Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 13:15 - ಪರಿಶುದ್ದ ಬೈಬಲ್‌

15 ಮೋಶೆಯು ರೂಬೇನನ ಕುಲದ ಪ್ರತಿಯೊಂದು ಗೋತ್ರದವರಿಗೆ ಸ್ವಲ್ಪಸ್ವಲ್ಪ ಪ್ರದೇಶವನ್ನು ಕೊಟ್ಟಿದ್ದನು. ಅವರಿಗೆ ಕೊಟ್ಟ ಪ್ರದೇಶದ ವಿವರ ಹೀಗಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮೋಶೆಯು ರೂಬೇನ್ಯರ ಮಕ್ಕಳ ಗೋತ್ರಗಳಿಗೆ ಸ್ವತ್ತಾಗಿ ಕೊಟ್ಟ ಪ್ರದೇಶಗಳು ಯಾವುವೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಮೋಶೆ ರೂಬೇನ್ಯರ ಗೋತ್ರಗಳಿಗೆ ಸ್ವಂತ ಆಸ್ತಿಯಾಗಿ ಕೊಟ್ಟ ಪ್ರದೇಶಗಳು ಇವು :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮೋಶೆಯು ರೂಬೇನ್ಯರ ಗೋತ್ರಗಳಿಗೆ ಸ್ವಾಸ್ತ್ಯವಾಗಿ ಕೊಟ್ಟ ಪ್ರದೇಶಗಳು ಯಾವವಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಮೋಶೆಯು ರೂಬೇನನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಕೊಟ್ಟ ಸೊತ್ತು ಇವು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 13:15
7 ತಿಳಿವುಗಳ ಹೋಲಿಕೆ  

ಲೇವಿಕುಲದವರಿಗೆ ಮಾತ್ರ ಯಾವ ಪ್ರದೇಶವೂ ಸಿಕ್ಕಲಿಲ್ಲ. ಅದಕ್ಕೆ ಬದಲಾಗಿ, ಇಸ್ರೇಲರ ದೇವರಾದ ಯೆಹೋವನು ಅವರಿಗೆ ವಾಗ್ದಾನ ಮಾಡಿದಂತೆ ಸರ್ವಾಂಗಹೋಮಗಳಾಗಿ ಅರ್ಪಿತವಾಗುವ ಎಲ್ಲಾ ಪಶುಗಳಲ್ಲಿ ಉಳಿದ ಭಾಗವನ್ನು ಅವರು ಪಡೆದುಕೊಳ್ಳುವರು.


ಅರ್ನೋನ್ ತಗ್ಗಿನ ಸಮೀಪದಲ್ಲಿದ್ದ ಅರೋಯೇರ್‌ನಿಂದ ಮೇದೆಬದವರೆಗಿರುವ ಪ್ರದೇಶ. ಇದು ಇಡೀ ತಪ್ಪಲ ಪ್ರದೇಶವನ್ನು ಮತ್ತು ಆ ತಗ್ಗು ಪ್ರದೇಶದ ಮಧ್ಯದಲ್ಲಿದ್ದ ಊರುಗಳನ್ನು ಒಳಗೊಂಡಿತ್ತು.


ಲೇಯಳ ಗಂಡುಮಕ್ಕಳು: ಯಾಕೋಬನ ಚೊಚ್ಚಲ ಮಗನಾದ ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್ ಮತ್ತು ಜೆಬುಲೂನ್.


ಇಸ್ರೇಲರ ಕುಟುಂಬಗಳ ನಾಯಕರುಗಳ ಹೆಸರುಗಳು ಇಲ್ಲಿವೆ: ಇಸ್ರೇಲನ ಮೊದಲನೆಯ ಮಗನಾದ ರೂಬೇನನಿಗೆ ನಾಲ್ಕು ಗಂಡುಮಕ್ಕಳಿದ್ದರು. ಅವರು ಯಾರೆಂದರೆ: ಹನೋಕ್, ಫಲ್ಲು, ಹೆಚ್ರೋನ್ ಮತ್ತು ಕರ್ಮೀ.


ನಿಮ್ಮ ದೇವರಾದ ಯೆಹೋವನು ಇಸ್ರೇಲರಿಗೆ ಶಾಂತಿಯನ್ನು ದಯಪಾಲಿಸುವುದಾಗಿ ವಾಗ್ದಾನ ಮಾಡಿದ್ದನು. ಈಗ ಯೆಹೋವನು ತನ್ನ ವಾಗ್ದಾನವನ್ನು ಪೂರ್ಣಗೊಳಿಸಿದ್ದಾನೆ. ಆದ್ದರಿಂದ ಈಗ ನೀವು ನಿಮ್ಮ ಮನೆಗಳಿಗೆ ಹೋಗಬಹುದು. ಯೆಹೋವನ ಸೇವಕನಾದ ಮೋಶೆಯು ನಿಮಗೆ ಜೋರ್ಡನ್ ನದಿಯ ಪೂರ್ವಕ್ಕೆ ಸ್ವಾಸ್ತ್ಯವನ್ನು ಕೊಟ್ಟಿದ್ದಾನೆ. ಈಗ ನೀವು ಆ ಪ್ರದೇಶದಲ್ಲಿರುವ ನಿಮ್ಮ ಮನೆಗಳಿಗೆ ಹೋಗಬಹುದು.


ಆದರೆ ಅಮೋರಿಯರ ಅರಸನಾದ ಸೀಹೋನನು ಇಸ್ರೇಲರಿಗೆ ತನ್ನ ಪ್ರದೇಶದ ಸೀಮೆಯನ್ನು ದಾಟಲು ಬಿಡಲಿಲ್ಲ. ಸೀಹೋನನು ತನ್ನ ಜನರನ್ನೆಲ್ಲಾ ಸೇರಿಸಿ ಯಹಚದಲ್ಲಿ ಪಾಳೆಯಮಾಡಿಕೊಂಡನು. ಅಮೋರಿಯರು ಇಸ್ರೇಲರೊಂದಿಗೆ ಯುದ್ಧಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು