Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 15:17 - ಪರಿಶುದ್ದ ಬೈಬಲ್‌

17 ಕೆನಜನ ಮಗನಾದ ಒತ್ನೀಯೇಲನು ಆ ಪಟ್ಟಣವನ್ನು ಗೆದ್ದನು. ಕಾಲೇಬನು ತನ್ನ ಮಗಳಾದ ಅಕ್ಷಾಳನ್ನು ಒತ್ನೀಯೇಲನಿಗೆ ಮದುವೆ ಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಕೆನಜನ ಮಗನೂ ಕಾಲೇಬನ ತಮ್ಮನೂ ಆದ ಒತ್ನೀಯೇಲನು ಅದನ್ನು ವಶಪಡಿಸಿಕೊಂಡನು. ಅವನಿಗೆ ಕಾಲೇಬನ ಮಗಳಾದ ಅಕ್ಷಾಳನ್ನು ಮದುವೆಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಕೆನಜನ ಮಗನೂ ಕಾಲೇಬನ ತಮ್ಮನೂ ಆದ ಒತ್ನಿಯೇಲನು ಅದರ ಮೇಲೆ ದಾಳಿಮಾಡಿ ತೆಗೆದುಕೊಂಡನು. ಅವನಿಗೆ ಕಾಲೇಬನು ತನ್ನ ಮಗಳಾದ ಅಕ್ಷಾ ಎಂಬಾಕೆಯನ್ನು ಮದುವೆ ಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಕೆನಜನ ಮಗನೂ ಕಾಲೇಬನ ತಮ್ಮನೂ ಆದ ಒತ್ನೀಯೇಲನು ಅದನ್ನು ತೆಗೆದುಕೊಳ್ಳಲು ಅವನಿಗೆ ತನ್ನ ಮಗಳಾದ ಅಕ್ಷಾ ಎಂಬಾಕೆಯನ್ನು ಮದುವೆಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಕಾಲೇಬನ ತಮ್ಮನಾದ ಕೆನಾಜನ ಮಗನಾದ ಒತ್ನಿಯೇಲನು ಅದನ್ನು ಹಿಡಿದನು. ಅನಂತರ ಕಾಲೇಬನು ತನ್ನ ಮಗಳಾದ ಅಕ್ಸಾ ಎಂಬಾಕೆಯನ್ನು ಅವನಿಗೆ ಮದುವೆ ಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 15:17
9 ತಿಳಿವುಗಳ ಹೋಲಿಕೆ  

ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಟ್ಟರು. ಅವರನ್ನು ರಕ್ಷಿಸಲು ಯೆಹೋವನು ಒಬ್ಬ ಮನುಷ್ಯನನ್ನು ಕಳುಹಿಸಿದನು. ಆ ಮನುಷ್ಯನ ಹೆಸರು ಒತ್ನೀಯೇಲ. ಅವನು ಕೆನಜ ಎಂಬವನ ಮಗನು. ಕೆನಜನು ಕಾಲೇಬನ ತಮ್ಮ. ಒತ್ನೀಯೇಲನು ಇಸ್ರೇಲರನ್ನು ರಕ್ಷಿಸಿದನು.


ಕಾಲೇಬನಿಗೆ ಕೆನಜನೆಂಬ ತಮ್ಮನಿದ್ದನು. ಕೆನಜನಿಗೆ ಒತ್ನೀಯೇಲನೆಂಬ ಮಗನಿದ್ದನು. ಒತ್ನೀಯೇಲನು ಕಿರ್ಯತ್‌ಸೇಫೆರನ್ನು ಗೆದ್ದುಕೊಂಡನು. ಅದಕ್ಕಾಗಿ ಕಾಲೇಬನು ತನ್ನ ಮಗಳಾದ ಅಕ್ಷಾಳನ್ನು ಒತ್ನೀಯೇಲನ ಜೊತೆ ಮದುವೆ ಮಾಡಿಕೊಟ್ಟನು.


ಆದ್ದರಿಂದ ನಲವತ್ತು ವರ್ಷಗಳ ಕಾಲದವರೆಗೆ ಅಂದರೆ ಕೆನಜನ ಮಗನಾದ ಒತ್ನೀಯೇಲನ ಮರಣದವರೆಗೆ ಆ ಪ್ರದೇಶದಲ್ಲಿ ಶಾಂತಿ ನೆಲೆಸಿತ್ತು.


ಒಂದು ದಿವಸ ಯೆಹೂದ ಕುಲದ ಕೆಲವರು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಬಳಿಗೆ ಬಂದರು. ಅವರಲ್ಲಿ ಕನಿಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಒಬ್ಬನಾಗಿದ್ದನು. ಕಾಲೇಬನು ಯೆಹೋಶುವನಿಗೆ, “ಕಾದೇಶ್‌ಬರ್ನೇಯದಲ್ಲಿ ಯೆಹೋವನು ತನ್ನ ಸೇವಕನಾದ ಮೋಶೆಯೊಂದಿಗೆ ನಮ್ಮಿಬ್ಬರ ವಿಷಯವಾಗಿ ಮಾತಾಡಿದ್ದು ನಿನಗೆ ನೆನಪಿದೆಯಷ್ಟೇ.


ಈಕೆಯು ಶಾಫ್ ಮತ್ತು ಶೆವನ ತಾಯಿಯೂ ಆಗಿದ್ದಳು. ಶಾಫನ ಮಗ ಮದ್ಮನ್ನ. ಶೆವನು ಮಕ್‌ಬೇನ ಮತ್ತು ಗಿಬ್ಯನ ತಂದೆ. ಕಾಲೇಬನ ಮಗಳ ಹೆಸರು ಅಕ್ಸಾಹ.


ಕಾಲೇಬನು, “ನಾನು ಕಿರ್ಯತ್ ಸೇಫೇರಿನ ಮೇಲೆ ಧಾಳಿ ಮಾಡಲಿಚ್ಛಿಸುತ್ತೇನೆ. ಆ ನಗರದ ಮೇಲೆ ಧಾಳಿಮಾಡಿ ಅದನ್ನು ಗೆದ್ದುಕೊಟ್ಟವರಿಗೆ ನನ್ನ ಮಗಳಾದ ಅಕ್ಷಾಳನ್ನು ಮದುವೆಮಾಡಿ ಕೊಡುತ್ತೇನೆ” ಎಂದು ಸಾರಿದನು.


ಕೆನಜನ ಗಂಡುಮಕ್ಕಳು ಯಾರೆಂದರೆ: ಒತ್ನೀಯೇಲ್ ಮತ್ತು ಸೆರಾಯ. ಒತ್ನೀಯೇಲನ ಮಕ್ಕಳು: ಹತತ್ ಮತ್ತು ಮೆಯೋನೋತೈ.


ಹನ್ನೆರಡನೆಯ ಸೇನಾಪತಿ ಹೆಲ್ದೈ. ಇವನು ನೆಟೋಫ ಊರಿನ ಒತ್ನೀಯೇಲನ ಸಂತತಿಯವನು. ವರ್ಷದ ಹನ್ನೆರಡನೆಯ ತಿಂಗಳಿನಲ್ಲಿ ಇವನು ಸೇನಾಪತಿಯಾಗಿದ್ದನು. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಸೈನಿಕರಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು