Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 14:2 - ಪರಿಶುದ್ದ ಬೈಬಲ್‌

2 ಜನರು ತಮ್ಮ ಪ್ರದೇಶವನ್ನು ಯಾವ ವಿಧಾನದಿಂದ ಆರಿಸಿಕೊಳ್ಳಬೇಕೆಂಬುದರ ಬಗ್ಗೆ ಬಹುಕಾಲದ ಹಿಂದೆಯೇ ಯೆಹೋವನು ಮೋಶೆಗೆ ತಿಳಿಸಿದ್ದನು. ತಮ್ಮತಮ್ಮ ಪ್ರದೇಶಗಳನ್ನು ನಿರ್ಣಯಿಸಲು ಇಸ್ರೇಲಿನ ಒಂಭತ್ತುವರೆ ಕುಲಗಳ ಜನರು ಚೀಟುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಯೊರ್ದನಿನ ಪಶ್ಚಿಮದ ಕಾನಾನ ದೇಶವನ್ನು ಚೀಟು ಹಾಕಿ ಇಸ್ರಾಯೇಲರ ಒಂಭತ್ತುವರೆ ಕುಲದವರಿಗೆ ಸ್ವತ್ತಾಗಿ ಕೊಟ್ಟನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸರ್ವೇಶ್ವರಸ್ವಾಮಿ ಮೋಶೆಯ ಮೂಲಕ ಆಜ್ಞಾಪಿಸಿದಂತೆ ಜೋರ್ಡನಿನ ಪಶ್ಚಿಮದ ಕಾನಾನ್ ನಾಡನ್ನು ಚೀಟುಹಾಕಿ ಇಸ್ರಯೇಲರ ಒಂಬತ್ತುವರೆ ಕುಲದವರಿಗೆ ಸ್ವಂತ ಆಸ್ತಿಯಾಗಿ ಹಂಚಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ [ಯೊರ್ದನಿನ ಪಶ್ಚಿಮದ] ಕಾನಾನ್ ದೇಶವನ್ನು ಚೀಟುಹಾಕಿ ಇಸ್ರಾಯೇಲ್ಯರ ಒಂಭತ್ತುವರೆ ಕುಲದವರಿಗೆ ಸ್ವಾಸ್ತ್ಯವಾಗಿ ಹಂಚಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆಹೋವ ದೇವರು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಹಾಗೆಯೇ ಒಂಬತ್ತುವರೆ ಗೋತ್ರಗಳಿಗೆ ಚೀಟುಗಳನ್ನು ಹಾಕಿ ಸೊತ್ತಾಗಿ ಪಾಲು ಹಂಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 14:2
14 ತಿಳಿವುಗಳ ಹೋಲಿಕೆ  

ಮೋಶೆಯು ಇಸ್ರೇಲರಿಗೆ ಹೀಗೆ ಆಜ್ಞಾಪಿಸಿದನು: “ನೀವು ಚೀಟುಹಾಕಿ ಭಾಗಮಾಡಿಕೊಳ್ಳುವ ದೇಶವೇ ಇದು. ಒಂಭತ್ತುವರೆ ಕುಲಗಳವರಿಗೆ ಈ ದೇಶವನ್ನು ಕೊಡಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ.


ನೀವು ಚೀಟುಹಾಕಿ ಆ ದೇಶವನ್ನು ನಿಮ್ಮನಿಮ್ಮ ಕುಲಗಳಿಗೆ ಹಂಚಿಕೊಳ್ಳಬೇಕು. ಹೆಚ್ಚು ಮಂದಿಯುಳ್ಳ ಕುಲಕ್ಕೆ ಹೆಚ್ಚಾಗಿಯೂ ಕಡಿಮೆ ಮಂದಿಯುಳ್ಳ ಕುಲಕ್ಕೆ ಕಡಿಮೆಯಾಗಿಯೂ ಸ್ವಾಸ್ತ್ಯವು ದೊರೆಯಬೇಕು. ಒಂದೊಂದು ಕುಲಕ್ಕೆ ಯಾವ ಯಾವ ಸ್ಥಳವನ್ನು ಸೂಚಿಸುತ್ತದೋ ಆ ಸ್ಥಳದಲ್ಲಿಯೇ ಆ ಕುಲದ ಸ್ವಾಸ್ತ್ಯವಿರಬೇಕು. ಒಂದೊಂದು ಕುಲದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು.


ಜನರು ಚೀಟುಹಾಕಿ ನಿರ್ಧಾರ ಮಾಡಿದರೂ ಆ ನಿರ್ಧಾರಗಳು ಬರುವುದು ಯೆಹೋವನಿಂದಲೇ.


