Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 14:6 - ಪರಿಶುದ್ದ ಬೈಬಲ್‌

6 ಒಂದು ದಿವಸ ಯೆಹೂದ ಕುಲದ ಕೆಲವರು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಬಳಿಗೆ ಬಂದರು. ಅವರಲ್ಲಿ ಕನಿಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಒಬ್ಬನಾಗಿದ್ದನು. ಕಾಲೇಬನು ಯೆಹೋಶುವನಿಗೆ, “ಕಾದೇಶ್‌ಬರ್ನೇಯದಲ್ಲಿ ಯೆಹೋವನು ತನ್ನ ಸೇವಕನಾದ ಮೋಶೆಯೊಂದಿಗೆ ನಮ್ಮಿಬ್ಬರ ವಿಷಯವಾಗಿ ಮಾತಾಡಿದ್ದು ನಿನಗೆ ನೆನಪಿದೆಯಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋಶುವನು ಗಿಲ್ಗಾಲಿನಲ್ಲಿದ್ದಾಗ ಯೆಹೂದ ಕುಲದವರು ಅವನ ಬಳಿಗೆ ಬಂದರು. ಅವರಲ್ಲಿ ಕೆನಿಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಯೆಹೋಶುವನಿಗೆ “ಯೆಹೋವನು ಕಾದೇಶ್ ಬರ್ನೇಯದಲ್ಲಿ ನಮ್ಮಿಬ್ಬರ ವಿಷಯವಾಗಿ ದೇವರ ಮನುಷ್ಯನಾದ ಮೋಶೆಗೆ ಹೇಳಿದ್ದು ನಿನಗೆ ಚೆನ್ನಾಗಿ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಯೆಹೋಶುವನು ಗಿಲ್ಗಾಲಿನಲ್ಲಿದ್ದಾಗ ಯೆಹೂದ ಕುಲದವರು ಅವನ ಬಳಿಗೆ ಬಂದರು. ಅವರಲ್ಲಿ ಕೆನೆಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಯೆಹೋಶುವನಿಗೆ, “ಸರ್ವೇಶ್ವರ ಕಾದೇಶ್ ಬರ್ನೇಯದಲ್ಲಿ ನಮ್ಮಿಬ್ಬರ ವಿಷಯವಾಗಿ ದೇವರ ಭಕ್ತನಾದ ಮೋಶೆಗೆ ಹೇಳಿದ್ದು ನಿಮಗೆ ಚೆನ್ನಾಗಿ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋಶುವನು ಗಿಲ್ಗಾಲಿನಲ್ಲಿದ್ದಾಗ ಯೆಹೂದ ಕುಲದವರು ಅವನ ಬಳಿಗೆ ಬಂದರು. ಅವರಲ್ಲಿ ಕೆನಿಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಅವನಿಗೆ - ಯೆಹೋವನು ಕಾದೇಶ್ ಬರ್ನೇಯದಲ್ಲಿ ನಮ್ಮಿಬ್ಬರ ವಿಷಯವಾಗಿ ದೇವರ ಮನುಷ್ಯನಾದ ಮೋಶೆಗೆ ಹೇಳಿದ್ದು ನಿನಗೆ ಗೊತ್ತಿರುವದಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೂದದ ಗೋತ್ರದವರು ಗಿಲ್ಗಾಲಿನಲ್ಲಿ ಯೆಹೋಶುವನ ಬಳಿಗೆ ಬಂದರು. ಆಗ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನು ಅವನಿಗೆ, “ಕಾದೇಶ್ ಬರ್ನೇಯದಲ್ಲಿ ಯೆಹೋವ ದೇವರು ನನ್ನನ್ನೂ, ನಿನ್ನನ್ನೂ ಕುರಿತು ದೇವರ ಮನುಷ್ಯನಾದ ಮೋಶೆಗೆ ಹೇಳಿದ ಮಾತನ್ನು ನೀನು ಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 14:6
30 ತಿಳಿವುಗಳ ಹೋಲಿಕೆ  

ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರೇ ಹೊರತು ನಿಮ್ಮಲ್ಲಿ ಬೇರೆ ಯಾರೂ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಸೇರುವುದಿಲ್ಲ.


ಆದರೆ ನನ್ನ ಸೇವಕನಾದ ಕಾಲೇಬನು ಅವರ ಹಾಗಲ್ಲ, ಅವನು ನನ್ನನ್ನು ಮನಃಪೂರ್ವಕವಾಗಿ ಹಿಂಬಾಲಿಸಿದ್ದಾನೆ. ಆದ್ದರಿಂದ ಅವನು ಸಂಚರಿಸಿ ನೋಡಿದ ದೇಶಕ್ಕೆ ಅವನನ್ನು ಬರಮಾಡುವೆನು ಮತ್ತು ಅವನ ಸಂತತಿಯವರು ಆ ದೇಶವನ್ನು ಹೊಂದುವರು.


ಯೆಹೂದ ಕುಲದಿಂದ ಯೆಫುನ್ನೆಯ ಮಗನಾದ ಕಾಲೇಬ್,


ಆ ನಗರ ಈಗಲೂ ಕೆನಿಜ್ಜೀಯನಾದ ಯೆಫುನ್ನೆಯ ಮಗನಾದ ಕಾಲೇಬನ ವಂಶದವರ ಸ್ವಾಸ್ತ್ಯವಾಗಿದೆ. ಏಕೆಂದರೆ ಅವನು ಇಸ್ರೇಲಿನ ದೇವರಾದ ಯೆಹೋವನನ್ನು ನಂಬಿದ್ದನು ಮತ್ತು ಆತನ ಆಜ್ಞೆಯನ್ನು ಪಾಲಿಸಿದನು.


ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ದೇಶದ ವಿಷಯವನ್ನು ಸಂಗ್ರಹಿಸಿಕೊಂಡು ಬಂದವರಲ್ಲಿ ಇಬ್ಬರಾಗಿದ್ದರು. ಅವರು ಬೇಸರಗೊಂಡು ತಮ್ಮ ಬಟ್ಟೆಗಳನ್ನು ಹರಿದುಕೊಂಡರು.


ಕೆನಜನ ಮಗನಾದ ಒತ್ನೀಯೇಲನು ಆ ಪಟ್ಟಣವನ್ನು ಗೆದ್ದನು. ಕಾಲೇಬನು ತನ್ನ ಮಗಳಾದ ಅಕ್ಷಾಳನ್ನು ಒತ್ನೀಯೇಲನಿಗೆ ಮದುವೆ ಮಾಡಿಕೊಟ್ಟನು.


ಇಸ್ರೇಲರು ಪಾರಾನ್ ಮರುಭೂಮಿಯ ಕಾದೇಶಿನಲ್ಲಿ ತಂಗಿದ್ದರು. ಅವರು ನೋಡಿದ್ದರ ಬಗ್ಗೆ ಎಲ್ಲವನ್ನು ಮೋಶೆಗೂ ಆರೋನನಿಗೂ ಎಲ್ಲಾ ಇಸ್ರೇಲರಿಗೂ ತಿಳಿಸಿದರು. ಅವರು ಕಾನಾನ್ ದೇಶದಿಂದ ತಂದ ಹಣ್ಣುಗಳನ್ನು ತೋರಿಸಿದರು.


ಯೆಹೋವನೇ, ತಲತಲಾಂತರಗಳಿಂದಲೂ ನೀನೇ ನಮ್ಮ ವಾಸಸ್ಥಾನ.


ಆದ್ದರಿಂದ ದೇವರ ಸೇವಕರು ಸಿದ್ಧರೂ ಸಕಲ ಸತ್ಕಾರ್ಯಗಳಿಗೆ ಸನ್ನದ್ಧರೂ ಆಗಬಲ್ಲರು.


ಆದರೆ ನೀನು ದೇವರ ಮನುಷ್ಯ. ಆದ್ದರಿಂದ ಈ ಎಲ್ಲಾ ಸಂಗತಿಗಳಿಂದ ದೂರವಾಗಿರು. ದೇವರ ಸೇವೆಯನ್ನು ಮಾಡುತ್ತಾ ಉತ್ತಮಮಾರ್ಗದಲ್ಲಿ ಜೀವಿಸಲು ಪ್ರಯತ್ನಿಸು; ನಂಬಿಕೆ, ಪ್ರೀತಿ, ತಾಳ್ಮೆ, ಸಾತ್ವಿಕತೆಗಳನ್ನು ಹೊಂದಿದವನಾಗಿರು.


ಹಜಾಯೇಲನು ನಾಚಿಕೊಳ್ಳುವ ತನಕ ಎಲೀಷನು ಅವನನ್ನು ಒಂದೇ ಸಮನೆ ನೋಡಿದನು. ನಂತರ ದೇವಮನುಷ್ಯನು ಅಳತೊಡಗಿದನು.


ಎಲೀಷನು ದಮಸ್ಕಕ್ಕೆ ಹೋದನು. ಅರಾಮ್ಯರ ರಾಜನಾದ ಬೆನ್ಹದದನಿಗೆ ಕಾಯಿಲೆಯಾಗಿತ್ತು. ಬೆನ್ಹದದನಿಗೆ ಒಬ್ಬನು, “ದೇವಮನುಷ್ಯನು ಇಲ್ಲಿಗೆ ಬಂದಿದ್ದಾನೆ” ಎಂದು ಹೇಳಿದನು.


ಬಾಳ್‌ಷಾಲಿಷಾದಿಂದ ಒಬ್ಬ ಮನುಷ್ಯನು ಪ್ರಥಮ ಸುಗ್ಗಿಯ ರೊಟ್ಟಿಗಳನ್ನು ದೇವಮನುಷ್ಯನಿಗೆ (ಎಲೀಷನಿಗೆ) ತೆಗೆದುಕೊಂಡು ಬಂದನು. ಇವನು ಇಪ್ಪತ್ತು ಜವೆಗೋಧಿ ರೊಟ್ಟಿಗಳನ್ನೂ ಒಂದು ಚೀಲದಲ್ಲಿ ಹಸೀ ತೆನೆಗಳನ್ನೂ ತಂದನು. ಆಗ ಎಲೀಷನು, “ಜನರಿಗೆ ಈ ಆಹಾರವನ್ನು ಕೊಡು, ಅವರು ತಿನ್ನಲಿ” ಎಂದು ಹೇಳಿದನು.


ಎಲೀಷನು ಆ ಸ್ತ್ರೀಗೆ, “ಮುಂದಿನ ವಸಂತಮಾಸದ ಈ ಕಾಲಕ್ಕೆ ನೀನು ನಿನ್ನ ಗಂಡುಮಗುವನ್ನು ಅಪ್ಪಿಕೊಂಡಿರುವೆ” ಎಂದು ಹೇಳಿದನು. ಆ ಸ್ತ್ರೀಯು, “ದೇವಮನುಷ್ಯನೇ, ಹೀಗೆ ಹೇಳಿ ನಿನ್ನ ಸೇವಕಿಯನ್ನು ವಂಚಿಸಬೇಡ” ಎಂದು ಹೇಳಿದಳು.


ಆ ಸ್ತ್ರೀಯು ತನ್ನ ಗಂಡನಿಗೆ, “ನೋಡಿ, ನಮ್ಮ ಮನೆಯ ದಾರಿಯಲ್ಲಿ ಹಾದುಹೋಗುವ ಎಲೀಷನು ಪರಿಶುದ್ಧನೂ ದೇವಮನುಷ್ಯನೂ ಎಂದು ನನಗೆ ತೋರುತ್ತದೆ.


ಆ ಪ್ರವಾದಿಯು ದೇವಮನುಷ್ಯನನ್ನು ಹಿಂಬಾಲಿಸಿ ಹೋಗಿ ಓಕ್ ಮರದ ಕೆಳಗೆ ಕುಳಿತಿದ್ದ ಅವನನ್ನು ಕಂಡು, “ನೀನು ಯೆಹೂದದಿಂದ ಬಂದ ದೇವಮನುಷ್ಯನೋ?” ಎಂದು ಕೇಳಿದನು. ದೇವಮನುಷ್ಯನು, “ಹೌದು, ನಾನೇ” ಎಂದನು.


ಯೆಹೂದ ದೇಶದವನಾದ ಒಬ್ಬ ದೇವಮನುಷ್ಯನು ಯೆಹೋವನ ಆಜ್ಞೆಯಂತೆ ಬೇತೇಲಿಗೆ ಬಂದನು. ಆಗ ಯಾರೊಬ್ಬಾಮನು ಧೂಪವನ್ನು ಅರ್ಪಿಸುತ್ತಾ, ಯಜ್ಞವೇದಿಕೆಯ ಹತ್ತಿರ ನಿಂತಿದ್ದನು.


ಆಮೇಲೆ ಯೆಹೋಶುವನು ಮತ್ತು ಇಸ್ರೇಲಿನ ಜನರೆಲ್ಲರು ಗಿಲ್ಗಾಲಿನಲ್ಲಿದ್ದ ತಮ್ಮ ಪಾಳೆಯಕ್ಕೆ ಹಿಂತಿರುಗಿದರು.


ಅವರು ಜೋರ್ಡನ್ ನದಿಯನ್ನು ಮೊದಲನೆಯ ತಿಂಗಳಿನ ಹತ್ತನೆಯ ದಿನ ದಾಟಿದರು. ಅವರು ಜೆರಿಕೊವಿನ ಪೂರ್ವಕ್ಕಿರುವ ಗಿಲ್ಗಾಲಿನಲ್ಲಿ ಇಳಿದುಕೊಂಡಿದ್ದರು.


ಮೋಶೆಯಂತ ಪ್ರವಾದಿಯು ಇಸ್ರೇಲರಿಗೆ ದೊರೆಯಲೇ ಇಲ್ಲ. ಯೆಹೋವನು ಅವನೊಂದಿಗೆ ಮುಖಾಮುಖಿಯಾಗಿ ಮಾತನಾಡಿದನು.


ಮೋವಾಬ್ ದೇಶದಲ್ಲಿ ಯೆಹೋವನ ಸೇವಕನಾದ ಮೋಶೆಯು ಸತ್ತುಹೋದನು. ಯೆಹೋವನು ಅವನಿಗೆ ಹಾಗೆ ಆಗುತ್ತದೆಂದು ಮುಂಚೆಯೇ ತಿಳಿಸಿದ್ದನು.


ದೇವರ ಮನುಷ್ಯನಾದ ಮೋಶೆಯು ತಾನು ಸಾಯುವ ಮೊದಲು ಇಸ್ರೇಲರನ್ನು ಆಶೀರ್ವದಿಸಿದನು.


ಕಾಲೇಬನು ಮೋಶೆಯ ಬಳಿಯಲ್ಲಿದ್ದ ಗೊಣಗುಟ್ಟುವ ಜನರನ್ನು ಸುಮ್ಮನಿರಿಸಿ, “ನಾವು ಹೋಗಿ ದೇಶವನ್ನು ವಶಪಡಿಸಿಕೊಳ್ಳಬೇಕು. ನಾವು ಸುಲಭವಾಗಿ ದೇಶವನ್ನು ವಶಪಡಿಸಿಕೊಳ್ಳಬಹುದು” ಎಂದು ಹೇಳಿದನು.


ಯೆಹೋವನು ಅವರೆಲ್ಲರೂ ಮರುಭೂಮಿಯಲ್ಲಿಯೇ ಸಾಯುವರೆಂದು ಹೇಳಿದ್ದನು. ಆದ್ದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.


ಅನಂತರ ನಾನು ರೇಕಾಬ ವಂಶದವರನ್ನು ಯೆಹೋವನ ಆಲಯದಲ್ಲಿ ಕರೆತಂದೆನು. ನಾವು ಹಾನಾನನ ಮಕ್ಕಳ ಕೋಣೆ ಎಂದು ಕರೆಯಲ್ಪಡುವ ಕೋಣೆಯೊಳಕ್ಕೆ ಹೋದೆವು. ಹಾನಾನನು ಇಗ್ದಲ್ಯನೆಂಬವನ ಮಗನು. ಹಾನಾನನು ದೇವರ ಮನುಷ್ಯ. ಈ ಕೋಣೆಯು ಯೆಹೂದದ ರಾಜಕುಮಾರರ ಕೋಣೆಯ ಪಕ್ಕದಲ್ಲಿತ್ತು. ಇದು ಶಲ್ಲೂಮನ ಮಗನಾದ ಮಾಸೇಯನ ಕೋಣೆಯ ಮೇಲ್ಗಡೆ ಇತ್ತು. ಮಾಸೇಯನು ಆಲಯದ ದ್ವಾರಪಾಲಕನಾಗಿದ್ದನು.


ಮೋಶೆಯು ದೇವರ ಮನುಷ್ಯನಾಗಿದ್ದನು. ಅವನ ಮಕ್ಕಳು ಲೇವಿಕುಲದಲ್ಲಿ ಸೇರಿಸಲ್ಪಟ್ಟಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು