ಯೆಹೋಶುವ 15:1 - ಪರಿಶುದ್ದ ಬೈಬಲ್1 ಯೆಹೂದಕುಲಕ್ಕೆ ಕೊಟ್ಟ ಸ್ವಾಸ್ತ್ಯವನ್ನು ಆ ಕುಲದ ಗೋತ್ರಗಳಲ್ಲಿ ಹಂಚಲಾಗಿತ್ತು. ಆ ಪ್ರದೇಶವು ಎದೋಮಿನ ಗಡಿಯವರೆಗೂ ದಕ್ಷಿಣದಲ್ಲಿ ತೇಮಾನಿನ ಅಂಚಿನಲ್ಲಿರುವ ಚಿನ್ ಅರಣ್ಯದವರೆಗೂ ವಿಸ್ತರಿಸಿಕೊಂಡಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಎದೋಮ್ ಸೀಮೆಯೂ, ಚಿನ್ ಅರಣ್ಯದ ಮೇರೆಯಾಗಿರುವ ಕಾನಾನ ದೇಶದ ದಕ್ಷಿಣ ಭಾಗವು ಯೆಹೂದ ಕುಲದ ಗೋತ್ರಗಳಿಗೆ ಸ್ವತ್ತಾಗಿ ಸಿಕ್ಕಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಎದೋಮ್ ನಾಡು ಹಾಗೂ ಚಿನ್ ಮರುಭೂಮಿಯ ಎಲ್ಲೆಯಾಗಿರುವ ಕಾನಾನ್ ನಾಡಿನ ದಕ್ಷಿಣ ಭಾಗವು ಯೆಹೂದ ಕುಲದ ಗೋತ್ರಗಳಿಗೆ ದೊರಕಿದ ಸೊತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಎದೋಮ್ ಸೀಮೆಯೂ ಚಿನ್ ಅರಣ್ಯವೂ ಮೇರೆಯಾಗಿರುವ ಕಾನಾನ್ ದೇಶದ ದಕ್ಷಿಣ ಭಾಗವು ಯೆಹೂದ ಕುಲದ ಗೋತ್ರಗಳಿಗೆ ಸ್ವಾಸ್ತ್ಯವಾಗಿ ಸಿಕ್ಕಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೂದ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ವಿಭಾಗಿಸಿದ ಮೇರೆ ಯಾವುದೆಂದರೆ: ಕಟ್ಟಕಡೆಗಿರುವ ದಕ್ಷಿಣ ಕಡೆಗೆ ಎದೋಮಿನ ಮೇರೆಯಾದ ಚಿನ್ ಮರುಭೂಮಿಯ ದಕ್ಷಿಣ ಭಾಗ. ಅಧ್ಯಾಯವನ್ನು ನೋಡಿ |
ರಾಜನಾದ ಸೊಲೊಮೋನನು ಮತ್ತು ಇಸ್ರೇಲಿನ ಜನರೆಲ್ಲರು ವಿಶ್ರಾಂತಿ ಹಬ್ಬವನ್ನು ಆಚರಿಸಿದರು. ಉತ್ತರದಲ್ಲಿದ್ದ ಹಮಾತ್ ದಾರಿಯಿಂದ ದಕ್ಷಿಣದ ಈಜಿಪ್ಟಿನ ಗಡಿಯವರೆಗಿನ ಎಲ್ಲ ಇಸ್ರೇಲರು ಅಲ್ಲಿದ್ದರು. ಅವರೆಲ್ಲರೂ ಒಟ್ಟಾಗಿ ಏಳು ದಿನಗಳ ಕಾಲ ಯೆಹೋವನ ಮುಂದೆ ತಿಂದು, ಕುಡಿದು ಆನಂದಿಸಿದರು. ಆಗ ಅವರು ಮತ್ತೆ ಏಳು ದಿನಗಳು ಅಲ್ಲಿಯೇ ಉಳಿದರು. ಅವರು ಒಟ್ಟಿಗೆ ಹದಿನಾಲ್ಕು ದಿನಗಳು ಹಬ್ಬವನ್ನು ಆಚರಿಸಿದರು!