Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 15:2 - ಪರಿಶುದ್ದ ಬೈಬಲ್‌

2 ಯೆಹೂದ್ಯರ ಸ್ವಾಸ್ತ್ಯವು ಲವಣಸಮುದ್ರದ ದಕ್ಷಿಣ ತೀರದಿಂದ ಆರಂಭವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅದರ ದಕ್ಷಿಣದ ಮೇರೆಯು ಲವಣ ಸಮುದ್ರದ ತೆಂಕಣ ಕೊನೆಯಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅದರ ದಕ್ಷಿಣದ ಎಲ್ಲೆ, ಲವಣ ಸಮುದ್ರದ ತೆಂಕಣ ತುದಿಯಿಂದ ತೊಡಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅದರ ದಕ್ಷಿಣದ ಮೇರೆಯು ಲವಣ ಸಮುದ್ರದ ತೆಂಕಣ ಕೊನೆಯಿಂದ ತೊಡಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಲವಣ ಸಮುದ್ರದ ಕಡೆಯಲ್ಲಿ ದಕ್ಷಿಣ ಕಡೆಗಿರುವ ಕೊನೆಯಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 15:2
8 ತಿಳಿವುಗಳ ಹೋಲಿಕೆ  

ಅವನು ನನ್ನೊಡನೆ, “ಈ ನದಿಯು ಪೂರ್ವಕ್ಕೆ ಹೊರಟು ಅರಾಬಾ ತಗ್ಗಿನ ಕಡೆ ಹರಿಯುತ್ತಿದೆ.


ಯೆಹೋವನು ಸಿಟ್ಟುಗೊಂಡು ಈಜಿಪ್ಟಿನ ಸಮುದ್ರವನ್ನು ವಿಂಗಡಿಸಿದನು. ಅದೇ ರೀತಿಯಲ್ಲಿ ಯೂಫ್ರೇಟೀಸ್ ನದಿಯ ಮೇಲೆ ತನ್ನ ಕೈಯನ್ನು ಚಾಚುವನು. ಆತನು ನದಿಯ ನೀರಿಗೆ ಹೊಡೆಯುವನು. ಆಗ ಅದು ಏಳು ಚಿಕ್ಕ ನದಿಗಳಾಗಿ ಹರಿಯುವುದು. ಆ ನದಿಗಳು ಆಳವಾಗಿರುವದಿಲ್ಲ. ಜನರು ತಮ್ಮ ಕೆರಗಳೊಂದಿಗೆ ದಾಟಬಹುದು.


ಈ ರಾಜರುಗಳೆಲ್ಲ ಸಿದ್ದೀಮ್ ಕಣಿವೆಯಲ್ಲಿ ತಮ್ಮ ಸೈನ್ಯಗಳನ್ನು ಒಟ್ಟಿಗೆ ಸೇರಿಸಿದರು. (ಸಿದ್ದೀಮ್ ಕಣಿವೆಯು ಈಗ ಉಪ್ಪುಸಮುದ್ರವಾಗಿದೆ).


“ಪೂರ್ವ ಭಾಗದಲ್ಲಿ, ಮೇರೆಯು ಹವ್ರಾನ್ ಮತ್ತು ದಮಸ್ಕದ ಮಧ್ಯದಲ್ಲಿರುವ ಹಚರ್ ಐನೋನ್ ಇಲ್ಲಿಂದ ಹೊರಟು ಜೋರ್ಡನ್ ಹೊಳೆಯ ತೀರದಲ್ಲಿ ಮುಂದುವರಿದು ಗಿಲ್ಯಾದಿಗೂ ಇಸ್ರೇಲ್ ರಾಜ್ಯಕ್ಕೂ ಮಧ್ಯದಲ್ಲಿ ಹರಿದು ಪೂರ್ವದ ಸಮುದ್ರದ ಕಡೆಗೆ ಹೋಗುತ್ತದೆ. ಅಲ್ಲಿಂದ ತಾಮಾರಿಗೆ ಸೇರುತ್ತದೆ. ಇದು ಪೂರ್ವ ಕಡೆಯ ಮೇರೆ.


ಆಗ ನೀರು ಹರಿಯದೆ ನಿಂತುಬಿಟ್ಟಿತು. ಆ ಸ್ಥಳದ ಹಿಂಭಾಗದಲ್ಲಿ ಒಂದು ಸರೋವರದಂತೆ ನೀರು ತುಂಬಿಕೊಂಡಿತು. ನೀರು ಬಹುದೂರದಲ್ಲಿರುವ ಆದಾಮ್ ಊರು ಅಂದರೆ ಜಾರೆತಾನಿನ ಹತ್ತಿರ ಇರುವ ಒಂದು ಊರಿನವರೆಗೂ ರಾಶಿರಾಶಿಯಾಗಿ ನಿಂತುಕೊಂಡಿತು. ಜನರು ಜೆರಿಕೊವಿನ ಹತ್ತಿರ ನದಿಯನ್ನು ದಾಟಿದರು.


ದಕ್ಷಿಣಭಾಗವು ಎದೋಮಿನ ಗಡಿಯಲ್ಲಿರುವ ಚಿನ್ ಮರುಭೂಮಿಯನ್ನು ಒಳಗೊಂಡಿದೆ. ಪೂರ್ವದ ಕಡೆಯಿರುವ ದಕ್ಷಿಣ ಗಡಿಯು ಉಪ್ಪುಸಮುದ್ರದ ದಕ್ಷಿಣಭಾಗದಿಂದ ಆರಂಭವಾಗುತ್ತದೆ.


ಯೆಹೂದಕುಲಕ್ಕೆ ಕೊಟ್ಟ ಸ್ವಾಸ್ತ್ಯವನ್ನು ಆ ಕುಲದ ಗೋತ್ರಗಳಲ್ಲಿ ಹಂಚಲಾಗಿತ್ತು. ಆ ಪ್ರದೇಶವು ಎದೋಮಿನ ಗಡಿಯವರೆಗೂ ದಕ್ಷಿಣದಲ್ಲಿ ತೇಮಾನಿನ ಅಂಚಿನಲ್ಲಿರುವ ಚಿನ್ ಅರಣ್ಯದವರೆಗೂ ವಿಸ್ತರಿಸಿಕೊಂಡಿತ್ತು.


ಆ ಸೀಮೆಯು ದಕ್ಷಿಣದಲ್ಲಿ ಸ್ಕಾರ್ಪಿಯನ್ ಎಂಬ ಇಕ್ಕಟ್ಟಾದ ಮಾರ್ಗದಿಂದ ಮುನ್ನಡೆದು ಚಿನ್ ಮರುಭೂಮಿಯವರೆಗೆ ಹೋಗಿತ್ತು. ಅಲ್ಲಿಂದ ಅದು ದಕ್ಷಿಣದಲ್ಲಿ ಕಾದೇಶ್‌ಬರ್ನೇಯದವರೆಗೂ ಹೆಚ್ರೋನ್‌ನಿಂದ ಅದ್ದಾರವರೆಗೂ ಮುಂದುವರಿದು ಅಲ್ಲಿ ತಿರುಗಿಕೊಂಡು ಕರ್ಕದವರೆಗೆ ವಿಸ್ತರಿಸಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು