Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 13:29 - ಪರಿಶುದ್ದ ಬೈಬಲ್‌

29 ಮೋಶೆಯು ಮನಸ್ಸೆ ಕುಲದ ಅರ್ಧಕುಲದವರಿಗೆ ಅವರ ಕುಟುಂಬಗಳಿಗನುಸಾರವಾಗಿ ಕೊಟ್ಟ ಪ್ರದೇಶದ ವಿವರ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಮಹನಯಿಮಿನ ಉತ್ತರದಲ್ಲಿದ್ದ ಹಾಗೂ ಮೊದಲು ಬಾಷಾನಿನ ಅರಸನಾಗಿದ್ದ ಓಗನ ರಾಜ್ಯವಾಗಿದ್ದ ಎಲ್ಲಾ ಬಾಷಾನ್ ಸೀಮೆಯನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಮಹನಯಿಮಿನ (ಉತ್ತರದಲ್ಲಿದ್ದ) ಹಾಗೂ ಮೊದಲು ಬಾಷಾನಿನ ಅರಸ ಓಗನ ರಾಜ್ಯವಾಗಿದ್ದ ಬಾಷಾನ್ ನಾಡನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಮಹನಯಿವಿುನ [ಉತ್ತರದಲ್ಲಿದ್ದು] ಮೊದಲು ಬಾಷಾನಿನ ಅರಸನಾದ ಓಗನ ರಾಜ್ಯವಾಗಿದ್ದ ಎಲ್ಲಾ ಬಾಷಾನ್ ಸೀಮೆಯನ್ನು ಮೋಶೆಯು ಮನಸ್ಸೆ ಕುಲದ ಅರ್ಧಗೋತ್ರಗಳಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಇದಲ್ಲದೆ ಮನಸ್ಸೆಯ ಅರ್ಧ ಗೋತ್ರಕ್ಕೆ ಮೋಶೆಯು ಅವರ ಕುಟುಂಬದ ಪ್ರಕಾರ ಕೊಟ್ಟ ಸೊತ್ತು ಇವು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 13:29
10 ತಿಳಿವುಗಳ ಹೋಲಿಕೆ  

ಮೋಶೆಯು ಗಾದ್ ಕುಲದವರಿಗೆ ಈ ಪ್ರದೇಶವನ್ನು ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದನು. ಈ ಪ್ರದೇಶಕ್ಕೆ ಸೇರಿದ್ದ ಊರುಗಳನ್ನೆಲ್ಲ ಮೋಶೆಯು ಅವರ ಕುಟುಂಬಗಳಿಗನುಸಾರವಾಗಿ ಹಂಚಿಕೊಟ್ಟಿದ್ದನು.


ಈ ಪ್ರದೇಶವು ಮಹನಯಿಮಿನಿಂದ ಪ್ರಾರಂಭವಾಗುತ್ತದೆ. ಇಡೀ ಬಾಷಾನ್, ಅರಸನಾದ ಓಗನ ಆಳ್ವಿಕೆಗೆ ಒಳಪಟ್ಟ ಪ್ರದೇಶ, ಬಾಷಾನಿನಲ್ಲಿರುವ ಯಾಯೀರನ ಎಲ್ಲ ಊರುಗಳು (ಒಟ್ಟು ಅರವತ್ತು ಊರುಗಳು) ಇದರಲ್ಲಿ ಸೇರಿವೆ.


ಆದ್ದರಿಂದ ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗನಾದ ಮಾಕೀರನ ವಂಶದವರಿಗೆ ಕೊಟ್ಟನು. ಮಾಕೀರನ ವಂಶದವರು ಅಲ್ಲಿ ನೆಲೆಸಿದರು.


ಗಿಲ್ಯಾದಿನ ಇನ್ನೊಂದು ಅರ್ಧಪ್ರದೇಶ ಮತ್ತು ಇಡೀ ಬಾಷಾನ್ ದೇಶವನ್ನು ಮನಸ್ಸೆಯ ಅರ್ಧಕುಲದವರಿಗೆ ಹಂಚಿದೆನು.” (ಬಾಷಾನ್ ಓಗನ ಸಾಮ್ರಾಜ್ಯವಾಗಿತ್ತು. ಬಾಷಾನಿನ ಒಂದು ಭಾಗವನ್ನು ಅರ್ಗೋಬ್ ಎಂದು ಕರೆಯುತ್ತಾರೆ. ಅಲ್ಲದೆ ರೆಫಾಯರ ದೇಶವೆಂತಲೂ ಕರೆಯುತ್ತಾರೆ.


ಮನಸ್ಸೆ ಕುಲದವರು ಜೋರ್ಡನ್ ನದಿಯ ಪಶ್ಚಿಮದಲ್ಲಿ ಹತ್ತು ಭೂಭಾಗಗಳನ್ನು ಮತ್ತು ಆ ನದಿಯ ಮತ್ತೊಂದು ದಿಕ್ಕಿನಲ್ಲಿ ಗಿಲ್ಯಾದ್ ಮತ್ತು ಬಾಷಾನ್ ಎಂಬ ಮತ್ತೆರಡು ಭೂಭಾಗಗಳನ್ನು ಪಡೆದುಕೊಂಡರು.


ಮನಸ್ಸೆಯ ಹೆಣ್ಣುಮಕ್ಕಳು ಗಂಡುಮಕ್ಕಳಂತೆಯೇ ಭೂಮಿಯನ್ನು ಪಡೆದರು. ಗಿಲ್ಯಾದ್ ಪ್ರದೇಶವನ್ನು ಮನಸ್ಸೆ ಕುಲದ ಉಳಿದ ಕುಟುಂಬಗಳಿಗೆ ಕೊಡಲಾಯಿತು.


ಮೋಶೆಯು ಮನಸ್ಸೆಕುಲದ ಅರ್ಧಜನರಿಗೆ ಬಾಷಾನ್ ಪ್ರದೇಶವನ್ನು ಕೊಟ್ಟಿದ್ದನು. ಯೆಹೋಶುವನು ಮನಸ್ಸೆಕುಲದ ಉಳಿದರ್ಧ ಜನರಿಗೆ ಜೋರ್ಡನ್ ನದಿಯ ಪಶ್ಚಿಮಕ್ಕೆ ಭೂಮಿಯನ್ನು ಕೊಟ್ಟನು. ಯೆಹೋಶುವನು ಅವರನ್ನು ಆಶೀರ್ವದಿಸಿ ಮನೆಗೆ ಕಳುಹಿಸಿದನು.


ಮನಸ್ಸೆಯ ಅರ್ಧಕುಲದ ಜನರು ಬಾಷಾನ್ ಪ್ರದೇಶದಿಂದಿಡಿದು ಬಾಳ್‌ಹೆರ್ಮೋನ್, ಸೆನೀರ್ ಮತ್ತು ಹೆರ್ಮೋನ್ ಪರ್ವತ ಪ್ರಾಂತ್ಯದವರೆಗೂ ನೆಲೆಸಿದರು. ಅವರ ಕುಲದ ಜನರು ಬಹುಸಂಖ್ಯಾತರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು