Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 13:3 - ಪರಿಶುದ್ದ ಬೈಬಲ್‌

3 ಈಜಿಪ್ಟಿನ ಶೀಹೋರ್ ನದಿಯಿಂದ ಉತ್ತರದ ಎಕ್ರೋನ್ ಸೀಮೆಯವರೆಗೂ ಚಾಚಿಕೊಂಡಿರುವ ಭೂಮಿಯನ್ನು ನೀನು ವಶಪಡಿಸಿಕೊಂಡಿಲ್ಲ. ಆ ಭೂಮಿಯು ಇನ್ನೂ ಕಾನಾನ್ಯರ ಅಧೀನದಲ್ಲಿದೆ. ನೀನು ಗಾಜಾ, ಅಷ್ಡೋದ್, ಅಷ್ಕೆಲೋನ್, ಗತೂರು ಮತ್ತು ಎಕ್ರೋನಿನ ಎಂಬ ಐದು ಮಂದಿ ಫಿಲಿಷ್ಟಿಯರ ನಾಯಕರನ್ನು ಇನ್ನೂ ಸೋಲಿಸಬೇಕಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಗಾಜಾ, ಅಷ್ಡೋದ್, ಅಷ್ಕೆಲೋನ್, ಗತೂರು, ಎಕ್ರೋನ್ ಎಂಬ ಪಟ್ಟಣಗಳ ಐದು ಮಂದಿ ಫಿಲಿಷ್ಟಿಯ ಪ್ರಭುಗಳ ಸ್ವಾಧೀನದಲ್ಲಿದ್ದ ಫಿಲಿಷ್ಟಿಯ ಪ್ರಾಂತ್ಯ; ಗೆಷೂರ್ಯರ ಸೀಮೆಯು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಈಜಿಪ್ಟಿಗೆ ಎದುರಾದ ಶೀಹೋರ್ ನದಿಯಿಂದ ಕಾನಾನ್ಯರಿಗೆ ಸೇರಿದ ಉತ್ತರ ಮೇರೆಯಾದ ಎಕ್ರೋನಿನವರೆಗೂ ಅಂದರೆ, ಗಾಜಾ, ಅಷ್ಡೋದ್, ಅಷ್ಕೆಲೋನ್, ಗಾತ್, ಎಕ್ರೋನ್ ಎಂಬುವ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಪ್ರಾಂತ್ಯ ದಕ್ಷಿಣ ಪ್ರಾಂತ್ಯದಲ್ಲಿದ್ದ ಅವ್ವೀಯರ ಸೀಮೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 13:3
18 ತಿಳಿವುಗಳ ಹೋಲಿಕೆ  

ಯೆಹೂದದ ಜನರೇ, ಅದರ ಬಗ್ಗೆ ಯೋಚಿಸಿರಿ. ಇದರಿಂದ ನಿಮಗೆ ಈಜಿಪ್ಟಿಗೆ ಹೋಗಲು ಸಹಾಯವಾಯಿತೇ? ನೈಲ್ ನದಿಯ ನೀರನ್ನು ಕುಡಿಯಲು ಈಜಿಪ್ಟಿಗೆ ಹೋಗುವುದೇಕೆ? ಅವರ ನದಿಯ ನೀರನ್ನು ಕುಡಿಯಲು ಅಸ್ಸೀರಿಯಕ್ಕೆ ಹೋಗುವುದೇಕೆ?


ಐದು ಮಂದಿ ಫಿಲಿಷ್ಟಿಯ ಪ್ರಭುಗಳು, ಎಲ್ಲಾ ಕಾನಾನ್ಯರು, ಚೀದೋನ್ಯರು, ಲೆಬನೋನ್ ಪರ್ವತಾವಳಿಯಲ್ಲಿ ಬಾಳ್‌ಹೆರ್ಮೊನ್ ಬೆಟ್ಟದಿಂದ ಲೆಬೂಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು.


ಕಫ್ತೋರ್ಯದವರಿಗೂ ದೇವರು ಅದೇ ರೀತಿ ಮಾಡಿದ್ದನು. ಗಾಜಾದ ಸುತ್ತಲಿನ ಪಟ್ಟಣಗಳಲ್ಲಿ ಅವ್ವಿಯ ಜನರು ವಾಸಿಸುತ್ತಿದ್ದರು. ಆದರೆ ಕಫ್ತೋರ್ಯದಿಂದ ಬಂದ ಜನರು ಅವ್ವಿಯರನ್ನು ನಾಶಮಾಡಿ ಅವರ ದೇಶದಲ್ಲಿ ಈಗಲೂ ಅವರು ವಾಸಿಸಿರುತ್ತಾರೆ.)


ಫಿಲಿಷ್ಟಿಯರು, “ಇಸ್ರೇಲರ ದೇವರು ನಮ್ಮನ್ನು ಕ್ಷಮಿಸಬೇಕಾದರೆ ನಾವು ಯಾವ ಕಾಣಿಕೆಗಳನ್ನು ಕಳುಹಿಸಬೇಕು?” ಎಂದು ಕೇಳಿದರು. ಅರ್ಚಕರು ಮತ್ತು ಮಾಂತ್ರಿಕರು, “ನಿಮ್ಮಲ್ಲಿ ಐದು ಮಂದಿ ಅಧಿಪತಿಗಳಿದ್ದೀರಿ. ಪ್ರತಿಯೊಂದು ನಗರಕ್ಕೆ ಒಬ್ಬ ಅಧಿಪತಿಯಿದ್ದಾನೆ. ನೀವು ಮತ್ತು ನಿಮ್ಮ ಅಧಿಪತಿಗಳೆಲ್ಲರೂ ಒಂದೇ ರೀತಿಯಲ್ಲಿ ತೊಂದರೆಗೊಳಗಾಗಿದ್ದೀರಿ. ಆದ್ದರಿಂದ ಚಿನ್ನದಲ್ಲಿ ಐದು ಗಡ್ಡೆಗಳನ್ನು ಹಾಗೂ ಐದು ಇಲಿಗಳನ್ನು ಮಾಡಿಸಬೇಕು.


ಇಸ್ರೇಲರು ಗೆಷೂರ್ಯರನ್ನೂ ಮಾಕತೀಯರನ್ನೂ ಹೊರತಳ್ಳಲಿಲ್ಲ. ಅವರು ಇಂದಿಗೂ ಇಸ್ರೇಲರ ಜೊತೆಯಲ್ಲಿಯೇ ಇರುತ್ತಾರೆ.


ಹಾಮನ ಗಂಡುಮಕ್ಕಳು: ಕೂಷ್, ಮಿಚ್ರಯಿಮ್, ಪೂತ್ ಮತ್ತು ಕಾನಾನ್.


ಫಿಲಿಷ್ಟಿಯ ಪ್ರಭುಗಳು ದೆಲೀಲಳ ಬಳಿಗೆ ಹೋಗಿ, “ಸಂಸೋನನು ಅಷ್ಟೊಂದು ಶಕ್ತಿಶಾಲಿಯಾಗಿರುವುದಕ್ಕೆ ಕಾರಣಗಳನ್ನು ನಾವು ತಿಳಿದುಕೊಳ್ಳಬೇಕಾಗಿದೆ. ಅವನನ್ನು ಮರುಳುಗೊಳಿಸಿ ಅವನ ರಹಸ್ಯವನ್ನು ತಿಳಿದುಕೊಳ್ಳಲು ಪ್ರಯತ್ನ ಮಾಡು. ಆಗ ನಾವು ಅವನನ್ನು ಸೋಲಿಸಿ, ಬಂಧಿಸಿ ನಮ್ಮ ಅಧೀನದಲ್ಲಿಟ್ಟುಕೊಳ್ಳಲು ಸಾಧ್ಯವಾಗುತ್ತದೆ. ನೀನು ಇದನ್ನು ಮಾಡಿದರೆ ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ ಇಪ್ಪತ್ತೆಂಟು ಬೆಳ್ಳಿನಾಣ್ಯಗಳನ್ನು ಕೊಡುತ್ತೇವೆ” ಎಂದು ಹೇಳಿದರು.


ಫಿಲಿಷ್ಟಿಯರು ದೇವರ ಪವಿತ್ರ ಪೆಟ್ಟಿಗೆಯನ್ನು ಎಬೆನೆಜೆರಿನಿಂದ ಅಷ್ಡೋದಿಗೆ ತೆಗೆದುಕೊಂಡು ಹೋದರು.


ರಾಜನಾದ ಸೊಲೊಮೋನನು ಮತ್ತು ಇಸ್ರೇಲಿನ ಜನರೆಲ್ಲರು ವಿಶ್ರಾಂತಿ ಹಬ್ಬವನ್ನು ಆಚರಿಸಿದರು. ಉತ್ತರದಲ್ಲಿದ್ದ ಹಮಾತ್ ದಾರಿಯಿಂದ ದಕ್ಷಿಣದ ಈಜಿಪ್ಟಿನ ಗಡಿಯವರೆಗಿನ ಎಲ್ಲ ಇಸ್ರೇಲರು ಅಲ್ಲಿದ್ದರು. ಅವರೆಲ್ಲರೂ ಒಟ್ಟಾಗಿ ಏಳು ದಿನಗಳ ಕಾಲ ಯೆಹೋವನ ಮುಂದೆ ತಿಂದು, ಕುಡಿದು ಆನಂದಿಸಿದರು. ಆಗ ಅವರು ಮತ್ತೆ ಏಳು ದಿನಗಳು ಅಲ್ಲಿಯೇ ಉಳಿದರು. ಅವರು ಒಟ್ಟಿಗೆ ಹದಿನಾಲ್ಕು ದಿನಗಳು ಹಬ್ಬವನ್ನು ಆಚರಿಸಿದರು!


ಅವರು ಸಮುದ್ರ ಪ್ರಯಾಣ ಮಾಡುತ್ತಾ ಧಾನ್ಯಕ್ಕಾಗಿ ಹುಡುಕುತ್ತಿದ್ದಾರೆ. ತೂರಿನ ಜನರು ನೈಲ್ ನದಿಯ ಬದಿಗಳಲ್ಲಿ ಬೆಳೆಸುವ ಧಾನ್ಯವನ್ನು ಕೊಂಡುಕೊಂಡು ಇತರ ದೇಶಗಳಿಗೆ ಮಾರುವರು.


ಆದ್ದರಿಂದ ಅಂದು ಯೆಹೋವನು ಒಂದು ವಾಗ್ದಾನವನ್ನು ಮಾಡಿ ಅಬ್ರಾಮನೊಡನೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಯೆಹೋವನು ಅವನಿಗೆ, “ನಾನು ನಿನ್ನ ಸಂತತಿಯವರಿಗೆ ಈ ನಾಡನ್ನು ಕೊಡುವೆನು. ನಾನು ಅವರಿಗೆ ಈಜಿಪ್ಟ್ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಇರುವ ನಾಡನ್ನು ಕೊಡುವೆನು.


ಅಷ್ಡೋದಿನ ಜನರು ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳನ್ನು ಒಟ್ಟಿಗೆ ಸೇರಿಸಿ “ಇಸ್ರೇಲರ ಯೆಹೋವನ ಪವಿತ್ರ ಪೆಟ್ಟಿಗೆಯನ್ನು ನಾವು ಏನು ಮಾಡೋಣ?” ಎಂದು ಕೇಳಿದರು. ಅಧಿಪತಿಗಳು, “ಇಸ್ರೇಲರ ಪವಿತ್ರ ಪೆಟ್ಟಿಗೆಯನ್ನು ‘ಗತ್’ ನಗರಕ್ಕೆ ಕಳುಹಿಸಿ” ಎಂದು ಹೇಳಿದರು. ಅಂತೆಯೇ, ಅವರು ಅದನ್ನು ಗತ್ ನಗರಕ್ಕೆ ಕಳುಹಿಸಿದರು.


ಆದ್ದರಿಂದ ಫಿಲಿಷ್ಟಿಯರು ದೇವರ ಪವಿತ್ರ ಪೆಟ್ಟಿಗೆಯನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಪವಿತ್ರ ಪೆಟ್ಟಿಗೆಯು ಎಕ್ರೋನಿಗೆ ಬಂದಾಗ, ಅಲ್ಲಿನ ಜನರು, “ಇಸ್ರೇಲರ ದೇವರನ್ನು ನಮ್ಮ ನಗರವಾದ ಎಕ್ರೋನಿಗೆ ನೀವೇಕೆ ತರುತ್ತಿರುವಿರಿ? ನಮ್ಮನ್ನೂ ನಮ್ಮ ಜನರನ್ನೂ ನೀವು ಕೊಲ್ಲಬೇಕೆಂದಿರುವಿರಾ?” ಎಂದು ಆಕ್ಷೇಪಿಸಿದರು.


ಆಗ ದಾವೀದನು ಈಜಿಪ್ಟಿನ ಶೀಹೋರ್ ನದಿಯಿಂದ ಹಿಡಿದು ಲೆಬೊಹಮಾತ್ ಪಟ್ಟಣದ ತನಕ ಇದ್ದ ಇಸ್ರೇಲರನ್ನೆಲ್ಲಾ ಒಟ್ಟು ಸೇರಿಸಿದನು; ಅವರೆಲ್ಲರೂ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಕಿರ್ಯತ್ಯಾರೀಮಿನಿಂದ ತರಲು ಹೊರಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು