ಯೆಹೋಶುವ 14:8 - ಪರಿಶುದ್ದ ಬೈಬಲ್8 ನನ್ನ ಜೊತೆಯಲ್ಲಿ ಬಂದ ಬೇರೆಯವರು ಭಯವನ್ನುಂಟುಮಾಡುವ ಸಂಗತಿಗಳನ್ನು ಹೇಳಿದರು. ಆದರೆ ಯೆಹೋವನು ಆ ಭೂಮಿಯನ್ನು ನಮಗೆ ಕೊಡುತ್ತಾನೆಂದು ನಾನು ನಿಜವಾಗಿ ನಂಬಿದ್ದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನನ್ನ ಜೊತೆಯಲ್ಲಿ ಬಂದಿದ್ದ ಸಹೋದರರು ಜನರನ್ನು ಎದೆಗುಂದಿಸಿದರು. ನಾನಾದರೋ ನನ್ನ ದೇವರಾದ ಯೆಹೋವನನ್ನೇ ಸಂಪೂರ್ಣವಾಗಿ ನಂಬಿ ಯಥಾರ್ಥವಾಗಿ ಆತನನ್ನೇ ಅನುಸರಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನನ್ನ ಜೊತೆಯಲ್ಲಿ ಬಂದಿದ್ದ ಸಹೋದರರು ಜನರನ್ನು ಎದೆಗೆಡಿಸಿದರು. ನಾನಾದರೋ ನನ್ನ ದೇವರಾದ ಸರ್ವೇಶ್ವರನನ್ನೇ ಸಂಪೂರ್ಣವಾಗಿ ನಂಬಿ ಶ್ರದ್ಧೆಯಿಂದ ಅನುಸರಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನನ್ನ ಜೊತೆಯಲ್ಲಿ ಬಂದಿದ್ದ ಸಹೋದರರು ಜನರನ್ನು ಎದೆಗೆಡಿಸಿದರು. ನಾನಾದರೋ ನನ್ನ ದೇವರಾದ ಯೆಹೋವನನ್ನೇ ಸಂಪೂರ್ಣವಾಗಿ ನಂಬಿಕೊಂಡು ಯಥಾರ್ಥವನ್ನೇ ಹೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದರೂ ನನ್ನ ಸಂಗಡ ಹೋಗಿ ಬಂದ ನನ್ನ ಸಹೋದರರು ಜನರ ಹೃದಯವನ್ನು ಕರಗಿಸಿದರು. ಆದರೆ ನಾನು ನನ್ನ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದ ಹಿಂಬಾಲಿಸಿದೆನು. ಅಧ್ಯಾಯವನ್ನು ನೋಡಿ |