Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 14:10 - ಪರಿಶುದ್ದ ಬೈಬಲ್‌

10 “ಯೆಹೋವನು ತಾನು ಹೇಳಿದಂತೆ ನನ್ನನ್ನು ನಲವತ್ತೈದು ವರ್ಷ ಜೀವಂತವಾಗಿ ಉಳಿಸಿದ್ದಾನೆ. ಆ ಸಮಯದಲ್ಲಿ ನಾವೆಲ್ಲರು ಅರಣ್ಯದಲ್ಲಿ ಸುತ್ತಾಡಿದೆವು. ಈಗ ನಾನು ಎಂಭತ್ತೈದು ವರ್ಷದವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನು ಈ ಮಾತುಗಳನ್ನು ಮೋಶೆಗೆ ಹೇಳಿದಂದಿನಿಂದ ಇಸ್ರಾಯೇಲ್ಯರು ಅರಣ್ಯದಲ್ಲಿ ಅಲೆಯುತ್ತಿದ್ದ ವರ್ಷಗಳು ಸೇರಿ ನಲ್ವತ್ತೈದು ವರ್ಷಗಳು ದಾಟಿದವು. ಯೆಹೋವನು ತಾನು ನುಡಿದಂತೆಯೇ ಈ ಕಾಲವೆಲ್ಲಾ ನನ್ನನ್ನು ಜೀವದಿಂದುಳಿಸಿದ್ದಾನೆ. ಈಗ ನಾನು ಎಂಭತ್ತೈದು ವರ್ಷದವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸರ್ವೇಶ್ವರ ಈ ಮಾತುಗಳನ್ನು ಮೋಶೆಗೆ ಹೇಳಿದಂದಿನಿಂದ ಇಸ್ರಯೇಲರು ಅರಣ್ಯದಲ್ಲಿ ಅಲೆಯುತ್ತಿದ್ದ ವರ್ಷಗಳೂ ಸೇರಿ ನಾಲ್ವತ್ತೈದು ವರ್ಷಗಳು ದಾಟಿದವು. ಸರ್ವೇಶ್ವರ ತಾವು ನುಡಿದಂತೆಯೇ ಈ ಕಾಲವೆಲ್ಲ ನನ್ನನ್ನು ಜೀವದಿಂದುಳಿಸಿದ್ದಾರೆ. ಈಗ ನನಗೆ ಎಂಬತ್ತೈದು ವರ್ಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನು ಈ ಮಾತುಗಳನ್ನು ಮೋಶೆಗೆ ಹೇಳಿದಂದಿನಿಂದ ಇಸ್ರಾಯೇಲ್ಯರು ಅರಣ್ಯದಲ್ಲಿ ಅಲೆಯುತ್ತಿದ್ದ ವರುಷಗಳೂ ಸೇರಿ ನಾಲ್ವತ್ತೈದು ವರುಷಗಳು ದಾಟಿದವು. ಯೆಹೋವನು ತಾನು ನುಡಿದಂತೆಯೇ ಈ ಕಾಲವೆಲ್ಲಾ ನನ್ನನ್ನು ಜೀವದಿಂದುಳಿಸಿದ್ದಾನೆ. ಈಗ ನಾನು ಎಂಭತ್ತೈದು ವರುಷದವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಈಗ ಯೆಹೋವ ದೇವರು ಮೋಶೆಗೆ ಈ ವಾಕ್ಯವನ್ನು ಹೇಳಿದಂದಿನಿಂದ ಇಸ್ರಾಯೇಲರು ಮರುಭೂಮಿಯಲ್ಲಿ ಸಂಚರಿಸಿದ ನಾಲ್ವತ್ತೈದು ವರ್ಷ ಯೆಹೋವ ದೇವರು ಹೇಳಿದ ಹಾಗೆಯೇ ನನ್ನನ್ನು ಜೀವದಿಂದ ಇಟ್ಟಿದ್ದಾರೆ. ಈಗ ನಾನು ಇಂದು ಎಂಬತ್ತೈದು ವರ್ಷ ಪ್ರಾಯದವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 14:10
9 ತಿಳಿವುಗಳ ಹೋಲಿಕೆ  

ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರೇ ಹೊರತು ನಿಮ್ಮಲ್ಲಿ ಬೇರೆ ಯಾರೂ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಸೇರುವುದಿಲ್ಲ.


ಯೆಹೋಶುವನು ಆ ಅರಸರ ವಿರುದ್ಧ ಬಹುಕಾಲದವರೆಗೆ ಹೋರಾಡಿದನು.


ಯೆಹೋಶುವನು ತುಂಬಾ ಮುದುಕನಾದಾಗ ಯೆಹೋವನು ಅವನಿಗೆ, “ಯೆಹೋಶುವನೆ, ನೀನು ವೃದ್ಧನಾದೆ. ಆದರೆ ನೀನು ಇನ್ನೂ ಸ್ವಾಧೀನಪಡಿಸಿಕೊಳ್ಳಬೇಕಾದ ಪ್ರದೇಶ ಬಹಳಷ್ಟಿದೆ” ಅಂದನು.


ಆದ್ದರಿಂದ ಮೋಶೆಯು ಅಂದು ನನಗೆ, ‘ನೀನು ಸಂಚರಿಸಿ ನೋಡಿದ ಆ ಭೂಮಿಯು ನಿನ್ನ ಸ್ವಂತ ಭೂಮಿಯಾಗುತ್ತದೆ. ನಿನ್ನ ಮಕ್ಕಳು ಶಾಶ್ವತವಾಗಿ ಅದರ ಸ್ವಾಸ್ತ್ಯವನ್ನು ಹೊಂದಿರುತ್ತಾರೆ. ನೀನು ನನ್ನ ದೇವರಾದ ಯೆಹೋವನಲ್ಲಿ ನಿಜವಾದ ನಂಬಿಕೆ ಇಟ್ಟಿದ್ದಕ್ಕಾಗಿ ಆ ಪ್ರದೇಶವನ್ನು ನಿನಗೆ ಕೊಡುತ್ತೇನೆ’ ಎಂದು ವಾಗ್ದಾನ ಮಾಡಿದನು.


ಮೋಶೆಯು ನನ್ನನ್ನು ಕಳುಹಿಸಿ ಕೊಟ್ಟಾಗ ನಾನು ದೃಢಕಾಯನಾಗಿದ್ದಂತೆಯೇ ಈಗಲೂ ಸಹ ದೃಢಕಾಯನಾಗಿದ್ದೇನೆ. ಆಗ ನಾನು ಯುದ್ಧಮಾಡಲು ಹೇಗೆ ಸಿದ್ಧವಾಗಿರುತ್ತಿದ್ದೆನೋ ಅದೇ ರೀತಿ ಈಗಲೂ ಸಿದ್ಧನಾಗಿದ್ದೇನೆ.


ನೀನು ಸಾವಿರ ವೈರಿಗಳನ್ನು ಸೋಲಿಸುವೆ. ನಿನ್ನ ಬಲಗೈ ಹತ್ತುಸಾವಿರ ಶತ್ರು ಸೈನಿಕರನ್ನು ಸೋಲಿಸುವುದು. ನಿನ್ನ ಶತ್ರುಗಳಿಗೆ ನಿನ್ನನ್ನು ಮುಟ್ಟಲೂ ಸಾಧ್ಯವಾಗದು.


ಅವರಲ್ಲಿ ಕೆಲವರು ಮರುಭೂಮಿಯಲ್ಲಿ ಅಲೆದಾಡಿದರು. ತಾವು ನೆಲೆಸತಕ್ಕ ಪಟ್ಟಣಕ್ಕಾಗಿ ಅವರು ಹುಡುಕಿದರೂ ಅದು ಅವರಿಗೆ ಕಾಣಲಿಲ್ಲ.


ನೂನನ ಮಗನಾದ ಯೆಹೋಶುವನು ಮತ್ತು ಯೆಫುನ್ನೆಯ ಮಗನಾದ ಕಾಲೇಬನ ಹೊರತು ಉಳಿದ ಹತ್ತು ಮಂದಿ ಸತ್ತರು. ಯೆಹೋವನು ಅವರಿಬ್ಬರನ್ನು ಉಳಿಸಿದನು. ಅವರಿಗೆ ವ್ಯಾಧಿಯು ತಗಲಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು