Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 14:13 - ಪರಿಶುದ್ದ ಬೈಬಲ್‌

13 ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬನನ್ನು ಆಶೀರ್ವದಿಸಿ ಹೆಬ್ರೋನ್ ನಗರವನ್ನು ಅವನಿಗೆ ಸ್ವಾಸ್ತ್ಯವಾಗಿ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬನನ್ನು ಆಶೀರ್ವದಿಸಿ, ಹೆಬ್ರೋನ್ ಬೆಟ್ಟವನ್ನು ಅವನಿಗೆ ಸ್ವತ್ತಾಗಿ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬನನ್ನು ಆಶೀರ್ವದಿಸಿ, ಹೆಬ್ರೋನ್ ನಗರವನ್ನು ಅವನಿಗೆ ಸೊತ್ತಾಗಿ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬನನ್ನು ಆಶೀರ್ವದಿಸಿ ಹೆಬ್ರೋನ್ ಪಟ್ಟಣವನ್ನು ಅವನಿಗೆ ಸ್ವಾಸ್ತ್ಯವಾಗಿ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಯೆಹೋಶುವನು ಯೆಫುನ್ನೆಯ ಮಗ ಕಾಲೇಬನನ್ನು ಆಶೀರ್ವದಿಸಿ, ಅವನಿಗೆ ಹೆಬ್ರೋನನ್ನು ಸೊತ್ತಾಗಿ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 14:13
16 ತಿಳಿವುಗಳ ಹೋಲಿಕೆ  

ಹೆಬ್ರೋನಿಗೆ ಸಮೀಪದಲ್ಲಿರುವ ಭೂಮಿಯನ್ನು ಕಾಲೇಬನಿಗೆ ಕೊಡುವುದಾಗಿ ಮೋಶೆಯು ವಾಗ್ದಾನ ಮಾಡಿದ್ದನು. ಆದ್ದರಿಂದ ಆ ಭೂಮಿಯನ್ನು ಕಾಲೇಬನ ಕುಟುಂಬದವರಿಗೆ ಕೊಡಲಾಯಿತು. ಕಾಲೇಬನ ಜನರು ಅನಾಕನ ಮೂರು ಜನ ಮಕ್ಕಳನ್ನು ಆ ಪ್ರದೇಶದಿಂದ ಬಲವಂತವಾಗಿ ಹೊರಗಟ್ಟಿದರು.


ಯೆಹೋಶುವನು ಅವರನ್ನು ಆಶೀರ್ವದಿಸಿ ಬೀಳ್ಕೊಟ್ಟನು. ಅವರು ತಮ್ಮತಮ್ಮ ಮನೆಗಳಿಗೆ ಹೋದರು.


ಯೆಫುನ್ನೆಯ ಮಗನಾದ ಕಾಲೇಬನಿಗೆ ಯೆಹೂದ ಕುಲದವರ ಸ್ವಾಸ್ತ್ಯದಲ್ಲಿಯೇ ಸ್ವಲ್ಪ ಪ್ರದೇಶವನ್ನು ಕೊಡಬೇಕೆಂದು ದೇವರು ಯೆಹೋಶುವನಿಗೆ ಹೇಳಿದ್ದನು. ಅದಕ್ಕಾಗಿ ಯೆಹೋಶುವನು ಕಾಲೇಬನಿಗೆ ದೇವರು ಆಜ್ಞಾಪಿಸಿದ ಪ್ರದೇಶವನ್ನು ಕೊಟ್ಟನು. ಯೆಹೋಶುವನು ಅವನಿಗೆ ಹೆಬ್ರೋನ್ ಎಂಬ ಕಿರ್ಯಾತರ್ಬ ಊರನ್ನು ಕೊಟ್ಟನು. (ಅರ್ಬನು ಅನಾಕನ ತಂದೆ.)


ಆದರೆ ನನ್ನ ಪಾರಿವಾಳವೂ ನಿರ್ಮಲೆಯೂ ಒಬ್ಬಳೇ ಒಬ್ಬಳು. ಆಕೆಯು ತನ್ನ ತಾಯಿಗೆ ಅಚ್ಚುಮೆಚ್ಚಿನವಳು. ಯುವತಿಯರು ಆಕೆಯನ್ನು ಕಂಡು ಹೊಗಳುವರು. ಹೌದು, ರಾಣಿಯರೂ ಉಪಪತ್ನಿಯರೂ ಆಕೆಯನ್ನು ಹೊಗಳುವರು.


ಏಲಿಯು, “ಸಮಾಧಾನದಿಂದ ಹೋಗು. ಇಸ್ರೇಲಿನ ದೇವರು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುತ್ತಾನೆ” ಎಂದು ಉತ್ತರಿಸಿದನು.


ಯಾಕೋಬನು ಫರೋಹನನ್ನು ಆಶೀರ್ವದಿಸಿದ ಬಳಿಕ ಫರೋಹನ ಸನ್ನಿಧಿಯಿಂದ ಹೊರಟುಹೋದನು.


ಆಗ ಯೋಸೇಫನು ತನ್ನ ತಂದೆಯನ್ನು ಫರೋಹನ ಸನ್ನಿಧಿಗೆ ಕರೆಯಿಸಿದನು. ಯಾಕೋಬನು ಫರೋಹನನ್ನು ಆಶೀರ್ವದಿಸಿದನು.


ಆ ನಗರ ಈಗಲೂ ಕೆನಿಜ್ಜೀಯನಾದ ಯೆಫುನ್ನೆಯ ಮಗನಾದ ಕಾಲೇಬನ ವಂಶದವರ ಸ್ವಾಸ್ತ್ಯವಾಗಿದೆ. ಏಕೆಂದರೆ ಅವನು ಇಸ್ರೇಲಿನ ದೇವರಾದ ಯೆಹೋವನನ್ನು ನಂಬಿದ್ದನು ಮತ್ತು ಆತನ ಆಜ್ಞೆಯನ್ನು ಪಾಲಿಸಿದನು.


ಕೆರೇತ್ಯರು ವಾಸಿಸುವ ನೆಗೆವ್ ಮೇಲೆ ನಾವು ಆಕ್ರಮಣ ಮಾಡಿದೆವು. ನಾವು ಯೆಹೂದ ದೇಶದ ಮೇಲೆ ಮತ್ತು ಕಾಲೇಬ್ಯರು ವಾಸಿಸುವ ನೆಗೆವ್ ಪ್ರಾಂತ್ಯಗಳ ಮೇಲೆ ಆಕ್ರಮಣ ಮಾಡಿದೆವು. ನಾವು ಚಿಕ್ಲಗನ್ನು ಸುಟ್ಟುಹಾಕಿದೆವು” ಎಂದು ಹೇಳಿದನು.


ಮತ್ತು ಹೆಬ್ರೋನಿನವರಿಗೆ ಕಳುಹಿಸಿಕೊಟ್ಟನು ಮತ್ತು ತನ್ನ ಜನರು ಹೋಗಿದ್ದ ಇತರ ಸ್ಥಳಗಳ ನಾಯಕರಿಗೂ ಆ ವಸ್ತುಗಳಲ್ಲಿ ಕೆಲವನ್ನು ಕಳುಹಿಸಿದನು.


ತರುವಾಯ ದಾವೀದನು ಯೆಹೋವನಲ್ಲಿ ಪ್ರಾರ್ಥಿಸಿ, “ಯೆಹೂದದ ಯಾವುದಾದರೂ ನಗರಕ್ಕೆ ನಾನು ಹೋಗಬಹುದೇ?” ಎಂದು ಕೇಳಿದನು. “ಹೋಗು” ಎಂಬುದಾಗಿ ಯೆಹೋವನು ಹೇಳಿದನು. “ನಾನು ಎಲ್ಲಿಗೆ ಹೋಗಲಿ?” ಎಂದು ದಾವೀದನು ಕೇಳಿದನು. “ಹೆಬ್ರೋನಿಗೆ ಹೋಗು” ಎಂದು ಯೆಹೋವನು ಉತ್ತರಿಸಿದನು.


ಎಲ್ಲಾಜಾರನ ಮಗನು ಫೀನೆಹಾಸ. ಫೀನೆಹಾಸನ ಮಗನು ಅಬೀಷೂವ.


ಯೆಹೂದ ಸಂಸ್ಥಾನದ ಜನರು ಈ ಪಟ್ಟಣಗಳಲ್ಲಿ ವಾಸಿಸಿದರು. ಕಿರ್ಯತರ್ಬ ಮತ್ತು ಸುತ್ತಮುತ್ತಲಿರುವ ಚಿಕ್ಕ ಪಟ್ಟಣಗಳಲ್ಲಿ, ದೀಬೋನ್ ಮತ್ತು ಅದರ ಸುತ್ತಲಿರುವ ಚಿಕ್ಕ ಪಟ್ಟಣಗಳಲ್ಲಿ, ಯಕಬ್ಜೆಯೇಲ್ ಮತ್ತು ಅದರ ಸುತ್ತಲಿದ್ದ ಚಿಕ್ಕ ಪಟ್ಟಣಗಳಲ್ಲಿ ವಾಸಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು