪರ್ವತದ ಬುಡದಲ್ಲಿ ಮಿಚ್ಛಾದ ಹತ್ತಿರ ವಾಸವಾಗಿದ್ದ ಹಿವ್ವಿಯರಿಗೂ ಸಂದೇಶವನ್ನು ಕಳುಹಿಸಿದನು.


ರೂಬೇನ್ಯರು ವಾಸಿಸಿದ್ದ ಪ್ರಾಂತ್ಯದ ಪಕ್ಕದಲ್ಲಿಯೇ ಗಾದನ ಕುಲದವರು ವಾಸಿಸಿದರು. ಇವರು ಬಾಷಾನಿನ ಪ್ರದೇಶದಲ್ಲಿ ಸಾಲೆಖ ಪಟ್ಟಣದವರೆಗೂ ನೆಲೆಸಿದರು.


ಆ ಸೈನಿಕರು ಮಿಚ್ಫದಲ್ಲಿ ವಾಸವಾಗಿದ್ದ ಗೆದಲ್ಯನಲ್ಲಿಗೆ ಬಂದರು. ಆ ಸೈನಿಕರು ಯಾರೆಂದರೆ: ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಕ್ಕಳಾದ ಯೋಹಾನಾನ ಮತ್ತು ಅವನ ಸೋದರ ಯೋನಾಥಾನ, ತನ್ಹಮೆತನ ಮಗನಾದ ಸೆರಾಯ, ನೆಟೋಫದವನಾದ ಏಫಯನ ಮಕ್ಕಳು, ಮಾಕಾ ಊರಿನ ಯೆಜನ್ಯ ಮತ್ತು ಅವರ ಸಂಗಡ ಇದ್ದ ಜನರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು