ಯೆಹೋಶುವ 13:14 - ಪರಿಶುದ್ದ ಬೈಬಲ್14 ಲೇವಿಕುಲದವರಿಗೆ ಮಾತ್ರ ಯಾವ ಪ್ರದೇಶವೂ ಸಿಕ್ಕಲಿಲ್ಲ. ಅದಕ್ಕೆ ಬದಲಾಗಿ, ಇಸ್ರೇಲರ ದೇವರಾದ ಯೆಹೋವನು ಅವರಿಗೆ ವಾಗ್ದಾನ ಮಾಡಿದಂತೆ ಸರ್ವಾಂಗಹೋಮಗಳಾಗಿ ಅರ್ಪಿತವಾಗುವ ಎಲ್ಲಾ ಪಶುಗಳಲ್ಲಿ ಉಳಿದ ಭಾಗವನ್ನು ಅವರು ಪಡೆದುಕೊಳ್ಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಲೇವಿ ಕುಲದವರಿಗೆ ಮಾತ್ರ ಯಾವ ಪಾಲು ಸಿಕ್ಕಲಿಲ್ಲ. ಏಕೆಂದರೆ ಇಸ್ರಾಯೇಲಿನ ದೇವರಾದ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಆತನ ಯಜ್ಞಶೇಷವೇ ಅವರ ಸ್ವಾಸ್ತ್ಯವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಲೇವಿ ಕುಲದವರಿಗೆ ಮಾತ್ರ ಯಾವ ಪಾಲೂ ಸಿಕ್ಕಲಿಲ್ಲ. ಏಕೆಂದರೆ ಇಸ್ರಯೇಲಿನ ದೇವರಾದ ಸರ್ವೇಶ್ವರನು ಆಜ್ಞಾಪಿಸಿದಂತೆ ಯಜ್ಞಶೇಷವೇ ಅವರ ಸೊತ್ತಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಲೇವಿ ಕುಲದವರಿಗೆ ಮಾತ್ರ ಪಾಲು ಸಿಕ್ಕಲಿಲ್ಲ. ಇಸ್ರಾಯೇಲ್ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಆತನ ಯಜ್ಞಶೇಷವೇ ಅವರ ಸ್ವಾಸ್ತ್ಯ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದರೆ ಮೋಶೆಯು ಲೇವಿಯರ ಗೋತ್ರಕ್ಕೆ ಮಾತ್ರ ಯಾವ ಸೊತ್ತನ್ನೂ ಕೊಡಲಿಲ್ಲ. ಏಕೆಂದರೆ ಅವನು ಅವರಿಗೆ ಹೇಳಿದ ಪ್ರಕಾರ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸಿದ್ದರಿಂದ, ಇಸ್ರಾಯೇಲಿನ ದೇವರೇ ಅವರ ಸೊತ್ತು. ಅಧ್ಯಾಯವನ್ನು ನೋಡಿ |