Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 14:1 - ಪರಿಶುದ್ದ ಬೈಬಲ್‌

1 ಯಾಜಕನಾದ ಎಲ್ಲಾಜಾರನು, ನೂನನ ಮಗನಾದ ಯೆಹೋಶುವನು ಮತ್ತು ಇಸ್ರೇಲಿನ ಕುಲಗಳ ನಾಯಕರು, ಇಸ್ರೇಲರಿಗೆ ಕಾನಾನ್ ನಾಡಿನ ಯಾವಯಾವ ಭಾಗವನ್ನು ಕೊಡಬೇಕೆಂಬುದನ್ನು ತೀರ್ಮಾನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮಹಾಯಾಜಕನಾದ ಎಲಿಯಾಜರನೂ, ನೂನನ ಮಗನಾದ ಯೆಹೋಶುವನೂ ಹಾಗೂ ಇಸ್ರಾಯೇಲ್ಯರ ಕುಲಾಧಿಪತಿಗಳೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯಾಜಕ ಎಲ್ಲಾಜಾರನು, ನೂನನ ಮಗ ಯೆಹೋಶುವನು ಹಾಗೂ ಇಸ್ರಯೇಲ್ ಕುಲಾಧಿಪತಿಗಳು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಮಹಾಯಾಜಕ ಎಲ್ಲಾಜಾರನೂ ನೂನನ ಮಗ ಯೆಹೋಶುವನೂ ಇಸ್ರಾಯೇಲ್ ಕುಲಾಧಿಪತಿಗಳೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯಾಜಕನಾದ ಎಲಿಯಾಜರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲರ ಗೋತ್ರಗಳ ಮುಖ್ಯಸ್ಥರೂ ಜನರಿಗೆ ಸೊತ್ತಾಗಿ ಕೊಡಲು ಕಾನಾನ್ ದೇಶದಲ್ಲಿ ಇಸ್ರಾಯೇಲರು ಬಾಧ್ಯವಾಗಿ ಪ್ರದೇಶಗಳನ್ನು ಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 14:1
10 ತಿಳಿವುಗಳ ಹೋಲಿಕೆ  

ಕಾನಾನ್ ನಾಡಿನ ಏಳು ಜನಾಂಗಗಳನ್ನು ನಾಶಮಾಡಿ ತನ್ನ ಜನರಿಗೆ ಆ ನಾಡನ್ನು ಸ್ವಾಸ್ತ್ಯವಾಗಿ ಕೊಟ್ಟನು.


ಮೋಶೆಯು ಇಸ್ರೇಲರಿಗೆ ಹೀಗೆ ಆಜ್ಞಾಪಿಸಿದನು: “ನೀವು ಚೀಟುಹಾಕಿ ಭಾಗಮಾಡಿಕೊಳ್ಳುವ ದೇಶವೇ ಇದು. ಒಂಭತ್ತುವರೆ ಕುಲಗಳವರಿಗೆ ಈ ದೇಶವನ್ನು ಕೊಡಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ.


ಆಗ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ:


ನೀವು ಜೋರ್ಡನ್ ನದಿಯನ್ನು ದಾಟಿ, ಯೆಹೋವನು ನಿಮಗೆ ಕೊಡುವ ದೇಶದಲ್ಲಿ ವಾಸಿಸುವಿರಿ. ನಿಮ್ಮ ಎಲ್ಲಾ ವೈರಿಗಳಿಂದ ತಪ್ಪಿಸಿ ದೇವರು ನಿಮಗೆ ಸಮಾಧಾನವನ್ನು ಅನುಗ್ರಹಿಸುವನು; ನೀವು ಅಲ್ಲಿ ಸುರಕ್ಷಿತವಾಗಿರುವಿರಿ.


“ಲೆಬನೋನಿನಿಂದ ಮಿಸ್ರೆಪೋತ್ಮಯಿಮಿನವರೆಗಿರುವ ಪರ್ವತ ಪ್ರದೇಶದಲ್ಲಿ ಚೀದೋನ್ಯರು ವಾಸವಾಗಿದ್ದಾರೆ. ಆದರೆ ಇಸ್ರೇಲರಿಗಾಗಿ ನಾನು ಅವರನ್ನೆಲ್ಲಾ ಹೊರ ತಳ್ಳುತ್ತೇನೆ. ಇಸ್ರೇಲರಿಗೆ ದೇಶವನ್ನು ಹಂಚುವಾಗ ಈ ಪ್ರದೇಶವನ್ನು ಸೇರಿಸಿ


ಯಾಜಕನಾದ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ ಇಸ್ರೇಲಿನ ಕುಲಪ್ರಧಾನರೂ ಶೀಲೋವಿನಲ್ಲಿ ಸೇರಿಬಂದು ದೇವದರ್ಶನಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲೇ ಚೀಟುಹಾಕಿ ಹಂಚಿಕೊಟ್ಟ ಪ್ರಾಂತ್ಯಗಳೇ ಇವು. ಹೀಗೆ ದೇಶ ವಿಭಾಗ ಕಾರ್ಯವು ಪೂರ್ಣಗೊಂಡಿತು.


ಲೇವಿ ಕುಲಾಧಿಪತಿಗಳು ಮಾತಾಡುವುದಕ್ಕಾಗಿ ಯಾಜಕನಾದ ಎಲ್ಲಾಜಾರನ, ನೂನನ ಮಗನಾದ ಯೆಹೋಶುವನ ಮತ್ತು ಇಸ್ರೇಲಿನ ಬೇರೆ ಕುಲಾಧಿಪತಿಗಳ ಬಳಿಗೆ ಹೋದರು.


ಬುಕ್ಕೀಯು ಅಬೀಷೂವನ ಮಗನು; ಅಬೀಷೂವನು ಫೀನೆಹಾಸನ ಮಗನು; ಫೀನೆಹಾಸನು ಎಲ್ಲಾಜಾರನ ಮಗನು. ಎಲ್ಲಾಜಾರನು ಪ್ರಧಾನಯಾಜಕನಾದ ಆರೋನನ ಮಗನು.


“ನೀನು ಚೀಟುಹಾಕಿ ಇಸ್ರೇಲರ ಕುಲಗಳಿಗನುಸಾರವಾಗಿ ದೇಶವನ್ನು ವಿಂಗಡಿಸಬೇಕು. ಆ ಸಮಯದಲ್ಲಿ ಒಂದು ಭಾಗವನ್ನು ಪ್ರತ್ಯೇಕಿಸಿಡಬೇಕು. ಅದು ಯೆಹೋವನಿಗೋಸ್ಕರ ಮೀಸಲಾಗಿಡಲ್ಪಟ್ಟದ್ದು. ಆ ಪ್ರದೇಶವು ಇಪ್ಪತ್ತೈದು ಸಾವಿರ ಮೊಳ ಉದ್ದ ಮತ್ತು ಹತ್ತು ಸಾವಿರ ಮೊಳ ಅಗಲವಿರುವದು. ಈ ಎಲ್ಲಾ ಜಾಗವು ಪರಿಶುದ್ಧವಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು