Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 14:9 - ಪರಿಶುದ್ದ ಬೈಬಲ್‌

9 ಆದ್ದರಿಂದ ಮೋಶೆಯು ಅಂದು ನನಗೆ, ‘ನೀನು ಸಂಚರಿಸಿ ನೋಡಿದ ಆ ಭೂಮಿಯು ನಿನ್ನ ಸ್ವಂತ ಭೂಮಿಯಾಗುತ್ತದೆ. ನಿನ್ನ ಮಕ್ಕಳು ಶಾಶ್ವತವಾಗಿ ಅದರ ಸ್ವಾಸ್ತ್ಯವನ್ನು ಹೊಂದಿರುತ್ತಾರೆ. ನೀನು ನನ್ನ ದೇವರಾದ ಯೆಹೋವನಲ್ಲಿ ನಿಜವಾದ ನಂಬಿಕೆ ಇಟ್ಟಿದ್ದಕ್ಕಾಗಿ ಆ ಪ್ರದೇಶವನ್ನು ನಿನಗೆ ಕೊಡುತ್ತೇನೆ’ ಎಂದು ವಾಗ್ದಾನ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮೋಶೆಯು ಆ ದಿನ ನನಗೆ ‘ನೀನು ಪೂರ್ಣಮನಸ್ಸಿನಿಂದ ನನ್ನ ದೇವರಾದ ಯೆಹೋವನನ್ನು ಅನುಸರಿಸಿದ್ದರಿಂದ ನೀನು ಸಂಚರಿಸಿದ ಪ್ರದೇಶವು ನಿನಗೂ ನಿನ್ನ ಸಂತಾನದವರಿಗೂ ಶಾಶ್ವತ ಸ್ವತ್ತಾಗಿರುವುದು’ ಎಂದು ಪ್ರಮಾಣ ಮಾಡಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮೋಶೆ ಅಂದು ನನಗೆ, ‘ನೀನು ಪೂರ್ಣ ಮನಸ್ಸಿನಿಂದ ನನ್ನ ದೇವರಾದ ಸರ್ವೇಶ್ವರನನ್ನೇ ಶ್ರದ್ಧೆಯಿಂದ ಅನುಸರಿಸಿದ ಕಾರಣ ನೀನು ಸಂಚರಿಸಿದ ಪ್ರದೇಶ ನಿನಗೂ ನಿನ್ನ ಸಂತಾನದವರಿಗೂ ಶಾಶ್ವತ ಸೊತ್ತಾಗುವುದು,’ ಎಂದು ಪ್ರಮಾಣಮಾಡಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮೋಶೆಯು ಆ ದಿವಸ - ನೀನು ಪೂರ್ಣಮನಸ್ಸಿನಿಂದ ನನ್ನ ದೇವರಾದ ಯೆಹೋವನನ್ನು ಹೊಂದಿಕೊಂಡದರಿಂದ ನೀನು ಸಂಚರಿಸಿದ ಪ್ರದೇಶವು ನಿನಗೂ ನಿನ್ನ ಸಂತಾನದವರಿಗೂ ಶಾಶ್ವತ ಸ್ವಾಸ್ತ್ಯವಾಗುವದು ಎಂದು ಪ್ರಮಾಣಮಾಡಿ ನನಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆ ದಿವಸದಲ್ಲಿ ಮೋಶೆಯು ನನಗೆ, ‘ನೀನು ನನ್ನ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದ ಹಿಂಬಾಲಿಸಿದ ಕಾರಣ, ನಿನ್ನ ಪಾದ ಮೆಟ್ಟಿದ ದೇಶವು ನಿನಗೂ, ನಿನ್ನ ಮಕ್ಕಳಿಗೂ ಎಂದೆಂದಿಗೂ ಬಾಧ್ಯತೆಯಾಗಿರುವುದು,’ ಎಂದು ಆಣೆ ಇಟ್ಟು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 14:9
8 ತಿಳಿವುಗಳ ಹೋಲಿಕೆ  

ನಾನು ಆ ದೇಶವನ್ನು ನಿಮಗೆ ಕೊಡುವುದಾಗಿ ಮೋಶೆಗೆ ವಾಗ್ದಾನ ಮಾಡಿದ್ದೇನೆ. ಆದ್ದರಿಂದ ನೀವು ಕಾಲಿಡುವ ಪ್ರದೇಶವನ್ನೆಲ್ಲಾ ನಿಮಗೆ ಕೊಡುತ್ತೇನೆ.


ಯೆಫುನ್ನೆಯ ಮಗನಾದ ಕಾಲೇಬನು ಮಾತ್ರ ಆ ದೇಶವನ್ನು ನೋಡುವನು. ಕಾಲೇಬನು ಸಂಚರಿಸಿದ ನಾಡನ್ನು ಅವನಿಗೂ ಅವನ ಸಂತತಿಯವರಿಗೂ ಕೊಡುವೆನು. ಯಾಕೆಂದರೆ ನಾನು ಆಜ್ಞಾಪಿಸಿದ್ದನ್ನೆಲ್ಲ ಕಾಲೇಬನು ಮಾಡಿದನು’ ಎಂದು ಪ್ರಮಾಣಮಾಡಿದನು.


ಅವರು ನೆಗೆವ್ ಮೂಲಕ ದೇಶವನ್ನು ಪ್ರವೇಶಿಸಿ ಹೆಬ್ರೋನಿಗೆ ಹೋದರು. ಹೆಬ್ರೋನ್ ಪಟ್ಟಣವು ಈಜಿಪ್ಟ್ ದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರ್ಷಗಳ ಮುಂಚೆ ಕಟ್ಟಲ್ಪಟ್ಟಿತ್ತು. ಅಲ್ಲಿ ಅಹೀಮನ್, ಶೇಫೈ ಮತ್ತು ತಲ್ಮೈ ಎಂಬವರು ವಾಸಿಸುತ್ತಿದ್ದರು. ಇವರು ಅನಾಕನ ಸಂತತಿಯವರು.


ನೀವು ಹೆಜ್ಜೆಯಿಡುವ ಭೂಮಿಯೆಲ್ಲಾ ನಿಮ್ಮದಾಗುವುದು. ದಕ್ಷಿಣದ ಮರುಭೂಮಿಯಿಂದ ಹಿಡಿದು ಉತ್ತರದ ಲೆಬನೋನಿನ ತನಕ, ಪೂರ್ವದಲ್ಲಿರುವ ಯೂಫ್ರೇಟೀಸ್ ನದಿಯಿಂದ ಪಶ್ಟಿಮದ ಭೂಮಧ್ಯಸಮುದ್ರ ತೀರದ ತನಕ ವಿಸ್ತಾರವಾಗಿದೆ.


“ಯೆಹೋವನು ತಾನು ಹೇಳಿದಂತೆ ನನ್ನನ್ನು ನಲವತ್ತೈದು ವರ್ಷ ಜೀವಂತವಾಗಿ ಉಳಿಸಿದ್ದಾನೆ. ಆ ಸಮಯದಲ್ಲಿ ನಾವೆಲ್ಲರು ಅರಣ್ಯದಲ್ಲಿ ಸುತ್ತಾಡಿದೆವು. ಈಗ ನಾನು ಎಂಭತ್ತೈದು ವರ್ಷದವನಾಗಿದ್ದೇನೆ.


ಹೆಬ್ರೋನಿಗೆ ಸಮೀಪದಲ್ಲಿರುವ ಭೂಮಿಯನ್ನು ಕಾಲೇಬನಿಗೆ ಕೊಡುವುದಾಗಿ ಮೋಶೆಯು ವಾಗ್ದಾನ ಮಾಡಿದ್ದನು. ಆದ್ದರಿಂದ ಆ ಭೂಮಿಯನ್ನು ಕಾಲೇಬನ ಕುಟುಂಬದವರಿಗೆ ಕೊಡಲಾಯಿತು. ಕಾಲೇಬನ ಜನರು ಅನಾಕನ ಮೂರು ಜನ ಮಕ್ಕಳನ್ನು ಆ ಪ್ರದೇಶದಿಂದ ಬಲವಂತವಾಗಿ ಹೊರಗಟ್ಟಿದರು.


ದುಷ್ಟರಾದರೋ ನಾಶವಾಗುವರು. ಯೆಹೋವನಲ್ಲಿ ಮೊರೆಯಿಡುವವರಾದರೋ ವಾಗ್ದಾನ ಮಾಡಲ್ಪಟ್ಟ ಭೂಮಿಯನ್ನು ಪಡೆದುಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು