Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 15:14 - ಪರಿಶುದ್ದ ಬೈಬಲ್‌

14 ಹೆಬ್ರೋನ್‌ನಲ್ಲಿ ವಾಸವಾಗಿದ್ದ ಮೂರು ಅನಾಕ ಕುಟುಂಬಗಳನ್ನು ಕಾಲೇಬನು ಅಲ್ಲಿಂದ ಬಲವಂತವಾಗಿ ಹೊರಡಿಸಿದನು. ಆ ಕುಟುಂಬಗಳ ಹೆಸರುಗಳು ಶೇಷೈ, ಅಹೀಮನ್ ಮತ್ತು ತಲ್ಮೈ. ಅವರು ಅನಾಕನ ವಂಶಸ್ಥರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಕಾಲೇಬನು ಶೇಷೈ, ಅಹೀಮನ್, ತಲ್ಮೈ ಎಂಬ ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಓಡಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಕಾಲೇಬನು ಶೇಷೈ, ಅಹೀಮನ್, ತಲ್ಮೈ ಎಂಬ ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಹೊರಡಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಕಾಲೇಬನು ಶೇಷೈ, ಅಹೀಮನ್, ತಲ್ಮೈ ಎಂಬ ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಹೊರಡಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಕಾಲೇಬನು ಅಲ್ಲಿಂದ ಅನಾಕನ ಮೂವರು ಮಕ್ಕಳಾದ ಶೇಷೈ, ಅಹೀಮನ್, ತಲ್ಮೈರನ್ನು ಹೊರಡಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 15:14
9 ತಿಳಿವುಗಳ ಹೋಲಿಕೆ  

ಹೆಬ್ರೋನಿಗೆ ಸಮೀಪದಲ್ಲಿರುವ ಭೂಮಿಯನ್ನು ಕಾಲೇಬನಿಗೆ ಕೊಡುವುದಾಗಿ ಮೋಶೆಯು ವಾಗ್ದಾನ ಮಾಡಿದ್ದನು. ಆದ್ದರಿಂದ ಆ ಭೂಮಿಯನ್ನು ಕಾಲೇಬನ ಕುಟುಂಬದವರಿಗೆ ಕೊಡಲಾಯಿತು. ಕಾಲೇಬನ ಜನರು ಅನಾಕನ ಮೂರು ಜನ ಮಕ್ಕಳನ್ನು ಆ ಪ್ರದೇಶದಿಂದ ಬಲವಂತವಾಗಿ ಹೊರಗಟ್ಟಿದರು.


ತರುವಾಯ ಯೆಹೂದ್ಯರು ಕಿರ್ಯತರ್ಬವೆಂಬ ಹೆಬ್ರೋನ್ ನಗರದಲ್ಲಿದ್ದ ಕಾನಾನ್ಯರೊಂದಿಗೆ ಯುದ್ಧಮಾಡಲು ಹೋದರು. ಯೆಹೂದ್ಯರು ಶೇಷೈ, ಅಹೀಮನ್ ಮತ್ತು ತಲ್ಮೈ ಎಂಬವರನ್ನು ಸೋಲಿಸಿಬಿಟ್ಟರು.


ಆಗ ಅನಾಕ ವಂಶಸ್ಥರು ಹೆಬ್ರೋನ್, ದೆಬೀರ್, ಅನಾಬ್ ಮತ್ತು ಯೆಹೂದ ಬೆಟ್ಟಪ್ರದೇಶಗಳಲ್ಲಿ ವಾಸವಾಗಿದ್ದರು. ಯೆಹೋಶುವನು ಈ ಅನಾಕ ವಂಶಸ್ಥರೊಂದಿಗೆ ಯುದ್ಧ ಮಾಡಿದನು. ಯೆಹೋಶುವನು ಆ ಎಲ್ಲ ಜನರನ್ನು ಮತ್ತು ಊರುಗಳನ್ನು ನಾಶಪಡಿಸಿದನು.


ಪ್ರಚಂಡರಾದ ನೆಫೀಲಿಯರು ಅಲ್ಲಿ ವಾಸವಾಗಿರುವುದನ್ನು ನಾವು ನೋಡಿದೆವು. (ಅನಾಕ್ಯರು ನೆಫೀಲಿಯ ಜನರ ಸಂತತಿಯವರಾಗಿದ್ದಾರೆ.) ಅವರ ಮುಂದೆ ನಾವು ಮಿಡತೆಗಳೊ ಎಂದೆನಿಸಿತು. ಅವರಿಗೂ ಸಹ ನಾವು ಮಿಡತೆಗಳಂತೆ ಕಂಡುಬಂದೆವು” ಎಂದರು.


ಅಲ್ಲಿಯ ಜನರು ಬಲಿಷ್ಠರಾಗಿದ್ದಾರೆ. ಅನಾಕ್ಯರು ಎತ್ತರವಾಗಿ ಬೆಳೆದವರು ಎಂದು ಆ ದೇಶಕ್ಕೆ ಹೋದ ಗೂಢಚಾರರು ನಿಮಗೆ ತಿಳಿಸಿದ್ದು ನೆನಪಿಲ್ಲವೇ? ‘ಅನಾಕ್ಯರ ಮುಂದೆ ಯಾರೂ ನಿಲ್ಲಲಾರರು’ ಎಂದು ಅವರು ಹೇಳಿದರು.


ಇಸ್ರೇಲಿನ ಪ್ರದೇಶದಲ್ಲಿ ಅನಾಕ ವಂಶಸ್ಥರಲ್ಲಿ ಯಾರೂ ಉಳಿಯಲಿಲ್ಲ. ಜೀವಸಹಿತ ಉಳಿದ ಅನಾಕ ವಂಶಸ್ಥರು ಕೇವಲ ಗಾಜಾ, ಗತೂರು, ಅಷ್ಡೋದ್ ಎಂಬಲ್ಲಿ ಮಾತ್ರ ಇದ್ದರು.


ಇಷ್ಬೀಬೆನೋಬನು ಒಬ್ಬ ರಾಕ್ಷಸನ ಮಗ. ಅವನ ಬರ್ಜಿಯು ಏಳುವರೆ ಪೌಂಡುಗಳಷ್ಟು ತೂಕವಿತ್ತು. ಅವನು ಹೊಸ ಖಡ್ಗವನ್ನು ಹೊಂದಿದ್ದನು. ಅವನು ದಾವೀದನನ್ನು ಕೊಲ್ಲುವುದಕ್ಕಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು