ಯೆಹೋಶುವ 13:22 - ಪರಿಶುದ್ದ ಬೈಬಲ್22 ಇಸ್ರೇಲರು ಬೆಯೋರನ ಮಗನಾದ ಬಿಳಾಮನನ್ನು ಕೊಂದರು. (ಬಿಳಾಮನು ಮಂತ್ರ ವಿದ್ಯೆಯಿಂದ ಭವಿಷ್ಯವನ್ನು ಹೇಳುತ್ತಿದ್ದನು.) ಯುದ್ಧದಲ್ಲಿ ಇಸ್ರೇಲರು ಬಹಳಷ್ಟು ಜನರನ್ನು ಕೊಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಇಸ್ರಾಯೇಲ್ಯರು ಕತ್ತಿಯಿಂದ ಸಂಹರಿಸಿದವರಲ್ಲಿ ಬೆಯೋರನ ಮಗನೂ ಶಕುನ ನೋಡುವವನಾಗಿದ್ದ ಬಿಳಾಮನೂ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಇಸ್ರಯೇಲರು ಕತ್ತಿಗೆ ತುತ್ತಾಗಿಸಿದವರಲ್ಲಿ ಬೆಯೋರನ ಮಗನೂ ಶಕುನ ನೋಡುವವನೂ ಆಗಿದ್ದ ಬಿಳಾಮನೂ ಸೇರಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಇಸ್ರಾಯೇಲ್ಯರು ಕತ್ತಿಯಿಂದ ಸಂಹರಿಸಿದವರಲ್ಲಿ ಬೆಯೋರನ ಮಗನೂ ಶಕುನ ನೋಡುವವನೂ ಆಗಿದ್ದ ಬಿಳಾಮನೂ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಇದಲ್ಲದೆ ಇಸ್ರಾಯೇಲರು ಸಂಹರಿಸಿದ ಇತರರ ಸಂಗಡ ಬೆಯೋರನ ಮಗನಾದ ಬಿಳಾಮನೆಂಬ ಕಣಿ ಹೇಳುವವನನ್ನು ಖಡ್ಗದಿಂದ ಕೊಂದುಹಾಕಿದರು. ಅಧ್ಯಾಯವನ್ನು ನೋಡಿ |
“ಆದರೆ ನಿನ್ನ ವಿರುದ್ಧವಾಗಿ ಹೇಳಬೇಕಾದ ಕೆಲವು ಸಂಗತಿಗಳಿವೆ. ನಿನ್ನ ಸಭೆಯಲ್ಲಿ ಬಿಳಾಮನ ದುರ್ಬೋಧನೆಗಳನ್ನು ಅನುಸರಿಸುವ ಜನರಿದ್ದಾರೆ. ಇಸ್ರೇಲಿನ ಜನರನ್ನು ಹೇಗೆ ಪಾಪಕ್ಕೆ ಒಳಗಾಗುವಂತೆ ಮಾಡಬೇಕೆಂಬುದನ್ನು ಬಿಳಾಮನು ಬಾಲಾಕನಿಗೆ ದುರ್ಬೋಧನೆ ಮಾಡಿದನು. ಆದ್ದರಿಂದ ಇಸ್ರೇಲರು ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವುದರ ಮೂಲಕವಾಗಿಯೂ ಲೈಂಗಿಕ ಪಾಪಗಳನ್ನು ಮಾಡುವುದರ ಮೂಲಕವಾಗಿಯೂ ಪಾಪ ಮಾಡಿದರು.
ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.