ಯೆಹೋಶುವ 13:5 - ಪರಿಶುದ್ದ ಬೈಬಲ್5 ನೀನು ಇಲ್ಲಿಯವರೆಗೂ ಗೆಬಾಲ್ಯರನ್ನು ಸೋಲಿಸಿಲ್ಲ. ಹೆರ್ಮೋನ್ ಬೆಟ್ಟದ ಬುಡದಲ್ಲಿರುವ ಬಾಲ್ಗಾದಿನ ಪೂರ್ವದಿಂದಿಡಿದು ಲೆಬೊಹಾಮಾತಿನವರೆಗೆ ಇರುವ ಪ್ರದೇಶವನ್ನು ನೀನು ಗೆಲ್ಲಬೇಕು. ಬಾಲ್ಗಾದ್ ಲೆಬನೋನ್ ಪ್ರದೇಶದಲ್ಲಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಗೆಬಾಲ್ಯರ ಸೀಮೆ, ಹೆರ್ಮೋನ್ ಬೆಟ್ಟದ ತಪ್ಪಲಿನಲ್ಲಿರುವ ಬಾಲ್ಗಾದಿನಿಂದ ಹಾಮಾತಿನ ದಾರಿಯ ವರೆಗಿರುವ ಲೆಬನೋನಿನ ಪೂರ್ವ ಪ್ರದೇಶ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಗೆಬಾಲ್ಯರ ಸೀಮೆ, ಹೆರ್ಮೋನ್ ಬೆಟ್ಟದ ತಪ್ಪಲಿನಲ್ಲಿರುವ ಬಾಲ್ಗಾದಿನಿಂದ ಹಾಮಾತಿನ ಹಾದಿಯವರೆಗಿರುವ ಲೆಬನೋನಿನ ಪೂರ್ವಪ್ರದೇಶ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಗೆಬಾಲ್ಯರ ಸೀಮೆ, ಹೆರ್ಮೋನ್ ಬೆಟ್ಟದ ಬುಡದಲ್ಲಿರುವ ಬಾಲ್ಗಾದಿನಿಂದ ಹಾಮಾತಿನ ದಾರಿಯವರೆಗಿರುವ ಲೆಬನೋನಿನ ಪೂರ್ವಪ್ರದೇಶ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅದರೊಂದಿಗೆ ಗೆಬಾಲ್ಯರ ಪ್ರಾಂತ್ಯ, ಹೆರ್ಮೋನ್ ಬೆಟ್ಟದ ಕೆಳಗೆ ಇರುವ ಬಾಲ್ಗಾದಿನಿಂದ ಹಮಾತಿನ ದಾರಿಯವರೆಗೂ ಇರುವ ಲೆಬನೋನಿನ ಪೂರ್ವ ಪ್ರದೇಶ. ಅಧ್ಯಾಯವನ್ನು ನೋಡಿ |
ಇಸ್ರೇಲರು ಜೋರ್ಡನ್ ನದಿಯ ಪಶ್ಚಿಮ ಪ್ರದೇಶದಲ್ಲಿದ್ದ ಅರಸರನ್ನು ಸಹ ಸೋಲಿಸಿದರು. ಈ ಪ್ರದೇಶದಲ್ಲಿ ಯೆಹೋಶುವನು ಜನರ ಮುಂದಾಳಾದನು. ಯೆಹೋಶುವನು ಈ ಪ್ರದೇಶವನ್ನು ಇಸ್ರೇಲಿನ ಹನ್ನೆರಡು ಕುಲಗಳಿಗೆ ಹಂಚಿದನು. ದೇವರು ಅವರಿಗೆ ಕೊಡುವುದಾಗಿ ವಾಗ್ದಾನ ಮಾಡಿದ್ದ ಪ್ರದೇಶವೇ ಅದಾಗಿತ್ತು. ಈ ಪ್ರದೇಶವು ಲೆಬನೋನ್ ಕಣಿವೆಯ ಬಾಲ್ಗಾದ್ ಮತ್ತು ಸೇಯೀರ್ ಹತ್ತಿರವಿದ್ದ ಹಾಲಾಕ್ ಬೆಟ್ಟದ ನಡುವೆ ಇತ್ತು.
ರಾಜನಾದ ಸೊಲೊಮೋನನು ಮತ್ತು ಇಸ್ರೇಲಿನ ಜನರೆಲ್ಲರು ವಿಶ್ರಾಂತಿ ಹಬ್ಬವನ್ನು ಆಚರಿಸಿದರು. ಉತ್ತರದಲ್ಲಿದ್ದ ಹಮಾತ್ ದಾರಿಯಿಂದ ದಕ್ಷಿಣದ ಈಜಿಪ್ಟಿನ ಗಡಿಯವರೆಗಿನ ಎಲ್ಲ ಇಸ್ರೇಲರು ಅಲ್ಲಿದ್ದರು. ಅವರೆಲ್ಲರೂ ಒಟ್ಟಾಗಿ ಏಳು ದಿನಗಳ ಕಾಲ ಯೆಹೋವನ ಮುಂದೆ ತಿಂದು, ಕುಡಿದು ಆನಂದಿಸಿದರು. ಆಗ ಅವರು ಮತ್ತೆ ಏಳು ದಿನಗಳು ಅಲ್ಲಿಯೇ ಉಳಿದರು. ಅವರು ಒಟ್ಟಿಗೆ ಹದಿನಾಲ್ಕು ದಿನಗಳು ಹಬ್ಬವನ್ನು ಆಚರಿಸಿದರು!