“ಆಗ ರಾಜನು ತನ್ನ ಬಲಗಡೆಯಲ್ಲಿರುವ ಜನರಿಗೆ, ‘ಬನ್ನಿರಿ, ನನ್ನ ತಂದೆ ನಿಮಗೆ ಮಹಾ ಆಶೀರ್ವಾದಗಳನ್ನು ಕೊಟ್ಟಿದ್ದಾನೆ. ಬನ್ನಿರಿ, ದೇವರು ನಿಮಗೆ ವಾಗ್ದಾನ ಮಾಡಿದ ರಾಜ್ಯವನ್ನು ಪಡೆದುಕೊಳ್ಳಿರಿ. ಆ ರಾಜ್ಯವು ಲೋಕ ಉಂಟಾದಂದಿನಿಂದ ನಿಮಗಾಗಿ ಸಿದ್ಧಮಾಡಲ್ಪಟ್ಟಿದೆ.


ಬಲಿಷ್ಠರಾದ ಇಬ್ಬರು ವಾದಮಾಡುತ್ತಿರುವಾಗ ನಿರ್ಧಾರಕ್ಕಾಗಿ ಚೀಟುಹಾಕಿದರೆ ಅವರ ಜಗಳ ಶಮನವಾಗುತ್ತದೆ.


ಬಳಿಕ ಅಪೊಸ್ತಲರು ಅವರಿಬ್ಬರಲ್ಲಿ ಒಬ್ಬನನ್ನು ಆರಿಸಿಕೊಳ್ಳಲು ಚೀಟಿಹಾಕಿದರು. ಚೀಟಿ ಮತ್ತೀಯನಿಗೆ ಬಂದದ್ದರಿಂದ ಹನ್ನೊಂದು ಮಂದಿಯೊಂದಿಗೆ ಅವನೂ ಅಪೊಸ್ತಲನಾದನು.


“ನಿಮಗೋಸ್ಕರ ದೇಶವನ್ನು ಹಂಚಿಕೊಡುವ ಕುಲಪ್ರಧಾನರು ಯಾರೆಂದರೆ: ಮಹಾಯಾಜಕನಾದ ಎಲ್ಲಾಜಾರ್, ನೂನನ ಮಗನಾದ ಯೆಹೋಶುವ


ಆದರೆ ನೀವು ಒಂದು ನಕ್ಷೆಯನ್ನು ಮಾಡಿ ಭೂಮಿಯನ್ನು ಏಳು ಭಾಗಗಳಾಗಿ ವಿಂಗಡಿಸಬೇಕು. ಆ ನಕ್ಷೆಯನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿ. ಯಾವ ಕುಲದವರು ಯಾವ ಭೂಮಿಯನ್ನು ತೆಗೆದುಕೊಳ್ಳಬೇಕೆಂಬುದನ್ನು ನಮ್ಮ ದೇವರಾದ ಯೆಹೋವನು ನಿರ್ಣಯಿಸಲಿ.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ಒಂಭತ್ತು ಕುಲಗಳಿಗೂ ಮನಸ್ಸೆ ಕುಲದ ಅರ್ಧಜನರಿಗೂ ಪಾಲು ಮಾಡಿಕೊಡು.”


ಯೆಹೋಶುವನು ಅವರಿಗಾಗಿ ಶೀಲೋವಿನಲ್ಲಿ ಯೆಹೋವನ ಮುಂದೆ ಚೀಟುಹಾಕಿದನು. ಹೀಗೆ ಯೆಹೋಶುವನು ಭೂಮಿಯನ್ನು ಹಂಚಿದನು; ಪ್ರತಿಯೊಂದು ಕುಲಕ್ಕೆ ಅದರ ಭೂಭಾಗವನ್ನು ಕೊಟ್ಟನು.


“ನೀನು ಚೀಟುಹಾಕಿ ಇಸ್ರೇಲರ ಕುಲಗಳಿಗನುಸಾರವಾಗಿ ದೇಶವನ್ನು ವಿಂಗಡಿಸಬೇಕು. ಆ ಸಮಯದಲ್ಲಿ ಒಂದು ಭಾಗವನ್ನು ಪ್ರತ್ಯೇಕಿಸಿಡಬೇಕು. ಅದು ಯೆಹೋವನಿಗೋಸ್ಕರ ಮೀಸಲಾಗಿಡಲ್ಪಟ್ಟದ್ದು. ಆ ಪ್ರದೇಶವು ಇಪ್ಪತ್ತೈದು ಸಾವಿರ ಮೊಳ ಉದ್ದ ಮತ್ತು ಹತ್ತು ಸಾವಿರ ಮೊಳ ಅಗಲವಿರುವದು. ಈ ಎಲ್ಲಾ ಜಾಗವು ಪರಿಶುದ್ಧವಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು