Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 15:18 - ಪರಿಶುದ್ದ ಬೈಬಲ್‌

18 ಒತ್ನೀಯೇಲನ ಮನೆಗೆ ಅಕ್ಷಾ ಹೋದಳು. ಕಾಲೇಬನಿಂದ ಇನ್ನಷ್ಟು ಭೂಮಿಯನ್ನು ಕೇಳಲು ಅಕ್ಷಾಳನ್ನು ಒತ್ನೀಯೇಲನು ಪ್ರೇರೇಪಿಸಿದನು. ಅಕ್ಷಾಳು ತನ್ನ ತಂದೆಯ ಬಳಿಗೆ ಬಂದು ಕತ್ತೆಯ ಮೇಲಿಂದ ಇಳಿದಾಗ, “ನಿನಗೆ ಏನುಬೇಕು?” ಎಂದು ಕಾಲೇಬನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಕೆಯು ತನ್ನ ತಂದೆಯ ಮನೆ ಸೇರಿದಾಗ, ತನ್ನ ತಂದೆಯ ಹತ್ತಿರ ಭೂಮಿಯನ್ನು ಕೇಳಬೇಕೆಂದು ಗಂಡನನ್ನು ಪ್ರೇರೇಪಿಸಿ ತಾನು ಕತ್ತೆಯ ಮೇಲಿಂದ ಇಳಿದಳು ಕಾಲೇಬನು, “ನಿನಗೇನು ಬೇಕು” ಎಂದು ಆಕೆಯನ್ನು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆಕೆ ಮನೆ ಸೇರಿದಾಗ ತನ್ನ ತಂದೆಯ ಬಳಿ ಭೂಮಿಯನ್ನು ಕೇಳಬೇಕೆಂದು ಒತ್ನಿಯೇಲನು ಅವಳನ್ನು ಪ್ರೋತ್ಸಾಹಿಸಿದನು. ಅಂತೆಯೇ ಅವಳು ಹೊರಟು ಹೇಸರಗತ್ತೆ ಮೇಲಿಂದ ಇಳಿದದ್ದೇ ಕಾಲೇಬನು, “ನಿನಗೇನು ಬೇಕು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆಕೆಯು ಬರುತ್ತಿರುವಾಗ ತನ್ನ ತಂದೆಯ ಹತ್ತಿರ ಭೂವಿುಯನ್ನು ಕೇಳಬೇಕೆಂದು ಗಂಡನನ್ನು ಪ್ರೇರೇಪಿಸಿ ತಾನು ಕತ್ತೆಯ ಮೇಲಿಂದ ಇಳಿದಳು. ಕಾಲೇಬನು ನಿನಗೇನು ಬೇಕೆಂದು ಆಕೆಯನ್ನು ಕೇಳಲು ಆಕೆಯು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಒಂದು ದಿನ ಅಕ್ಷಾ ಒತ್ನಿಯೇಲನೊಂದಿಗೆ ಬರುತ್ತಿರುವಾಗ ತನ್ನ ತಂದೆಯ ಹತ್ತಿರ ಇನ್ನೂ ಒಂದು ಹೊಲವನ್ನು ಕೇಳುವುದಕ್ಕೆ ಅವನನ್ನು ಪ್ರೇರೇಪಿಸಿ, ಕತ್ತೆಯ ಮೇಲಿನಿಂದ ಇಳಿದಳು. ಆಗ ಕಾಲೇಬನು ಅವಳಿಗೆ, “ನಿನಗೆ ಏನು ಬೇಕು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 15:18
4 ತಿಳಿವುಗಳ ಹೋಲಿಕೆ  

ಅಬೀಗೈಲಳು ದಾವೀದನನ್ನು ಕಂಡ ಕೂಡಲೆ ಕತ್ತೆಯಿಂದ ಬೇಗನೆ ಇಳಿದು ದಾವೀದನಿಗೆ ಸಾಷ್ಟಾಂಗನಮಸ್ಕಾರ ಮಾಡಿದಳು.


ರೆಬೆಕ್ಕಳು ಕಣ್ಣೆತ್ತಿ ನೋಡಿದಾಗ ಇಸಾಕನನ್ನು ಕಂಡಳು. ಆಮೇಲೆ ಆಕೆ ಒಂಟೆಯಿಂದ ಬೇಗನೆ ಇಳಿದು ಬಂದಳು.


ಅದಕ್ಕೆ ಅವಳು “ನನ್ನನ್ನು ಆಶೀರ್ವದಿಸು. ನೀನು ನನಗೆ ನೆಗೆವ್‌ನಲ್ಲಿ ಮರುಭೂಮಿಯನ್ನು ಕೊಟ್ಟಿರುವೆ. ದಯವಿಟ್ಟು ನೀರಿರುವ ಭೂಮಿಯನ್ನು ಸ್ವಲ್ಪಕೊಡು” ಎಂದು ಕೇಳಿಕೊಂಡಳು. ಅವಳ ಕೋರಿಕೆಗನುಸಾರವಾಗಿ ಕಾಲೇಬನು ಮೇಲಿನ ಮತ್ತು ಕೆಳಗಿನ ನೀರಿನ ಬುಗ್ಗೆಗಳನ್ನು ಕೊಟ್ಟನು.


ಅಕ್ಷಾಳು ಒತ್ನೀಯೇಲನ ಜೊತೆ ವಾಸಿಸಲು ಹೋದಳು. ಒತ್ನೀಯೇಲನು ಅಕ್ಷಾಳಿಗೆ, “ನಿನ್ನ ತಂದೆಯಿಂದ ಸ್ವಲ್ಪ ಭೂಮಿಯನ್ನು ಕೇಳು” ಎಂದು ಹೇಳಿದನು. ಅಕ್ಷಾಳು ತನ್ನ ತಂದೆಯ ಹತ್ತಿರ ಹೋದಳು. ಅವಳು ತನ್ನ ಕತ್ತೆಯ ಮೇಲಿಂದ ಇಳಿದಾಗ, “ನಿನಗೇನು ಬೇಕು?” ಎಂದು ಕಾಲೇಬನು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು