ಯೆಹೋಶುವ 14:7 - ಪರಿಶುದ್ದ ಬೈಬಲ್7 ಯೆಹೋವನ ಸೇವಕನಾದ ಮೋಶೆಯು, ಈ ದೇಶದಲ್ಲಿ ಗೂಢಚರ್ಯ ಮಾಡುವುದಕ್ಕೆ ನನ್ನನ್ನು ಕಳುಹಿಸಿದ್ದನು. ಆಗ ನನಗೆ ನಲವತ್ತು ವರ್ಷವಾಗಿತ್ತು. ನಾನು ಹಿಂತಿರುಗಿ ಬಂದಾಗ ಈ ದೇಶದ ಬಗ್ಗೆ ದೇವರ ವಾಗ್ದಾನಗಳನ್ನು ನಂಬಿ ಯಥಾರ್ಥವಾದ ಸಂಗತಿಗಳನ್ನು ಮೋಶೆಗೆ ಹೇಳಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೆಹೋವನ ಸೇವಕನಾದ ಮೋಶೆಯು ಈ ದೇಶವನ್ನು ಸಂಚರಿಸಿ ನೋಡುವುದಕ್ಕೋಸ್ಕರ ಕಾದೇಶ್ ಬರ್ನೇಯದಿಂದ ನನ್ನನ್ನು ಕಳುಹಿಸಿದಾಗ ನನಗೆ ನಲ್ವತ್ತು ವರ್ಷವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಸರ್ವೇಶ್ವರನ ದಾಸನಾದ ಮೋಶೆ ಈ ನಾಡನ್ನು ಸಂಚರಿಸಿ ನೋಡುವುದಕ್ಕೆ ಕಾದೇಶ್ ಬರ್ನೇಯದಿಂದ ನನ್ನನ್ನು ಕಳಿಸಿದಾಗ ನನಗೆ ನಾಲ್ವತ್ತು ವರುಷ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯೆಹೋವನ ಸೇವಕನಾದ ಮೋಶೆಯು ಈ ದೇಶವನ್ನು ಸಂಚರಿಸಿನೋಡುವದಕ್ಕೋಸ್ಕರ ಕಾದೇಶ್‍ಬರ್ನೇಯದಿಂದ ನನ್ನನ್ನು ಕಳುಹಿಸಿದಾಗ ನನಗೆ ನಾಲ್ವತ್ತು ವರುಷವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ದೇಶವನ್ನು ಸಂಚರಿಸಿ ನೋಡಲು ಯೆಹೋವ ದೇವರ ಸೇವಕನಾದ ಮೋಶೆಯು ನನ್ನನ್ನು ಕಾದೇಶ್ ಬರ್ನೇಯದಿಂದ ಕಳುಹಿಸುವಾಗ ನಾನು ನಾಲ್ವತ್ತು ವರ್ಷ ಪ್ರಾಯದವನಾಗಿದ್ದೆನು. ನನ್ನ ಮನಸ್ಸಿಗೆ ಬಂದಿದ್ದ ವರದಿಯನ್ನು ತಂದು ತಿಳಿಸಿದೆನು. ಅಧ್ಯಾಯವನ್ನು ನೋಡಿ |