Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 13:11 - ಪರಿಶುದ್ದ ಬೈಬಲ್‌

11 ಗಿಲ್ಯಾದ್ ಪಟ್ಟಣವೂ ಸಹ ಈ ಪ್ರದೇಶಕ್ಕೆ ಒಳಪಟ್ಟಿತ್ತು. ಗೆಷೂರ್ಯರು ಮತ್ತು ಮಾಕತೀಯರು ವಾಸಮಾಡುತ್ತಿದ್ದ ಪ್ರದೇಶವು ಸಹ ಈ ಪ್ರದೇಶಕ್ಕೆ ಸೇರಿತ್ತು. ಇಡೀ ಹೆರ್ಮೋನ್ ಬೆಟ್ಟಪ್ರದೇಶ ಮತ್ತು ಸಲ್ಕಾ ಪಟ್ಟಣದವರೆಗೆ ವಿಸ್ತರಿಸಿಕೊಂಡಿದ್ದ ಬಾಷಾನಿನ ಎಲ್ಲಾ ಪ್ರಾಂತ್ಯಗಳು ಆ ಪ್ರದೇಶಕ್ಕೆ ಸೇರಿಕೊಂಡಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಗೆಷೂರ‍್ಯರ ಮತ್ತು ಮಾಕತೀಯರ ಪ್ರಾಂತ್ಯಗಳು ಹೆರ್ಮೋನ್ ಬೆಟ್ಟದ ಮೇಲಿನ ಎಲ್ಲಾ ಪ್ರದೇಶ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಗಿಲ್ಯಾದ್ ನಾಡು, ಗೆಷ್ಯೂರ ಮತ್ತು ಮಾಕತೀಯರ ಪ್ರಾಂತ್ಯಗಳು, ಹೆರ್ಮೋನ್ ಬೆಟ್ಟದ ಮೇಲಿನ ಪ್ರದೇಶ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಗಿಲ್ಯಾದ್ ಸೀಮೆಯು, ಗೆಷೂರ್ಯರ ಮತ್ತು ಮಾಕತೀಯರ ಪ್ರಾಂತ್ಯಗಳು, ಹೆರ್ಮೋನ್ ಬೆಟ್ಟದ ಮೇಲಿನ ಎಲ್ಲಾ ಪ್ರದೇಶವು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅದರೊಂದಿಗೆ ಗಿಲ್ಯಾದ್, ಗೆಷೂರ್ಯರ, ಮಾಕಾತೀಯರ ಮೇರೆಯೂ ಹೆರ್ಮೋನ್ ಪರ್ವತವೆಲ್ಲವೂ ಸಲೆಕಾವರೆಗೆ ಇರುವ ಇಡೀ ಬಾಷಾನ್ ಪೂರ್ತಿಯಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 13:11
13 ತಿಳಿವುಗಳ ಹೋಲಿಕೆ  

ಆದರೆ ಗೆಷೂರ್ ಮತ್ತು ಅರಾಮನು ಯಾಯೀರನ ಊರುಗಳನ್ನು ವಶಪಡಿಸಿಕೊಂಡರು. ಅದರಲ್ಲಿ ಕೆನತ್ ಮತ್ತು ಅದರ ಸುತ್ತಮುತ್ತಲಿದ್ದ ಕೆಲವು ಹಳ್ಳಿಗಳು ಸೇರಿದ್ದವು. ಒಟ್ಟು ಅರವತ್ತು ಸಣ್ಣ ಪಟ್ಟಣಗಳಿದ್ದವು. ಇವೆಲ್ಲವೂ ಗಿಲ್ಯಾದನ ತಂದೆಯಾದ ಮಾಕೀರನಿಗೆ ಸೇರಿದವುಗಳಾಗಿದ್ದವು.


ಯೋಸೇಫನು ಬಾವಿಯೊಳಗಿದ್ದಾಗ, ಅವನ ಅಣ್ಣಂದಿರು ಊಟಕ್ಕೆ ಕುಳಿತುಕೊಂಡರು. ಅವರು ಕಣ್ಣೆತ್ತಿ ನೋಡಿದಾಗ ಗಿಲ್ಯಾದಿನಿಂದ ಈಜಿಪ್ಟಿಗೆ ಹೋಗುತ್ತಿದ್ದ ವ್ಯಾಪಾರಿಗಳನ್ನು ಕಂಡರು. ಅವರ ಒಂಟೆಗಳು ಅನೇಕ ಬಗೆಯ ಸಾಂಬಾರ ಪದಾರ್ಥಗಳನ್ನು ಮತ್ತು ಬೆಲೆಬಾಳುವ ವಸ್ತುಗಳನ್ನು ಹೊತ್ತುಕೊಂಡು ಹೋಗುತ್ತಿದ್ದವು.


ಮೋಶೆ ಅವರಿಗೆ, “ಗಾದ್ ಮತ್ತು ರೂಬೇನ್ ಕುಲಗಳಿಂದ ಯುದ್ಧಕ್ಕಾಗಿ ಆರಿಸಲ್ಪಟ್ಟವರು ಜೋರ್ಡನ್ ನದಿಯನ್ನು ಯೆಹೋವನ ಮುಂದೆ ದಾಟಿ ಆ ದೇಶವನ್ನು ಗೆದ್ದುಕೊಂಡರೆ, ನೀವು ಅವರಿಗೆ ಗಿಲ್ಯಾದ್ ಪ್ರಾಂತ್ಯವನ್ನು ಸ್ವಾಸ್ತ್ಯವಾಗಿ ಕೊಡಬೇಕು.


ಗಿಲ್ಯಾದ್ ಪ್ರಾಂತ್ಯ ಮತ್ತು ಎತ್ತರವಾದ ಬಯಲಿನಲ್ಲಿದ್ದ ಪಟ್ಟಣಗಳನ್ನೆಲ್ಲಾ ನಾವು ಸ್ವಾಧೀನಮಾಡಿಕೊಂಡೆವು. ಸಲ್ಕಾ ಮತ್ತು ಎದ್ರೈ ಪಟ್ಟಣಗಳ ತನಕವಿರುವ ಬಾಷಾನ್ ದೇಶವನ್ನೆಲ್ಲಾ ನಾವು ಸ್ವಾಧೀನಮಾಡಿಕೊಂಡೆವು.”


ಯಾಬೀನನು ಪೂರ್ವ ಮತ್ತು ಪಶ್ಚಿಮದಲ್ಲಿದ್ದ ಕಾನಾನಿನ ಅರಸರಿಗೂ ಅಮೋರಿಯರಿಗೂ ಹಿತ್ತಿಯರಿಗೂ ಪೆರಿಜ್ಜೀಯರಿಗೂ ಬೆಟ್ಟಪ್ರದೇಶದ ಯೆಬೂಸಿಯರಿಗೂ ಹೆರ್ಮೋನ್ ಪರ್ವತದ ಬುಡದಲ್ಲಿ ಮಿಚ್ಛಾದ ಹತ್ತಿರ ವಾಸವಾಗಿದ್ದ ಹಿವ್ವಿಯರಿಗೂ ಸಂದೇಶವನ್ನು ಕಳುಹಿಸಿದನು.


ನೀನು ಗೆಷೂರ ಪ್ರದೇಶವನ್ನು ಮತ್ತು ಫಿಲಿಷ್ಟಿಯರ ಪ್ರದೇಶವನ್ನು ಇನ್ನೂ ವಶಪಡಿಸಿಕೊಂಡಿಲ್ಲ.


ಅಮೋರಿಯರ ಅರಸನಾದ ಸೀಹೋನನು ಆಳುತ್ತಿದ್ದ ಎಲ್ಲ ಪಟ್ಟಣಗಳು ಆ ಪ್ರದೇಶದಲ್ಲಿದ್ದವು. ಆ ಅರಸನು ಹೆಷ್ಬೋನ್ ನಗರದಲ್ಲಿ ಆಳುತ್ತಿದ್ದನು. ಅಮ್ಮೋನಿಯರು ಮೊದಲು ನೆಲೆಸಿದ್ದ ಪ್ರದೇಶದವರೆಗೆ ಈ ಪ್ರದೇಶ ವಿಸ್ತರಿಸಿತ್ತು.


ಮೋಶೆ ಅವರಿಗೆ ಯಗ್ಜೇರಿನ ಪ್ರದೇಶ ಮತ್ತು ಗಿಲ್ಯಾದಿನ ಎಲ್ಲ ಪಟ್ಟಣಗಳನ್ನೂ ರಬ್ಬಾದ ಹತ್ತಿರವಿದ್ದ ಅರೋಯೇರ್‌ವರೆಗಿನ ಅಮ್ಮೋನಿಯರ ಅರ್ಧಪ್ರದೇಶವನ್ನು ಕೊಟ್ಟನು.


ಮನಸ್ಸೆ ಕುಲದವರು ಜೋರ್ಡನ್ ನದಿಯ ಪಶ್ಚಿಮದಲ್ಲಿ ಹತ್ತು ಭೂಭಾಗಗಳನ್ನು ಮತ್ತು ಆ ನದಿಯ ಮತ್ತೊಂದು ದಿಕ್ಕಿನಲ್ಲಿ ಗಿಲ್ಯಾದ್ ಮತ್ತು ಬಾಷಾನ್ ಎಂಬ ಮತ್ತೆರಡು ಭೂಭಾಗಗಳನ್ನು ಪಡೆದುಕೊಂಡರು.


ರೂಬೇನ್ಯರು ವಾಸಿಸಿದ್ದ ಪ್ರಾಂತ್ಯದ ಪಕ್ಕದಲ್ಲಿಯೇ ಗಾದನ ಕುಲದವರು ವಾಸಿಸಿದರು. ಇವರು ಬಾಷಾನಿನ ಪ್ರದೇಶದಲ್ಲಿ ಸಾಲೆಖ ಪಟ್ಟಣದವರೆಗೂ ನೆಲೆಸಿದರು.


ಇಬ್ರಿಯರಲ್ಲಿ ಕೆಲವರು ಜೋರ್ಡನ್ ನದಿಯನ್ನು ದಾಟಿ ಗಾದ್ ಮತ್ತು ಗಿಲ್ಯಾದ್ ಪ್ರದೇಶಕ್ಕೆ ಹೊರಟುಹೋದರು. ಸೌಲನು ಇನ್ನೂ ಗಿಲ್ಗಾಲಿನಲ್ಲೇ ಇದ್ದನು. ಅವನ ಸೈನ್ಯದಲ್ಲಿದ್ದ ಜನರೆಲ್ಲ ಭಯದಿಂದ ನಡುಗತೊಡಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು